ಕರ್ನಾಟಕ ಸರ್ಕಾರವು ಬೆಂಗಳೂರಿಗೆ ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣವನ್ನು ನಿರ್ಮಿಸುವ ಯೋಚನೆಗೆ ಮತ್ತಷ್ಟು ವೇಗ ನೀಡಿದೆ. ಈಗಾಗಲೇ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣವು ತನ್ನ ಗರಿಷ್ಠ ಸಾಮರ್ಥ್ಯವನ್ನು ತಲುಪಿರುವುದರಿಂದ, ಹೊಸ ವಿಮಾನ ನಿಲ್ದಾಣದ ಅಗತ್ಯ ತುರ್ತಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರ (ಎಎಐ) ಕೆಲವು ತಾಂತ್ರಿಕ ಹಾಗೂ ಮೂಲಸೌಕರ್ಯ ಸವಾಲುಗಳನ್ನು ಉಲ್ಲೇಖಿಸಿದ ನಂತರ, ಸರ್ಕಾರದ ಗಮನ ದಕ್ಷಿಣ ಭಾಗದತ್ತ, ವಿಶೇಷವಾಗಿ ಕನಕಪುರ ರಸ್ತೆ ಮತ್ತು ಬನ್ನೇರುಘಟ್ಟ ರಸ್ತೆ ಮಾರ್ಗಗಳತ್ತ ತಿರುಗಿದೆ. ಈ ಪ್ರದೇಶಗಳಲ್ಲಿ ಉತ್ತಮ ಸಂಪರ್ಕ ಮತ್ತು ಭೂಮಿ ಲಭ್ಯತೆ ಇರುವುದರಿಂದ ಈ ಭಾಗಗಳು ಹೆಚ್ಚು ಸೂಕ್ತವೆಂದು ತಜ್ಞರು ಹೇಳುತ್ತಿದ್ದಾರೆ.
ತಮಿಳುನಾಡಿನ ಹೊಸೂರು ಪ್ರದೇಶದಲ್ಲಿ ಹೊಸ ವಿಮಾನ ನಿಲ್ದಾಣ ನಿರ್ಮಾಣಕ್ಕೆ ರಾಜ್ಯ ಸರ್ಕಾರ ಮುಂದಾಗಿರುವುದು ಕರ್ನಾಟಕಕ್ಕೆ ಮತ್ತೊಂದು ಪ್ರೇರಣೆ ನೀಡಿದೆ. ಹೊಸೂರು ವಿಮಾನ ನಿಲ್ದಾಣ ಆರಂಭವಾದರೆ ದಕ್ಷಿಣ ಬೆಂಗಳೂರಿನ ಪ್ರಯಾಣಿಕರಲ್ಲಿ ಅನೇಕರು ಅಲ್ಲಿ ತಿರುಗುವ ಸಾಧ್ಯತೆ ಇದೆ. ಆದ್ದರಿಂದ, ಕರ್ನಾಟಕ ಸರ್ಕಾರವು ತನ್ನ ವಿಮಾನ ನಿಲ್ದಾಣ ಯೋಜನೆಯನ್ನು ವೇಗಗೊಳಿಸುವತ್ತ ಗಮನ ಹರಿಸಿದೆ.
ಮೂಲಸೌಕರ್ಯ ಅಭಿವೃದ್ಧಿ ಇಲಾಖೆ (ಐಡಿಡಿ) ಅಧಿಕಾರಿಯೊಬ್ಬರ ಪ್ರಕಾರ, ಈಗಿನ ಕೆಂಪೇಗೌಡ ವಿಮಾನ ನಿಲ್ದಾಣದಿಂದ ಪ್ರಯಾಣಿಸುವವರಲ್ಲಿ ಸುಮಾರು 40 ಮಿಲಿಯನ್ ಪ್ರಯಾಣಿಕರು ದಕ್ಷಿಣ ಬೆಂಗಳೂರು ಭಾಗದವರು. ಬಿಐಎಎಲ್ ವಿಮಾನ ನಿಲ್ದಾಣದ ಗರಿಷ್ಠ ಸಾಮರ್ಥ್ಯ 85 ಮಿಲಿಯನ್ ಪ್ರಯಾಣಿಕರು ಆಗಿದ್ದು, ಮುಂದಿನ ದಶಕದಲ್ಲಿ ಬೇಡಿಕೆ ದ್ವಿಗುಣಗೊಳ್ಳುವ ಸಾಧ್ಯತೆ ಇದೆ. ಇದರಿಂದಾಗಿ ದಕ್ಷಿಣ ಭಾಗಕ್ಕೆ ಹೊಸ ವಿಮಾನ ನಿಲ್ದಾಣದ ಅಗತ್ಯ ಸ್ಪಷ್ಟವಾಗಿದೆ. ಇಲ್ಲದಿದ್ದರೆ ಪ್ರಯಾಣಿಕರು ಹೊಸೂರಿನತ್ತ ಮುಖ ಮಾಡುವ ಸ್ಥಿತಿ ಬರಬಹುದು ಎಂದು ಅವರು ತಿಳಿಸಿದ್ದಾರೆ.
ಆದಾಗ್ಯೂ, ಸರ್ಕಾರ ಇನ್ನೂ ಸ್ಥಳವನ್ನು ಅಂತಿಮಗೊಳಿಸಿಲ್ಲ. ಮೂಲಸೌಕರ್ಯ ಸಚಿವ ಎಂ.ಬಿ. ಪಾಟೀಲ್ ಅವರು, ವಿವರವಾದ ಸಾಧ್ಯತಾ ಅಧ್ಯಯನ ಪೂರ್ಣಗೊಳ್ಳುವವರೆಗೆ ಸರ್ಕಾರ ಯಾವುದೇ ಸ್ಥಳದ ಬಗ್ಗೆ ನಿರ್ಧಾರ ಕೈಗೊಳ್ಳುವುದಿಲ್ಲ. ಮೂರು ಸಾಧ್ಯ ಸ್ಥಳಗಳನ್ನು ಗುರುತಿಸಿ ತಾಂತ್ರಿಕ ಮತ್ತು ಆರ್ಥಿಕ ದೃಷ್ಟಿಯಿಂದ ಪರಿಶೀಲಿಸಲಾಗುತ್ತದೆ. ಅನುಭವ ಹೊಂದಿರುವ ಸಲಹಾ ಸಂಸ್ಥೆಗಳಿಂದ ಟೆಂಡರ್ ಆಹ್ವಾನಿಸಲಾಗುವುದುತಜ್ ಎಂದು ಹೇಳಿದ್ದಾರೆ.
ಅವರು ಮುಂದುವರಿದು, ಅಧ್ಯಯನ ವರದಿ ಸಲ್ಲಿಕೆಯಾಗುವವರೆಗೆ ಯಾವುದೇ ಸ್ಥಳವನ್ನು ನಿಗದಿಪಡಿಸುವ ಪ್ರಶ್ನೆಯೇ ಇಲ್ಲ. ವರದಿ ಸಿದ್ಧವಾದ ನಂತರ ಸಂಪುಟದ ಅನುಮೋದನೆ ಪಡೆದು ಮುಂದಿನ ಹಂತ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
ಈ ಯೋಜನೆ ಯಶಸ್ವಿಯಾದರೆ, ಅದು ದಕ್ಷಿಣ ಬೆಂಗಳೂರಿನ ಪ್ರಯಾಣಿಕರಿಗೆ ದೊಡ್ಡ ಅನುಕೂಲವಾಗುತ್ತದೆ. ಇತ್ತೀಚಿನ ವರ್ಷಗಳಲ್ಲಿ ಬೆಂಗಳೂರು ನಗರವು ವೇಗವಾಗಿ ವಿಸ್ತರಿಸುತ್ತಿರುವುದರಿಂದ, ಟ್ರಾಫಿಕ್ ಮತ್ತು ಪ್ರಯಾಣದ ಸಮಯ ಹೆಚ್ಚಾಗಿದೆ. ಹೊಸ ವಿಮಾನ ನಿಲ್ದಾಣದಿಂದ ಈ ಒತ್ತಡ ಕಡಿಮೆಯಾಗಲಿದ್ದು, ನಗರಕ್ಕೆ ಹೊಸ ಬೆಳವಣಿಗೆಯ ದಾರಿ ತೆರೆಯಲಿದೆ.
More From GoodReturns

ಎಮಿಯಾಕ್ ಟೆಕ್ನಾಲಜೀಸ್ ಐಪಿಒ: ಹೂಡಿಕೆದಾರರ ಮುಗಿಬಿದ್ದ ಭರ್ಜರಿ ಬೇಡಿಕೆ!

ಆರ್ಬಿಐ ಪಾಲಿಸಿಗೂ ಮುನ್ನ ನಿಮ್ಮ ಬಂಡವಾಳಕ್ಕೆ ಈ ರಕ್ಷಣೆ ಬೇಕೇ?

ಆರ್ಬಿಐ ಪಾಲಿಸಿ ಅಬ್ಬರ: ನಿಮ್ಮ ಹಣ ಉಳಿಸಲು ಈ ತಂತ್ರ ಬಳಸಿ

ಆರ್ಬಿಐ ಬಡ್ಡಿ ದರ: ನಿಮ್ಮ ಇಎಂಐ ಹೊರೆ ಕಡಿಮೆಯಾಗುತ್ತಾ?

ಗೃಹ ಸಾಲದ ಇಎಂಐ ಇಳಿಕೆ: ಆರ್ಬಿಐ ನಿರ್ಧಾರದ ಅಸಲಿ ಸತ್ಯ

ಆರ್ಬಿಐ ರೆಪೋ ದರ ಸ್ಥಿರ: ನಿಮ್ಮ ಇಎಂಐ ಹೊರೆ ಇಳಿಯುತ್ತಾ?

ಚಿನ್ನದ ಬೆಲೆ ಏರಿಕೆ: ಹೂಡಿಕೆದಾರರೇ ಎಚ್ಚರ, ಈ ತಪ್ಪು ಮಾಡಬೇಡಿ!

ಆರ್ಬಿಐ ರೆಪೋ ದರ: ನಿಮ್ಮ ಇಎಂಐ ಹೊರೆ ಹೆಚ್ಚಾಗುತ್ತಾ?

ಆರ್ಬಿಐ ರೆಪೋ ದರ: ನಿಮ್ಮ ಇಎಂಐ ಹೊರೆ ಹೆಚ್ಚಾಗುತ್ತಾ?



Click it and Unblock the Notifications