ಬೆಂಗಳೂರು ನಗರದಲ್ಲಿ ಮುಂದಿನ ಕೆಲವು ದಿನಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ನಿಗದಿತ ವ್ಯತ್ಯಯ ಉಂಟಾಗಲಿದೆ. ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ಲಿಮಿಟೆಡ್ (ಬೆಸ್ಕಾಂ) ಪ್ರಕಟಿಸಿದ ಮಾಹಿತಿಯ ಪ್ರಕಾರ, ತುರ್ತು ದುರಸ್ತಿ ಮತ್ತು ನಿರ್ವಹಣಾ ಕಾರ್ಯಗಳ ಹಿನ್ನೆಲೆಯಲ್ಲಿ ನಗರದ ಹಲವಾರು ಪ್ರದೇಶಗಳಲ್ಲಿ ಬೆಳಿಗ್ಗೆ 9ರಿಂದ ಸಂಜೆ 5ರವರೆಗೆ ವಿದ್ಯುತ್ ಕಡಿತ ಇರಲಿದೆ.

ಬೆಸ್ಕಾಂ ತಿಳಿಸಿರುವಂತೆ, ಹೆಬ್ಬಾಳ ವಿಭಾಗದ ಸಿ-8 ಉಪವಿಭಾಗಕ್ಕೆ ಒಳಪಡುವ 66/11 ಕೆವಿ ಸಹಕಾರಿ ನಗರ ನಿಲ್ದಾಣದಲ್ಲಿ ಕೆಪಿಟಿಸಿಎಲ್ ತುರ್ತು ದುರಸ್ತಿ ಮತ್ತು ನಿರ್ವಹಣಾ ಕೆಲಸ ಕೈಗೊಳ್ಳುತ್ತಿದೆ. ವಿದ್ಯುತ್ ಸರಬರಾಜು ಸುಗಮವಾಗಿರಲು ಮತ್ತು ಭವಿಷ್ಯದಲ್ಲಿ ತಾಂತ್ರಿಕ ದೋಷಗಳು ಉಂಟಾಗದಂತೆ ಮಾಡಲು ಈ ಕಾರ್ಯ ಅಗತ್ಯವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ವಿದ್ಯುತ್ ಕಡಿತದ ದಿನಾಂಕ ಮತ್ತು ಸಮಯ:
ಈ ನಿರ್ವಹಣಾ ಕೆಲಸಗಳು ಸೆಪ್ಟೆಂಬರ್ 15ರಿಂದ ಸೆಪ್ಟೆಂಬರ್ 29ರವರೆಗೆ ನಡೆಯಲಿದ್ದು, ಪ್ರತಿದಿನ ಬೆಳಿಗ್ಗೆ 9 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ವ್ಯತ್ಯಯ ಇರಲಿದೆ. ಈ ಅವಧಿಯಲ್ಲಿ ಜನರು ತಮ್ಮ ದಿನನಿತ್ಯದ ಕೆಲಸಗಳಲ್ಲಿ ತೊಂದರೆ ಅನುಭವಿಸದಂತೆ ಮುಂಚಿತವಾಗಿ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕೆಂದು ಬೆಸ್ಕಾಂ ಮನವಿ ಮಾಡಿದೆ.
ವಿದ್ಯುತ್ ವ್ಯತ್ಯಯ ಉಂಟಾಗುವ ಪ್ರಮುಖ ಪ್ರದೇಶಗಳು:
ಎ ಬ್ಲಾಕ್, ಇ ಬ್ಲಾಕ್, ಬಳ್ಳಾರಿ ಮುಖ್ಯರಸ್ತೆ, ಜಿ ಬ್ಲಾಕ್, ಎಫ್ ಬ್ಲಾಕ್, ತಲಕಾವೇರಿ ಲೇಔಟ್, ಅಮೃತಹಳ್ಳಿ, ಬಿಜಿಎಸ್ ಲೇಔಟ್, ನವ್ಯ ನಗರ ಬ್ಲಾಕ್, ಶಬರಿ ನಗರ, ಬೈತರಾಯನಪುರ ಜಕ್ಕೂರು ಲೇಔಟ್, ಜಿಕೆವಿಕೆ ಲೇಔಟ್, ಜಕ್ಕೂರು ಪ್ಲಾಂಟೇಶನ್, ಯೋಷಾದ ನಗರ ಅಮೃತಹಳ್ಳಿ, ಡಿ ಬ್ಲಾಕ್, ಲಾ ಬ್ಲಾಕ್, ಸಿಹಳ್ಳಿ ಬ್ಲಾಕ್, ಸಂಪಿಗೆಹಳ್ಳಿ, ಅಗ್ರಹಾರ ಗ್ರಾಮ, ಜಯಸೂರ್ಯ ಲೇಔಟ್, ವಿಧಾನ ಸೌಧ ಲೇಔಟ್, ಸಾಯಿಬಾಬಾ ಲೇಔಟ್, ಟೆಲಿಕಾಂ ಲೇಔಟ್, MCECHS ಲೇಔಟ್, MC PHS ಲೇಔಟ್, ಸೂರ್ಯೋದಯ ನಗರ, ಅಗ್ರಹಾರ ಲೇಔಟ್, ಕೋಗಿಲು ಲೇಔಟ್, ಶ್ರೀನಿವಾಸಪುರ ಜಕ್ಕೂರು, ವಿಆರ್ಎಲ್ ರಸ್ತೆ, ಐಎಎಸ್ ರಸ್ತೆ, ಅರ್ಕಾವತಿ ಲೇಔಟ್ ಮತ್ತು ಸುತ್ತಮುತ್ತಲಿನ ಪ್ರದೇಶಗಳು ವಿದ್ಯುತ್ ಕಡಿತದಿಂದ ಪ್ರಭಾವಿತರಾಗಲಿವೆ.
ಜನರಿಗೆ ಬೆಸ್ಕಾಂ ಮನವಿ:
ಬೆಸ್ಕಾಂ ಪ್ರಕಟಣೆಯಲ್ಲಿ, ದುರಸ್ತಿ ಕಾರ್ಯಗಳು ಪೂರ್ಣಗೊಳ್ಳುವವರೆಗೆ ವಿದ್ಯುತ್ ಸರಬರಾಜಿನಲ್ಲಿ ಅಂತರಾಯ ಅನಿವಾರ್ಯವಾಗಿದ್ದು, ಜನರು ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಮನವಿ ಮಾಡಲಾಗಿದೆ. ತುರ್ತು ಪರಿಸ್ಥಿತಿಯಲ್ಲಿ ಬೆಸ್ಕಾಂ ಸಹಾಯವಾಣಿ ಸಂಖ್ಯೆಯನ್ನು ಸಂಪರ್ಕಿಸಲು ಅವಕಾಶವಿದೆ.
ಬೆಸ್ಕಾಂ ತಿಳಿಸಿರುವಂತೆ, ದುರಸ್ತಿ ಮತ್ತು ನಿರ್ವಹಣಾ ಕೆಲಸ ಪೂರ್ಣಗೊಂಡ ಬಳಿಕ ವಿದ್ಯುತ್ ಸರಬರಾಜು ಸುಧಾರಿತವಾಗುವುದು, ಭವಿಷ್ಯದಲ್ಲಿ ತಾಂತ್ರಿಕ ಸಮಸ್ಯೆಗಳು ಕಡಿಮೆಯಾಗುವುದು. ಜನರಿಗೆ ಉತ್ತಮ ಸೇವೆ ನೀಡಲು ಈ ಕಾರ್ಯ ಅಗತ್ಯವಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.


Click it and Unblock the Notifications