ಬೆಂಗಳೂರು, ಅಕ್ಟೋಬರ್ 15: ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಸಮೀಪ 2 ಮಿಲಿಯನ್ ಚದರ ಅಡಿ ಪ್ರದೇಶದಲ್ಲಿ ಬೃಹತ್ ಹೈಟೆಕ್ ಬ್ಯುಸಿನೆಸ್ ಪಾರ್ಕ್ ನಿರ್ಮಾಣವಾಗಲಿದೆ. ಈ ಯೋಜನೆಗೆ ಬಿಎಸಿಎಲ್ ಈಗಾಗಲೇ ಶಂಕುಸ್ಥಾಪನೆ ಮಾಡಿದೆ. ಕರ್ನಾಟಕ ಸರ್ಕಾರದ ಜಾಗತಿಕ ಸಾಮರ್ಥ್ಯ ಕೇಂದ್ರ (ಜಿಸಿಸಿ) ನೀತಿ 2024-2029ರ ಅಡಿಯಲ್ಲಿ ಇದು ನಿರ್ಮಾಣವಾಗುತ್ತಿದ್ದು, 3.5 ಲಕ್ಷ ಉದ್ಯೋಗ ಸೃಷ್ಟಿಯ ಗುರಿಯನ್ನು ಹೊಂದಿದೆ.
ಬೆಂಗಳೂರು ಇಂಟರ್‌ನ್ಯಾಶನಲ್ ಏರ್‌ಪೋರ್ಟ್ ಲಿಮಿಟೆಡ್‌ನ (ಬಿಐಎಎಲ್) ಅಂಗಸಂಸ್ಥೆಯಾದ ಬಿಎಸಿಎಲ್, ಈ 'ಬೆಂಗಳೂರು ಏರ್‌ಪೋರ್ಟ್ ಸಿಟಿ'ಯನ್ನು ನಿರ್ಮಾಣ ಮಾಡುತ್ತಿದೆ. ವಿಮಾನ ನಿಲ್ದಾಣದ ಸಮೀಪವೇ ನಿರ್ಮಾಣವಾಗುವ ಇದು ವಾಣಿಜ್ಯ, ಶಿಕ್ಷಣ, ಆರೋಗ್ಯ, ಸಂಶೋಧನಾ ಕ್ಷೇತ್ರದ ಹಬ್ ಆಗಲಿದೆ.

ಬೆಂಗಳೂರು ಏರ್‌ಪೋರ್ಟ್ ಸಿಟಿ ಯೋಜನೆಗೆ ಶಂಕುಸ್ಥಾಪನೆ ಮಾಡಿದ ಬಳಿಕ ಬಿಎಸಿಎಲ್, ಇದು ಜಾಗತಿಕ ಉದ್ಯಮಿಗಳನ್ನು ಆಕರ್ಷಿಸಲಿದೆ. ಒಂದೇ ಸೂರಿನಡಿ ಹಲವು ಸೌಲಭ್ಯಗಳು ಸಿಗಲಿದ್ದು, ಏರ್‌ಪೋರ್ಟ್ ಸಮೀಪದಲ್ಲೇ ಇರುವುದರಿಂದ ವಿದೇಶಗಳಿಂದ ಆಗಮಿಸುವ ಉದ್ಯಮಿಗಳಿಗೂ ಅನುಕೂಲವಾಗಲಿದೆ ಎಂದು ಹೇಳಿದೆ.
ಈ ಬ್ಯುಸಿನೆಸ್ ಪಾರ್ಕ್ ಒಟ್ಟು 17.7 ಎಕರೆ ಪ್ರದೇಶದಲ್ಲಿ ನಿರ್ಮಾಣವಾಗುತ್ತಿದೆ. ಇದನ್ನು ಒಟ್ಟು 4 ಬ್ಲಾಕ್‌ಗಳಾಗಿ ವಿಭಾಗ ಮಾಡಲಾಗುತ್ತದೆ. ಈ ಪಾರ್ಕ್ ಮುಖ್ಯ ವ್ಯಾಪಾರ ಒಪ್ಪಂದಗಳಿಗೆ ಅನುಕೂಲ ಮಾಡಿಕೊಡುವ ಮೂಲಕ ರಾಜ್ಯದ ಆರ್ಥಿಕತೆಗೆ ಶಕ್ತಿ ತುಂಬಲಿದೆ. ಇಲ್ಲಿನ ಕಟ್ಟಡಗಳನ್ನು ಭೂದೃಶ್ಯದ ಬಾಲ್ಕನಿ, ಹಸಿರು ಸ್ಥಳಗಳ ಸಂಯೋಜನೆ, ಉತ್ತಮ ಜೈವಿಕ ವಿನ್ಯಾಸದೊಂದಿಗೆ ನಿರ್ಮಾಣ ಮಾಡಲಾಗುತ್ತದೆ.
ಬಿಎಂಆರ್‌ಸಿಎಲ್ ಈಗಾಗಲೇ ಬೆಂಗಳೂರು ವಿಮಾನ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸಲು ನಮ್ಮ ಮೆಟ್ರೋ ಯೋಜನೆ ರೂಪಿಸಿದ್ದು, ಅದರ ಕಾಮಗಾರಿ ನಡೆಯುತ್ತಿದೆ. ಮೆಟ್ರೋ ನಿಲ್ದಾಣದಿಂದ ಈ ಬ್ಯುಸಿನೆಸ್ ಪಾರ್ಕ್ ಕಾಲ್ನಡಿಗೆ ದೂರದಲ್ಲಿದ್ದು, ನಗರದಿಂದ ಇಲ್ಲಿಗೆ ಆಗಮಿಸುವವರಿಗೂ ಅನುಕೂಲವಾಗಲಿದೆ.
ಹೈಟೆಕ್ ತಂತ್ರಜ್ಞಾನದ ಮೂಲಕ ಇಲ್ಲಿನ ಕಟ್ಟಡಗಳನ್ನು ನಿರ್ಮಾಣ ಮಾಡಲಾಗುತ್ತದೆ. ಇಲ್ಲಿಗೆ ಆಗಮಿಸುವವರ ವಾಸ್ತವ್ಯಕ್ಕಾಗಿ ಸುಮಾರು 5,200 ಹೋಟೆಲ್ ರೂಂಗಳನ್ನು ಇಲ್ಲಿ ನಿರ್ಮಾಣ ಮಾಡಲಾಗುತ್ತದೆ. ಇಲ್ಲಿ ವಸ್ತು ಪ್ರದರ್ಶನಗಳನ್ನು ಆಯೋಜನೆ ಮಾಡಲು ಅನುಕೂಲವಾಗುವಂತೆ ಕನ್ಸರ್ಟ್ ಅರೇನಾ ಮತ್ತು ಸಮಾವೇಶ ಮತ್ತು ವಸ್ತು ಪ್ರದರ್ಶನ ಕೇಂದ್ರವನ್ನು ನಿರ್ಮಾಣ ಮಾಡಲಾಗುತ್ತದೆ.
ಬಿಎಸಿಎಲ್ ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ, ವಾಹನ ಮತ್ತು ಏರೋಸ್ಪೇಸ್ ಕ್ಷೇತ್ರಗಳಲ್ಲಿ ಬೆಂಗಳೂರು ಈಗಾಗಲೇ ಬೆಳವಣಿಗೆಯನ್ನು ಕಂಡಿದೆ. ಈ ಬ್ಯುಸಿನೆಸ್ ಪಾರ್ಕ್ ವ್ಯಾಪಾರ, ವಹಿವಾಟನ್ನು ಹೆಚ್ಚಿಸುತ್ತದೆ. ಇಲ್ಲಿನ ಉತೃಷ್ಟ ಸೌಲಭ್ಯಗಳು ಉದ್ಯಮಿಗಳನ್ನು ಸೆಳೆಯಲಿದ್ದು, ಬೆಂಗಳೂರು ನಗರದ ಹೊರಗೆ ವ್ಯಾಪಾರ ವಹಿವಾಟಿಗೆ ಇದರಿಂದಾಗಿ ಉತ್ತೇಜನ ಸಿಗಲಿದೆ ಎಂದು ಹೇಳಿದೆ.
ಬೆಂಗಳೂರು ಏರ್‌ಪೋರ್ಟ್ ಸಿಟಿ ಕ್ಯಾಂಪಸ್ ಸಂಪೂರ್ಣವಾಗಿ ನವೀಕರಿಸಬಹುದಾದ ಸಂಪನ್ಮೂಲಗಳಿಂದ ನಿರ್ವಹಣೆ ಮಾಡುವಂತೆ ರಚನೆಯಾಗಲಿದೆ. ಮಳೆನೀರು ಕೊಯ್ಲು ವ್ಯವಸ್ಥೆಯನ್ನು ಇಲ್ಲಿ ಪರಿಚಯಿಸಲಾಗುತ್ತದೆ. ವಿಮಾನ ನಿಲ್ದಾಣದ ನೀರಿನ ಅಗತ್ಯಗಳನ್ನು ಗಮನದಲ್ಲಿಟ್ಟುಕೊಂಡು ಪರಿಸರ ಸ್ನೇಹಿ ಕ್ರಮಗಳ ಆಧಾರದ ಮೇಲೆ ಕ್ಯಾಂಪಸ್ ನಿರ್ಮಾಣ ಮಾಡಲಾಗುತ್ತದೆ.
ಬೆಂಗಳೂರು ವಿಮಾನ ನಿಲ್ದಾಣ ದೇಶದ ಬ್ಯುಸಿಯೆಸ್ಟ್ ವಿಮಾನ ನಿಲ್ದಾಣಗಳಲ್ಲಿ 3ನೇ ಸ್ಥಾನದಲ್ಲಿದೆ. ವಿಮಾನ ನಿಲ್ದಾಣದ ಸಮೀಪವೇ ಏರ್‌ಪೋರ್ಟ್ ಸಿಟಿ ನಿರ್ಮಾಣವಾಗುವುದರಿಂದ ಉದ್ಯಮಿಗಳು ನಗರಕ್ಕೆ ಆಗಮಿಸುವ ಸಮಸ್ಯೆ ಇಲ್ಲ. ವಿಮಾನ ನಿಲ್ದಾಣದಿಂದ ಏರ್‌ಪೋರ್ಟ್ ಸಿಟಿಗೆ ಆಗಮಿಸಿ, ಅಲ್ಲಿಂದ ಕೆಲಸಗಳನ್ನು ಮುಗಿಸಿಕೊಂಡು ವಿಮಾನ ಏರಬಹುದು.
ಬೆಂಗಳೂರು ನಗರ ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರದಲ್ಲಿಯೂ ಅಭಿವೃದ್ಧಿ ಹೊಂದುತ್ತಿದೆ. ಏರ್‌ಪೋರ್ಟ್ ಸಿಟಿಯನ್ನು ಇದರ ಹಬ್ ಆಗಿ ಪರಿವರ್ತನೆ ಮಾಡುವ ಗುರಿಯೊಂದಿಗೆ ನಿರ್ಮಾಣ ಮಾಡಲಾಗುತ್ತಿದೆ. ಪ್ರಮುಖ ಅಂತರರಾಷ್ಟ್ರೀಯ ಸಂಸ್ಥೆಗಳನ್ನು ಆಕರ್ಷಿಸುವ ಮೂಲಕ ರಾಜ್ಯದ ಶೈಕ್ಷಣಿಕ ಮತ್ತು ಆರೋಗ್ಯ ಮೂಲಸೌಕರ್ಯವನ್ನು ಉನ್ನತೀಕರಿಸಲು ಈ ಏರ್‌ಪೋರ್ಟ್ ಸಿಟಿ ಅನುಕೂಲ ಮಾಡಿಕೊಡಲಿದೆ ಎಂದು ಅಂದಾಜಿಸಲಾಗಿದೆ.
More From GoodReturns

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

LPG shortage: ಮಧ್ಯಪ್ರಾಚ್ಯದ ಉದ್ವಿಗ್ನತೆ, ಬೆಂಗಳೂರು-ಮುಂಬೈನಲ್ಲಿ LPG ಕೊರತೆ ಆತಂಕ: ರೆಸ್ಟೋರೆಂಟ್ಗಳು ಮುಚ್ಚುವ ಭೀತಿ

Siddaramaiah: ಹೋಟೆಲ್ ಉದ್ಯಮಿಗಳ ಸಂಕಷ್ಟಕ್ಕೆ ಧ್ವನಿಯಾದ ಸಿಎಂ ಸಿದ್ದರಾಮಯ್ಯ; ಪತ್ರ ಬರೆದು ಮನವಿ

Hotel Bandh: ಬೆಂಗಳೂರಿಗೂ ತಟ್ಟಿದ ಯುದ್ಧದ ಬಿಸಿ; ಇಂದಿನಿಂದ ಹಲವು ಹೋಟೆಲ್ ಬಂದ್

Bengaluru: ಮಳೆಗಾಲಕ್ಕೂ ಮುನ್ನ ಫೀಲ್ಡ್ಗೆ ಇಳಿದ ಶಾಸಕ ಗೋಪಾಲಯ್ಯ...ಮಹಾಲಕ್ಷ್ಮಿ ಲೇಔಟ್ನಲ್ಲಿ ಕಾಮಗಾರಿಗಳ ಪರಿಶೀಲನೆ!

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

Bengaluru: ಬೆಂಗಳೂರಿಗೆ 5,000 ರೂ. ಕೋಟಿ ಪ್ರವಾಹ ಯೋಜನೆ, 41 ಕಿ.ಮೀ ಮೆಟ್ರೋ, 450 ಕಿ.ಮೀ ರಸ್ತೆ ಅಭಿವೃದ್ಧಿ!

Bengaluru: ಬೆಂಗಳೂರು ಮೂಲಸೌಕರ್ಯ ಮತ್ತು ಸ್ಮಾರ್ಟ್ ಸಿಟಿ ಯೋಜನೆಗಳಿಗೆ 7000 ಕೋಟಿ ರೂ. ಹೂಡಿಕೆ!

BMTC Bus: ಬೆಂಗಳೂರು-ರಾಮನಗರ ಮತ್ತು ಕನಕಪುರಕ್ಕೆ ಬಿಎಂಟಿಸಿ ಬಸ್… ಬಸ್ ನಿಲ್ದಾಣಗಳ ಬಗ್ಗೆ ತಿಳಿಯಿರಿ

Karnataka Budget 2026–27: ಬೆಂಗಳೂರು ಮೂಲಸೌಕರ್ಯ ಮತ್ತು ಕಲ್ಯಾಣ ಯೋಜನೆಗಳಿಗೆ ಒತ್ತು ಸಾಧ್ಯತೆ!



Click it and Unblock the Notifications