For Quick Alerts
ALLOW NOTIFICATIONS  
For Daily Alerts

ಗುರು ರಾಘವೇಂದ್ರ ಸಹಕಾರ ಬ್ಯಾಂಕ್ ಮಾಜಿ ಸಿಇಒ ಆತ್ಮಹತ್ಯೆ

|

ಬೆಂಗಳೂರಿನ ಎನ್. ಆರ್. ಕಾಲೋನಿಯಲ್ಲಿನ, ಬಹುಕೋಟಿ ಹಗರಣಕ್ಕೆ ಕಾರಣವಾಗಿದ್ದ ಗುರು ರಾಘವೇಂದ್ರ ಸಹಕಾರ ಬ್ಯಾಂಕ್ ಮಾಜಿ ಸಿಇಒ ವಾಸುದೇವ ಮಯ್ಯ (73) ಅವರು ಸೋಮವಾರ (ಜುಲೈ 6, 2020) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪೂರ್ಣಪ್ರಜ್ಞಾ ಲೇಔಟ್ ನಲ್ಲಿ ಇರುವ ಮನೆಯ ಮುಂದೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಅಂದ ಹಾಗೆ ಗುರು ರಾಘವೇಂದ್ರ ಸಹಕಾರ ಬ್ಯಾಂಕ್ ನಲ್ಲಿ 1800 ಕೋಟಿ ರುಪಾಯಿ ಅವ್ಯವಹಾರ ನಡೆದಿದೆ ಎಂದು ಆರೋಪ ಬಂದಿತ್ತು. ಈ ಹಗರಣದಲ್ಲಿ ವಾಸುದೇವ ಮಯ್ಯ ಪ್ರಮುಖ ಆರೋಪಿ ಕೂಡ ಆಗಿದ್ದರು. ಕಳೆದ ತಿಂಗಳು ಮಯ್ಯ ಅವರ ಮನೆ ಮೇಲೆ ಎಸಿಬಿ ದಾಳಿ ಕೂಡ ನಡೆದಿತ್ತು. ಈಚೆಗೆ ಪ್ರಕರಣವನ್ನು ಸಿಐಡಿಗೆ ವರ್ಗಾವಣೆ ಮಾಡಲಾಗಿತ್ತು.

ಗುರು ರಾಘವೇಂದ್ರ ಸಹಕಾರ ಬ್ಯಾಂಕ್ ಮಾಜಿ ಸಿಇಒ ಆತ್ಮಹತ್ಯೆ

ಈ ಮೊದಲು ಕರ್ನಾಟಕ ಬ್ಯಾಂಕ್ ನಲ್ಲಿ ಕೆಲಸ ಮಾಡುತ್ತಿದ್ದ ಮಯ್ಯ, 2012ರಿಂದ 2018ರ ತನಕ ಗುರು ರಾಘವೇಂದ್ರ ಬ್ಯಾಂಕ್ ವ್ಯವಹಾರ ನೋಡಿಕೊಳ್ಳುತ್ತಿದ್ದರು. ಆಡಳಿತ ಮಂಡಳಿ ಮಾರ್ಗದರ್ಶಕರಾಗಿಯೂ ಕೆಲ ಕಾಲ ಇದ್ದರು. ಆ ಅವಧಿಯಲ್ಲಿ ಬ್ಯಾಂಕ್ ನಲ್ಲಿ ಅವ್ಯವಹಾರ ನಡೆದಿರುವ ಬಗ್ಗೆ ದೂರು ನೀಡಲಾಗಿದೆ.

English summary

Bengaluru Based Guru Raghavendra Co Operative Bank Ex CEO Vasudeva Maiya Commits Suicide

Multi crore scam of Guru Raghavendra co- operative bank main accused, ex CEO of bank Vasudeva Mayya (73) commits suicide on July 6, 2020 in Bengaluru.
Company Search
COVID-19
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X