ಬಿಬಿಎಂಪಿ ವ್ಯಾಪ್ತಿಯಲ್ಲಿ ಒಂಟಿ ಮನೆ ನಿರ್ಮಾಣಕ್ಕಾಗಿ 25ನೇ ಫೆಬ್ರವರಿ 2025ರ ಒಳಗಾಗಿ ಅರ್ಜಿ ಸಲ್ಲಿಸಲು ಮುಖ್ಯ ಆಯುಕ್ತರಾದ ತುಷಾರ್ ಗಿರಿನಾಥ್ ರವರು ನಾಗರಿಕರಲ್ಲಿ ಮನವಿ ಮಾಡಿಕೊಂಡಿದ್ದಾರೆ.
ಹೌದು,ಬೊಮ್ಮನಹಳ್ಳಿ ವಲಯ ವ್ಯಾಪ್ತಿಯಲ್ಲಿ 'ಮುಖ್ಯ ಆಯುಕ್ತರ ನಡೆ ವಲಯದ ಕಡೆ ಕಾರ್ಯಕ್ರಮ'ದಲ್ಲಿ ಸಾರ್ವಜನಿಕರಿಂದ ಬಂದ ದೂರುಗಳಿಗೆ ಸ್ಪಂದಿಸುವ ವೇಳೆ, 30ಕ್ಕೂ ಹೆಚ್ಚು ನಾಗರಿಕರು ಒಂಟಿ ಮನೆ ಯೋಜನೆಯಲ್ಲಿ ಅನುದಾನ ಒದಗಿಸಲು ಮನವಿ ಮಾಡಿದರು.

ಮುಖ್ಯ ಆಯುಕ್ತರು ಪ್ರತಿಕ್ರಯಿಸಿ, 2022 ರಿಂದ 24 ರವರೆಗೆ ಒಂಟಿ ಮನೆಗಾಗಿ ಬಂದಿರುವ ಅರ್ಜಿಗಳನ್ನು ಪರಿಶೀಲನೆ ನಡೆಸಲಾಗಿದ್ದು, ಅರ್ಹ ಫಲಾನುಭವಿಗಳಿಗೆ ಶೀಘ್ರ ಅನುದಾನ ಒದಗಿಸಲಾಗುವುದೆಂದು ತಿಳಿಸಿದರು.
ಒಂಟಿ ಮನೆ ನಿರ್ಮಾಣಕ್ಕಾಗಿ ಇದುವರೆಗೆ ಅರ್ಜಿ ಸಲ್ಲಿಸದೇ ಇರುವವರು ಕೂಡಲೆ ಪಾಲಿಕೆ ವೆಬ್ ಸೈಟ್ ಗೆ ಭೇಟಿ ನೀಡಿ ಅರ್ಜಿ ಪಡೆದು 25ನೇ ಫೆಬ್ರವರಿ 2025ರ ಒಳಗಾಗಿ ಆಯಾ ವಲಯದ ಕಲ್ಯಾಣ ವಿಭಾಗದ ಸಹಾಯಕ ಕಂದಾಯ ಅಧಿಕಾರಿ ಕಛೇರಿಯಲ್ಲಿ ಅರ್ಜಿ ಸಲ್ಲಿಸಬಹುದೆಂದು ತಿಳಿಸಿದರು.
ಸಸಿಗಳಿಗೆ ಸಂಸ್ಕರಣ ನೀರು ಉಪಯೋಗಿಸಲು ಸೂಚನೆ
ಬೇಸಿಗೆ ಕಾಲ ಪ್ರಾರಂಭವಾಗುತ್ತಿರುವ ಹಿನ್ನೆಲೆಯಲ್ಲಿ ಮಿಯಾವಾಕಿ ಅರಣ್ಯದಲ್ಲಿ ನೆಟ್ಟಿರುವ ಸಸಿಗಳಿಗೆ ಜಲಮಂಡಳಿಯ ಸಂಸ್ಕರಣಾ ನೀರನ್ನು ಟ್ಯಾಂಕರ್ ಗಳ ಮೂಲಕ ವ್ಯವಸ್ಥೆ ಮಾಡಲು ಅಧಿಕಾರಿಗಳಿಗೆ ಸೂಚಿಸಲಾಯಿತು. ಜೊತೆಗೆ ರಾಯಲ್ ರೆಸಿಡೆನ್ಸಿ ಪಾರ್ಕ್ ಗೆ ತ್ವರಿತವಾಗಿ ಫೆನ್ಸಿಂಗ್ ಮಾಡಲು ಸೂಚಿಸಲಾಯಿತು.
ಒಳಚರಂಡಿ ದುರಸ್ತಿ ಜವಾಬ್ದಾರಿ ಜಳಮಂಡಳಿಯದ್ದು
ಬಿಬಿಎಂಪಿ ವ್ಯಾಪ್ತಿಯಲ್ಲಿ ಬರುವ ಸಿಎಂಸಿ, ಟಿಎಂಸಿ ವ್ಯಾಪ್ತಿಯಲ್ಲಿರುವ ಒಳಚಂಡಿಗಳ ದುರಸ್ತಿ ಕಾಮಗಾರಿಯನ್ನು ಜಲಂಡಳಿಯಿಂದ ಮಾಡಬೇಕಿದೆ. ಈ ಸಂಬಂಧ ಇನ್ನು ಮುಂದೆ ಪಾಲಿಕೆಯಿಂದ ಯಾವುದೇ ಒಳಚರಂಡಿ ದುರಸ್ತಿ ಕಾರ್ಯವನ್ನು ನಡೆಸಬಾರದೆಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
ರಾಜಕಾಲುವೆ ಮೇಲೆ ಸ್ಲ್ಯಾಬ್ ತೆರವುಗೊಳಿಸಿ
ಕಾಸಾಗ್ರಾಂಡ್ ಬಳಿ ಬರುವ ರಾಜಕಾಲುವೆ ಮೇಲೆ ಸ್ಲ್ಯಾಬ್ ಅಳವಡಿಸಿದ್ದು, ಅದನ್ನು ತೆರವುಗೊಳಿಸಲು ಮನವಿ ಮಾಡಿದ್ದಕ್ಕೆ ಪ್ರತಿಕ್ರಿಯಿಸಿ, ರಾಜಕಾಲುವೆ ವಿಭಾಗದ ಅಧಿಕಾರಿಗಳು ಸ್ಥಳ ಪರಿಶೀಲಿಸಿ, ರಾಜಕಾಲುವೆ ಮೇಲೆ ಅಳವಡಿಸಿರುವ ಸ್ಲ್ಯಾಬ್ ಗಳನ್ನು ಕೂಡಲೆ ತೆರವುಗೊಳಿಸಬೇಕು. ತೆರವುಗೊಳಿಸಲು ಅಡ್ಡಪಡಿಸಿದಲ್ಲಿ ಅಂತಹವರ ಮೇಲೆ ಶಿಸ್ತು ಕ್ರಮ ಜರುಗಿಸಲು ಸೂಚನೆ ನೀಡಲಾಯಿತು.
ರಸ್ತೆ ಗುಂಡಿಗಳನ್ನು ಮುಚ್ಚಲು ಸೂಚನೆ
ಬೊಮ್ಮನಹಳ್ಳಿ ವಲಯ ವ್ಯಾಪ್ತಿಯಲ್ಲಿ ಬರುವ ಪ್ರಮುಖ ರಸ್ತೆ, ವಾರ್ಡ್ ರಸ್ತೆಗಳಲ್ಲಿ ಬರುವ ರಸ್ತೆ ಗುಂಡಿಗಳನ್ನು ತ್ವರಿತಗತಿಯಲ್ಲಿ ಮುಚ್ಚಲು ಸೂಚಿಸಲಾಯಿತು. ಅದಕ್ಕೆ ಮುಖ್ಯ ಅಭಿಯಂತರರು ಪ್ರತಿಕ್ರಿಯಿಸಿ 15 ದಿನಗಳ ಒಳಗಾಗಿ ರಸ್ತೆ ಗುಂಡಿಗಳನ್ನು ಮುಚ್ಚುವುದಾಗಿ ತಿಳಿಸಿದರು.
ರಾಜಕಾಲುವೆ ಕಾಮಗಾರಿ ಪರಿಶೀಲನೆ
ಹೊಂಗಸಂದ್ರ ಮೆಟ್ರೋ ನಿಲ್ದಾಣದ ಬಳಿ ರಾಜಕಾಲುವೆ ಕಾಮಗಾರಿ ಕುರಿತಂತೆ ಸ್ಥಳ ಪರಿಶೀಲಿಸಿ, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಜೊತೆ ಸಮನ್ವಯ ಸಾಧಿಸಿ ಕಾಮಗಾರಿ ಕೈಗೆತ್ತಿಕೊಂಡು ಶೀಘ್ರ ಪೂರ್ಣಗೊಳಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಸಾರ್ವಜನಿಕರಿಂದ ಸ್ವೀಕರಿಸಿದ ಪ್ರಮುಖ ಸೂಚನೆಗಳು
1. ಕೆಎಸ್‌ಟಿಡಿಸಿ ಸಂಸ್ಕರಣಾ ಘಟಕದ ಬಳಿ ದುರ್ವಾಸನೆ ಹೆಚ್ಚಾಗಿದ್ದು, ಆ ಸಮಸ್ಯೆಯನ್ನು ಬಗೆಹರಿಸಲು ಮನವಿ.
2. ಹೊಸ ಖಾತಾ ಪಡೆಯಲು ಸಮಸ್ಯೆಯಾಗುತ್ತಿದ್ದು, ತ್ವರಿತವಾಗಿ ಇಖಾತಾ ಸಿಗುವಂತೆ ಮಾಡಲು ಮನವಿ.
3. ಹುಳಿಮಾವಿನ ಸೋಮೇಶ್ವರ ಬಡಾವಣೆ ಬಳಿ ಚರಂಡಿಯಲ್ಲಿ ನೀರು ನಿಲ್ಲುತ್ತಿರುವ ಕಾರಣ ಸ್ಥಳೀಯ ನಿವಾಸಿಗಳಿಗೆ ಸಮಸ್ಯೆಯಾಗುತ್ತಿದ್ದು, ಅದನ್ನು ಬಗೆಹರಿಸಲು ಮನವಿ.
4. ಇಬ್ಬಲೂರು ಕೆರೆಯಲ್ಲಿ ಒತ್ತುವರಿಯಾಗಿದ್ದು, ಅದನ್ನು ತೆರವುಗೊಳಿಸಲು ಮನವಿ.
5. ಗುಂಡುತೋಪಿನ ಡಾನ್ ಭಾಸ್ಕೋ ಬಳಿಯ ರಸ್ತೆಯುದ್ದಕ್ಕೂ ಕಸ ಬಿಸಾಡುತ್ತಿದ್ದು, ಅದನ್ನು ಕೂಡಲೆ ತೆರವುಗೊಳಿಸಲು ಮನವಿ.
6. ಮಂಗಮ್ಮನ ಪಾಳ್ಯದ ಬಳಿ ರಾಜಕಾಲುವೆಯಲ್ಲಿ ಹೂಳೆತ್ತಲು ಮನವಿ.
ಈ ವೇಳೆ ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಸತೀಶ್ ರೆಡ್ಡಿ, ವಲಯ ಆಯುಕ್ತರಾದ ರಮ್ಯಾ, ವಲಯ ಜಂಟಿ ಆಯುಕ್ತರಾದ ಅಜಿತ್, ಉಪ ಆಯುಕ್ತರಾದ ಡಿ.ಕೆ ಬಾಬು, ಮುಖ್ಯ ಅಭಿಯಂತರರಾದ ಶಶಿಕುಮಾರ್ ಸೇರಿದಂತೆ ಸಂಬಂಧಪಟ್ಟ ಅಧಿಕಾರಿಗಳು ಉಪಸ್ಥಿತರಿದ್ದರು.
More From GoodReturns

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

Bengaluru: ಮಳೆಗಾಲಕ್ಕೂ ಮುನ್ನ ಫೀಲ್ಡ್ಗೆ ಇಳಿದ ಶಾಸಕ ಗೋಪಾಲಯ್ಯ...ಮಹಾಲಕ್ಷ್ಮಿ ಲೇಔಟ್ನಲ್ಲಿ ಕಾಮಗಾರಿಗಳ ಪರಿಶೀಲನೆ!

Bengaluru - Stock Market: ಷೇರು ಮಾರುಕಟ್ಟೆಯಲ್ಲಿ ಭಾರೀ ನಷ್ಟ; ಮನನೊಂದು ಬೆಂಗಳೂರಿನ ವ್ಯಕ್ತಿ ಆತ್ಮಹತ್ಯೆ

Egg Price Down: ಬೆಂಗಳೂರು ಮೊಟ್ಟೆ ಪ್ರಿಯರಿಗೆ ಗುಡ್ ನ್ಯೂಸ್; ಬೆಲೆ ಭಾರೀ ಇಳಿಕೆ

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Bengaluru to Pune: ಈ ಯೋಜನೆಯಿಂದ ಬೆಂಗಳೂರು-ಪುಣೆ ಪ್ರಯಾಣ 7 ಗಂಟೆ ಮಾತ್ರ...ಹೊಸ ಹೆದ್ದಾರಿ ಯೋಜನೆ ವಿವರ!

Bengaluru: ಬೆಂಗಳೂರು ಮೂಲಸೌಕರ್ಯ ಮತ್ತು ಸ್ಮಾರ್ಟ್ ಸಿಟಿ ಯೋಜನೆಗಳಿಗೆ 7000 ಕೋಟಿ ರೂ. ಹೂಡಿಕೆ!

BMTC Bus: ಬೆಂಗಳೂರು-ರಾಮನಗರ ಮತ್ತು ಕನಕಪುರಕ್ಕೆ ಬಿಎಂಟಿಸಿ ಬಸ್… ಬಸ್ ನಿಲ್ದಾಣಗಳ ಬಗ್ಗೆ ತಿಳಿಯಿರಿ

Bengaluru Special Trains: ಮಾರ್ಚ್ 11 ರಿಂದ ಬೆಂಗಳೂರಿಗೆ ಬರಲಿದೆ ಮತ್ತೊಂದು ಸ್ಪೆಷಲ್ ರೈಲು! ಎಲ್ಲಿಂದ ಎಲ್ಲಿಗೆ?

Bengaluru Airport: ಬೆಂಗಳೂರು ಏರ್ಪೋರ್ಟ್ಗೆ 2025ರ ACI ಪ್ರಶಸ್ತಿ... ಪ್ರಯಾಣಿಕರ ಹೃದಯ ಗೆದ್ದ ವಿಮಾನ ನಿಲ್ದಾಣ!

Karnataka Weather: ರಾಜ್ಯದ ಜನರಿಗೆ ಬಿಸಿಲಿನ ಕಂಟಕ! ಹವಾಮಾನ ಇಲಾಖೆಯಿಂದ ಎಚ್ಚರಿಕೆ



Click it and Unblock the Notifications