ಬೆಂಗಳೂರು, ಅಕ್ಟೋಬರ್ 01: ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ನಗರದ ಬಹು ನಿರೀಕ್ಷಿತ ಪೆರಿಫೆರಲ್ ವರ್ತುಲ ರಸ್ತೆ (ಪಿಆರ್‌ಆರ್) ನಿರ್ಮಾಣದ ಕಾರ್ಯಕ್ಕೆ ಚಾಲನೆ ನೀಡಿದೆ. ಪಿಆರ್‌ಆರ್ ಅನ್ನು ಈಗ ಬೆಂಗಳೂರು ಬ್ಯುಸಿನೆಸ್ ಕಾರಿಡಾರ್ (ಬಿಬಿಸಿ) ಎಂದು ಮರು ನಾಮಕಾರಣ ಮಾಡಲಾಗಿದೆ. ಮೊದಲ ಹಂತದಲ್ಲಿ ಯೋಜನೆ ವ್ಯಾಪ್ತಿಗೆ ಬರುವ ಭೂ ಮಾಲೀಕರಿಗೆ ನೋಟಿಸ್ ನೀಡುವ ಕಾರ್ಯವನ್ನು ಆರಂಭಿಸಲಿದೆ.
ಬೆಂಗಳೂರು ಬ್ಯುಸಿನೆಸ್ ಕಾರಿಡಾರ್ (ಬಿಬಿಸಿ) ಯೋಜನೆಗಾಗಿ ಭೂ ಸ್ವಾಧೀನ ಮಾಡಿಕೊಳ್ಳಲು ಅಧಿಕಾರಿಗಳನ್ನು ಬಿಡಿಎ ನೇಮಕ ಮಾಡಿದೆ. ಯೋಜನೆ ವ್ಯಾಪ್ತಿಗೆ ಬರುವ ಭೂ ಮಾಲೀಕರಿಗೆ ಭೂ ಸ್ವಾಧೀನ ಕಾಯ್ದೆ, 1984ರ ಅಡಿ ನೋಟಿಸ್ ನೀಡಲಾಗುತ್ತದೆ. ಈ ಯೋಜನೆಗೆ ಸೇರುವ ರೈತರು ತಮ್ಮ ಭೂಮಿಗೆ ಈಗಿರುವ 2013ರ ನಿಯಮಗಳ ಅನ್ವಯ ಪರಿಹಾರಕ್ಕಾಗಿ ಬೇಡಿಕೆ ಸಲ್ಲಿಸಬಹುದು.

ಬಿಬಿಸಿ ಯೋಜನೆಗೆ 1,810 ಎಕರೆ ಭೂಮಿಯ ಮಾಲೀಕರಿಗೆ ನೋಟಿಸ್ ನೀಡಲಾಗುತ್ತದೆ. 2007ರಲ್ಲಿಯೇ ಪೆರಿಫೆರಲ್ ವರ್ತುಲ ರಸ್ತೆ (ಪಿಆರ್‌ಆರ್) ಯೋಜನೆಗೆ ಎಷ್ಟು ಭೂಮಿ ಬೇಕು ಎಂದು ಅಂದಾಜಿಸಲಾಗಿತ್ತು?. ಈಗ ಯೋಜನೆಗೆ ಚಾಲನೆ ಸಿಕ್ಕಿದ್ದು, ಭೂ ಮಾಲೀಕರಿಗೆ ನೋಟಿಸ್ ಜಾರಿಗೊಳಿಸಲಾಗುತ್ತದೆ.
ನೋಟಿಸ್ ಏಕೆ?: ಭೂ ಮಾಲೀಕರಿಗೆ ನೋಟಿಸ್ ನೀಡುವ ಬಿಡಿಎ ಅವರಿಗೆ ತಮ್ಮ ಭೂ ಮಾಲೀಕತ್ವದ ಕುರಿತು ದಾಖಲೆಗಳನ್ನು ಸಲ್ಲಿಸುವಂತೆ ಸೂಚನೆ ನೀಡಲಿದೆ. ಅಲ್ಲದೇ ಯೋಜನೆಗೆ ಭೂಮಿ ವಶಕ್ಕೆ ಪಡೆದುಕೊಳ್ಳುವುದಕ್ಕೆ ಯಾವುದಾದರೂ ಆಕ್ಷೇಪಣೆಗಳಿದ್ದಲ್ಲಿ ಸಲ್ಲಿಕೆ ಮಾಡಿ ಎಂದು ನೋಟಿಸ್‌ನಲ್ಲಿ ತಿಳಿಸಲಾಗುತ್ತದೆ.
ಈ ಯೋಜನೆ ಬಗ್ಗೆ ಇಷ್ಟು ವರ್ಷಗಳಿಂದ ಚರ್ಚೆಗಳು ನಡೆಯುತ್ತಿವೆ. ನಮ್ಮ ಭೂಮಿಯನ್ನು ಈ ಹಿಂದೆಯೇ ಗುರುತಿಸಲಾಗಿದೆ. ಆದರೆ ಮೊದಲ ಬಾರಿಗೆ ಈ ಮಾದರಿ ನೋಟಿಸ್ ನೀಡಲಾಗುತ್ತಿದೆ ಎಂದು ರೈತರು ಹೇಳಿದ್ದಾರೆ. ಸೆಪ್ಟೆಂಬರ್ 5ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಯೋಜನೆಯನ್ನು ಜಾರಿಗೊಳಿಸಲು ಒಪ್ಪಿಗೆ ನೀಡಲಾಗಿತ್ತು.
ಕರ್ನಾಟಕ ಸರ್ಕಾರ ಈ ಹಿಂದೆ ಬಿಬಿಸಿ ಯೋಜನೆಯನ್ನು ಪಿಪಿಪಿ ಮಾದರಿಯಲ್ಲಿ ನಿರ್ಮಾಣ ಮಾಡಲು ಬಯಸಿತ್ತು. ಆದರೆ ಸಚಿವ ಸಂಪುಟ ಸಭೆಯಲ್ಲಿ ರಾಜ್ಯ ಸರ್ಕಾರ ಏಕಾಂಗಿಯಾಗಿ ಯೋಜನೆ ನಿರ್ಮಾಣ ಮಾಡಲಿದೆ ಎಂದು ತೀರ್ಮಾನ ಕೈಗೊಳ್ಳಲಾಗಿತ್ತು. ಈಗ ಯೋಜನೆಗೆ ಸುಮಾರು 30,000 ಕೋಟಿ ಅಗತ್ಯವಿದೆ ಎಂದು ಅಂದಾಜಿಸಲಾಗಿದೆ. ಸರ್ಕಾರ ಯೋಜನೆಗಾಗಿ ಶೇ 70ರಷ್ಟು ಅನುದಾನವನ್ನು ಸಾಲದ ರೂಪದಲ್ಲಿ ಪಡೆಯಲಿದೆ.
ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಬಿಬಿಸಿ ಯೋಜನೆ ಜಾರಿ ಕುರಿತು ಅಧಿಕಾರಿಗಳಿಗೆ ಹಲವು ಸೂಚನೆಗಳನ್ನು ನೀಡಿದ್ದಾರೆ, ಯೋಜನೆಗೆ ಇದ್ದ ಅಡೆ-ತಡೆಯನ್ನು ಸರ್ಕಾರದ ಮಟ್ಟದಲ್ಲಿ ಪರಿಹರಿಸಿದ್ದಾರೆ. ಅಧಿಕಾರಿಗಳು ಈಗ ಭೂ ಸ್ವಾಧೀನದ ಪ್ರಕ್ರಿಯೆ ಪ್ರಾರಂಭಿಸಿದ್ದು, ಶೀಘ್ರವೇ ಸಿವಿಲ್ ಕಾಮಗಾರಿಗಳಿಗಾಗಿ ಟೆಂಡರ್ ಕರೆಯಲಾಗುತ್ತದೆ.
ಬಿಡಿಎ ಭೂ ಸ್ವಾಧೀನಕ್ಕಾಗಿಯೇ 9 ಅಧಿಕಾರಿಗಳನ್ನು ನೇಮಕ ಮಾಡಿದೆ. ಇವರನ್ನು ಈ ಯೋಜನೆಯ ವಿಶೇಷ ಭೂ ಸ್ವಾಧೀನಾಧಿಕಾರಿಗಳಾಗಿ ನೇಮಿಸಲಾಗಿದೆ. ಪ್ರತಿ ಅಧಿಕಾರಿಯನ್ನು ಯೋಜನೆ ಸಾಗುವ ಮಾರ್ಗದ ಗ್ರಾಮಗಳ ಭೂ ಸ್ವಾಧೀನ ಅಧಿಕಾರಿಗಳಾಗಿ ನೇಮಕ ಮಾಡಲಾಗಿದೆ.
2022ರಲ್ಲಿ ಬಿಬಿಸಿ ಯೋಜನೆಗೆ ಅಗತ್ಯವಿದೆ ಎಂದು ಅಂದಾಜಿಸಲಾಗಿದ್ದು ಭೂಮಿಗಿಂತ ಸುಮಾರು 600 ಎಕರೆ ಹೆಚ್ಚುವರಿ ಭೂಮಿಯನ್ನು ಬಿಡಿಎ ಸ್ವಾಧೀನ ಪಡಿಸಿಕೊಳ್ಳಲಿದೆ. ರೈತರು ನೋಟಿಸ್ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದು, ಹಿಂದಿನ ನಿಯಮಗಳ ಪ್ರಕಾರ ಪರಿಹಾರ ನೀಡುವುದಾಗಿ ನೋಟಿಸ್ ಹೇಳಿದೆ. ನಾವು ಈಗಿರುವ ಭೂ ಪರಿಹಾರ ನಿಯಮಗಳ ಪ್ರಕಾರ ರೈತರಿಗೆ ಪರಿಹಾರ ಕೊಡಬೇಕು ಎಂದು ಕರ್ನಾಟಕ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದೇವೆ ಎಂದು ಹೇಳಿದ್ದಾರೆ.
ಬೆಂಗಳೂರು ಬ್ಯುಸಿನೆಸ್ ಕಾರಿಡಾರ್ ಯೋಜನೆಗಾಗಿ ಭೂ ಸ್ವಾಧೀನ ಮಾಡಿಕೊಳ್ಳುವುದು ಅಷ್ಟು ಸುಲಭದ ಮಾತಾಗಿಲ್ಲ. ರೈತರು ನೋಟಿಸ್ ಇಟ್ಟುಕೊಂಡು ಕಾನೂನು ಹೋರಾಟವನ್ನು ನಡೆಸುವ ಸೂಚನೆ ಸಿಕ್ಕಿದೆ. ಕರ್ನಾಟಕ ರಾಜ್ಯ ರೈತ ಸಂಘದ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಈಗಿರುವ ನಿಯಮಗಳ ಅಡಿ ರೈತರಿಗೆ ಪರಿಹಾರವನ್ನು ನೀಡದಿದ್ದರೆ ಯೋಜನೆಗಾಗಿ ರೈತರು ಭೂಮಿ ನೀಡುವುದಿಲ್ಲ ಎಂದು ತಿಳಿಸಿದ್ದಾರೆ.
More From GoodReturns

ಎಮಿಯಾಕ್ ಟೆಕ್ನಾಲಜೀಸ್ ಐಪಿಒ: ಹೂಡಿಕೆದಾರರ ಮುಗಿಬಿದ್ದ ಭರ್ಜರಿ ಬೇಡಿಕೆ!

ಆರ್ಬಿಐ ರೆಪೋ ದರ ಸ್ಥಿರತೆ: ನಿಮ್ಮ ಇಎಂಐ ಹೊರೆ ಇಳಿಯುತ್ತಾ?

ಆರ್ಬಿಐ ಪಾಲಿಸಿಗೂ ಮುನ್ನ ನಿಮ್ಮ ಬಂಡವಾಳಕ್ಕೆ ಈ ರಕ್ಷಣೆ ಬೇಕೇ?

ಆರ್ಬಿಐ ಪಾಲಿಸಿ ಅಬ್ಬರ: ನಿಮ್ಮ ಹಣ ಉಳಿಸಲು ಈ ತಂತ್ರ ಬಳಸಿ

ಆರ್ಬಿಐ ಬಡ್ಡಿ ದರ: ನಿಮ್ಮ ಇಎಂಐ ಹೊರೆ ಕಡಿಮೆಯಾಗುತ್ತಾ?

ಸೇಫ್ಟಿ ಕಂಟ್ರೋಲ್ಸ್ ಐಪಿಒ: ಹೂಡಿಕೆದಾರರೇ ಇಂದೇ ಕೊನೆಯ ಅವಕಾಶ!

ಗೃಹ ಸಾಲದ ಇಎಂಐ ಇಳಿಕೆ: ಆರ್ಬಿಐ ನಿರ್ಧಾರದ ಅಸಲಿ ಸತ್ಯ

ಆರ್ಬಿಐ ಪಾಲಿಸಿ: ಇಂದಿನ ನಿರ್ಧಾರ ನಿಮ್ಮ ಹೂಡಿಕೆಯನ್ನು ಬದಲಿಸುತ್ತಾ?

ಆರ್ಬಿಐ ರೆಪೋ ದರ ಸ್ಥಿರ: ನಿಮ್ಮ ಇಎಂಐ ಹೊರೆ ಇಳಿಯುತ್ತಾ?

ಚಿನ್ನದ ಬೆಲೆ ಏರಿಕೆ: ಹೂಡಿಕೆದಾರರೇ ಎಚ್ಚರ, ಈ ತಪ್ಪು ಮಾಡಬೇಡಿ!

ಹೋಮ್ ಲೋನ್ ಇಎಂಐ ಉಳಿಸಲು ಈ ಟ್ರಿಕ್ ಬಳಸಿ ನೋಡಿ



Click it and Unblock the Notifications