ಬೆಂಗಳೂರು ಸುತ್ತ ರೈಲು ಜಾಲ.. ಹೌದು, ಪ್ರಸ್ತಾವಿತ ಹೊರ ವರ್ತುಲ ರೈಲ್ವೆ ಯೋಜನೆಯ ಜಾಲಕ್ಕೆ 81,000 ಕೋಟಿ ರೂ. ಹೂಡಿಕೆ ಮತ್ತು 2,500 ಎಕರೆ ಭೂಮಿಯನ್ನು ಅಗತ್ಯವಿದೆ ಎಂದು ರೈಲ್ವೆ ರಾಜ್ಯ ಖಾತೆ ಸಚಿವ ವಿ. ಸೋಮಣ್ಣ ಅವರು ಹೇಳಿದ್ದಾರೆ.
ಬೆಂಗಳೂರು ಹೊರ ವರ್ತುಲ ರೈಲ್ವೆ ಯೋಜನೆಯ ಕುರಿತು ಪೂರ್ವಭಾವಿ ಪರಿಶೀಲನಾ ಸಭೆ ನಡೆಸಿ ಮಾತನಾಡಿದ ಅವರು ಸಚಿವ ಮುನಿಯಪ ಶೋಭಾ ಕರಂದ್ಲಾಜೆ, ಸಂಸದರಾದ ಡಾ.ಕೆ. ಸುಧಾಕರ್, ಪಿ.ಸಿ.ಮೋಹನ್, ಡಾ.ಸಿ.ಎನ್. ಮಂಜುನಾಥ್ ಜತೆಗೂಡಿ ಹೊರ ವರ್ತುಲ ರೈಲ್ವೆ ಯೋಜನೆಯ ಪರಿಶೀಲನಾ ಸಭೆಯಲ್ಲಿ ನಾವು ಮುಂದಿನ ದಿನಗಳಲ್ಲಿ ಕೈಗೊಳ್ಳಬೇಕಾದ ಅಭಿವೃದ್ಧಿ ಕಾರ್ಯಗಳ ಬಗ್ಗೆ ಚರ್ಚೆಯನ್ನು ಮಾಡಿದ್ದೇವೆ ಎಂದು ಹೇಳಿದ್ದರು.

ಕೇಂದ್ರ ಸರ್ಕಾರ ಸಂಪೂರ್ಣ ಹಣಕಾಸು ನೆರವು ನೀಡುತ್ತೆ
ಹೊರ ವರ್ತುಲ ರೈಲ್ವೆ ಯೋಜನೆಯಗೆ ರೈಲ್ವೆ ಸಚಿವಾಲಯದಿಂದ ಅಂತಿಮ ಸ್ಥಳ ಸಮೀಕ್ಷೆ (ಎಫ್‌ಎಲ್‌ಎಸ್)ಗೆ ಅನುಮೋದನೆಯನ್ನು ನೀಡಲಾಗಿದೆ. ಇದನ್ನು ಪ್ರಸ್ತುತ ಹಂತಗಳಲ್ಲಿ ನಡೆಸಲಾಗುತ್ತಿದೆ. ಕೇಂದ್ರ ಸರ್ಕಾರವು ಇಡೀ ಯೋಜನೆಗೆ ಹಣಕಾಸಿನ ನೆರವುನ್ನು ನೀಡುತ್ತದೆ ಎಂದು ಸಹ ಮಾಹಿತಿಯನ್ನು ತಿಳಿಸಿದ್ಧಾರೆ.
ಈ ಯೋಜನೆ ಮುಂದಿನ 50 ವರ್ಷಗಳಲ್ಲಿ ಬೆಂಗಳೂರಿಗರಿಗೆ ಹೆಚ್ಚಿನ ಪ್ರಯೋಜನವನ್ನುನೀಡುತ್ತದೆ ಜೊತೆಗೆ ಜನದಟ್ಟಣೆ ಕೂಡ ಕಡಿಮೆಯಾಗುತ್ತದೆ.
ಹೊರ ವರ್ತುಲ ರೈಲ್ವೆ ಯೋಜನೆ: ಎಲ್ಲೆಲ್ಲಿಗೆ ಸಂಪರ್ಕ?
ಬೆಂಗಳೂರು ಹೊರ ವರ್ತುಲ ರೈಲ್ವೆ ಯೋಜನೆಯು 287 ಕಿ.ಮೀ ಉದ್ದವರೆಗೂ ಸಂಪರ್ಕ ಕಲ್ಪಿಸುತ್ತದೆ. ಈ ಡಬಲ್-ಲೈನ್ ವೃತ್ತಾಕಾರದ ಜಾಲವು ನಿಡವಂಡ, ದೊಡ್ಡಬಳ್ಳಾಪುರ, ದೇವನಹಳ್ಳಿ, ಮಾಲೂರು, ಹೀಲಲಿಗೆ, ಸೋಲೂರು ಮತ್ತು ಇತರೆ ನಗರಗಳನ್ನು ಸಂಪರ್ಕಿಸುತ್ತದೆ.
ನಗರದ ಪ್ರಮುಖ ಪ್ರದೇಶಗಳಲ್ಲಿ ರೈಲು ಸಂಚಾರದ ದಟ್ಟಣೆಯನ್ನು ಕಡಿಮೆ ಮಾಡುವುದು ಮತ್ತು ಹೆಚ್ಚಿನ ಉಪನಗರ ರೈಲು ಸೇವೆಗಳನ್ನು ಸಕ್ರಿಯಗೊಳಿಸುವ ಮೂಲಕ ಹೊರವಲಯ ಮತ್ತು ಹತ್ತಿರದ ಜಿಲ್ಲೆಗಳ ನಿವಾಸಿಗಳಿಗೆ ಸೇವೆ ಸಲ್ಲಿಸುವ ಗುರಿಯನ್ನ ಈ ಯೋಜನೆ ಹೊಂದಿದೆ.
ಹೊರ ವರ್ತುಲ ರೈಲ್ವೆ ಯೋಜನೆಗೆ ವಿವರವಾದ ಯೋಜನಾ ವರದಿ (ಡಿಪಿಆರ್) ಸಿದ್ಧವಾದ ನಂತರ ನಿಜವಾದ ಭೂಮಿಯ ಅವಶ್ಯಕತೆ ಮತ್ತು ವೆಚ್ಚವನ್ನು ಅಂತಿಮಗೊಳಿಸಲಾಗುತ್ತದೆ. ಎಫ್‌ಎಲ್‌ಎಸ್ ಪೂರ್ಣಗೊಳಿಸಲು ಹಲವಾರು ತಿಂಗಳುಗಳು ಬೇಕಾಗುತ್ತದೆ ಎಂದು ನಿರೀಕ್ಷೆ ಕೂಡ ಇದೆ ಎಂದು ಮಾಹಿತಿಯನ್ನು ತಿಳಿಸಿದ್ದಾರೆ.
ಬೆಂಗಳೂರು ಮತ್ತು ಮುಂಬೈ ನಡುವೆ ಸೂಪರ್‌ಫಾಸ್ಟ್ ರೈಲು ಬೇಕು: ಪಿ.ಸಿ.ಮೋಹನ್
ಬೆಂಗಳೂರು ಮತ್ತು ಮುಂಬೈ ನಡುವೆ ಸೂಪರ್‌ಫಾಸ್ಟ್ ರೈಲಿಗೆ ಪಿ.ಸಿ. ಮೋಹನ್ ಬೇಡಿಕೆಯನ್ನು ಇಟ್ಟಿದ್ದಾರೆ.ಈಗಿರುವ ಉದ್ಯಾನ್ ಎಕ್ಸ್‌ಪ್ರೆಸ್ 20 ಗಂಟೆಗಳಿಗಿಂತ ಹೆಚ್ಚು ಸಮಯ ತೆಗೆದುಕೊಳ್ಳುತ್ತದೆ. ಈ ಬಗ್ಗೆ ಸಾರ್ವಜನಿಕರು ಪದೇ ಪದೇ ವಿನಂತಿಸಿದರೂ, ರೈಲ್ವೆ ಮಂಡಳಿಯು ವೇಗದ ಸೇವೆಗೆ ಅನುಮೋದನೆ ನೀಡಿಲ್ಲ ಎಂದು ಅವರು ಹೇಳಿದರು.
ಕೆಎಸ್ಆರ್ ಬೆಂಗಳೂರು ನಗರ ರೈಲು ನಿಲ್ದಾಣದ ಪುನರಾಭಿವೃದ್ಧಿ ಕುರಿತು ಮಾತನಾಡಿದ ಸಂಸದರು, ಪ್ರಸ್ತಾವನೆಯು ರೈಲ್ವೆ ಮಂಡಳಿಯಲ್ಲಿ ಬಾಕಿ ಇದೆ ಎಂದು ಹೇಳಿದರು. ಬೆಂಗಳೂರು-ತುಮಕೂರು, ಬೆಂಗಳೂರು-ರಾಮನಗರ, ಬೆಂಗಳೂರು-ಮಂಡ್ಯ-ಮೈಸೂರು ಮತ್ತು ಬೆಂಗಳೂರು-ಕೋಲಾರದಂತಹ ಪ್ರಮುಖ ಕಾರಿಡಾರ್‌ಗಳಲ್ಲಿ ಕ್ಷಿಪ್ರ ರೈಲು ಸಾರಿಗೆ ವ್ಯವಸ್ಥೆ (ಆರ್‌ಆರ್‌ಟಿಎಸ್) ಗಾಗಿ ಕಾರ್ಯಸಾಧ್ಯತಾ ಅಧ್ಯಯನವನ್ನು ಪ್ರಾರಂಭಿಸುವಂತೆ ಅವರು ಸಚಿವ ವಿ. ಸೋಮಣ್ಣ ಒತ್ತಾಯಿಸಿದ್ದಾರೆ.
ಉಪನಗರ ರೈಲು ಯೋಜನೆಯ ರೈಲು ಸೇವೆಯು ಸುತ್ತಲಿನ ಜನರಿಗೆ ಹೆಚ್ಚಿನ ಅನುಕೂಲವಾಗುತ್ತದೆ.
ಈ ಪೂರ್ವ ಪರಿಶೀಲನಾ ಸಭೆಯಲ್ಲಿ, ಕೇಂದ್ರದ ರಾಜ್ಯಖಾತೆ ಸಚಿವರು ಹಾಗೂ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಸಂಸದರಾದ ಶೋಭಾ ಕರಂದ್ಲಾಜೆ, ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವರಾದ ಕೆ.ಹೆಚ್ ಮುನಿಯಪ್ಪ,ಬೆಂಗಳೂರು ಕೇಂದ್ರ ಲೋಕಸಭಾ ಸದಸ್ಯರಾದ ಶ್ರೀ ಪಿ.ಸಿ ಮೋಹನ್ಹಾ, ಗೂ ರೈಲ್ವೆ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.


Click it and Unblock the Notifications