ಬೆಂಗಳೂರು, ಅಕ್ಟೋಬರ್ 23: ಬೆಂಗಳೂರು ನಗರ ಜಿಲ್ಲೆಯಾದ್ಯಂತ ನಿರಂತರವಾಗಿ ಹೆಚ್ಚಿನ ಮಳೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ರಸ್ತೆಗಳು ಜಲಾವೃತವಾಗಿದ್ದು, ಮುಂಜಾಗ್ರತಾ ಕ್ರಮವಾಗಿ ಇಂದು(ಅಕ್ಟೋಬರ್ 23) ಅಂಗನವಾಡಿ ಕೇಂದ್ರಗಳಿಗೆ ಹಾಗೂ ಶಾಲೆಗಳಿಗೆ ರಜೆ ಘೋಷಿಸಿಲಾಗಿದೆ.
ಮುಂಜಾಗೃತಾ ಕ್ರಮವಾಗಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಅಕ್ಟೋಬರ್ 23 ರಂದು ಬೆಂಗಳೂರು ನಗರ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ ಹಾಗೂ ಖಾಸಗಿ/ ಅನುದಾನಿತ ಪ್ರಾಥಮಿಕ, ಪ್ರೌಢಶಾಲೆಗಳಿಗೆ ರಜೆಯನ್ನು ಘೋಷಿಸಿ ಜಿಲ್ಲಾಡಳಿತ ಆದೇಶಿಸಿದೆ. ಉಳಿದಂತೆ ಪದವಿ, ಸ್ನಾತಕೋತ್ತರ ಪದವಿ, ಡಿಪ್ಲೊಮಾ, ಇಂಜಿನಿಯರಿಂಗ್, ಐಟಿಐ ಗಳಿಗೆ ರಜೆ ಇರುವುದಿಲ್ಲ

ಬೆಂಗಳೂರಿನಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆ ಯಲ್ಲೋ ಅಲರ್ಟ್ ಘೋಷಿಸಲಾಗಿದ್ದು, ಖಾಸಗಿ ಕಂಪನಿಗಳು ತಮ್ಮ ಉದ್ಯೋಗಿಗಳಿಗೆ ಮನೆಯಿಂದಲೇ ಕೆಲಸ ಮಾಡಲು ಅವಕಾಶ ನೀಡುವಂತೆ ಸೂಚಿಸಲಾಗಿದೆ. ಐಟಿ (ಮಾಹಿತಿ ತಂತ್ರಜ್ಞಾನ), ಬಿಟಿ (ಬಯೋಟೆಕ್) ಮತ್ತು ಖಾಸಗಿ ಕಂಪನಿಗಳಲ್ಲಿ ಕೆಲಸ ಮಾಡುವ ಎಲ್ಲರ ಸುರಕ್ಷತೆಗಾಗಿ ಕರ್ನಾಟಕ ಸರ್ಕಾರವು ಈ ಸಲಹೆಯನ್ನು ನೀಡಿದೆ.
ಬೆಂಗಳೂರಿನಲ್ಲಿ ಬುಧವಾರ ಭಾರೀ ಮಳೆಯಾಗಲಿದ್ದು, ಭಾರತೀಯ ಹವಾಮಾನ ಇಲಾಖೆ ( ಐಎಂಡಿ ) ಹಳದಿ ಅಲರ್ಟ್ ಘೋಷಿಸಿದೆ.ಕಳೆದ ನಾಲ್ಕು ದಿನಗಳಿಂದ ಎಡೆಬಿಡದೆ ಸುರಿಯುತ್ತಿರುವ ಮಳೆಗೆ ನಗರ ಈಗಾಗಲೇ ತತ್ತರಿಸಿದ್ದು, ಭಾರೀ ಮಳೆಯಿಂದಾಗಿ ರಸ್ತೆಗಳು ನದಿಗಳಾಗಿ ಮಾರ್ಪಟ್ಟಿದ್ದರಿಂದ ನಗರದ ಹಲವಾರು ತಗ್ಗು ಪ್ರದೇಶದಲ್ಲಿದ್ದ ಜನರನ್ನ ಸ್ಥಳಾಂತರಿಸಲಾಗಿದೆ.
ಬೆಂಗಳೂರಿನಲ್ಲಿ ಪ್ರತ್ಯೇಕ ಮಳೆಯಿಂದಾಗಿ ಐದು ಜನರು ಸಾವನ್ನಪ್ಪಿದ್ದಾರೆ. ಮಳೆಯ ರಭಸಕ್ಕೆ ಕಟ್ಟಡ ಕುಸಿದು ಮೂವರು ಕಾರ್ಮಿಕರು ಸಾವನ್ನಪ್ಪಿದ್ದರೆ, ಇಬ್ಬರು ಮಕ್ಕಳು ಕೆಂಗೇರಿ ಕೆರೆಯಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಕಟ್ಟಡ ಕುಸಿತದ ಸ್ಥಳದಿಂದ 15 ಜನರನ್ನು ರಕ್ಷಿಸಲಾಗಿದ್ದು, ಇನ್ನೂ ಮೂವರು ನಾಪತ್ತೆಯಾಗಿದ್ದಾರೆ.
ಬುಧವಾರ ಶಾಲೆಗೆ ರಜೆ ಘೋಷಿಸಿದ ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್ ಜಿ. ಆದರೆ ಅಪಘಾತಗಳನ್ನು ತಪ್ಪಿಸಲು ಶಿಥಿಲಗೊಂಡ ಹಾಗೂ ದುರ್ಬಲ ಕಟ್ಟಡಗಳನ್ನು ಬಳಸದಂತೆ ಸಾಮಾನ್ಯ ಸೂಚನೆಯೊಂದಿಗೆ ನಗರದ ಎಲ್ಲಾ ಕಾಲೇಜುಗಳು ಮತ್ತು ಐಟಿಐಗಳು ಎಂದಿನಂತೆ ಕಾರ್ಯನಿರ್ವಹಿಸಲಿವೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವಿದ್ಯಾರ್ಥಿಗಳು ನೀರು ತುಂಬಿರುವ ತಗ್ಗು ಪ್ರದೇಶಗಳಿಗೆ ಹೋಗದಂತೆ ಪೋಷಕರು ಮತ್ತು ಕಾಲೇಜು ಆಡಳಿತ ಮಂಡಳಿಗೆ ಜಗದೀಶ್ ಅವರು ಸೂಚನೆ ನೀಡಿದ್ದಾರೆ. ಪ್ರಕೃತಿ ವಿಕೋಪವನ್ನು ಎದುರಿಸುವ ಬಗ್ಗೆ ವಿದ್ಯಾರ್ಥಿಗಳಿಗೆ ಮಾಹಿತಿ ನೀಡುವಂತೆ ಕಾಲೇಜು ಅಧಿಕಾರಿಗಳಿಗೆ ತಿಳಿಸಿದರು.
ಕಳೆದ ವಾರದಲ್ಲಿ 241 ಮಿಮೀ ಮಳೆ ದಾಖಲಾಗಿದೆ ಎಂದು ಸ್ಥಳೀಯ ಅಧಿಕಾರಿಗಳು ತಿಳಿಸಿದ್ದಾರೆ. ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್‌ಡಿಆರ್‌ಎಫ್) ಮತ್ತು ರಾಜ್ಯ ವಿಪತ್ತು ನಿರ್ವಹಣಾ ಪಡೆ (ಎಸ್‌ಡಿಆರ್‌ಎಫ್) ಐದು ತಂಡಗಳನ್ನು ಮಂಗಳವಾರ ಹಾನಿಗೊಳಗಾದ ಜಿಲ್ಲೆಗಳಲ್ಲಿ ಒಂದಾದ ಯಲಹಂಕ ಸೇರಿದಂತೆ ಪ್ರವಾಹ ಪ್ರದೇಶಗಳಿಂದ ಜನರನ್ನು ಸ್ಥಳಾಂತರಿಸಲು ನಿಯೋಜಿಸಲಾಗಿದೆ.
ಬೆಂಗಳೂರು ಅಭಿವೃದ್ಧಿ ಖಾತೆ ಹೊಂದಿರುವ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸುದ್ದಿಗಾರರನ್ನು ಉದ್ದೇಶಿಸಿ ಮಾತನಾಡಿ, ಪ್ರಕೃತಿಯನ್ನು ತಡೆಯಲು ಸಾಧ್ಯವಿಲ್ಲ ಆದರೆ ನಾವಿದ್ದೇವೆ. ನಾನು ಇಡೀ ತಂಡದಿಂದ ಮಾಹಿತಿ ಸಂಗ್ರಹಿಸುತ್ತಿದ್ದೇನೆ ಎಂದು ಹೇಳಿದ್ದಾರೆ.
More From GoodReturns

ಎಮಿಯಾಕ್ ಟೆಕ್ನಾಲಜೀಸ್ ಐಪಿಒ: ಹೂಡಿಕೆದಾರರ ಮುಗಿಬಿದ್ದ ಭರ್ಜರಿ ಬೇಡಿಕೆ!

ಆರ್ಬಿಐ ರೆಪೋ ದರ ಸ್ಥಿರತೆ: ನಿಮ್ಮ ಇಎಂಐ ಹೊರೆ ಇಳಿಯುತ್ತಾ?

ಆರ್ಬಿಐ ಪಾಲಿಸಿಗೂ ಮುನ್ನ ನಿಮ್ಮ ಬಂಡವಾಳಕ್ಕೆ ಈ ರಕ್ಷಣೆ ಬೇಕೇ?

ಆರ್ಬಿಐ ಪಾಲಿಸಿ ಅಬ್ಬರ: ನಿಮ್ಮ ಹಣ ಉಳಿಸಲು ಈ ತಂತ್ರ ಬಳಸಿ

ಸೇಫ್ಟಿ ಕಂಟ್ರೋಲ್ಸ್ ಐಪಿಒ: ಹೂಡಿಕೆದಾರರೇ ಇಂದೇ ಕೊನೆಯ ಅವಕಾಶ!

ಆರ್ಬಿಐ ಬಡ್ಡಿ ದರ: ನಿಮ್ಮ ಇಎಂಐ ಹೊರೆ ಕಡಿಮೆಯಾಗುತ್ತಾ?

ಆರ್ಬಿಐ ಪಾಲಿಸಿ: ಇಂದಿನ ನಿರ್ಧಾರ ನಿಮ್ಮ ಹೂಡಿಕೆಯನ್ನು ಬದಲಿಸುತ್ತಾ?

ಗೃಹ ಸಾಲದ ಇಎಂಐ ಇಳಿಕೆ: ಆರ್ಬಿಐ ನಿರ್ಧಾರದ ಅಸಲಿ ಸತ್ಯ

ಹೋಮ್ ಲೋನ್ ಇಎಂಐ ಉಳಿಸಲು ಈ ಟ್ರಿಕ್ ಬಳಸಿ ನೋಡಿ

ಆರ್ಬಿಐ ರೆಪೋ ದರ ಸ್ಥಿರ: ನಿಮ್ಮ ಇಎಂಐ ಹೊರೆ ಇಳಿಯುತ್ತಾ?

ಚಿನ್ನದ ಬೆಲೆ ಏರಿಕೆ: ಹೂಡಿಕೆದಾರರೇ ಎಚ್ಚರ, ಈ ತಪ್ಪು ಮಾಡಬೇಡಿ!



Click it and Unblock the Notifications