ಬೆಂಗಳೂರು ಐಟಿ ಹಬ್ಬ ಆಗಿದೆ. ಬೆಂಗಳೂರು Next ಯಾವುದು ಅಂದರೆ ಥಟ್ಟನೆ ನೆನಪು ಆಗೋದು ತುಮಕೂರು ಮಾತ್ರ. ಹೌದು, ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಮೂಲಕ ಬೆಂಗಳೂರು ದೇಶದ ಪ್ರಮುಖ ನಗರಗಳು ಮತ್ತು ವಿದೇಶಗಳಿಗೆ ತೆರಳುವ ಪ್ರಯಾಣಿಕರಿಗೆ ಸಂಪರ್ಕ ಸೇತುವೆಯಾಗಿದೆ. ದಿನದಿಂದ ದಿನಕ್ಕೆ ಪ್ರಯಾಣಿಕರ ಸಂಖ್ಯೆ ಹೇರಳವಾಗುತ್ತಿದೆ. ಈ ಮಧ್ಯೆಯೇ ಎರಡನೇ ವಿಮಾನ ನಿಲ್ದಾಣದ ಸುದ್ದಿ ಭಾರೀ ಸದ್ದು ಮಾಡುತ್ತಿದೆ. ತುಮಕೂರಿನಲ್ಲಿ ಹೊಸ ಏರ್ಪೋರ್ಟ್ ನಿರ್ಮಿಸಬೇಕೆಂಬ ಕೂಗು ಕೇಳಿಬರುತ್ತಿದೆ. ರಾಜ್ಯ ಸರ್ಕಾರವೂ ಸಹ ಅಳೆದು ತೂಗಿ ವಿಮಾನ ನಿಲ್ದಾಣಕ್ಕೆ ಸ್ಥಳ ನಿಗದಿ ಮಾಡಲು ಮುಂದಾಗಿದೆ. ಈ ಬಗ್ಗೆ ಗೃಹ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಜಿ.ಪರಮೇಶ್ವರ್ ಸರ್ಕಾರಕ್ಕೆ ಬೇಡಿಕೆ ಇಟ್ಟಿದ್ದಾರೆ. ಈ ಬಗ್ಗೆ ಇಲ್ಲಿದೆ ಹೆಚ್ಚಿನ ಮಾಹಿತಿ
ತುಮಕೂರು ಸಮೀಪ ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಿಸಲು ರಾಜ್ಯ ಸರ್ಕಾರಕ್ಕೆ ಗೃಹ ಸಚಿವ ಜಿ.ಪರಮೇಶ್ವರ್ ಪ್ರಸ್ತಾವನೆ ಸಲ್ಲಿಸಿರುವುದರ ಬಗ್ಗೆ ತುಮಕೂರಿನಲ್ಲಿ ಮಹಾತ್ಮ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಭಾನುವಾರ ಗಣರಾಜ್ಯೋತ್ಸವ ಪ್ರಯುಕ್ತ ಧ್ವಜಾರೋಹಣಾ ನೇರವೇರಿಸಿದ ಬಳಿಕ ಅವರು ಅವರು ಈ ವಿಷಯದ ಕುರಿತು ಮಾತನಾಡಿದ್ದಾರೆ.

ಪ್ರತಿನಿತ್ಯ ಸಾವಿರಾರು ಮಂದಿ ಓಡಾಟ ನಡೆಸುತ್ತಿದ್ದಾರೆ. ಈ ನಿಟ್ಟಿನಲ್ಲಿ ವಾಯುಯಾನ ಮೂಲಸೌಕರ್ಯ ಅಭಿವೃದ್ಧಿಗೆ ಕರ್ನಾಟಕ ಸರ್ಕಾರ ಮುಂದಾಗಿದೆ. ಎರಡನೇ ವಿಮಾನ ನಿಲ್ದಾಣ ನಿರ್ಮಾಣ ಮಾಡಲು ಸಜ್ಜಾಗುತ್ತಿದೆ. ಆದರೆ, ನೂತನ ವಿಮಾನ ನಿಲ್ದಾಣವನ್ನು ಎಲ್ಲಿ ನಿರ್ಮಿಸಬೇಕು ಎಂಬುದರ ಬಗ್ಗೆ ಈಗಲೇ ಹಲವು ಚರ್ಚೆಗಳು ನಡೆಯುತ್ತಲೇ ಇದೆ.
ತುಮಕೂರು ಆಸುಪಾಸಿನಲ್ಲಿ ವಿಮಾನ ನಿಲ್ದಾಣಕ್ಕೆ ಮನವಿ
ಎರಡನೇ ವಿಮಾನ ನಿಲ್ದಾಣ ಬಗ್ಗೆ ರಾಜ್ಯ ಬೃಹತ್ ಕೈಗಾರಿಕೆ & ಮೂಲಸೌಕರ್ಯ ಅಭಿವೃದ್ಧಿ ಸಚಿವರಿಗೆ ಬೆಂಗಳೂರಿನ 2ನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣವನ್ನು ತುಮಕೂರು ಆಸುಪಾಸಿನಲ್ಲಿ ನಿರ್ಮಿಸುವಂತೆ ಮನವಿಯನ್ನು ಸಹ ಮಾಡಿದ್ದಾರೆ.
ತುಮಕೂರಿನಲ್ಲಿ ಭೂಮಿ ಗುರುತು
ವಿಮಾನ ನಿಲ್ದಾಣ ನಿರ್ಮಾಣ ಸಂಬಂಧಿಸಿದಂತೆ ಎರಡು ಕಡೆಗಳಲ್ಲಿ ಭೂಮಿಯನ್ನು ಗುರುತಿಸಲಾಗಿದೆ ಎಂದು ಗೃಹ ಸಚಿವರು ಹೇಳಿದ್ದಾರೆ. 'ವಸಂತ ನರಸಾಪುರಕ್ಕೆ ಹೊಂದಿಕೊಂಡಂತೆ ರಾಷ್ಟ್ರೀಯ ಹೆದ್ದಾರಿ 48 (NH-48) ಸಮೀಪ 3,000 ಎಕರೆ ಭೂಮಿ ಮತ್ತು ಶಿರಾ ತಾಲ್ಲೂಕಿನ ಸಿ.ಬಿ.ನರಸಿಂಹ ಸ್ವಾಮಿ ದೇವಸ್ಥಾನ ಸಮೀಪ 4 ರಿಂದ 5 ಸಾವಿರ ಎಕರೆ ಭೂಮಿಯನ್ನು ನಕ್ಷೆ ಮೂಲಕ ಗುರುತಿಸಲಾಗಿದೆ ಎಂದು ಅವರು ಮಾಹಿತಿಯನ್ನು ತಿಳಿಸಿದ್ದರು.
ತುಮಕೂರಿನಲ್ಲಿ 2ನೇ ವಿಮಾನ ನಿಲ್ದಾಣ ಏಕೆ?
ಏರ್‌ಪೋರ್ಟ್ಸ್ ಅಥಾರಿಟಿ ಆಫ್ ಇಂಡಿಯಾ (AAI) ನಿಯಮಗಳ ಪ್ರಕಾರ, ಪ್ರಸ್ತುತವಿರುವ ವಿಮಾನ ನಿಲ್ದಾಣವಿರುವ 150 ಕಿ.ಮೀ ಅಂತರದಲ್ಲಿ ಯಾವುದೇ ಹೊಸ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಅನುಮತಿಸಲಾಗುವುದಿಲ್ಲ.ಮತ್ತೊಂದು ವಿಮಾನ ನಿಲ್ದಾಣವನ್ನು ಸ್ಥಾಪಿಸಿದರೆ, ಎರಡು ವಿಮಾನ ನಿಲ್ದಾಣಗಳ ಮಧ್ಯೆ ಏರ್ ಟ್ರಾಫಿಕ್ ಸೇರಿದಂತೆ ಹಲವು ಸಮಸ್ಯೆ ಸಹ ಉಂಟಾಗುತ್ತದೆ.
ಈ ತೊಂದರೆಗಳನ್ನು ನಿಭಾಯಿಸುವುದರೊಂದಿಗೆ ಬೆಂಗಳೂರು ಪ್ರಯಾಣಿಕರಿಗೆ ಹೆಚ್ಚು ಅನುಕೂಲವಾಗಿಸಲು ಹೊಸ ವಿಮಾನ ನಿಲ್ದಾಣ ನಿರ್ಮಾಣಕ್ಕೆ ತುಮಕೂರು ಜಿಲ್ಲೆ ಸೂಕ್ತವಾದ ಸ್ಥಳವಾಗಿದೆ. ಜೊತೆಗೆ ರಾಷ್ಟ್ರೀಯ ಹೆದ್ದಾರಿಯೂ ಹಾದು ಹೋಗುವುದರಿಂದ ಬೆಂಗಳೂರಿನಿಂದ ಪ್ರಯಾಣಿಕರು ಯಾವುದೇ ಟ್ರಾಫಿಕ್ ಕಿರಿಕಿರಿ ಇಲ್ಲದೆ ಸುಲಭವಾಗಿ ತಲುಪಲು ಸಾಧ್ಯವಾಗುತ್ತದೆ ಎಂಬುದು ಹಲವರ ಅಭಿಪ್ರಾಯವಾಗಿದೆ ಎಂದು ಹೇಳಿದ್ದಾರೆ.
ತುಮಕೂರು ಜಿಲ್ಲೆ ಬೆಂಗಳೂರಿಗೆ ತೀರ ಸಮೀಪದಲ್ಲಿ ಇದೆ.11 ವಿಧಾನಸಭಾ ಕ್ಷೇತ್ರಗಳು ಹಾಗೂ 3 ಲೋಕಸಭಾ ಕ್ಷೇತ್ರಗಳಿಳು ಇರುವ ಜಿಲ್ಲೆಯಾಗಿದ್ದು, ಇಲ್ಲಿ ಕೈಗಾರಿಕಾ ಕಂಪನಿಗಳು ಇವೆ. ಬೆಂಗಳೂರಿಗೆ 70 ಕಿ.ಮೀ ದೂರದಲ್ಲಿರುವ ತುಮಕೂರು, ಅತ್ಯಂತ ವೇಗವಾಗಿ ಬೆಳೆಯುತ್ತಿರುವ ಸಿಟಿ ಎಂದೇ ಹೇಳಬಹುದು.
ಹೊಸ ಏರ್ಪೋರ್ಟ್ ನಿರ್ಮಾಣದ ಬಗ್ಗೆ ಸಚಿವ ವಿ.ಸೋಮಣ್ಣ ಹೇಳಿದ್ದೇನು?
ತುಮಕೂರು ಅಥವಾ ನೆಲಮಂಗಲ ಸಮೀಪ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಆಗಬೇಕು ಎಂದು ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಅವರು ಪಟ್ಟು ಹಿಡಿದಿದ್ದಾರೆ.
ತುಮಕೂರು ಅಥವಾ ನೆಲಮಂಗಲ ಸಮೀಪ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಆಗಬೇಕು ನಾನು ಈ ಬಗ್ಗೆ ಗೃಹ ಸಚಿವ ಡಾ.ಜಿ.ಪರಮೇಶ್ವರ ಜೊತೆ ನಾನು ಈಗಾಗಲೇ ಚರ್ಚಿ ಮಾಡಿದ್ದೇನೆ. ವಿಮಾನ ನಿಲ್ದಾಣವನ್ನು ಬೇರೆ ಕಡೆ ನಿರ್ಮಾಣ ಮಾಡೋಕೆ ಪ್ರಯತ್ನ ಮಾಡಿದ್ದರೆ ನಮಗೇ ಎಚ್‌ಎಎಲ್ ನಿಲ್ದಾಣವೇ ಸಾಕು ಅಂತ ಹೇಳುತ್ತೀವೆ ಎಂದು ಹೇಳಿಕೆ ನೀಡಿದ್ದಾರೆ.


Click it and Unblock the Notifications