Bengaluru 2nd Airport:ಬೆಂಗಳೂರು 2ನೇ ವಿಮಾನ ನಿಲ್ದಾಣ ಸ್ಥಳ ಫೈನಲ್.! ರಾಮಮೋಹನ್ ನಾಯ್ಡುಗೆ ಎಂಬಿ ಪಾಟೀಲ್ ಮನವಿ

ಬೆಂಗಳೂರಿಗೆ ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ(Bengaluru second airport) ಸ್ಥಳವನ್ನು ಬಹಬೇಗನೆ ಪೈನಲ್‌ ಮಾಡಿಬೇಕೆಂದು ಕೇಂದ್ರ ನಾಗರಿಕ ವಿಮಾನಯಾನ ಸಚಿವ ಕೆ. ರಾಮಮೋಹನ್ ನಾಯ್ಡು ಅವರಿಗೆ ಬೃಹತ್ ಕೈಗಾರಿಕೆ ಮತ್ತು ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ. ಬಿ. ಪಾಟೀಲ್ ಮನವಿಯನನ್ನು ಮಾಡಿಕೊಂಡಿದ್ದಾರೆ.

ಹೌದು, ಬೆಂಗಳೂರು ಎರಡನೇ ವಿಮಾನ ನಿಲ್ದಾಣದ(Bengaluru 2nd Airport) ವರದಿ ವಿಳಂಬವಾಗುತ್ತಲೇ ಇದೆ. ಎರಡನೇ ವಿಮಾನ ನಿಲ್ದಾಣದ ಕಾರ್ಯಗಳನನ್ನು ಚುರಕುಗೊಳಿಸಲು ಈ ಮನವಿಯನ್ನು ಮಾಡಿದ್ದಾರೆ.

ಬೆಂಗಳೂರು 2ನೇ ವಿಮಾನ ನಿಲ್ದಾಣ ಸ್ಥಳ ಫೈನಲ್? ಎಂಬಿ ಪಾಟೀಲ್

ಸಚಿವ ಎಂ. ಬಿ. ಪಾಟೀಲ್ ದೆಹಲಿಯಲ್ಲಿ ವಿಮಾನಯಾನ ಸಚಿವ ಕೆ. ರಾಮಮೋಹನ್ ನಾಯ್ಡುಯವರ ಜೊತೆ ಮಾತಉಕತೆಯನ್ನು ನಡೆಸುವಂತಹ ಸಂದರ್ಭದಲ್ಲಿ ಎರಡನೇ ವಿಮಾನ ನಿಲ್ದಾಣದ ಕಾರ್ಯಗಳ ಜೊತಗೆ ಹುಬ್ಬಳ್ಳಿ ಮತ್ತು ಬೆಳಗಾವಿ ವಿಮಾನ ನಿಲ್ದಾಣಗಳನ್ನು ಅಂತಾರಾಷ್ಟ್ರೀಯ ಮಟ್ಟಕ್ಕೆ ತಲುಪುವುದು, ವಿಜಯಪುರ ವಿಮಾನ ನಿಲ್ದಾಣ ಉದ್ಘಾಟನೆಗೆ ಅನುಮತಿ ನೀಡುವಂತೆ ಕೇಂದ್ರ ಸರ್ಕಾರವನ್ನು ಕೇಳಿವಂತೆ ಹೇಳಿದ್ದಾರೆ.

ಈಗಾಗಲೇ ಬೆಂಗಳೂರಿನ ಎರಡನೇ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕಾಗಿ ಮೂರು ಸ್ಥಳಗಳನ್ನ ಗುರುತಿಸಲಾಗಿದೆ. ಸ್ಥಳಕ್ಕೆ ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರದ ತಜ್ಞರ ತಂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದೆ. ಈ ಬಗ್ಗೆ ವರದಿ ಬಂದ ನಂತರ, ರಾಜ್ಯ ಸರ್ಕಾರ ಮುಂದಿನ ಕೆಲಸಗಳನ್ನು ಆರಂಭಿಸಲು ಸಿದ್ಧವಾಗಿದೆ ಎಂದು ಸಚಿವರು ರಾಮಮೋಹನ್ ನಾಯ್ಡು ಅವರಿಗೆ ಮಾಹಿತಿಯನ್ನು ತಿಳಿಸಿದ್ದಾರೆ.

ವಿಜಯಪುರ ಏರ್ಪೋರ್ಟ್ ಕಾರ್ಯಾರಂಭಕ್ಕೆ ಕೋರಿಕೆ

ವಿಜಯಪುರ ವಿಮಾನ ನಿಲ್ದಾಣದ ಉದ್ಘಾಟನೆಗೆ ಸಕಲ ಸಿದ್ದತೆಗಳು ಆಗಿವೆ. ಆದರೆ ಕೇಂದ್ರ ಪರಿಸರ ಸಚಿವಾಲಯದ ಅನುಮತಿಗಾಗಿ ಕಾಯುತ್ತಿದ್ದೇವೆ ಅವರು ಅನುಮತಿಯನ್ನು ಕೊಟ್ಟರೆ ಶೀಘ್ರದಲ್ಲಿ ವಿಮಾನ ನಿಲ್ದಾಣ ಉದ್ಘಾಟನೆಯಾಗುತ್ತದೆ.

ಅಂತರರಾಷ್ಟ್ರೀಯ ಸ್ಥಾನಮಾನ ದರ್ಜೆಗೇರಿಸಬೇಕು

ಹುಬ್ಬಳ್ಳಿ ಮತ್ತು ಬೆಳಗಾವಿ ವಿಮಾನ ನಿಲ್ದಾಣಗಳನ್ನು ಅಂತಾರಾಷ್ಟ್ರೀಯ ಮಟ್ಟಕ್ಕೆ ದರ್ಜೆಗೇರಿಸುವುದು ಮುಖ್ಯ ಯಾಕೆಂದರೆ ಉತ್ತರ ಕರ್ನಾಟಕ, ದಕ್ಷಿಣ ಮಹಾರಾಷ್ಟ್ರ ಮತ್ತು ಗೋವಾ ಭಾಗದ ಅಭಿವೃದ್ಧಿಗಾಗಿ ಹೆಚ್ಚಿನ ಅನುಕೂಲವಾಗುತ್ತದೆ. ಜೊತೆಗೆ ಆ ಭಾಗದಲ್ಲಿ ವಾಸಿಸುವ ನಿವಾಸಿಗಳಿಗೆ ವಿಮಾನ ನಿಲ್ದಾಣ ಸಂಪರ್ಕಗಳು ಹೆಚ್ಚಿನ ಸಹಾಯವಾಗುತ್ತದೆ ಎಂದು ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ. ಬಿ. ಪಾಟೀಲ್ ಹೇಳಿದ್ದಾರೆ.

2,400 ಪ್ರಯಾಣಿಕರನ್ನು ನಿರ್ವಹಿಸುವ ಸಾಮರ್ಥ್ಯ

ಹುಬ್ಬಳ್ಳಿ ಮತ್ತು ಬೆಳಗಾವಿ ವಿಮಾನ ನಿಲ್ದಾಣಗಳು ಎರಡು ವಿಮಾನ ನಿಲ್ದಾಣಗಳು ಒಂದು ಗಂಟೆಗೆ 2,400 ಪ್ರಯಾಣಿಕರನ್ನು ನಿರ್ವಹಿಸುಬಹುದಾದ ಹೊಸ ಟರ್ಮಿನಲ್‌ ನಿರ್ಮಾಣ ಮಾಡಲಾಗಿದೆ. ಅದ ಅಲ್ಲದೆ, AB320 ಮತ್ತು A321 ವಿಮಾನಗಳ ಹಾರಾಟಕ್ಕೆ ಸಾಧ್ಯವಾಗುವಂತೆ 12 ಪಾರ್ಕಿಂಗ್‌ ಬೇ ಅಭಿವೃದ್ಧಿಪಡಿಸಲಾಗಿದೆ.ರಾತ್ರಿ ವೇಳೆಯಲ್ಲೂ ವಿಮಾನಗಳನ್ನು ಲ್ಯಾಂಡಿಂಗ್‌ ಆಗುವಂತೆ ಕ್ರಮ ವಹಿಸಲಾಗಿದೆ. ಜೊತೆಗೆ ಸರಕು ಸಾಗಣೆಗಾಗಿ ಪ್ರತ್ಯೇಕ ಟರ್ಮಿನಲ್‌ಗಳನ್ನು ಈ ನಿಲ್ದಾಣಗಳು ಹೊಂದಿದೆ ಎಂದು ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ. ಬಿ. ಪಾಟೀಲ್ ಹೇಳಿದ್ದಾರೆ.

ರಾಜ್ಯವನ್ನು ಪಾಲುದಾರ ಎಂದು ಪರಿಗಣಿಸಿ

ನಾಗರಿಕ ವಿಮಾನಯಾನ ವಲಯದಲ್ಲಿ ಕರ್ನಾಟಕ ರಾಜ್ಯವನ್ನು ಪಾಲುದಾರ (ಸ್ಟೇಕ್ಹೋಲ್ಡರ್) ಎಂದು ಪರಿಗಣಿಸಬೇಕು. ಇದರಿಂದಾಗಿ ವಿಮಾನ ನಿಲ್ದಾಣ ಪ್ರಾಧಿಕಾರ ನಿರ್ವಹಿಸುತ್ತಿರುವ ರಾಜ್ಯದ ಮಂಗಳೂರು, ಮೈಸೂರು, ಹುಬ್ಬಳ್ಳಿ, ಕಲಬುರಗಿ ಮತ್ತು ಬೆಳಗಾವಿ ವಿಮಾನ ನಿಲ್ದಾಣಗಳಿಂದ ರಾಜ್ಯಕ್ಕೂ ಲಾಭದ ಪಾಲು ಸಿಗಲಿದೆ. ಈ ವಿಷಯದಲ್ಲಿ ರಾಜ್ಯದ ಪಾತ್ರವನ್ನು ಭೂಸ್ವಾಧೀನ ಮತ್ತು ಸೌಕರ್ಯಗಳ ಅಭಿವೃದ್ಧಿಗೆ ಮಾತ್ರ ಸೀಮಿತಗೊಳಿಸಬಾರದು ಎಂದು ಹೇಳಿದ್ದಾರೆ.

More From GoodReturns

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+