ಬೆಂಗಳೂರು, ಏರೋಸ್ಪೇಸ್ ಉದ್ಯಮದಲ್ಲಿ ಅತ್ಯುತ್ತಮ ಪ್ರತಿಭೆಗಳನ್ನು ಹೊಂದಿದ್ದು ಇದು ವಿಮಾನ ಮತ್ತು ಹೆಲಿಕಾಪ್ಟರ್ ಉತ್ಪಾದನಾ ಸೌಲಭ್ಯಗಳನ್ನು ಸ್ಥಾಪಿಸಲು ಸೂಕ್ತ ಸ್ಥಳವಾಗಿದೆ. ತಯಾರಕರಿಗೆ ಪ್ರೋತ್ಸಾಹ ನೀಡುವ ಮೂಲಕ, ಪ್ರತಿಭಾ ಪಲಾಯನವನ್ನು ತಡೆದು್ ನಮ್ಮ ದೇಶದ ಪ್ರತಿಭೆಗಳನ್ನು ಭಾರತದೊಳಗೆ ಉಳಿಸಿಕೊಳ್ಳಬಹುದು" ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಅಭಿಪ್ರಾಯಪಟ್ಟರು.
ಬೆಂಗಳೂರು ಏರ್ ಶೋ 2025 ರ ಉದ್ಘಾಟನಾ ಸಮಾರಂಭದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಈ ವಿಚಾರದ ಕುರಿತು ಮಾತನಾಡಿದ್ದು, ಏರೋ ಇಂಡಿಯಾ ಕೇವಲ ಪ್ರದರ್ಶನವಲ್ಲ. ಇದು ಏರೋಸ್ಪೇಸ್ ಮತ್ತು ರಕ್ಷಣಾ ಕ್ಷೇತ್ರಗಳಲ್ಲಿ ಭಾರತದ ಸಾಮರ್ಥ್ಯ ಬೆಳೆಯುತ್ತಿರುವುದಕ್ಕೆ ಸಾಕ್ಷಿ ಮತ್ತು ಅಂತರರಾಷ್ಟ್ರೀಯ ಪಾಲುದಾರಿಕೆಗಳನ್ನು ಬೆಳೆಸುವ ವೇದಿಕೆಯಾಗಿದೆ

ಇಂದು ಏರೋಸ್ಪೇಸ್ ಉದ್ಯಮವನ್ನು ಅಂತರರಾಷ್ಟ್ರೀಯ ಮಟ್ಟಕ್ಕೆ ತೆಗೆದುಕೊಂಡು ಹೋಗಲು ಬೆಂಗಳೂರು ಅತ್ಯುತ್ತಮ ನಗರವಾಗಿದೆ. ಅನೇಕ ಬ್ರ್ಯಾಂಡ್ಗಳು ಮತ್ತು ಅತ್ಯುತ್ತಮ ತಂತ್ರಜ್ಞಾನಗಳನ್ನು ಪ್ರದರ್ಶಿಸಲು ಬೆಂಗಳೂರು ಸೂಕ್ತ ಸ್ಥಳವಾಗಿದೆ ಎಂದು ಅಭಿಪ್ರಾಯಪಟ್ಟರು.
ರಕ್ಷಣಾ ಸಚಿವರು ಕರ್ನಾಟಕದಲ್ಲಿ ಏರೋಸ್ಪೇಸ್ ಉದ್ಯಮವನ್ನು ಸ್ಥಾಪಿಸಲು ಹಾಗೂ ವಿಮಾನ ಮತ್ತು ಹೆಲಿಕಾಪ್ಟರ್ ಗಳ ತಯಾರಕರನ್ನು ಹೆಚ್ಚು, ಹೆಚ್ಚು ಬೆಂಗಳೂರಿನ ಕಡೆಗೆ ಗಮನ ಹರಿಸುವಂತೆ ಪ್ರೋತ್ಸಾಹ ನೀಡಬೇಕಾಗಿ ಮನವಿ ಮಾಡುತ್ತೇನೆ. ಕರ್ನಾಟಕ ಭಾರತದ ತಾಂತ್ರಿಕ ಮತ್ತು ಕೈಗಾರಿಕಾ ಪ್ರಗತಿಯಲ್ಲಿ ಮುಂಚೂಣಿಯಲ್ಲಿರುವ ರಾಜ್ಯ. ವಿಶ್ವ ದರ್ಜೆಯ ಸಂಶೋಧನಾ ಸಂಸ್ಥೆಗಳು, ಅತ್ಯಾಧುನಿಕ ಏರೋಸ್ಪೇಸ್ ಕಂಪನಿಗಳನ್ನು ಹೊಂದಿರುವ ಕೌಶಲ್ಯಪೂರ್ಣ ಕಾರ್ಯಪಡೆಯೇ ನಮ್ಮಲ್ಲಿದೆ. ಇದಲ್ಲದೇ ಇತ್ತೀಚಿನ ವರ್ಷಗಳಲ್ಲಿ, ಕರ್ನಾಟಕವು ದೇಶದ ಒಟ್ಟು ದೇಶೀಯ ಉತ್ಪನ್ನ, ಕೈಗಾರಿಕಾ ಬೆಳವಣಿಗೆ ಮತ್ತು ಹೂಡಿಕೆಯ ಒಳಹರಿವು ಸೇರಿದಂತೆ ಪ್ರಮುಖ ಆರ್ಥಿಕ ಕ್ಷೇತ್ರಗಳಲ್ಲಿ ಅಗಾಧ ಬೆಳವಣಿಗೆ ಕಂಡಿದೆ. ಸಂಶೋಧನೆ, ಮೂಲಸೌಕರ್ಯ ಅಭಿವೃದ್ಧಿ ಮತ್ತು ಉದ್ದಿಮೆಗೆ ಪ್ರೋತ್ಸಾಹಿಸುವ ಭವಿಷ್ಯದ ದೃಷ್ಟಿಯಿಂದ ಕೈಗಾರಿಕಾ ನೀತಿಯನ್ನು ಪೋಷಿಸಲು ನಮ್ಮ ಸರ್ಕಾರ ಬದ್ಧವಾಗಿದೆ" ಎಂದು ತಿಳಿಸಿದ್ದಾರೆ
ದೇಶದ ಏರೋಸ್ಪೇಸ್ ರಾಜಧಾನಿ ಬೆಂಗಳೂರು
ಬೆಂಗಳೂರು ಭಾರತದ ಏರೋಸ್ಪೇಸ್ ರಾಜಧಾನಿ. ದೇಶದ ಏರೋಸ್ಪೇಸ್ ಉತ್ಪಾದನೆ ಮತ್ತು ರಕ್ಷಣಾ ಸಂಶೋಧನೆಯ ಶೇ. 60 ಕ್ಕಿಂತ ಹೆಚ್ಚು ಕೊಡುಗೆಯನ್ನು ನಮ್ಮ ರಾಜ್ಯ ನೀಡುತ್ತಿದೆ
ಎಚ್ ಎಎಲ್, ಇಸ್ರೋ ಮತ್ತು ಬೋಯಿಂಗ್ ಇಂಡಿಯಾದಂತಹ ಪ್ರಮುಖ ಸಂಸ್ಥೆಗಳು ಭಾರತದ ರಕ್ಷಣಾ ಮತ್ತು ಬಾಹ್ಯಾಕಾಶ ಸಾಮರ್ಥ್ಯಗಳಿಗೆ ಸಾಕಷ್ಟು ಕೊಡುಗೆಗಳನ್ನು ನೀಡುತ್ತಿವೆ. ಬೆಂಗಳೂರಿನ ಏರೋಸ್ಪೇಸ್ ವಲಯದಲ್ಲಿ 1,50,000 ಕ್ಕೂ ಹೆಚ್ಚು ಜನರು ಕೆಲಸ ಮಾಡುತ್ತಿದ್ದಾರೆ, ಇದು ನಗರವನ್ನು ವಾಯುಯಾನ ಮತ್ತು ರಕ್ಷಣಾ ತಂತ್ರಜ್ಞಾನದಲ್ಲಿ ಜಗತ್ತಿನಲ್ಲಿಯೇ ಸಾಕಷ್ಟು ಹೆಸರು ಮಾಡಿದೆ. ಅಲ್ಲದೇ ವಿದೇಶಿ ಹೂಡಿಕೆಗಳನ್ನು ಆಕರ್ಷಿಸುವಲ್ಲಿ ಬೆಂಗಳೂರು ಜಾಗತಿಕ ಏರೋಸ್ಪೇಸ್ ನಗರಗಳಲ್ಲಿ ಮೂರನೇ ಸ್ಥಾನವನ್ನು ಪಡೆದಿದೆ. ಕರ್ನಾಟಕ ಸರ್ಕಾರವು ಕರ್ನಾಟಕದಾದ್ಯಂತ ಅಂದರೆ ಬೆಂಗಳೂರು, ಬೆಳಗಾವಿ, ಮೈಸೂರು, ತುಮಕೂರು ಮತ್ತು ಚಾಮರಾಜನಗರಗಳಲ್ಲಿ ಏರೋಸ್ಪೇಸ್ ಮತ್ತು ರಕ್ಷಣಾ ಕೇಂದ್ರಗಳನ್ನು ಅಭಿವೃದ್ಧಿಪಡಿಸುತ್ತಿದೆ" ಎಂದು ಹೇಳಿದ್ದಾರೆ.
ವಾಣಿಜ್ಯ ಮತ್ತು ರಕ್ಷಣಾ ಕ್ಷೇತ್ರಗಳಲ್ಲಿ ಕ್ರಾಂತಿಯನ್ನೇ ಉಂಟು ಮಾಡುತ್ತಿರುವ ಡ್ರೋನ್ ತಂತ್ರಜ್ಞಾನ ಮತ್ತು ಮಾನವರಹಿತ ವೈಮಾನಿಕ ತಂತ್ರಜ್ಞಾನದ ರುವಾರಿಯಾಗಿ ಬೆಂಗಳೂರು ಬೆಳೆಯುತ್ತಿದೆ. ಬೆಂಗಳೂರು ಭಾರತದಲ್ಲಿಯೇ ಅತಿ ಹೆಚ್ಚು ಸಾಫ್ಟ್ವೇರ್ ಕಂಪನಿಗಳನ್ನು ಹೊಂದಿದೆ. ಅದಕ್ಕೆ ಇದನ್ನು ಭಾರತದ ಸಿಲಿಕಾನ್ ಸಿಟಿ ಎಂದು ಕರೆಯುತ್ತಾರೆ. ತಂತ್ರಜ್ಞಾನ ಮತ್ತು ಏರೋಸ್ಪೇಸ್ ವಲಯವನ್ನು ಮುನ್ನಡೆಸುವ ನಗರವಾಗಿ ಬೆಂಗಳೂರು ಬೆಳೆದಿದೆ ಎಂದು ಹೇಳಿದ್ದಾರೆ
ರಾಜಧಾನಿಯಲ್ಲಿ 21 ಎಂಜಿನಿಯರಿಂಗ್ ಕಾಲೇಜುಗಳಿವೆ. ವಿಶ್ವದ ಯಾವುದೇ ನಗರಗಳಿಗೆ ಹೋಲಿಸಿದರೆ ನಾವೇ ಮೊದಲ ಸ್ಥಾನದಲ್ಲಿ ನಿಲ್ಲುತ್ತೇವೆ. ಬೆಂಗಳೂರಿನ ವಿಶಿಷ್ಟ ಪರಿಸರವು ಭಾರತ ಮತ್ತು ಪ್ರಪಂಚದಾದ್ಯಂತದ ಅತ್ಯುತ್ತಮ ಪ್ರತಿಭೆಗಳನ್ನು ಆಕರ್ಷಿಸುತ್ತಿದೆ. ಬೆಂಗಳೂರು ನಿಮ್ಮ ಪ್ರತಿಭೆಯನ್ನು ಬಳಸಿಕೊಳ್ಳುವ, ಬೆಲೆಸುವ, ಕನಸುಗಳನ್ನು ನನಸು ಮಾಡುವ ಸ್ಥಳವಾಗಿದೆ್.ಕರ್ನಾಟಕವು ಭಾರತದ ಏರೋಸ್ಪೇಸ್ ವಲಯದಲ್ಲಿ ಅನೇಕ ಬಾರಿ ನಿರ್ಣಾಯಕ ಪಾತ್ರವನ್ನು ವಹಿಸಿದೆ. ಅಲ್ಲದೇ ರಕ್ಷಣಾ ಸೇವೆಗಳಿಗಾಗಿ ದೇಶದ ವಿಮಾನ ಮತ್ತು ಹೆಲಿಕಾಪ್ಟರ್ ಉತ್ಪಾದನೆಯ ಶೇ.67 ಮತ್ತು ಭಾರತದ ಏರೋಸ್ಪೇಸ್-ಸಂಬಂಧಿತ ರಫ್ತಿನ ಶೇ.65 ಕೊಡುಗೆ ನೀಡುತ್ತಿದೆ. ವಿಮಾನ ಸೇವೆ ಮತ್ತು ವಿಮಾನಗಳನ್ನು ದುರಸ್ತಿ ಮಾಡುವ ಕ್ಷೇತ್ರದಲ್ಲಿ ಭಾರತ ಮುಂದಿದೆ. ಆದರೆ ವಿಮಾನಗಳು ಮತ್ತು ಹೆಲಿಕಾಪ್ಟರ್ಗಳ ತಯಾರಿಕೆ ಇನ್ನೂ ಸ್ವಲ್ಪ ಹಿಂದೆ ಬಿದ್ದಿದೆ. ದೇಶವು ಬಳಸುವ ಹೆಚ್ಚಿನ ವಿಮಾನಗಳು ಮತ್ತು ಹೆಲಿಕಾಪ್ಟರ್ಗಳನ್ನು ಇನ್ನೂ ಇತರ ರಾಷ್ಟ್ರಗಳಿಂದ ಖರೀದಿಸಲಾಗುತ್ತಿದೆ" ಎಂದು ವಿಷಾದ ವ್ಯಕ್ತಪಡಿಸಿದ್ದಾರೆ.
"ವಾಣಿಜ್ಯ ಮತ್ತು ರಕ್ಷಣಾ ವಿಮಾನ ನಿಲ್ದಾಣಗಳು ಕಾರ್ಯನಿರ್ವಹಿಸುತ್ತಿರುವ ವಿಶ್ವದ ಏಕೈಕ ನಗರ ಬೆಂಗಳೂರು. ಈ ಕ್ಷೇತ್ರಕ್ಕೆ ಹೆಚ್ಚಿನ ಮಹಿಳೆಯರು ಕೊಡುಗೆ ನೀಡುತ್ತಿದ್ದಾರೆ. ಯು.ಎಸ್., ಫ್ರಾನ್ಸ್ ಮತ್ತು ರಷ್ಯಾದಂತಹ ದೇಶಗಳೊಂದಿಗೆ ಪಾಲುದಾರಿಕೆಗಳ ಮೂಲಕ ಭಾರತದ ಏರೋಸ್ಪೇಸ್ ಉದ್ಯಮವು ಬೆಳೆಯುತ್ತಿದೆ.ಜಾಗತಿಕ ಮಾರುಕಟ್ಟೆಯಲ್ಲಿ ನಮ್ಮ ಸ್ಥಾನವನ್ನು ಈ ಏರ್ ಶೋ ಬಲಪಡಿಸುತ್ತಿದೆ. ಈ ಪ್ರದರ್ಶನವು ದೇಶಗಳು ಒಗ್ಗೂಡಲು, ಜ್ಞಾನವನ್ನು ಹಂಚಿಕೊಳ್ಳಲು ಮತ್ತು ಎಲ್ಲರಿಗೂ ಪ್ರಯೋಜನವಾಗುವ ವಾತಾವರಣ ನಿರ್ಮಿಸಲು ಉತ್ತಮ ಅವಕಾಶ ನೀಡುತ್ತದೆ" ಎಂದು ತಿಳಿದ್ದಾರೆ


Click it and Unblock the Notifications