ಎರಡನೇ ವಿಮಾನ ನಿಲ್ದಾಣದ ಸುದ್ದಿ ಭಾರೀ ಸದ್ದು ಮಾಡುತ್ತಿದೆ. ಈ ಮಧ್ಯೆಯೇ ತುಮಕೂರಿನಲ್ಲಿ ಹೊಸ ಏರ್ಪೋರ್ಟ್ ನಿರ್ಮಿಸಬೇಕೆಂಬ ಕೂಗು ಕೇಳಿಬರುತ್ತಿದೆ. ರಾಜ್ಯ ಸರ್ಕಾರವೂ ಸಹ ಅಳೆದು ತೂಗಿ ವಿಮಾನ ನಿಲ್ದಾಣಕ್ಕೆ ಸ್ಥಳ ನಿಗದಿ ಮಾಡಲು ಮುಂದಾಗಿದೆ. ಈ ಬಗ್ಗೆ ಗೃಹ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಜಿ.ಪರಮೇಶ್ವರ್ ಸರ್ಕಾರಕ್ಕೆ ಬೇಡಿಕೆ ಇಟ್ಟಿದ್ದಾರೆ. ಈ ಬಗ್ಗೆ ಇಲ್ಲಿದೆ ಹೆಚ್ಚಿನ ಮಾಹಿತಿ
ಹೌದು, ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣವನ್ನು ತುಮಕೂರು ಆಸುಪಾಸಿನಲ್ಲಿಯೇ ನಿರ್ಮಿಸುವಂತೆ ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಲಾಗಿದೆ ಎಂದು ಮಾಹಿತಿ ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಇವರು, ತುಮಕೂರು ಬಳಿ ಎರಡು ಕಡೆ ವಿಮಾನ ನಿಲ್ದಾಣಕ್ಕೆ ಅಗತ್ಯವಾದ ಭೂಮಿಯನ್ನು ಗುರುತಿಸಲಾಗಿದೆ ಎಂದು ಹೇಳಿದ್ದರು. ವಿಮಾನ ನಿಲ್ದಾಣದ ನಿರ್ಮಾಣ ಬಗ್ಗೆ ಕೇಂದ್ರ ಸರ್ಕಾರ ಅನುಮೋದನೆ ಸಿಗುವುದು ಅಷ್ಟೇ ಬಾಕಿ ಇದೆ.
ಮೂರು ಸಾವಿರ ಎಕರೆ ಭೂಮಿ ನಿಗದಿ
ಎರಡನೇ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಜಾಗ ನಿಗದಿಯನ್ನು ಕೈಗಾರಿಕಾ ಪ್ರದೇಶ ವಸಂತನರಸಾಪುರದ ರಾಷ್ಟ್ರೀಯ ಹೆದ್ದಾರಿ 48ಕ್ಕೆ ಇರುವ ಮೂರು ಸಾವಿರ ಎಕರೆಯ ಭೂಮಿಯನ್ನು ಗುರುತು ಮಾಡಲಾಗಿದೆ. ಇನ್ನೂ ತುಮಕೂರಿನ ಬಳಿ ಇರುವ ಸೀಬಿ ಹತ್ತಿರ ಐದು ಸಾವಿರ ಎಕರೆ ಭೂಮಿಯನ್ನು ನಕ್ಷೆ ಮೂಲಕ ಗುರುತಿಸಲಾಗಿದೆ. ಎರಡು ಪ್ರಸ್ತಾವನೆಗಳನ್ನು ಸರ್ಕಾರಕ್ಕೆ ಸಲ್ಲಿಸಲಾಗಿದೆ. ತುಮಕೂರು ಜಿಲ್ಲೆಯಲ್ಲಿಯೇ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಮನವಿ ಮಾಡಲಾಗಿದೆ. ವಿಮಾನ ನಿಲ್ದಾಣಕ್ಕೆ ಗ್ರೀನ್ ಸಿಗ್ನೇಲ್ ಸಿಗುವುದೊಂದು ಮಾತ್ರ ಬಾಕಿ ಇರುವುದು.
ಹೊಸ ಏರ್ಪೋರ್ಟ್ ನಿರ್ಮಾಣ ಬಗ್ಗೆ ಸಚಿವ ವಿ.ಸೋಮಣ್ಣ ಹೇಳಿದ್ದೇನು?
ತುಮಕೂರು ಅಥವಾ ನೆಲಮಂಗಲ ಸಮೀಪ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಆಗಬೇಕು ಎಂದು ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಅವರು ಪಟ್ಟು ಹಿಡಿದಿದ್ದಾರೆ.
ತುಮಕೂರು ಅಥವಾ ನೆಲಮಂಗಲ ಸಮೀಪ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಆಗಬೇಕು ನಾನು ಈಗಲೇ ಈ ಬಗ್ಗೆ ಗೃಹ ಸಚಿವ ಡಾ.ಜಿ.ಪರಮೇಶ್ವರ ಜೊತೆ ನಾನು ಈಗಾಗಲೇ ಚರ್ಚಿ ಮಾಡಿದ್ದೇನೆ. ವಿಮಾನ ನಿಲ್ದಾಣವನ್ನು ಬೇರೆ ಕಡೆ ನಿರ್ಮಾಣ ಮಾಡೋಕೆ ಪ್ರಯತ್ನ ಮಾಡಿದ್ದರೆ ನಮಗೇ ಎಚ್‌ಎಎಲ್ ನಿಲ್ದಾಣವೇ ಸಾಕು ಅಂತ ಹೇಳುತ್ತೀವೆ ಎಂದು ಹೇಳಿಕೆ ನೀಡಿದ್ದಾರೆ.
ನಿರೀಕ್ಷಿತ ತಾಣಗಳು
ಪ್ರಾಥಮಿಕ ವರದಿಗಳು ರಾಷ್ಟ್ರೀಯ ಹೆದ್ದಾರಿ 75 ರ ಉದ್ದಕ್ಕೂ ಇರುವ ಪಟ್ಟಣವಾದ ಕುಣಿಗಲ್ ಅನ್ನು ಸಂಭಾವ್ಯ ತಾಣವೆಂದು ಸರ್ಕಾರವು ಸಕ್ರಿಯವಾಗಿ ಮೌಲ್ಯಮಾಪನ ಮಾಡುತ್ತಿದೆ ಎಂದು ಹೇಳಿದೆ.ದಾಬಸ್‌ಪೇಟೆ ಮತ್ತು ಕುಣಿಗಲ್ ನಡುವಿನ ಪ್ರದೇಶಕ್ಕೆ ಸ್ಥಳವನ್ನು ಗುರುತು ಮಾಡಲಾಗಿದೆ. ಕರ್ನಾಟಕ ಗೃಹ ಸಚಿವ ಜಿ ಪರಮೇಶ್ವರ ಅವರು ಕುಣಿಗಲ್ ಸೇರಿದಂತೆ ತುಮಕೂರು ಸಹ ಪರಿಶೀಲನೆಯಲ್ಲಿದೆ ಎಂದು ಖಚಿತಪಡಿಸಿದ್ದಾರೆ. ಈಗಾಗಲೇ ಬೆಂಗಳೂರು ಎರಡನೇ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಸಂಬಂಧಿಸಿದಂತೆ ಮುಖ್ಯವಾಗಿ ಐದು ಸ್ಥಳಗಳನ್ನು ಗುರುತಿಸಲಾಗಿದೆ. ಈ ಪೈಕಿ ಯಾವ ಜಾಗವೂ ಅಂತಿಮವಾಗಿಲ್ಲ.
ಕೇಂದ್ರ ಸರ್ಕಾರಕ್ಕೆ ಎರಡನೇ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಸ್ಥಳ ಆಯ್ಕೆಯ ಬಗ್ಗೆ ವರದಿಯನ್ನು ಸಲ್ಲಿಸಲಾಗಿದೆ. ಅದರೆ ಸ್ಥಳ ನಿಗದಿಯ ಅನುಮೋದನೆ ಸಿಗುವುದು ಮಾತ್ರ ಬಾಕಿ ಉಳಿದಿದ್ದು, ಶೀಘ್ರದಲ್ಲೇ ಸರ್ಕಾರ ವಿಮಾನ ನಿಲ್ದಾಣದ ಬಗ್ಗೆ ದೊಡ್ಡ ಅಪ್ಡೇಟ್ ಘೋಷಣೆ ಮಾಡಲಿದೆ.
ತುಮಕೂರು ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಗೃಹ ಸಚಿವ ಡಾ.ಜಿ.ಪರಮೇಶ್ವರ ಕೂಡ ತುಮಕೂರು ಬಳಿಯೆ ವಿಮಾನ ನಿಲ್ದಾಣ ಆಗಲಿ ಎನ್ನುವ ಬೇಡಿಕೆಯನ್ನು ಇಟ್ಟಿದ್ದಾರೆ. ಮಲೆನಾಡು, ಕರಾವಳಿ ಜಿಲ್ಲೆಗಳಿಗೆ ಸಂಪರ್ಕ ಕಲ್ಪಿಸುವ ಹಾಸನ ರಸ್ತೆಯ ಭಾಗದಲ್ಲಿ ವಿಮಾನ ನಿಲ್ದಾಣ ರೂಪಿಸುವ ಕುರಿತು ಚರ್ಚೆಗಳು ನಡೆದಿವೆ ಈ ಭಾಗದಲ್ಲಿ ವಿಮಾನ ನಿಲ್ದಾಣವಾದರೆ ತುಮಕೂರು, ಮಂಡ್ಯ, ಹಾಸನ ಸಹಿತ ಕೆಲವು ಜಿಲ್ಲೆಗಳ ಸಂಪರ್ಕಕ್ಕೆ ಸಹಕಾರಿಯಾಗಬಹುದು ಎನ್ನುವ ನಿರೀಕ್ಷೆ ಇಟ್ಟುಕೊಳ್ಳಲಾಗಿದೆ.


Click it and Unblock the Notifications