ಬೆಂಗಳೂರಿಗೆ ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಕುರಿತ ಚರ್ಚೆಗಳು ಮತ್ತೆ ಶುರುವಾಗಿವೆ. ಎರಡನೇ ವಿಮಾನ ನಿಲ್ದಾಣ ಪ್ರಸ್ತಾವನೆಗೆ ಅನುಮೋದನೆ ಪಡೆಯುವ ನಿಟ್ಟಿನಲ್ಲಿ ಕೈಗಾರಿಕೆ ಮತ್ತು ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ.ಬಿ. ಪಾಟೀಲ್ ಅವರು ಶೀಘ್ರದಲ್ಲೇ ಕೇಂದ್ರ ನಾಗರಿಕ ವಿಮಾನಯಾನ ಸಚಿವ ರಾಮಮೋಹನ್ ನಾಯ್ಡು ಅವರನ್ನು ಭೇಟಿಯನ್ನು ನೀಡಲಿದ್ದಾರೆ.

ಹೌದು, ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರವು (ಎಎಐ) ಏಪ್ರಿಲ್ ತಿಂಗಳಲ್ಲಿ ಮೂರು ಸಂಭಾವ್ಯ ಸ್ಥಳಗಳನ್ನು ಪರಿಶೀಲಿಸಿ ವರದಿಯನ್ನು ನೀಡಬೇಕಿದೆ.ಈ ವರದಿಗಾಗಿ ಕಾಯುತ್ತಿರುವ ಸಂದರ್ಭದಲ್ಲಿಯೇ ಸಚಿವರು ಕೇಂದ್ರ ಸಚಿವರನ್ನು ಭೇಟಿ ಮಾಡಲು ನಿರ್ಧರವನ್ನು ಮಾಡಲಾಗಿದೆ.
2035ರ ವೇಳೆಗೆ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (ಕೆಐಎ) ವಾರ್ಷಿಕವಾಗಿ 110 ಮಿಲಿಯನ್ ಪ್ರಯಾಣಿಕರ ದಟ್ಟಣೆ ಉಂಟಾಗುವ ನಿರೀಕ್ಷೆಯಿದೆ.ಈ ಹಿನ್ನೆಲೆಯಲ್ಲಿ ಎರಡನೇ ವಿಮಾನ ನಿಲ್ದಾಣದ ಅಗತ್ಯವಿದೆ ಎಂದು ಅಂದಾಜು ಮಾಡಲಾಗಿದೆ.
ಈ ಕುರಿತು ಮಾತನಾಡಿದ ಸಚಿವ ಎಂ.ಬಿ ಪಾಟೀಲ್ ಹೊಸ ವಿಮಾನ ನಿಲ್ದಾಣದ ಕಾರ್ಯಾಚರಣೆ ಆರಂಭಿಸಲು ಆರರಿಂದ ಏಳು ವರ್ಷಗಳು ಬೇಕಾಗುತ್ತದೆ. ಆದ್ದರಿಂದ ನಾವು ಈಗಿನಿಂದಲೇ ಈ ಪ್ರಸ್ತಾವನೆಯನ್ನು ಮುಂದಿಟ್ಟಿದ್ದೇವೆ ಎಂದು ಹೇಳಿದರು.ಅಲ್ಲದೆ ಸಚಿವ ರಾಮಮೋಹನ್ ನಾಯ್ಡು ಅವರೊಂದಿಗೆ ಈ ಪ್ರಸ್ತಾವನೆಯನ್ನು ಚರ್ಚಿಸುವ ಮೊದಲು ಮತ್ತು ಮುಂಬೈನಲ್ಲಿ ನಿರ್ಮಾಣ ಹಂತದಲ್ಲಿರುವ ವಿಮಾನ ನಿಲ್ದಾಣಗಳ ಪ್ರಗತಿಯನ್ನು ಪರಿಶೀಲಿಸುವುದಾಗಿ ಅವರು ಮಾಹಿತಿಯನ್ನು ತಿಳಿಸಿದ್ದಾರೆ.
ಬೆಂಗಳೂರು ಎರಡನೇ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಸಂಬಂಧಿಸಿದಂತೆ ಮೊದಲಿಗೆ ಐದು ಜಾಗಗಳನ್ನು ಗುರುತಿಸಿ ರಾಜ್ಯ ಸರ್ಕಾಕ್ಕೆ ಕಾರ್ಯಸಾಧ್ಯತೆಗಾಗಿ ಪ್ರಸ್ತಾವನೆಯನ್ನು ಸಲ್ಲಿಕೆ ಮಾಡಲಾಗಿತ್ತು. ಅವುಗಳಲ್ಲಿ ತುಮಕೂರು, ನೆಲಮಂಗಲ, ಬಿಡದಿ, ಹೇರೋಹಳ್ಳಿ, ಜಿಗಣಿ ಹಾಗೂ ಕುಣಿಗಲ್‌ನ ಯಾವುದಾದರೂ ಒಂದು ಪ್ರದೇಶದಲ್ಲಿ ವಿಮಾನ ನಿಲ್ದಾಣ ನಿರ್ಮಾಣ ಮಾಡುವುದಕ್ಕೆ ಚರ್ಚೆ ನಡೆದಿತ್ತು. ಅದರಲ್ಲಿ ರಾಜ್ಯ ಸರ್ಕಾರ 3 ಸ್ಥಳಗಳು ಮಾತ್ರ ಫೈನಲ್ ಮಾಡಿ ಕೇಂದ್ರ ಸರ್ಕಾರಕ್ಕೆ ರಾಜ್ಯ ಸರ್ಕಾರ ಪ್ರಸ್ತಾಪವನ್ನು ಕಳುಹಿಸಲಾಗಿತ್ತು. ನಂತರ ಕನಕಪುರ ರಸ್ತೆ ಹಾರೋಹಳ್ಳಿ ಬಳಿ ಎರಡು ಸ್ಥಳಗಳು ಮತ್ತು ನೆಲಮಂಗಲದ ಕುಣಿಗಲ್ ರಸ್ತೆಯ ಒಂದು ಸ್ಥಳ. ಈ ಸ್ಥಳಗಳನ್ನು ಸೂಕ್ತ ಪರಿಶೀಲನೆ ಮತ್ತು ಅನುಮೋದನೆಗಾಗಿ ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಸ್ಥಳ ಯಾವುದು ಅಂದರೆ ಕನಕಪುರ ರಸ್ತೆಯಲ್ಲಿರುವ ಚೂಡಹಳ್ಳಿ ಮತ್ತು ಸೋಮನಹಳ್ಳಿ, ನೆಲಮಂಗಲ-ಕುಣಿಗಲ್ ರಸ್ತೆಯೊಂದಿಗೆ ಬೆಂಗಳೂರಿನ ಎರಡನೇ ವಿಮಾನ ನಿಲ್ದಾಣಕ್ಕೆ ಮೂರು ಸ್ಥಳಗಳನ್ನು ಆಯ್ಕೆ ಮಾಡಲಾಗಿದೆ ಎಂದು ರಾಜ್ಯ ಸರ್ಕಾರ ಮಾರ್ಚ್ 5 ರಂದು ಕೇಂದ್ರ ನಾಗರಿಕ ವಿಮಾನಯಾನ ಸಚಿವಾಲಯಕ್ಕೆ ಬರೆದ ಪತ್ರದಲ್ಲಿ ಪೂರ್ವ-ಕಾರ್ಯಸಾಧ್ಯತಾ ಅಧ್ಯಯನಕ್ಕಾಗಿ ಈ ಸ್ಥಳಗಳನ್ನು ಪ್ರಸ್ತಾಪಿಸಿದೆ ಎಂದು ವರದಿಗಳು ಸಹ ಆಗಿದ್ದವು.
ಪ್ರಸ್ತಾವನೆಯ ಪ್ರಕಾರ ವಿಮಾನ ನಿಲ್ದಾಣದ ಸ್ಥಳ ಕನಕಪುರ ರಸ್ತೆಯ ಎರಡು ಸ್ಥಳ ಮತ್ತು ನೆಲಮಂಗಲ-ಕುಣಿಗಲ್ ನಡುವಿನ ರಸ್ತೆಯಲ್ಲಿ ಒಂದು ಜಾಗವನ್ನು ರಾಜ್ಯ ಸರ್ಕಾರ ಅಂತಿಮಗೊಳಿಸಿದೆ. ಕನಕಪುರ ರಸ್ತೆಯ ಒಂದು ಜಾಗ 4,800 ಎಕರೆ ಇದ್ದರೆ ಇನ್ನೊಂದು ಜಾಗ 5,000 ಎಕರೆ ಇದೆ ನೆಲಮಂಗಲ-ಕುಣಿಗಲ್ ರಸ್ತೆಯಲ್ಲಿರುವ ಜಾಗ 5,200 ಎಕರೆ ಇದೆ.ಅದರೆ ಎಲ್ಲಿ ವಿಮಾಣ ನಿಲ್ದಾಣ ಮಾಡಬೇಕು ಎಂಬ ಕುತೂಹಲ ಕೂಡ ಇತ್ತು. ಇದೆಲ್ಲಾ ಆದರ ಒಂದು ತಿಂಗಳಿಗೆ ಕೇಂದ್ರದಿಂದ ಮೂಲಸೌಕರ್ಯ ಕಾರ್ಯಸಾಧ್ಯತಾ ವರದಿಗಾಗಿ ಅಧಿಕಾರಿಗಳು ಸಹ ಭೇಟಿ ನೀಡಿ ಪರಿಶೀಲನೆಯನ್ನು ಮಾಡಿದ್ದರು ಆದರೆ ಅಂತಿಮವಾಗಿ ಎಲ್ಲಿ ವಿಮಾನ ನಿಲ್ದಾಣ ನಿರ್ಮಾಣ ವಾಗುತ್ತೆ ಎಂಬುವುದನ್ನು ಬಹಿರಂಗಪಡಿಸಿಲ್ಲ. ಆದರೆ ಇನ್ನೂ ವಿಮಾನ ನಿಲ್ದಾಣ ಪ್ರಾಧಿಕಾರ ಪ್ರಸ್ತಾವನೆಯ ವರದಿಗೆ ಅನುಮತಿಯನ್ನು ಕೊಟ್ಟಿಲ್ಲ.
ಒಟ್ಟಾರೆಯಾಗಿ, ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣದ ನಿರ್ಮಾಣ ವಿಳಂಬವನ್ನು ಎದುರಿಸುತ್ತಲೇ ಇದೆ.
ರಾಜ್ಯ ಸರ್ಕಾರವು ಕೇಂದ್ರದೊಂದಿಗೆ ಮಾತುಕತೆ ನಡೆಸಿ, ಭೂಸ್ವಾಧೀನದ ಸಮಸ್ಯೆಗಳನ್ನು ಪರಿಹರಿಸಿ ತ್ವರಿತವಾಗಿ ಕ್ರಮ ಕೈಗೊಳ್ಳಬೇಕಿದೆ. ಸ್ಥಳ ಇನ್ನೂ ಅಂತಿಮ ಆfದ ಕಾರಣ ಎಲ್ಲಿ ವಿಮಾಣ ನಿಲ್ದಾಣ ನಿರ್ಮಾಣವಾಗುವುದು ಎಂಬುದನ್ನು ಇನ್ನೂ ಕೆಲಕಾಲ ಕಾಉಬೇಕಿದೆ.


Click it and Unblock the Notifications