ಸಾಂಕ್ರಾಂತಿ ಹಬ್ಬದ ಸಮಯಕ್ಕೆ ಸರಿಯಾಗಿ ಬೆಂಗಳೂರಿನಲ್ಲಿ ಚಿನ್ನದ ದರ ಏರಿಕೆಯಾಗಿದೆ. ಆಭರಣ ಪ್ರಿಯರಿಗೆ ಮತ್ತೆ ನಿರಾಸೆಯಾಗಿದೆ. ಕಳೆದ ಎರಡು ದಿನಗಳ ಹಿಂದೆ ಇಳಿಕೆಯಾಗಿದ್ದ ಚಿನ್ನದ ದರ ಇಂದು ಮತ್ತೆ ಏರಿಕೆಯಾಗಿದೆ. ಬೆಂಗಳೂರಿಗರು ನಿರಾಸೆ ಪಡುವಂತಾಗಿದೆ. ಈ ವಾರ ಚಿನ್ನದ ಬೆಲೆಯಲ್ಲಿ ಸಾಕಷ್ಟು ಎರಿಳಿತಗಳನ್ನ ನಾವು ಗಮನಿಸಬಹುದು. ಇದರ ಜೊತೆಗೆ ಬೆಳ್ಳಿ ಬೆಲೆ ಕೂಡ ಏರಿಕೆಯಾಗಿದೆ.
ಜನವರಿ 10 ರಂದು, ಬೆಂಗಳೂರಿನಲ್ಲಿ ಚಿನ್ನದ ಬೆಲೆ ಏರಿಕೆಯಾಗಿದೆ. 22 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆ 250ರೂ. ಏರಿಕೆಯಾಗಿ 72,850 ರೂ. ಆಗಿದೆ. ಮತ್ತು 24 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆ 270 ರೂ. ಏರಿಕೆಯಾಗಿ 79,470 ಆಗಿದೆ. ಬೆಂಗಳೂರಿನಲ್ಲಿ 18 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆ 210 ರೂ. ಏರಿಕೆಯಾಗಿ 59,610 ಆಗಿದೆ.

ಹಾಗೆ 22 ಕ್ಯಾರೆಟ್‌ನ 100 ಗ್ರಾಂ ಚಿನ್ನದ ಬೆಲೆ 2,500 ರೂ. ಏರಿಕೆಯಾಗಿ 7,28,500ಆಗಿದೆ. ಮತ್ತು 24 ಕ್ಯಾರೆಟ್‌ನ 100 ಗ್ರಾಂ ಚಿನ್ನದ ಬೆಲೆ 2,700 ರೂ. ಏರಿಕೆಯಾಗಿ 7,94,700ಆಗಿದೆ. 18 ಕ್ಯಾರೆಟ್‌ನ 100 ಗ್ರಾಂ ಚಿನ್ನದ ಬೆಲೆ 2,100 ರೂ. ಏರಿಕೆಯಾಗಿ 5,96,100 ಆಗಿದೆ.
ಬೆಂಗಳೂರಿನಲ್ಲಿ ಬೆಳ್ಳಿ ದರಗಳು
ಇಂದು ಬೆಂಗಳೂರಿನಲ್ಲಿ ಬೆಳ್ಳಿ ಬೆಲೆ ಸ್ಥಿರವಾಗಿದೆ . ಪ್ರಸ್ತುತ, ಬೆಂಗಳೂರಿನಲ್ಲಿ 1 ಗ್ರಾಂ ಚಿನ್ನದ ಬೆಲೆ 1 ರೂ. ಏರಿಕೆಯಾಗಿ 93.50 ರೂ. ಆಗಿದೆ. ಹಾಗೆ 1 ಕಿಲೋ ಗ್ರಾಂ ಬೆಳ್ಳಿ ಬೆಲೆ 1,000 ರೂ. ಏರಿಕೆಯಾಗಿ 93,500ರೂ. ಆಗಿದೆ. ಇಂದು ಬೆಳ್ಳಿ ಬೆಲೆ ತೀವ್ರವಾಗಿ ಏರಿಕೆಯಾಗಿದೆ.
ಭಾರತದ ಕೆಲವು ಮೆಟ್ರೋಪಾಲಿಟನ್ ನಗರಗಳಲ್ಲಿನ ಚಿನ್ನದ ಬೆಲೆಗಳ ವಿವರ:
| ನಗರಗಳು | 24 ಕ್ಯಾರೆಟ್ | 22 ಕ್ಯಾರೆಟ್ |
| ದೆಹಲಿ | 79,620 | 73,000 |
| ಮುಂಬೈ | 79,470 | 72,850 |
| ಚೆನ್ನೈ | 79,470 | 72,850 |
| ಕೋಲ್ಕತ್ತಾ | 79,470 | 72,850 |
ಸ್ಪಾಟ್ ಚಿನ್ನದ ಭವಿಷ್ಯ
ಸ್ಪಾಟ್ ಚಿನ್ನದ ಬೆಲೆ ಏರಿಕೆಯಾಗುವ ನಿರೀಕ್ಷೆ ಇದೆ. ಯುಎಸ್ ಡಾಲರ್ ಏರಿಕೆಯಿಂದಾಗಿ ಇದು ಸ್ಪಾಟ್ ಚಿನ್ನದ ಮೇಲೆ ಹೆಚ್ಚು ಪ್ರಭಾವ ಬೀರಲಿದೆ. ಇನ್ನು ವರದಿ ಪ್ರಕಾರ ಸ್ಪಾಟ್ ಚಿನ್ನದ ಬೆಲೆಯು ಪ್ರತಿ ಔನ್ಸ್‌ಗೆ 0.18% ರಷ್ಟು ಏರಿಕೆಯಾಗಿ 2,672.79 ಡಾಲರ್ ತಲುಪಿದೆ. ಇತ್ತ ಸ್ಪಾಟ್ ಬೆಳ್ಳಿ ಪ್ರತಿ ಔನ್ಸ್‌ಗೆ 0.33% ಏರಿಕೆಯಾಗಿ 30.23 ಡಾಲರ್‌ನಲ್ಲಿ ವಹಿವಾಟು ನಡೆಸುತ್ತಿದೆ. ಪ್ಲಾಟಿನಮ್ ಬೆಲೆಯು ಪ್ರತಿ ಔನ್ಸ್‌ಗೆ 0.83%ರಷ್ಟು ಏರಿಕೆಯಾಗಿ 969.25 ಡಾಲರ್‌ನಲ್ಲಿ ವಹಿವಾಟು ನಡೆಸುತ್ತಿದೆ. ಪಲ್ಲಾಡಿಯಂ ಬೆಲೆಯು ಪ್ರತಿ ಔನ್ಸ್‌ಗೆ 1.67% ರಷ್ಟು ಏರಿಕೆಯಾಗಿ 944.00 ಡಾಲರ್ ತಲುಪಿದೆ.
MCX ಗೋಲ್ಡ್ ಔಟ್‌ಲುಕ್
ಮಲ್ಟಿ ಕಮೊಡಿಟಿ ಎಕ್ಸ್‌ಚೇಂಜ್‌ನಲ್ಲಿ (MCX), ಫೆಬ್ರವರಿ 5, 2025 ರ ವಿತರಣೆಯ ಚಿನ್ನದ ಭವಿಷ್ಯ ನೋಡೋದಾದ್ರೆ, 10 ಗ್ರಾಂ ಚಿನ್ನಕ್ಕೆ 0.2%%ನಷ್ಟು ಏರಿಕೆಯಾಗಿ 78,264ರೂ. ಜಾಗತಿಕ ಬೇಡಿಕೆ, ಬಡ್ಡಿ ದರಗಳು, ಕರೆನ್ಸಿ ವಿನಿಮಯ ದರಗಳು, ಸರ್ಕಾರಿ ನೀತಿಗಳು ಮತ್ತು ಜಾಗತಿಕ ಘಟನೆಗಳಂತಹ ದೇಶೀಯ ಮತ್ತು ಅಂತರರಾಷ್ಟ್ರೀಯ ಎರಡೂ ಅಸ್ಥಿರಗಳಿಂದ ಚಿನ್ನದ ಬೆಲೆಗಳ ಮೇಲೆ ಹೆಚ್ಚು ಪರಿಣಾಮ ಬೀರಬಹುದು.
MCX ಸಿಲ್ವರ್ ಔಟ್‌ಲುಕ್
ಆಗಿದೆ. ಅದೇ ರೀತಿ, ಮಾರ್ಚ್ 5, 2025ರ ಬೆಳ್ಳಿ ಭವಿಷ್ಯವು 0.31%ನಷ್ಟು ಏರಿಕೆಯಾಗಿ 91,995 ರೂಪಾಯಿ ವಹಿವಾಟು ನಡೆಸುತ್ತಿದೆ. ಜಾಗತಿಕ ಬೇಡಿಕೆ, ಬಡ್ಡಿ ದರಗಳು, ಕರೆನ್ಸಿ ವಿನಿಮಯ ದರಗಳು, ಸರ್ಕಾರಿ ನೀತಿಗಳು ಮತ್ತು ಜಾಗತಿಕ ಘಟನೆಗಳಂತಹ ದೇಶೀಯ ಮತ್ತು ಅಂತರರಾಷ್ಟ್ರೀಯ ಎರಡೂ ಅಸ್ಥಿರಗಳಿಂದ ಬೆಲೆಗಳ ಮೇಲೆ ಹೆಚ್ಚು ಪರಿಣಾಮ ಬೀರಬಹುದು.
ನಾಲ್ಕು ವಾರಗಳಲ್ಲಿ ಚಿನ್ನದ ದರ ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಗರಿಷ್ಠ ಮಟ್ಟವನ್ನ ತಲುಪಿದೆ. ರಾಯಿಟರ್ಸ್ ವರದಿ ಪ್ರಕಾರ ನವೆಂಬರ್‌ನ ಮಧ್ಯ ತಿಂಗಳಿನಿಂದ ಇಲ್ಲಿಯವರೆಗೆ ಹೋಲಿಕೆ ಮಾಡಿದರೆ ಈ ವಾರ ಹಳದಿ ಲೋಹ ಉತ್ತಮ ಓಟವನ್ನ ಮುಂದುವರೆಸಿದೆ. ಇಂದು ಯುಎಸ್ ಉದ್ಯೋಗ ದತ್ತಾಂಶಗಳು ಪ್ರಕಟವಾಗಲಿದ್ದು ಜಾಕತಿಕವಾಗಿ ಎಲ್ಲರ ಗಮನ ಆ ದತ್ತಾಂಶದ ಮೇಲೆ ಇದೆ. ಮುಂಬರುವ ದಿನಗಳಲ್ಲಿ ಯುಎಸ್ ಪೆಡರಲ್ ರಿಸರ್ವ್‌ನ ಬಡ್ಡಿದರದ ಬಗ್ಗೆ ಸಾಕಷ್ಟು ನಿರೀಕ್ಷೆ ಇದೆ. ಯುಎಸ್ ಡಾಲರ್ ಏರಿಕೆಯಿಂದಾಗಿ ಇಂದು ಚಿನ್ನದ ದರ ಕೂಡ ಏರಿಕೆಯಾಗಿದೆ.


Click it and Unblock the Notifications