ಬೆಂಗಳೂರು, ಏಪ್ರಿಲ್ 25: ದಿವಂಗತ ನಟ ಪುನೀತ್ ರಾಜ್‌ಕುಮಾರ್ ಅವರ ಪತ್ನಿ ಅಶ್ವಿನಿ ಪುನೀತ್ ರಾಜ್‌ಕುಮಾರ್ ಅವರು ವರನಟ ಡಾ. ರಾಜ್‌ಕುಮಾರ್ ಅವರ ಜನ್ಮದಿನದಂದು ಹೊಸ ಉದ್ಯಮವನ್ನು ಆರಂಭಿಸಿದ್ದಾರೆ.
ಈಗಾಗಲೇ ನಿರ್ಮಾಪಕಿ ಆಗಿರುವ ಅವರು ಪಿಆರ್‌ಕೆ ಹೆಸರಿನಲ್ಲಿ ಪ್ರೊಡಕ್ಷನ್ ಹೌಸ್ ನಡೆಸುತ್ತಿದ್ದಾರೆ. ಇತ್ತೀಚೆಗೆ ದುಬಾರಿ ಬೆಲೆಯ ಆಡಿ ಖರೀದಿಸಿದ್ದ ಅವರು ಹೊಸ ಉದ್ಯಮದತ್ತ ಹೆಜ್ಜೆಇಟ್ಟಿದ್ದಾರೆ.

ಹೊಸ ಉದ್ಯಮದ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಮಾಹಿತಿ ಹಂಚಿಕೊಂಡಿರುವ ಅವರು ಅಪ್ಪಾಜಿ ಅವರ ಹುಟ್ಟುಹಬ್ಬದ ಸವಿನೆನಪಿನಲ್ಲಿ ನಾವು ಅಗರಬತ್ತಿ ಉದ್ಯಮಕ್ಕೆ ಕಾಲಿಟ್ಟಿದ್ದೇವೆ ಎಂದು ಅವರು ತಿಳಿಸಿದ್ದಾರೆ. ಇನ್‌ಸ್ಟಾಗ್ರಾಂನಲ್ಲಿ ಪೋಸ್ಟ್‌ನಲ್ಲಿ ಅಪ್ಪಾಜಿಯವರ 95ನೇ ಜನ್ಮದಿನಾಚರಣೆ ಹಾಗೂ 'ಗಂಧದಗುಡಿ' ಚಿತ್ರದ ಸುವರ್ಣ ಮಹೋತ್ಸವವನ್ನು 'ಅಪ್ಪುವಿನ ಗಂಧದಗುಡಿ ಅಗರಬತ್ತಿ'ಯನ್ನು ಸಂಭ್ರಮದಿಂದ ಆರಂಭಿಸುತ್ತೇವೆ ಎಂದು ಬರೆದಿದ್ದಾರೆ.
ಕರ್ನಾಟಕದ ಮೇರು ನಟ ಡಾ. ರಾಜ್‌ಕುಮಾರ್ ಅವರ ಜನ್ಮದಿನವನ್ನು ರಾಜ್ಯದಾದ್ಯಂತ ಅಭಿಮಾನಿಗಳು ಸಂಭ್ರಮದಿಂದ ಆಚರಣೆ ಮಾಡುತ್ತಿದ್ದಾರೆ. ಈ ಸುಸಂದರ್ಭದಲ್ಲಿ ಅಶ್ವಿನಿ ಪುನೀತ್ ರಾಜ್‌ಕುಮಾರ್ ಅವರು ತಮ್ಮ ಹೊಸ ಆಲೋಚನೆಯನ್ನು ಜನರ ಮುಂದೆ ಇಟ್ಟಿದ್ದಾರೆ.
ಬೆಂಗಳೂರಿನ ಕಂಠೀರವ ಸ್ಟುಡಿಯೋದ ಆವರಣದಲ್ಲಿ ಡಾ. ರಾಜ್ ಕುಮಾರ್ ಪುಣ್ಯಭೂಮಿ ಸ್ಥಳದಲ್ಲಿ ಅಭಿಮಾನಿಗಳು ಹಲವು ಜನಪರ ಕಾರ್ಯಕ್ರಮಗಳನ್ನು ಆಯೋಜಿಸಿದ್ದಾರೆ. ಇನ್ನು ಬುಧವಾರ ಡಾ.ರಾಜ್ ಕುಟುಂಬಸ್ಥರು ಕಂಠೀರವ ಸ್ಟುಡಿಯೋದಲ್ಲಿರುವ ಸ್ಮಾರಕಕ್ಕೆ ಆಗಮಿಸಿ ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ್ದಾರೆ. ಪುನೀತ್ ಪತ್ನಿ ಅಶ್ವಿನಿ, ರಾಘವೇಂದ್ರ ರಾಜ್‌ಕುಮಾರ್ ಮತ್ತು ಡಾ.ರಾಜ್‌ಕುಮಾರ್ ಹೆಣ್ಣು ಮಕ್ಕಳು, ಮೊಮ್ಮಕ್ಕಳು ಸೇರಿದಂತೆ ಕುಟುಂಸ್ಥರು ಪೂಜೆಯಲ್ಲಿ ಭಾಗಿಯಾಗಿದ್ದರು.
More From GoodReturns

Weather Today: ಮುಂದಿನ ವಾರದಿಂದ ಮತ್ತಷ್ಟು ಹೆಚ್ಚಾಗಲಿದೆ ಬಿಸಿಲು; ಜನರೇ ಎಚ್ಚರ

Bengaluru Gold: ಬೆಂಗಳೂರಿನ ಚಿನ್ನ ಪ್ರಿಯರಿಗೆ ಶಾಕ್; ದಿಢೀರ್ 7000 ರೂ. ಏರಿಕೆ ಕಂಡ ಬಂಗಾರ

Mandya ARAI Centre: ಮಂಡ್ಯಕ್ಕೆ ಮತ್ತೊಂದು ಮೆಗಾ ಗಿಫ್ಟ್…500 ಕೋಟಿ ಹೂಡಿಕೆಯಲ್ಲಿ ARAIನ ಸುಧಾರಿತ ಕೇಂದ್ರ ಸ್ಥಾಪನೆ!

Karnataka Budget 2026: 4.49 ಲಕ್ಷ ಕೋಟಿಯ ದಾಖಲೆ ಬಜೆಟ್…ಈ ಬಜೆಟ್ನಲ್ಲಿ ಜನಸಾಮಾನ್ಯರಿಗೆ ಸಿಕ್ಕ ಕೊಡುಗೆ ಏನು?

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Karnataka Budget 2026 Live Updates: ಕರ್ನಾಟಕ ಬಜೆಟ್ನ ಪ್ರಮುಖ ಘೋಷಣೆಗಳೇನು? ಇಲ್ಲಿದೆ ಸಂಪೂರ್ಣ ಮಾಹಿತಿ

North Karnataka: ಕೈಗಾರಿಕೆ, ಕೃಷಿ, ಶಿಕ್ಷಣ..ಉತ್ತರ ಕರ್ನಾಟಕಕ್ಕೆ ಸರ್ಕಾರದಿಂದ ಸಿಕ್ಕ ಹೊಸ ಯೋಜನೆಗಳು ಏನು?

ಕರ್ನಾಟಕ ಬಜೆಟ್ 2026: ಕೃಷಿ, ಶಿಕ್ಷಣ, ಸಾರಿಗೆ, ವೈದ್ಯಕೀಯ ಕ್ಷೇತ್ರಗಳ ನಿರೀಕ್ಷೆ ಏನು? ಬಜೆಟ್ ಮೇಲೆ ಭಾರಿ ಬೇಡಿಕೆ

Karnataka Budget 2026–27: ಬೆಂಗಳೂರು ಮೂಲಸೌಕರ್ಯ ಮತ್ತು ಕಲ್ಯಾಣ ಯೋಜನೆಗಳಿಗೆ ಒತ್ತು ಸಾಧ್ಯತೆ!

Karnataka Weather: ರಾಜ್ಯದ ಜನರಿಗೆ ಬಿಸಿಲಿನ ಕಂಟಕ! ಹವಾಮಾನ ಇಲಾಖೆಯಿಂದ ಎಚ್ಚರಿಕೆ

Karnataka Budget: ಏರಿಕೆಯಾಗುತ್ತಿರುವ ಸಾಲ, ಹೆಚ್ಚುತ್ತಿರುವ ವೆಚ್ಚ...ಬಜೆಟ್ನಲ್ಲಿ ಸಮತೋಲನ ಸಾಧಿಸುವುದು ಸಾಧ್ಯವೇ?



Click it and Unblock the Notifications