ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಕಾಲ್ತುಳಿತ ದುರಂತ ಉಂಟಾಗಿ 11 ಮಂದಿ ಸಾವನ್ನಪ್ಪಿದ್ದರು. ಈ ಮೃತರ ಕುಟುಂಬಕ್ಕೆ ತಲಾ 10 ಲಕ್ಷ ಪರಿಹಾರ ನೀಡುವುದಾಗಿ ಸಿಎಂ ಸಿದ್ಧರಾಮಯ್ಯ ಘೋಷಿಸಿದ್ದರು. ಈ ಪರಿಹಾರದ ಮೊತ್ತವನ್ನು ಪರಿಷ್ಕರಿಸಿರುವಂತ ಸಿಎಂ ತಲಾ 25 ಲಕ್ಷ ನೀಡುವುದಾಗಿ ಘೋಷಿಸಿದ್ದಾರೆ.
ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ತಿಳಿಸಿರುವ ಸಿಎಂ ಸಿದ್ದರಾಮಯ್ಯನವರು ಈ ದುರಂತದಲ್ಲಿ ಮೃತರಾದವರ ಕುಟುಂಬಗಳಿಗೆ ಘೋಷಿಸಿದ್ದ ಪರಿಹಾರವನ್ನು ತಲಾ 25 ಲಕ್ಷ ರೂ.ಗಳಿಗೆ ಹೆಚ್ಚಿಸಿಸುವಂತೆ ಆದೇಶವನ್ನು ಹೊರಡಿಸಿದ್ದಾರೆ.

ಜೂನ್ 4, 2025 ರಂದು ಐಪಿಎಲ್ ವಿಜಯೋತ್ಸವದ ಮೆರವಣಿಗೆಗಾಗಿ 2 ರಿಂದ 3 ಲಕ್ಷ ಅಭಿಮಾನಿಗಳು ಬಂದರಿದ್ದಾರೆ ನೂಕುನುಗ್ಗಲು ಶುರುವಾಗಿ ಕಾಲ್ತುಳಿತ ಸಂಭವಿಸಿತು, ಇದು ಕ್ರೀಡಾಂಗಣದ 35,000 ಸಾಮರ್ಥ್ಯವನ್ನು ಮೀರಿತ್ತು. ಜನದಟ್ಟಣೆ ಮತ್ತು ಅವ್ಯವಸ್ಥೆ ಉಂಟಾಗಿ 11 ಜನರು ಸಾವನ್ನಪ್ಪಿದರು ಮತ್ತು 33 ಜನರು ಗಾಯಗೊಂಡರು. ಇದಕ್ಕೆ ಪ್ರತಿಕ್ರಿಯೆಯಾಗಿ, ರಾಜ್ಯ ಸರ್ಕಾರವು ಘಟನೆಯ ಬಗ್ಗೆ ಮ್ಯಾಜಿಸ್ಟೀರಿಯಲ್ ತನಿಖೆಗೆ ಆದೇಶಿಸಿದೆ ಮತ್ತು ಗಾಯಾಳುಗಳಿಗೆ ಉಚಿತ ವೈದ್ಯಕೀಯ ಚಿಕಿತ್ಸೆ ನೀಡುತ್ತದೆ.ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡ ಕೂಡ ಮೃತ ಕುಟಂಬಗಳಿಗೆ ಅಧಿಕೃತವಾಗಿ ತಲಾ 10 ಲಕ್ಷ ರೂ. ಪರಿಹಾರ ಘೋಷಿಸಿದೆ. ಗಾಯಾಳುಗಳಿಗೆ 'ಆರ್‌ಸಿಬಿ ಕೇರ್ಸ್' ನಿಧಿ ಪ್ರಾರಂಭಿಸಿದೆ. ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್ (KSCA) ತಲಾ 5 ಲಕ್ಷ ರೂ. ಪರಿಹಾರ ಘೋಷಣೆಯನ್ನು ಮಾಡಿದೆ.
ಆರ್‌ಸಿಬಿ ವಿಜಯೋತ್ಸವದಲ್ಲಿ ಆಗಿದ್ಧೇನು..?
ಐಪಿಎಲ್ 18ನೇ ಸೀಸನ್‌ನಲ್ಲಿ ಆರ್‌ಸಿಬಿ ಐಪಿಎಲ್ ಟ್ರೋಫಿ ಗೆಲುವು ಮೂಲಕ 17 ವರ್ಷದ ಕನಸನ್ನು ನನಸು ಮಾಡಿತ್ತು. ಇದನ್ನು ಸಂಭ್ರದಲದಲಿ ಆಚರಣೆ ಮಾಡಲು ಜೂನ್ 4 ರಂದು ಆರ್‌ಸಿಬಿ ವಿಜಯೋತ್ಸವ ಮೆರವಣಿಗೆಯನ್ನು ಬೆಂಗಳೂರಿನಲ್ಲಿ ಹಮ್ಮಿಕೊಳ್ಳಲಾಗಿತ್ತು. ಆದರೆ ಅಲ್ಲಿ ನಡೆದಿದ್ದೇ ಬೇರೆ.
ಅಂದು ಚಿನ್ನಸ್ವಾಮಿ ಕ್ರೀಡಾಂಗಣದ ಹೊರಗೆ ಲಕ್ಷಾಂತರ ಆರ್‌ಸಿಬಿ ಅಭಿಮಾನಿಗಳು ಮತ್ತು ಬೆಂಬಲಿಗರು ದಂಡು ಇತ್ತು. ಸ್ಥಳೀಯ ಭದ್ರತೆ ಮತ್ತು ಮೂಲಸೌಕರ್ಯಗಳಿಗೆ ಇದನ್ನು ನಿಭಾಯಿಸಲು ತುಂಬಾ ಕಷ್ಟವಾಗಿತ್ತು. ಬೆಂಗಳೂರಿನಲ್ಲಿ ನಡೆದ ಕಾಲ್ತುಳಿತವು ಕಾರ್ಯಕ್ರಮದ ಸುರಕ್ಷತೆ ಮತ್ತು ಜನಸಂದಣಿ ನಿಯಂತ್ರಣದ ಬಗ್ಗೆ ಗಂಭೀರ ಪ್ರಶ್ನೆಗಳನ್ನು ಹುಟ್ಟುಹಾಕಿದೆ. ಹತ್ತಿರದ ಮೆಟ್ರೋ ನಿಲ್ದಾಣಗಳನ್ನು ಮುಚ್ಚುವುದು ಅವ್ಯವಸ್ಥೆಗೆ ಕಾರಣವಾಗಿದೆ ಎಂದು ಸೂಚಿಸುವ ಕೆಲವು ವರದಿಗಳು ಸಹ ಆಗಿದ್ದೇವೆ. ಈ ದುರಂತವು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಯಿತು ಮತ್ತು ಬೆಂಗಳೂರಿನಲ್ಲಿ ದೊಡ್ಡ ಸಾರ್ವಜನಿಕ ಸಭೆಗಳಿಗೆ ಕಠಿಣ ಸುರಕ್ಷತಾ ಪ್ರೋಟೋಕಾಲ್‌ಗಳ ಬೇಡಿಕೆಗಳಿಗೆ ಕಾರಣವಾಯಿತು ಎಂದು ಕೂಡ ಹೇಳಿದ್ಧಾರೆ.
ಯಾವುದೇ ಪೂರ್ವಯೋಚಿತ ಯೋಜನೆ ಇಲ್ಲದೇ ಕಾರ್ಯಕ್ರವನ್ನು ಆಯೋಜನೆಯನ್ನು ಮಾಡಬಾರದಿತ್ತು ಎಂದು ಕೂಡ ಸರ್ಕಾರಕ್ಕೆ ಟೀಕೆಯನ್ನು ಸಹ ಮಾಡಿದ್ದಾರೆ. ಇದರ ಜೊತೆಗೆ ಪೊಲೀಸ್ ಪಡೆ ಜನಸಂಖ್ಯೆಯನ್ನು ನಿರ್ವಹಣೆ ಮಾಡಲು ವಿಫಲವಾಗಿತ್ತು. ಇನ್ನೂ ಹೆಚ್ಚಿನ ಕ್ರಮಗಳನ್ನು ತಗೆದುಕೊಂಡಿದ್ದರೆ ಹನ್ನೋಂದು ಮಂದಿಯ ಜೀವ ಉಳಿಯುತ್ತಿತ್ತು.
ಮೃತರ ಕುಟುಂಬಕ್ಕೆ ಘೋಷಿಸಿರುವ ಪರಿಹಾರಗಳೇನು?
ಸಿಎಂ ಸಿದ್ದರಾಮಯ್ಯ ಅವರು ಘಟನೆಯ ತನಿಖೆಗೆ ಆದೇಶಿಸಿದ್ದಾರೆ ಜೊತೆಗೆ ಸರ್ಕಾರಿ ಪರಿಹಾರವನ್ನು ಭರವಸೆಯನ್ನು ಸಹ ನೀಡಿದ್ದಾರೆ.ಮೃತರ ಕುಟುಂಬಗಳಿಗೆ ತಲಾ 10 ಲಕ್ಷ ರೂ. ಪರಿಹಾರವನ್ನು ಸರ್ಕಾರ ನೀಡುವುದಾಗಿ ಘೋಷಣೆಯನ್ನು ಮಾಡಿದೆ. ಇದೀಗ 25ಲಕ್ಷಕ್ಕೆ ಹೆಚ್ಚಳ ಮಾಡಲು ಆದೇಶವನ್ನು ಹೊರಡಿಸಲಾಗಿದೆ. ಆರ್‌ಸಿಬಿ ತಂಡ ಕೂಡ 10 ಲಕ್ಷ ಪರಿಹಾರವನ್ನು ನೀಡಿದ್ಧಾರೆ. ಗಾಯಾಳುಗಳಿಗೆ ಕರ್ನಾಟಕ ಸರ್ಕಾರ ಉಚಿತ ವೈದ್ಯಕೀಯ ಆರೈಕೆಯನ್ನು ಸಹ ನೀಡುತ್ತದೆ. ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ (ಕೆಎಸ್‌ಸಿಎ) ಕೂಡ ಮೃತ ಕುಟುಂಬಕ್ಕೆ 5 ಲಕ್ಷ ರೂ.ಗಳನ್ನು ನೀಡುವುದಾಗಿ ಹೇಳಿಕೆಯನ್ನು ನೀಡಿದೆ.


Click it and Unblock the Notifications