ನಗರದ ಅತ್ಯಂತ ಶ್ರೀಮಂತ ದೇವಾಲಯವಾದ ದಕ್ಷಿಣ ಬೆಂಗಳೂರಿನ ಬನಶಂಕರಿ ದೇವಸ್ಥಾನ ಭವ್ಯವಾದ 'ಬನದ ಹುಣ್ಣಿಮೆ' ಉತ್ಸವವನ್ನು ಆಚರಿಸಲು ಸಿದ್ಧವಾಗಿದೆ. ಈ ನಡುವೆ ಸುಮಾರು 107 ವರ್ಷಗಳ ನಂತರ ಹೊಚ್ಚಹೊಸ ರಥವನ್ನು ಕೂಡಾ ಸ್ವಾಗತಿಸಲು ದೇವಾಲಯವು ಸಜ್ಜಾಗಿದೆ.
ಬನದ ಹುಣ್ಣಿಮೆಯ 108ನೇ ವರ್ಷದ ಸಂಭ್ರಮಾಚರಣೆಯ ಹಿನ್ನಲೆಯಲ್ಲಿ ಕಳೆದ ಕೆಲವು ವರ್ಷಗಳಿಂದ ಕೋಟ್ಯಂತರ ರೂಪಾಯಿ ವೆಚ್ಚದಲ್ಲಿ ಅದ್ಧೂರಿಯಾಗಿ ರೂಪುಗೊಂಡಿರುವ ಬನಶಂಕರಿ ದೇವಸ್ಥಾನವು ಬುಧವಾರದಂದು ಸ್ವೀಕರಿಸಿದ ನೂತನ ಮರದ ರಥವನ್ನು ಅನಾವರಣಗೊಳಿಸಲಿದೆ.

ಧಾರ್ಮಿಕ ದತ್ತಿ (ಮುಜರಾಯಿ) ಇಲಾಖೆಯ ಅಧಿಕಾರಿಗಳು ಟೈಮ್ಸ್ ಆಫ್ ಇಂಡಿಯಾಕ್ಕೆ ಗುರುವಾರ ಮಹಾರಥೋತ್ಸವದ ಸಮಯದಲ್ಲಿ ರಥವು ದೇವಾಲಯದ ಸುತ್ತಲೂ ದೇವರನ್ನು ಕೊಂಡೊಯ್ಯುತ್ತದೆ ಎಂದು ತಿಳಿಸಿದ್ದಾರೆ. ಈ ಸಂದರ್ಭದಲ್ಲಿ ಸುಮಾರು 50 ಸಾವಿರಕ್ಕೂ ಹೆಚ್ಚು ಭಕ್ತರು ಪಾಲ್ಗೊಳ್ಳುವ ನಿರೀಕ್ಷೆಯಿದೆ.
ರಥದ ಬಗ್ಗೆ ತಿಳಿಯಿರಿ
ರಥವನ್ನು ಉತ್ತಮ ಗುಣಮಟ್ಟದ ತೇಗದ ಮರದಿಂದ ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ. ಉಡುಪಿ ಜಿಲ್ಲೆಯ ಕುಂದಾಪುರದ ಕುಂಭಾಶಿಯಲ್ಲಿರುವ ಶ್ರೀ ವಿಶ್ವಕರ್ಮ ಕರಕುಶಲ ಮತ್ತು ಶಿಲ್ಪಕಲಾ ಕೇಂದ್ರದಲ್ಲಿ ರಥವನ್ನು ಕೆತ್ತಲಾಗಿದೆ. ಅಯೋಧ್ಯೆಯ ಶ್ರೀರಾಮ ದೇಗುಲಕ್ಕೆ ರಥ ಕೆತ್ತಿರುವ ಶಿಲ್ಪಿ ಲಕ್ಷ್ಮೀನಾರಾಯಣ ಆಚಾರ್ಯ ದಾಖಲೆ ಸಮಯದಲ್ಲಿ ಈ ರಥವನ್ನು ಕೆತ್ತಿದ್ದಾರೆ ಎಂದು ದೇವಸ್ಥಾನದ ಕಾರ್ಯನಿರ್ವಾಹಕ ಅಧಿಕಾರಿ ಲಕ್ಷ್ಮಿ ತಿಳಿಸಿದರು.
ಈ ದೇವಾಲಯವು ವಾರ್ಷಿಕ 4 ಕೋಟಿ ರೂಪಾಯಿಗೂ ಹೆಚ್ಚು ವಹಿವಾಟು ನಡೆಸುತ್ತದೆ ಮತ್ತು ಬೆಂಗಳೂರಿನಲ್ಲಿರುವ ಕೆಲವೇ ಕೆಲವು 'ಎ' ದರ್ಜೆಯ ದೇವಾಲಯಗಳಲ್ಲಿ ಇದು ಒಂದಾಗಿದೆ. ಸಾಮಾನ್ಯವಾಗಿ, ಕುಶಲಕರ್ಮಿಗಳು ಮರದ ರಥವನ್ನು ಕೆತ್ತಲು ಸುಮಾರು ಒಂದು ವರ್ಷ ತೆಗೆದುಕೊಳ್ಳುತ್ತಾರೆ ಎಂದು ಅಧಿಕಾರಿಯೊಬ್ಬರು ಹೇಳಿದರು.
"ಕೇವಲ ಎರಡೂವರೆ ತಿಂಗಳಲ್ಲಿ ಶಿಲ್ಪಿಗಳು ಕೆಲಸವನ್ನು ಪೂರ್ಣಗೊಳಿಸಿದ್ದು ಇದೇ ಮೊದಲು. ಒಟ್ಟು 70.8 ಲಕ್ಷ ರೂಪಾಯಿ ವೆಚ್ಚವಾಗಿದೆ. ಕೇವಲ ಮರದ ಅಥವಾ ಲೋಹದ ಚಕ್ರಗಳನ್ನು ಹೊಂದಿರುವ ಸಾಂಪ್ರದಾಯಿಕ ರಥಗಳಿಗಿಂತ ಭಿನ್ನವಾಗಿ, ಇದು ಹೊಸದಾಗಿ ಎರಡು-ಮೂರು ಇಂಚು ದಪ್ಪದ ರಬ್ಬರ್ ಹಾಳೆಗಳಿಂದ ಮುಚ್ಚಿದ ಮರದ ಚಕ್ರಗಳನ್ನು ಹೊಂದಿದೆ. ರಥವು ಅಸಮ ಮೇಲ್ಮೈಗಳಲ್ಲಿ ಚಲಿಸಿದರೂ, ದೇವರಿಗೆ ತೊಂದರೆಯಾಗುವುದಿಲ್ಲ," ಎಂದು ಟೈಮ್ಸ್ ಆಫ್ ಇಂಡಿಯಾಕ್ಕೆ ತಿಳಿಸಿದರು.
More From GoodReturns

NSE ಆಯಿಲ್ ಫ್ಯೂಚರ್ಸ್ ಆರಂಭ: ಹೂಡಿಕೆದಾರರಿಗೆ ಸಿಗಲಿದೆ ಭಾರಿ ಲಾಭ?

ಸಗಟು ಬೆಲೆ ಸೂಚ್ಯಂಕ: ನಿಮ್ಮ ಜೇಬಿಗೆ ಕಾದಿದೆಯಾ ಶಾಕ್?

ಚಿನ್ನದ ಬೆಲೆ ಏರಿಕೆ: ಅಕ್ಷಯ ತೃತೀಯಕ್ಕೆ ಹೂಡಿಕೆ ಮಾಡುವುದು ಹೇಗೆ?

ನಿಫ್ಟಿ ಏರಿಕೆ: ಈಗಲೇ ಹೂಡಿಕೆ ಮಾಡಬೇಕಾ ಅಥವಾ ಕಾಯಬೇಕಾ?

ಆರ್ಬಿಐ ರೆಪೋ ದರ ಸ್ಥಿರ: ನಿಮ್ಮ ಹಣದ ಭವಿಷ್ಯ ಬದಲಾಗುತ್ತಾ?

ಭಾರತೀಯ ಷೇರು ಮಾರುಕಟ್ಟೆ: ಇಂದಿನ ವಹಿವಾಟಿನಲ್ಲಿ ಅಡಗಿದೆ ಅಚ್ಚರಿಯ ತಿರುವು!

ಅಂಬೇಡ್ಕರ್ ಜಯಂತಿ ರಜೆ: ನಿಮ್ಮ ಎಸ್ಐಪಿ ಹಣಕ್ಕೆ ಕಾದಿದೆಯಾ ಸಂಕಷ್ಟ?

ಚಿನ್ನದ ಬೆಲೆ ಸ್ಥಿರ: ಖರೀದಿಗೆ ಇದೇ ಸುವರ್ಣಾವಕಾಶವೇ?

ಷೇರು ಮಾರುಕಟ್ಟೆ ಶನಿವಾರದ ವಿಶೇಷ ವಹಿವಾಟು: ಹೂಡಿಕೆದಾರರೇ ಎಚ್ಚರ!

ಪ್ರಾಪ್ಶೇರ್ ಸೆಲೆಸ್ಟಿಯಾ ಐಪಿಒ: ಹೂಡಿಕೆಗೆ ಇಂದು ಕೊನೆಯ ಅವಕಾಶ!

ಟಿಸಿಎಸ್ ಫಲಿತಾಂಶದ ಬಳಿಕ ಮಾರುಕಟ್ಟೆಯಲ್ಲಿ ಅನಿರೀಕ್ಷಿತ ಏರಿಳಿತದ ಭೀತಿ!



Click it and Unblock the Notifications