ಐಡಿಬಿಐ ಬ್ಯಾಂಕ್ ಜೂನಿಯರ್ ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗೆ ಇಂದು ಸೆಪ್ಟೆಂಬರ್ 15 ರಂದು ನೇಮಕಾತಿಗಾಗಿ ಅರ್ಜಿ ಪ್ರಕ್ರಿಯೆಯನ್ನು ಪ್ರಾರಂಭಿಸಿದೆ. ಅಪ್ಲಿಕೇಶನ್ ಪ್ರಕ್ರಿಯೆಯು ಸೆಪ್ಟೆಂಬರ್ 30 ರಂದು ಕೊನೆಗೊಳ್ಳುತ್ತದೆ. ಆಸಕ್ತ ಅಭ್ಯರ್ಥಿಗಳು idbibank.in ನಲ್ಲಿ ಅಧಿಕೃತ ವೆಬ್‌ಸೈಟ್ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು.
ಒಟ್ಟು 600 ಜೂನಿಯರ್ ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗಳು ಖಾಲಿ ಇದ್ದು, ಬ್ಯಾಂಕಿಂಗ್ ಕ್ಷೇತ್ರದಲ್ಲಿ ಉದ್ಯೋಗ ಹುಡುಕುತ್ತಿರುವವರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ. ಆನ್‌ಲೈನ್ ಪರೀಕ್ಷೆಯನ್ನು ತಾತ್ಕಾಲಿಕವಾಗಿ ಅಕ್ಟೋಬರ್ 20, 2023 ರಂದು ನಡೆಸಲು ನಿರ್ಧರಿಸಲಾಗಿದೆ. ನೀವು ಡಿಗ್ರಿ ಪಾಸ್ ಆಗಿದ್ದರೆ ಅರ್ಜಿ ಸಲ್ಲಿಸಬಹುದು, ಈ ಬಗ್ಗೆ ಇಲ್ಲಿದೆ ವಿವರ ಮುಂದೆ ಓದಿ...

ಬ್ಯಾಂಕ್‌ನಲ್ಲಿ ಹುದ್ದೆ ಖಾಲಿಯಿದೆ ಚೆಕ್ ಮಾಡಿ
ಐಡಿಬಿಐ ನೇಮಕಾತಿ 2023 ಹುದ್ದೆಯ ವಿವರಗಳು: ಜೂನಿಯರ್ ಅಸಿಸ್ಟೆಂಟ್ ಮ್ಯಾನೇಜರ್‌ಗಳಿಗಾಗಿ 600 ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ಈ ನೇಮಕಾತಿ ಪ್ರಕ್ರಿಯೆಯನ್ನು ನಡೆಸಲಾಗುತ್ತಿದೆ.
ಐಡಿಬಿಐ ನೇಮಕಾತಿ 2023 ವಯಸ್ಸಿನ ಮಿತಿ: ಅಭ್ಯರ್ಥಿಗಳ ಕನಿಷ್ಠ ವಯಸ್ಸು 20 ವರ್ಷಗಳು ಮತ್ತು ಅಭ್ಯರ್ಥಿಗಳ ಗರಿಷ್ಠ ವಯಸ್ಸು 25 ವರ್ಷಗಳು ಆಗಿದೆ.
ಐಡಿಬಿಐ ನೇಮಕಾತಿ 2023 ಅರ್ಜಿ ಶುಲ್ಕ: ಎಸ್‌ಸಿ/ ಎಸ್‌ಟಿ/ ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ 200 ರೂಪಾಯಿ ಆಗಿದೆ. ಇತರ ಅಭ್ಯರ್ಥಿಗಳಿಗೆ, ಅರ್ಜಿ ಶುಲ್ಕ 1000 ರೂಪಾಯಿ ಆಗಿದೆ.
ಐಡಿಬಿಐ ನೇಮಕಾತಿ 2023 ಆಯ್ಕೆ ಶುಲ್ಕ: ಆಯ್ಕೆ ಪ್ರಕ್ರಿಯೆಯು ಆನ್‌ಲೈನ್ ಪರೀಕ್ಷೆಯನ್ನು ಒಳಗೊಂಡಿರುತ್ತದೆ. ಆನ್‌ಲೈನ್ ಪರೀಕ್ಷೆಯಲ್ಲಿ ಅರ್ಹತೆ ಪಡೆದ ಅಭ್ಯರ್ಥಿಗಳ ವೈಯಕ್ತಿಕ ಸಂದರ್ಶನ ಮಾಡಲಾಗುತ್ತದೆ. ಅದಾದ ಬಳಿಕ ಆಯ್ಕೆ ಮಾಡಲಾಗುತ್ತದೆ.
ಐಡಿಬಿಐ ನೇಮಕಾತಿ 2023 ಶೈಕ್ಷಣಿಕ ಅರ್ಹತೆ: ಅಭ್ಯರ್ಥಿಗಳು ಭಾರತ ಸರ್ಕಾರದಿಂದ ಮಾನ್ಯತೆ ಪಡೆದ ವಿಶ್ವವಿದ್ಯಾನಿಲಯದಿಂದ ಯಾವುದೇ ವಿಭಾಗದಿಂದ ಪದವಿ ಪಡೆದಿರಬೇಕು. ಅಥವಾ ಭಾರತ ಸರ್ಕಾರದಿಂದ ಮಾನ್ಯತೆ ಪಡೆದ ಸಮಾನ ವಿದ್ಯಾರ್ಹತೆಯನ್ನು ಹೊಂದಿರಬೇಕು.
ಐಡಿಬಿಐ ನೇಮಕಾತಿ 2023: ಹೇಗೆ ಅರ್ಜಿ ಸಲ್ಲಿಸಬೇಕು ಎಂದು ತಿಳಿಯಿರಿ
ಹಂತ 1: ಅಧಿಕೃತ ವೆಬ್‌ಸೈಟ್ idbibank.in ಗೆ ಭೇಟಿ ನೀಡಿ
ಹಂತ 2: ಹೋಮ್‌ಪೇಜ್‌ನಲ್ಲಿ career ಟ್ಯಾಬ್ ಮೇಲೆ ಕ್ಲಿಕ್ ಮಾಡಿ
ಹಂತ 3: Recruitment of Junior Assistant Manager through Admissions to IDBI Bank PGDBF - 2023 - 24 ಮೇಲೆ ಕ್ಲಿಕ್ ಮಾಡಿ
ಹಂತ 4: ನೋಂದಾವಣೆ ಮಾಡಿ, ಅಪ್ಲಿಕೇಶನ್ ಪ್ರಕ್ರಿಯೆ ನಡೆಸಿರಿ
ಹಂತ 5: ಫಾರ್ಮ್ ಅನ್ನು ಭರ್ತಿ ಮಾಡಿ, ಶುಲ್ಕವನ್ನು ಪಾವತಿಸಿ, ಫಾರ್ಮ್ ಅನ್ನು ಸಲ್ಲಿಸಿ
ಹಂತ 6: ಭವಿಷ್ಯದಲ್ಲಿ ಅಗತ್ಯಕ್ಕೆ ಬೇಕಾಗುವ ಕಾರಣ ಫಾರ್ಮ್ ಡೌನ್‌ಲೋಡ್ ಮಾಡಿ, ಪ್ರಿಂಟ್‌ಔಟ್ ತೆಗೆದುಕೊಳ್ಳಿ.


Click it and Unblock the Notifications