ಏರ್‌ಪೋರ್ಟ್ ನಿರ್ಮಾಣವಾಗುತ್ತಿದೆ ಅಂದ್ರೆ ಅಲ್ಲಿ ಇರುವ ಭೂಮಿಗೆ ಬಂಗಾರ ಬೆಲೆ ಸಿಗುತ್ತದೆ ಹೌದು, ಬೆಂಗಳೂರಿನಲ್ಲಿ ಎರಡನೇ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಸಿದ್ಧತೆ ಜೋರಾಗಿದೆ. ರಾಜ್ಯ ಸರ್ಕಾರವು ಸಹ ಬೆಂಗಳೂರಿನಲ್ಲಿ ಎರಡನೇ ವಿಮಾನ ನಿಲ್ದಾಣ ಪ್ರಾರಂಭಿಸುವುದಕ್ಕೆ ಸಜ್ಜಾಗಿದೆ. ಈ ಸಂಬಂಧ ನಾಲ್ಕರಿಂದ ಐದು ಪ್ರದೇಶಗಳನ್ನು ಫೈನಲ್ ಲಿಸ್ಟ್ ಮಾಡಿದೆ. ಆಯ್ಕೆ ಮಾಡಿರುವ ಪ್ರದೇಶದಲ್ಲಿ ಯಾವುದೇ ಜಾಗದಲ್ಲಿ ಎರಡನೇ ವಿಮಾನ ನಿಲ್ದಾಣ ನಿರ್ಮಾಣವಾದರೂ, ರಿಯಲ್ ಎಸ್ಟೇಟ್ ಗೆ ಭರ್ಜರಿ ಆದಾಯ ಹರಿದು ಬರಲಿದೆ.
ಕರ್ನಾಟಕ ಹಾಗೂ ತಮಿಳುನಾಡಿನ ಪ್ರಮುಖ ಜಿಲ್ಲೆಗಳಲ್ಲಿ ರಿಯಲ್ ಎಸ್ಟೇಟ್‌ಗೆ ಬಂಗಾರದ ಬೆಲೆ ಬರುತ್ತಿದೆ. ಇದಕ್ಕೆ ಮುಖ್ಯ ಕಾರಣ ಎರಡೂ ರಾಜ್ಯಗಳಲ್ಲಿ ಹೊಸದಾಗಿ ನಿರ್ಮಾಣ ಆಗುತ್ತಿರುವ ವಿಮಾನ ನಿಲ್ದಾಣಗಳೇ ಎಂದು ಹೇಳಬಹುದು.ಕರ್ನಾಟಕದ ಬೆಂಗಳೂರಿನ ಎರಡನೇ ವಿಮಾನ ನಿಲ್ದಾಣ ಹಾಗೂ ತಮಿಳುನಾಡಿನ ಹೊಸೂರಿನ ವಿಮಾನ ನಿಲ್ದಾಣದಿಂದ ನಿರ್ಮಾಣವಾಗುತ್ತಿರುವುದರಿಂದ ರಿಯಲ್ ಎಸ್ಟೇಟ್ ಚಟುವಟಿಕೆ ಮಾಡುವವರಿಗೆ ಸಿಹಿ ಸುದ್ದಿ ಸಿಕ್ಕಿದೆ.

ಭೂಮಿಗೆ ಬಂಗಾರದ ಬೆಲೆ ಸಿಗುತ್ತಿದೆ
ವಿಮಾನ ನಿಲ್ದಾಣವಾಗುತ್ತಿರುವ ಪ್ರದೇಶದಲ್ಲಿ ಚಿನ್ನದ ಬೆಲೆ ಸಿಗುತ್ತಿದೆ. ರಿಯಲ್ ಎಸ್ಟೇಟ್‌ದಾರರು ವಿಮಾನ ಬಳಿ ಇರುವ ರೈತರ ಭೂಮಿಯನ್ನು ಖರೀದಿ ಮಾಡಿ ಹೆಚ್ಚಿನ ಬೆಲೆಗೆ ಮಾರಾಟಮಾಡುತ್ತಿದ್ದಾರೆ. ಬೆಂಗಳೂರಿನ ಎರಡನೇ ವಿಮಾನ ನಿಲ್ದಾಣಕ್ಕೆ ನಾಲ್ಕರಿಂದ ಐದು ಜಾಗಗಳನ್ನು ಈಗಲೇ ಗುರುತು ಮಾಡಲಾಗಿದೆ. ಆದರೆ ಎರಡನೇ ವಿಮಾನ ನಿಲ್ದಾಣದ ಜಾಗ ಇನ್ನೂ ಫೈನಲ್ ಆಗಿಲ್ಲ.ಈಗಲೇ ಹೊಸೂರು ವಿಮಾನ ನಿಲ್ದಾಣಕ್ಕೆ 2 ಜಾಗಗಳನ್ನು ಫೈನಲ್ ಮಾಡಲಾಗಿದ್ದು, ರಿಯಲ್ ಎಸ್ಟೇಟ್ ಚಟುವಟಿಕೆಗಳು ನಡೆಯುತ್ತಿವೆ.
ರಿಯಲ್ ಎಸ್ಟೇಟ್‌ಗೆ ಡಬಲ್ ಧಮಾಕಾ
ಎರಡೂ ರಾಜ್ಯಗಳಲ್ಲಿ ಏಕಕಾಲದಲ್ಲಿ ಎರಡು ವಿಮಾನ ನಿಲ್ದಾಣವನ್ನು ನಿರ್ಮಾಣ ಮಾಡುವುದಕ್ಕೆ ಚರ್ಚೆ ನಡೆಯುತ್ತೀವೆ. ಈ ಹಿನ್ನೆಲೆಯಲ್ಲಿ ವಿವಿಧ ಪ್ರದೇಶದಲ್ಲಿ ರಿಯಲ್ ಎಸ್ಟೇಟ್‌ಗೆ ಡಬಲ್ ಧಮಾಕಾ ಆದಾಯ ಸಿಗುತ್ತದೆ. ಎರಡೂ ರಾಜ್ಯಗಳ ವಿಮಾನ ನಿಲ್ದಾಣದ ಅಕ್ಕಪಕ್ಕದಲ್ಲಿ ಮತ್ತು ವಿಮಾನ ನಿಲ್ದಾಣದ ಕೆಲವೇ ಕಿ.ಮೀ ದೂರದಲ್ಲಿ ಇರುವ ಜಾಗಗಳಲ್ಲಿ ಜಮೀನು, ಭೂಮಿ ಹಾಗೂ ಆಸ್ತಿಗೆ ಬಂಪರ್ ಬೆಲೆಗೆ ಮಾರಾಟವಾಗುತ್ತಾವೆ. ಈಗಲೇ ವಿಮಾನ ನಿಲ್ದಾಣ ನಿರ್ಮಾಣ ಮಾಡುವುದಕ್ಕೆ ಚರ್ಚೆ ನಡೆಯುತ್ತಿರುವಾಗಲೇ ಆ ಜಾಗದ ಆಸ್ತಿದಾರರು ಎಚ್ಚರದಿಂದ ಇದ್ದಾರೆ ಆಗಿದ್ದಾರೆ. ಅಲ್ಲಿ ಜಾಗ ಮಾರಾಟ ಮಾಡುವವರು ಮುಂದೂಡುತ್ತಿದ್ದಾರೆ.
ತಮಿಳುನಾಡು ಸರ್ಕಾರ ವಿಮಾನ ನಿಲ್ದಾಣಕ್ಕೆ ಎರಡು ಜಾಗಗಳನ್ನು ಶಾರ್ಟ್ ಲಿಸ್ಟ್
ತಮಿಳುನಾಡು ಸರ್ಕಾರವು ಹೊಸೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಟ ಮಾಡುವುದಕ್ಕೆ ಎರಡು ಜಾಗಗಳನ್ನು ಶಾರ್ಟ್ ಲಿಸ್ಟ್ ಮಾಡಿದೆ. ಹೊಸೂರು ಗ್ರೀನ್‌ಫೀಲ್ಡ್ ವಿಮಾನ ನಿಲ್ದಾಣ ನಿರ್ಮಾಣ ಮಾಡುವುದಕ್ಕೆ ಸಂಬಂಧಿಸಿದಂತೆ ತನೇಜಾ ಏರೋಸ್ಪೇಸ್ ಹಾಗೂ ಏವಿಯೇಷನ್ ಎನ್ನುವ ಜಾಗದಿಂದ 10 ಕಿ.ಮೀ ದೂರದಲ್ಲಿ ಒಂದು ಜಾಗವನ್ನು ತಮಿಳುನಾಡು ಸರ್ಕಾರ ಶಾರ್ಟ್‌ಲಿಸ್ಟ್ ಮಾಡಿದೆ.
ಈ ಸ್ಥಳವು ದಕ್ಷಿಣ ಭಾರತದ ಎರಡು ಪ್ರಮುಖ ನಗರಗಳಾದ ಬೆಂಗಳೂರು ಹಾಗೂ ಚೆನ್ನೈಗೆ ಸಮೀಪದಲ್ಲಿ ಇದೆ. ಈ ವಿಮಾನ ನಿಲ್ದಾಣದಿಂದ ಬೆಂಗಳೂರಿನ ದಕ್ಷಿಣ ಭಾಗದ ರಿಯಲ್ ಎಸ್ಟೇಟ್‌ಗೆ ಹಾಗೂ ಹೊಸೂರಿನ ಭಾಗದಲ್ಲಿ ಭೂಮಿ ಬೆಲೆ ಹೆಚ್ಚಾಗುತ್ತಿದೆ. ಬೆಂಗಳೂರಿನ ಎರಡನೇ ವಿಮಾನ ನಿಲ್ದಾಣ ಯೋಜನೆಯಿಂದ ಬೆಂಗಳೂರು ಹಾಗೂ ಸುತ್ತಮುತ್ತಿನ ಜಾಗದಲ್ಲಿ ಹಾಗೂ ಕೆಲವು ಜಿಲ್ಲೆಗಳ ಭೂಮಿಗೆ ಬಂಪರ್ ಲಾಭವಾಗುವ ನಿರೀಕ್ಷೆ ಹೆಚ್ಚು ಇದೆ ಎಂದೇ ಹೇಳಬಹುದು.
ಈ ಭಾಗಗಳಲ್ಲಿ ಭೂಮಿ ಬೆಲೆ ಏರಿಕೆ ಆಗುತ್ತಲ್ಲೇ ಇದೆ.
ಬೆಂಗಳೂರಿನ ಎರಡನೇ ವಿಮಾನ ನಿಲ್ದಾಣ ನಿರ್ಮಾಟಕ್ಕೆ ಕೇಳಿ ಬರುತ್ತಿರುವ ಸ್ಥಳಗಳೆಂದರೆ ದಾಬಸ್‌ಪೇಟೆ, ನೆಲಮಂಗಲ, ತುಮಕೂರು, ಬಿಡದಿ ಮತ್ತು ಹಾರೋಹಳ್ಳಿ ಸ್ಥಳದಲ್ಲಿ ಎಲ್ಲಿಯಾದರೂ ಒಂದು ಜಾಗದಲ್ಲಿ ಎರಡನೇ ವಿಮಾನ ನಿಲ್ದಣ ನಿರ್ಮಾಣ ಮಾಡುವ ಬಗ್ಗೆ ಚರ್ಚೆಗಳು ಈಗಲೇ ನಡೆಯುತ್ತಿದೆ. ಆದ್ದರಿಂದ ಈ ಪ್ರದೇಶದಲ್ಲಿ ಭೂಮಿ ಬೆಲೆ ಏರಿಕೆಯಾಗುತ್ತಿದೆ.
More From GoodReturns

ಚಿನ್ನದ ಬೆಲೆ ಸ್ಥಿರ: ಆರ್ಬಿಐ ನಿರ್ಧಾರದಿಂದ ದರ ಇಳಿಕೆಯಾಗುತ್ತಾ?

ಎಮಿಯಾಕ್ ಟೆಕ್ನಾಲಜೀಸ್ ಐಪಿಒ: ಹೂಡಿಕೆದಾರರ ಮುಗಿಬಿದ್ದ ಭರ್ಜರಿ ಬೇಡಿಕೆ!

ಆರ್ಬಿಐ ನಿರ್ಧಾರದಿಂದ ನಿಮ್ಮ ಇಎಂಐ ಹೊರೆ ಹೆಚ್ಚಾಗಲಿದೆಯೇ? ಎಚ್ಚರ!

ಆರ್ಬಿಐ ರೆಪೋ ದರ ಸ್ಥಿರತೆ: ನಿಮ್ಮ ಇಎಂಐ ಹೊರೆ ಇಳಿಯುತ್ತಾ?

ಆರ್ಬಿಐ ಪಾಲಿಸಿಗೂ ಮುನ್ನ ನಿಮ್ಮ ಬಂಡವಾಳಕ್ಕೆ ಈ ರಕ್ಷಣೆ ಬೇಕೇ?

ಆರ್ಬಿಐ ನಿರ್ಧಾರದ ನಂತರ ನಿಮ್ಮ ಹಣಕ್ಕೆ ಯಾವುದು ಬೆಸ್ಟ್?

ಆರ್ಬಿಐ ಪಾಲಿಸಿ ಅಬ್ಬರ: ನಿಮ್ಮ ಹಣ ಉಳಿಸಲು ಈ ತಂತ್ರ ಬಳಸಿ

ಆರ್ಬಿಐ ಬಡ್ಡಿ ದರ: ನಿಮ್ಮ ಇಎಂಐ ಹೊರೆ ಕಡಿಮೆಯಾಗುತ್ತಾ?

ಆರ್ಬಿಐ ನಿರ್ಧಾರ: ನಿಮ್ಮ ಎಸ್ಐಪಿ ಮತ್ತು ಇಎಂಐ ಬದಲಾಯಿಸಬೇಕೇ?

ಸೇಫ್ಟಿ ಕಂಟ್ರೋಲ್ಸ್ ಐಪಿಒ: ಹೂಡಿಕೆದಾರರೇ ಇಂದೇ ಕೊನೆಯ ಅವಕಾಶ!

ಗೃಹ ಸಾಲದ ಇಎಂಐ ಇಳಿಕೆ: ಆರ್ಬಿಐ ನಿರ್ಧಾರದ ಅಸಲಿ ಸತ್ಯ



Click it and Unblock the Notifications