ಬೆಂಗಳೂರಿನಲ್ಲಿ ಚಿನ್ನದ ದರ ಮತ್ತೆ ಏರಿಕೆಯಾಗಿದೆ. ನಿನ್ನೆ ಸ್ವಲ್ಪ ಇಳಿಕೆಯಾಗಿದ್ದ ಚಿನ್ನದ ದರ ಇಂದು ಮತ್ತೆ ಏರಿಕೆಯಾಗಿದೆ. ಸ್ವಲ್ಪ ಸಮಾಧಾನ ಮಾಡಿಕೊಂಡಿದ್ದ ಬೆಂಗಳೂರಿಗರಿಗೆ ಮತ್ತೆ ನಿರಾಸೆಯಾಗಿದೆ. ಬಹುದಿನಗಳಿಂದ ಏರಿಕೆಯಾಗ್ತಾನೆ ಇದ್ದ ಚಿನ್ನ ನಿನ್ನೆ ಸ್ವಲ್ಪ ಇಳಿಕೆಯಾಗಿತ್ತು, ಆದ್ರೆ ಇಂದು ಮತ್ತೆ ಚಿನ್ನ ತನ್ನ ಓಟವನ್ನ ಮುಂದುವರೆಸಿದೆ.
ಯುಎಸ್ ಡಾಲರ್ ಬಲವರ್ಧನೆ ಮತ್ತು ರೂಪಾಯಿ ಕುಸಿತದಿಂದಾಗಿ ಚಿನ್ನದ ದರ ಮತ್ತಷ್ಟು ಏರಿಕೆಯಾಗಿದೆ. ಜಾಗತಿಕ ಉದ್ವಿಗ್ನತೆಗಳು ಚಿನ್ನದ ಮೇಲಿನ ಬೇಡಿಕೆ ಕೂಡ ಹೆಚ್ಚಾಗ್ತಿದೆ. ಇದರ ಮಧ್ಯೆ ಈ ತಿಂಗಳ 28 ಮತ್ತು 29 ರಂದು US FOMC ಸಭೆ ನಡೆಯಲಿದೆ. ಈ ಸಮಯದಲ್ಲಿ ಫೆಡ್ ಅಧಿಕಾರಿಗಳು ಕೂಡ ಮಾತನಾಡಲಿದ್ದಾರೆ. ಹಣದುಬ್ಬರ, ಯುಎಸ್ ಆರ್ಥಿಕತೆಯ ಕುರಿತು ಚರ್ಚೆ ಮಾಡಲಿದ್ದಾರೆ.
ಜನವರಿ 15 ರಂದು, ಬೆಂಗಳೂರಿನಲ್ಲಿ ಚಿನ್ನದ ಬೆಲೆ ಏರಿಕೆಯಾಗಿದೆ. 22 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆ 100ರೂ. ಏರಿಕೆಯಾಗಿ 73,400ರೂ. ಆಗಿದೆ. ಮತ್ತು 24 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆ 110ರೂ. ಏರಿಕೆಯಾಗಿ 80,070 ಆಗಿದೆ. ಬೆಂಗಳೂರಿನಲ್ಲಿ 18 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆ 90 ರೂ. ಏರಿಕೆಯಾಗಿ 60,060 ಆಗಿದೆ.

ಹಾಗೆ 22 ಕ್ಯಾರೆಟ್‌ನ 100 ಗ್ರಾಂ ಚಿನ್ನದ ಬೆಲೆ 1,000ರೂ. ಏರಿಕೆಯಾಗಿ 7,34,000 ಆಗಿದೆ. ಮತ್ತು 24 ಕ್ಯಾರೆಟ್‌ನ 100 ಗ್ರಾಂ ಚಿನ್ನದ ಬೆಲೆ 1,100 ರೂ. ಏರಿಕೆಯಾಗಿ 8,00,700 ಆಗಿದೆ. 18 ಕ್ಯಾರೆಟ್‌ನ 100 ಗ್ರಾಂ ಚಿನ್ನದ ಬೆಲೆ 900 ರೂ. ಏರಿಕೆಯಾಗಿ 6,00,600 ಆಗಿದೆ.
ಬೆಂಗಳೂರಿನಲ್ಲಿ ಬೆಳ್ಳಿ ದರಗಳು
ಇಂದು ಬೆಂಗಳೂರಿನಲ್ಲಿ ಬೆಳ್ಳಿ ಬೆಲೆ ಕೂಡ ಏರಿಕೆಯಾಗಿದೆ . ಪ್ರಸ್ತುತ, ಬೆಂಗಳೂರಿನಲ್ಲಿ 1 ಗ್ರಾಂ ಬೆಳ್ಳಿ ಬೆಲೆ 1 ರೂ. ಇಳಿಕೆಯಾಗಿ 93.50 ರೂ. ಆಗಿದೆ. ಹಾಗೆ 1 ಕಿಲೋ ಗ್ರಾಂ ಬೆಳ್ಳಿ ಬೆಲೆ 1,000 ರೂ. ಇಳಿಕೆಯಾಗಿ 93,500ರೂ. ಆಗಿದೆ. ಚಿನ್ನದ ಜೊತೆ ಜೊತೆಗೆ ಬೆಳ್ಳಿ ಬೆಲೆ ಕೂಡ ಇಂದು ಏರಿಕೆಯಾಗಿದೆ.
ಭಾರತದ ಕೆಲವು ಮೆಟ್ರೋಪಾಲಿಟನ್ ನಗರಗಳಲ್ಲಿನ ಚಿನ್ನದ ಬೆಲೆಗಳ ವಿವರ:
| ನಗರಗಳು | 24ಕ್ಯಾರೆಟ್ | 22ಕ್ಯಾರೆಟ್ |
| ದೆಹಲಿ | 80,220 | 73,550 |
| ಮುಂಬೈ | 80,070 | 73,400 |
| ಚೆನ್ನೈ | 80,070 | 73,400 |
| ಕೋಲ್ಕತ್ತಾ | 80,070 | 73,400 |
ಸ್ಪಾಟ್ ಚಿನ್ನದ ಭವಿಷ್ಯ
ಯುಎಸ್ ಡಾಲರ್ ಕುಸಿತದಿಂದಾಗಿ ಚಿನ್ನದ ದರ ಕೂಡ ಇಳಿಕೆಯಾಗಿದೆ. ಇದು ಸ್ಪಾಟ್ ಚಿನ್ನದ ಮೇಲೆ ಹೆಚ್ಚು ಪ್ರಭಾವ ಬೀರಲಿದೆ. ಇನ್ನು ವರದಿ ಪ್ರಕಾರ ಸ್ಪಾಟ್ ಚಿನ್ನದ ಬೆಲೆಯು ಪ್ರತಿ ಔನ್ಸ್‌ಗೆ 0.08% ಇಳಿಕೆಯಾಗಿ 2,675.02 ಡಾಲರ್‌ನಲ್ಲಿ ವಹಿವಾಟು ನಡೆಸುತ್ತಿದೆ. ಇತ್ತ ಸ್ಪಾಟ್ ಬೆಳ್ಳಿ ಭವಿಷ್ಯವು ಪ್ರತಿ ಔನ್ಸ್‌ಗೆ 0.40% ಇಳಿಕೆಯಾಗಿ 29.80 ಡಾಲರ್‌ನಲ್ಲಿ ಸ್ಥಿರವಾಗಿದೆ. ಪ್ಲಾಟಿನಮ್ ಬೆಲೆಯು ಪ್ರತಿ ಔನ್ಸ್‌ಗೆ 0.42% ರಷ್ಟು ಇಳಿಕೆಯಾಗಿ 937.25 ಡಾಲರ್‌ನಲ್ಲಿ ವಹಿವಾಟು ನಡೆಸುತ್ತಿದೆ. ಪಲ್ಲಾಡಿಯಂ ಬೆಲೆಯು ಪ್ರತಿ ಔನ್ಸ್‌ಗೆ 0.16% ರಷ್ಟು ಇಳಿಕೆಯಾಗಿ 939.00 ಡಾಲರ್ ತಲುಪಿದೆ.
MCX ಗೋಲ್ಡ್ ಔಟ್‌ಲುಕ್ ಮತ್ತು ಸಿಲ್ವರ್ ಔಟ್‌ಲುಕ್
ಮಲ್ಟಿ ಕಮೊಡಿಟಿ ಎಕ್ಸ್‌ಚೇಂಜ್‌ನಲ್ಲಿ (MCX), ಫೆಬ್ರವರಿ 5, 2025 ರ ವಿತರಣೆಯ ಚಿನ್ನದ ಭವಿಷ್ಯ ನೋಡೋದಾದ್ರೆ, 10 ಗ್ರಾಂ ಚಿನ್ನಕ್ಕೆ 0.22% ನಷ್ಟು ಏರಿಕೆಯಾಗಿ 78,330. ರೂ. ಆಗಿದೆ. ಮಾರ್ಚ್ 5, 2025ರ ಬೆಳ್ಳಿ ಭವಿಷ್ಯವು 0.02%ನಷ್ಟು ಏರಿಕೆಯಾಗಿ 90,577 ರೂಪಾಯಿ ವಹಿವಾಟು ನಡೆಸುತ್ತಿದೆ. ಜಾಗತಿಕ ಬೇಡಿಕೆ ಹೆಚ್ಚಾದಂತೆ ಅದು ಚಿನ್ನದ ಬೆಲೆಯ ಮೇಲೆ ಪರಿಣಾಮ ಬೀರಬಹುದು. ಬಡ್ಡಿ ದರಗಳು, ಸರ್ಕಾರಿ ನೀತಿಗಳು, ಕರೆನ್ಸಿ ವಿನಿಮಯ ದರಗಳು ಮತ್ತು ಜಾಗತಿಕ ಘಟನೆಗಳಂತಹ ದೇಶೀಯ ಮತ್ತು ಅಂತರರಾಷ್ಟ್ರೀಯ ಎರಡೂ ಅಸ್ಥಿರಗಳಿಂದ ಬೆಲೆಗಳ ಮೇಲೆ ಹೆಚ್ಚು ಪರಿಣಾಮ ಬೀರಬಹುದು. MCX ಚಿನ್ನದ ದರಗಳು ಈ ವಾರ 1.4% ಏರಿಕೆಯಾಗಿದೆ ಎಂದು ವರದಿ ಹೇಳಿದೆ.


Click it and Unblock the Notifications