ಬೆಂಗಳೂರು, ಆಗಸ್ಟ್ 21: 'ನಮ್ಮ ಮೆಟ್ರೋ'ದ ಬಹುನಿರೀಕ್ಷಿತ ಮೂರನೇ ಹಂತದ ಯೋಜನೆಗೆ ಕೇಂದ್ರ ಸರಕಾರವು ಅನುಮೋದನೆ ನೀಡಿದೆ. ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ಶುಕ್ರವಾರದಂದು ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಹಸಿರು ನಿಶಾನೆ ತೋರಿಸಿದೆ. ಸದ್ಯದ ಪ್ಲ್ಯಾನ್ ಪ್ರಕಾರ ಹೊಸದಾಗಿ ಎರಡು ಕಾರಿಡಾರ್‌ಗಳಲ್ಲಿ 44.65 ಕಿ.ಮೀ. ಉದ್ದದ ಮೆಟ್ರೋ ಮಾರ್ಗ ನಿರ್ಮಾಣವಾಗಲಿದೆ.
ನಮ್ಮ ಮೆಟ್ರೋದ 3 ನೇ ಹಂತವನ್ನು ರೂ.15,611 ಕೋಟಿ ಅಂದಾಜು ವೆಚ್ಚದಲ್ಲಿ ನಿರ್ಮಿಸಲಾಗುವುದು. ಕೇಂದ್ರ ಮತ್ತು ರಾಜ್ಯ ಸರ್ಕಾರಗಳ 20% ಈಕ್ವಿಟಿ ಭಾಗವಹಿಸುವಿಕೆ ಜೊತೆಗೆ, ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಷನ್ ಲಿಮಿಟೆಡ್ (BMRCL) ಜಪಾನ್ ಇಂಟರ್ನ್ಯಾಷನಲ್ ಕೋಆಪರೇಷನ್ ಏಜೆನ್ಸಿ (JICA) ನಿಂದ 7000 ಕೋಟಿ ರೂ.ಗಿಂತ ಹೆಚ್ಚಿನ ಸಾಲವನ್ನು ಪಡೆಯುವ ನಿರೀಕ್ಷೆಯಿದೆ. ಒಮ್ಮೆ ನಮ್ಮ ಮೆಟ್ರೋದ ಹಂತ-3 ಕಾರ್ಯಾರಂಭಗೊಂಡರೆ, ಬೆಂಗಳೂರು ಸರಿಸುಮಾರು 220.20 ಕಿಮೀ ಸಕ್ರಿಯ ಮೆಟ್ರೋ ರೈಲು ಜಾಲವನ್ನು ಹೊಂದಿರುತ್ತದೆ. ರೆಡ್ ಲೈನ್‌ನ 36.59 ಕಿಮೀ ವ್ಯಾಪ್ತಿಯನ್ನು ಒಳಗೊಂಡಿರುವ ಹಂತ 3ಎ ಗಾಗಿ ವಿವರವಾದ ಯೋಜನಾ ವರದಿ (ಡಿಪಿಆರ್) ಪ್ರಸ್ತುತ ರಾಜ್ಯ ಸರ್ಕಾರದ ಅನುಮೋದನೆಗೆ ಕಾಯುತ್ತಿದೆ.

ಎಲ್ಲಿಂದ ಎಲ್ಲಿವರೆಗೆ ಮೆಟ್ರೋ ಮಾರ್ಗ?
31 ನಿಲ್ದಾಣಗಳುಳ್ಳ 44.65 ಕಿಮೀ ಉದ್ದದ ಎರಡು ಎಲಿವೇಟೆಡ್ ಕಾರಿಡಾರ್‌ಗಳನ್ನು ಈ ಯೋಜನೆ ಹೊಂದಿದ್ದು ಮೆಟ್ರೋ 3ನೇ ಹಂತದ ಯೋಜನೆ ಸರ್ಜಾಪುರದಿಂದ ಹೆಬ್ಬಾಳದವರೆಗೆ 28 ಯೋಜಿತ ನಿಲ್ದಾಣವನ್ನು ಹೊಂದಲಿದೆ.
ಈ ಪೈಕಿ ಉದ್ದೇಶಿತ 1ನೇ ಕಾರಿಡಾರ್ ನಡಿ ಜೆ.ಪಿ.ನಗರ 4ನೇ ಹಂತದಿಂದ ಹೊರವರ್ತುಲ ರಸ್ತೆ ಮೂಲ ಹೆಬ್ಬಾಳದ ಕೆಂಪಾಪುರದವರೆಗೆ ಸಂಪರ್ಕ ನೀಡಲಿದ್ದು, ಇದು 32.15 ಕಿ.ಮೀ ಉದ್ದದ ಮೆಟ್ರೋ ಮಾರ್ಗವನ್ನು ಒಳಗೊಂಡಿರುತ್ತದೆ. ಈ ಮಾರ್ಗದಲ್ಲಿ ಒಟ್ಟು 21 ನಿಲ್ದಾಣಗಳನ್ನು ನಿರ್ಮಿಸಲು ಉದ್ದೇಶಿಸಲಾಗಿದೆ. 2 ಕಾರಿಡಾರ್ ಯೋಜನೆ ಹೊಸಹಳ್ಳಿಯಿಂದ ಕಡಬಗೆರೆವರೆಗೆ 9 ನಿಲ್ದಾಣಗಳೊಂದಿಗೆ ವಿಸ್ತರಿಸುತ್ತದೆ.
ಬೆಂಗಳೂರು ಉಪನಗರ ರೈಲು ಯೋಜನೆ
ಮೆಟ್ರೋ ವಿಸ್ತರಣೆಗೆ ಮಾತ್ರವಲ್ಲದೇ, ಇನ್ನೊಂದೆಡೆ ಕರ್ನಾಟಕ ರೈಲ್ ಇನ್ಫ್ರಾಸ್ಟ್ರಕ್ಚರ್ ಡೆವಲಪ್ಮೆಂಟ್ ಕಂಪನಿ ಲಿಮಿಟೆಡ್ (ಕೆ-ರೈಡ್)(ರೈಲು ಮೂಲಸೌಕರ್ಯ ಅಭಿವೃದ್ಧಿ ಕಂಪನಿ ನಿಯಮಿತ) ಬೆಂಗಳೂರು ಉಪನಗರ ರೈಲು ಯೋಜನೆಯೂ (ಬಿಎಸ್ಆರ್ಪಿ) ಮುಂದುವರಿದಿದೆ. ಈ ಯೋಜನೆಯು 2030 ರ ಅಂತ್ಯದ ವೇಳೆಗೆ ಪೂರ್ಣಗೊಳ್ಳುವ ನಿರೀಕ್ಷೆಯೊಂದಿಗೆ ನಾಲ್ಕು ಕಾರಿಡಾರ್‌ಗಳಲ್ಲಿ 147 ಕಿಲೋಮೀಟರ್‌ಗಿಂತಲೂ ಹೆಚ್ಚು ರೈಲುಮಾರ್ಗವನ್ನು ಒಳಗೊಂಡಿದೆ.
ಮೊದಲ ಹಂತದಲ್ಲಿ ಬೆನ್ನಿಗಾನಹಳ್ಳಿ (ಬೈಯಪ್ಪನಹಳ್ಳಿ), ಕಸ್ತೂರಿನಗರ, ಸೇವಾನಗರ, ಬಾಣಸವಾಡಿ, ನಾಗವಾರ, ಕನಕನಗರ, ಹೆಬ್ಬಾಳ, ಮತ್ತಿಕೆರೆ ನಿಲ್ದಾಣ ಹಾಗೂ ಎರಡನೇ ಹಂತದಲ್ಲಿ ಯಶವಂತಪುರ, ಶೆಟ್ಟಿಹಳ್ಳಿ, ಮೈದರಹಳ್ಳಿ ಮತ್ತು ಚಿಕ್ಕಬಾಣಾವರ ನಿಲ್ದಾಣಗಳ ನಿರ್ಮಾಣವಾಗಲಿದೆ. ಈಗಾಗಲೇ ಇದಕ್ಕೆ ಅಗತ್ಯ ಇರುವ ಭೂಸ್ವಾಧೀನ ಪ್ರಕ್ರಿಯೆ ಆರಂಭವಾಗಿದ್ದು, ಈ ಮಾರ್ಗದಲ್ಲಿರುವ ವಸತಿ, ವಾಣಿಜ್ಯ ಕಟ್ಟಡಗಳನ್ನು ಸಂಪೂರ್ಣ ಮತ್ತು ಭಾಗಶಃ ಸ್ವಾಧೀನಪಡಿಸಿಕೊಳ್ಳುವ ಕೆಲಸ ಆರಂಭವಾಗಿದೆ. ಈ ಯೋಜನೆಗೆ ವಿಶ್ವದ ಅತಿದೊಡ್ಡ ಬಹುಪಕ್ಷೀಯ ಹಣಕಾಸು ಸಂಸ್ಥೆಯಾದ ಬೆಂಗಳೂರು ಉಪನಗರ ರೈಲು ಯೋಜನೆಗೆ (ಬಿಎಸ್‌ಆರ್‌ಪಿ) ಯುರೋಪಿಯನ್ ಇನ್ವೆಸ್ಟ್‌ಮೆಂಟ್ ಬ್ಯಾಂಕ್ (ಯುರೋಪಿಯನ್ ಒಕ್ಕೂಟದ ಹೂಡಿಕೆ ಬ್ಯಾಂಕ್) 2693 ಕೋಟಿ ರೂ ಸಾಲ ನೀಡಲು ತನ್ನ ಒಪ್ಪಿಗೆ ನೀಡಿದೆ ಎಂದು ವರದಿಯಾಗಿದೆ.
ಮೆಟ್ರೋ ಮತ್ತು ಉಪನಗರ ರೈಲು ಯೋಜನೆಗಳೆರಡೂ ನಿಗದಿತ ಸಮಯಕ್ಕೆ ಪೂರ್ಣಗೊಂಡರೆ, ಬೆಂಗಳೂರು 2030 ರ ವೇಳೆಗೆ ಸುಮಾರು 400 ಕಿಲೋಮೀಟರ್ ರೈಲು ಆಧಾರಿತ ಸಾರ್ವಜನಿಕ ಸಾರಿಗೆ ಬೆಂಗಳೂರಿನ ಜನತೆಗೆ ಸಿಗಲಿದೆ.
More From GoodReturns

Egg Price Down: ಬೆಂಗಳೂರು ಮೊಟ್ಟೆ ಪ್ರಿಯರಿಗೆ ಗುಡ್ ನ್ಯೂಸ್; ಬೆಲೆ ಭಾರೀ ಇಳಿಕೆ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Bengaluru: ಬೆಂಗಳೂರು ಮೂಲಸೌಕರ್ಯ ಮತ್ತು ಸ್ಮಾರ್ಟ್ ಸಿಟಿ ಯೋಜನೆಗಳಿಗೆ 7000 ಕೋಟಿ ರೂ. ಹೂಡಿಕೆ!

High Speed Train: ಬೆಂಗಳೂರಿಗೆ ಮತ್ತೊಂದು ಹೈಸ್ಪೀಡ್ ರೈಲು! ಇನ್ಮೇಲೆ ಹೈದರಾಬಾದ್ಗೆ ಬರೀ 2 ಗಂಟೆ ಜರ್ನಿ

Bengaluru to Pune: ಈ ಯೋಜನೆಯಿಂದ ಬೆಂಗಳೂರು-ಪುಣೆ ಪ್ರಯಾಣ 7 ಗಂಟೆ ಮಾತ್ರ...ಹೊಸ ಹೆದ್ದಾರಿ ಯೋಜನೆ ವಿವರ!

Bengaluru-Mangaluru Flight: ಬೆಂಗಳೂರು-ಮಂಗಳೂರು ವಿಮಾನ ಪ್ರಯಾಣಿಕರಿಗೆ ಬಂಪರ್ ಸುದ್ದಿ! ಇನ್ಮೇಲೆ ತಡರಾತ್ರಿಯೂ ವಿಮಾನ ಸೇವೆ

Bengaluru Special Trains: ಮಾರ್ಚ್ 11 ರಿಂದ ಬೆಂಗಳೂರಿಗೆ ಬರಲಿದೆ ಮತ್ತೊಂದು ಸ್ಪೆಷಲ್ ರೈಲು! ಎಲ್ಲಿಂದ ಎಲ್ಲಿಗೆ?

Karnataka Budget 2026–27: ಬೆಂಗಳೂರು ಮೂಲಸೌಕರ್ಯ ಮತ್ತು ಕಲ್ಯಾಣ ಯೋಜನೆಗಳಿಗೆ ಒತ್ತು ಸಾಧ್ಯತೆ!

BMTC Bus: ಬೆಂಗಳೂರು-ರಾಮನಗರ ಮತ್ತು ಕನಕಪುರಕ್ಕೆ ಬಿಎಂಟಿಸಿ ಬಸ್… ಬಸ್ ನಿಲ್ದಾಣಗಳ ಬಗ್ಗೆ ತಿಳಿಯಿರಿ

Bengaluru Airport: ಬೆಂಗಳೂರು ಏರ್ಪೋರ್ಟ್ಗೆ 2025ರ ACI ಪ್ರಶಸ್ತಿ... ಪ್ರಯಾಣಿಕರ ಹೃದಯ ಗೆದ್ದ ವಿಮಾನ ನಿಲ್ದಾಣ!

Karnataka Weather: ರಾಜ್ಯದ ಜನರಿಗೆ ಬಿಸಿಲಿನ ಕಂಟಕ! ಹವಾಮಾನ ಇಲಾಖೆಯಿಂದ ಎಚ್ಚರಿಕೆ



Click it and Unblock the Notifications