ಬೆಂಗಳೂರು: ವಿವಿಧ ಬೇಡಿಕೆಗಳನ್ನು ಆಗ್ರಹಿಸಿ ಇಂದು ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ (Bengaluru Protest) ನಡೆಯಲಿದೆ. ಬೆಂಗಳೂರಿನ ಶೇಷಾದ್ರಿ ರಸ್ತೆಯ ಸ್ವಾತಂತ್ರ್ಯ ಉದ್ಯಾನ ಅಥವಾ ಫ್ರೀಡಂ ಪಾರ್ಕ್‌ನಲ್ಲಿ ಇಂದು ಬೃಹತ್ ಪ್ರತಿಭಟನೆ ಹಿನ್ನೆಲೆ ಸಂಚಾರ ದಟ್ಟಣೆ ಉಂಟಾಗುವ ನಿರೀಕ್ಷೆಯಿದೆ. ಆದ್ದರಿಂದ ಶೇಷಾದ್ರಿ ರಸ್ತೆಯ ಮೂಲಕ ಹಲವರು ವಾಹನಗಳಲ್ಲಿ, ನಡೆದುಕೊಂಡು ಹೋಗುವವರು ಹೆಚ್ಚಾಗಿರುವುದರಿಂದ, ಇಂದು ಫ್ರೀಡಂ ಪಾರ್ಕ್ (Freedom Park) ಸುತ್ತ ಮುತ್ತ ಟ್ರಾಫಿಕ್ ಜಾಮ್ ಆಗುವ ಸಾಧ್ಯತೆ ಹೆಚ್ಚಿದೆ. ಈ ಹಿನ್ನೆಲೆ ಫ್ರೀಡಂ ಪಾರ್ಕ್ ಸುತ್ತ ಮುತ್ತಲಿನ ಮಾರ್ಗವನ್ನು ಬಂದ್ ಮಾಡಲಾಗಿದ್ದು, ಅದಕ್ಕಾಗಿ ಪರ್ಯಾಯ ಮಾರ್ಗಗಳನ್ನೂ ಬಳಸುವಂತೆ ಸೂಚನೆ ನೀಡಲಾಗಿದೆ. ಇನ್ನು ಸಂಚಾರ ಬದಲಾವಣೆ ಪ್ರಕಟಣೆ ಹೊರಡಿಸಿ, ಸಹಕರಿಸುವಂತೆ ಬೆಂಗಳೂರು ಪೊಲೀಸರು ಮನವಿ ಮಾಡಿದ್ದಾರೆ.

ಎಲ್ಲೆಲ್ಲಿ ಸಂಚಾರ ನಿರ್ಬಂಧ ಮತ್ತು ಪರ್ಯಾಯ ಮಾರ್ಗಗಳ ವಿವರ:
ಇನ್ನು ಈ ಸಂಚಾರ ನಿರ್ಬಂಧದ ಬಗ್ಗೆ ಪೊಲೀಸರು ಪೋಸ್ಟ್ ಮಾಡಿದ್ದಯ, ಇದರಲ್ಲಿ ಶಾಂತಲಾ ಜಂಕ್ಷನ್, ಖೋಡ್ ಸರ್ಕಲ್‌ನಿಂದ ಆನಂದ ರಾವ್ ಫ್ಲೈಓವರ್, ಓಲ್ಡ್ ಜೆಡಿಎಸ್ ಕಚೇರಿ ಕ್ರಾಸ್, ಶೇಷಾದ್ರಿ ರಸ್ತೆಯಿಂದ ಫ್ರೀಡಂ ಪಾರ್ಕ್‌ವರೆಗೂ ನಿರ್ಬಂಧ ವಿಧಿಸಿ, ಬದಲಿ ಮಾರ್ಗ ಬಳಸುವಂತೆ ಸೂಚನೆ ನೀಡಲಾಗಿದೆ.
ಪರ್ಯಾಯ ಮಾರ್ಗಗಳು:
ಲುಲು ಮಾಲ್, ಕೆಎಫ್‌ಎಂ, ರಾಜೀವ್ ಗಾಂಧಿ ಸರ್ಕಲ್, ಮಂತ್ರಿ ಮಾಲ್, ಸ್ವಸ್ತಿಕ್ ಸರ್ಕಲ್, ಶೇಷಾದ್ರಿಪುರಂ, ನೆಹರು ಸರ್ಕಲ್, ರೇಸ್ ಕೋರ್ಸ್ ಫ್ಲೈ ಓವರ್, ರೇಸ್ ಕೋರ್ಸ್ ರೋಡ್ ಅನ್ನು ಪರ್ಯಾಯವಾಗಿ ಬಳಸುವಂತೆ ಸೂಚನೆ ನೀಡಲಾಗಿದೆ.
ಮೈಸೂರು ಬ್ಯಾಂಕ್ ಕಡೆಯಿಂದ ಚಾಲುಕ್ಯ ಸರ್ಕಲ್ ಕಡೆಗೆ:
ಕೆ.ಜಿ ರಸ್ತೆ, ಮೈಸೂರು ಬ್ಯಾಂಕ್ ಜಂಕ್ಷನ್, ಸಾಗರ್ ಜಂಕ್ಷನ್, ಕೆ.ಜಿ ಜಂಕ್ಷನ್, ಎಲೈಟ್, ಟಿಬಿ ರೋಡ್, ಕೆ.ಎಫ್.ಎಂ, ರಾಜೀವ್ ಗಾಂಧಿ ಸರ್ಕಲ್, ಸ್ವಸ್ತಿಕ್, ನೆಹರು ಸರ್ಕಲ್, ರೇಸ್ ಕೋರ್ಸ್ ಫ್ಲೈ ಓವರ್ ರೋಡ್ ಮೂಲಕ ಸಂಚಾರ ಮಾಡಬಹುದು.
ಚಾಲುಕ್ಯ ಸರ್ಕಲ್‌ನಿಂದ ಮೈಸೂರು ಬ್ಯಾಂಕ್ ಕಡೆಗೆ ಹೋಗುವವರಿಗೆ ಪರ್ಯಾಯ ಮಾರ್ಗ ನೀಡಲಾಗಿದ್ದು, ಚಾಲುಕ್ಯ ಸರ್ಕಲ್, ಎಲ್‌ಆರ್‌ಡಿ, ರಾಜಭವನ ರಡ್, ಇನ್ ಪೆಂಟ್ರಿ ರಸ್ತೆ, ಇಂಡಿಯನ್ ಎಕ್ಸ್‌ಪ್ರಸ್‌ನಿಂದ ಸಂಚಾರ ಮಾಡಬಹುದು.
ಕಾಳಿದಾಸ ರಸ್ತೆ ಕನಕದಾಸ ಜಂಕ್ಷನ್ ಕಡೆಯಿಂದ ಫ್ರೀಡಂ ಪಾರ್ಕ್‌ವರೆಗೆ ಹೋಗುವವು ಕನಕದಾಸ ಜಂಕ್ಷನ್ ಬಲ ತಿರುವು ಪಡೆದು ಸಾಗರ ಜಂಕ್ಷನ್ ಕಡೆಗೆ ಸಂಚರಿಸಬಹುದು.
ಮೌರ್ಯ/ ಸುಬ್ಬಣ್ಣ ಜಂಕ್ಷನ್‌ನಿಂದ ಫ್ರೀಡಂ ಪಾರ್ಕ್‌ವರೆಗೆ ಹೋಗುವವರು ಸುಬ್ಬಣ್ಣ ಜಂಕ್ಷನ್‌ನಿಂದ ಬಲಕ್ಕೆ ತೆಗೆದುಕೊಂಡು ಆನಂದ್ ರಾವ್ ಸರ್ಕಲ್ ಕಡೆಗೆ ಸಾಗಬಹುದು. ಈ ಪ್ರಕಟಣೆ ಹೊರಡಿಸಿ ಪೊಲೀಸ್ ಇಲಾಖೆ ಸಾರ್ವಜನಿಕರಿಗೆ ಸಹಕರಿಸುವಂತೆ ಮನವಿ ಮಾಡಿದೆ.
ಸಾಮಾನ್ಯವಾಗಿ ಫ್ರೀಡಂ ಪಾರ್ಕ್ ಸುತ್ತಮುತ್ತಲು ಜನಸಂದಣಿ ಇರುತ್ತದೆ. ಆದರೆ ಫ್ರೀಡಂ ಪಾರ್ಕ್ ಸುತ್ತಮುತ್ತಲ ರಸ್ತೆಗಳಲ್ಲಿ ಹೆಚ್ಚಿನ ಜನಸಂದಣಿ ಇರುವುದರಿಂದ ಪೊಲೀಸ್ ಇಲಾಖೆ ಈ ಕ್ರಮ ಕೈಗೊಳ್ಳಲಾಗಿದೆ. ಆದ್ದರಿಂ ಇಂದು ಪ್ರತಿಭಟನೆ ಕೈಗೊಂಡಿರುವುದರಿಂದ, ಫ್ರೀಡಂ ಪಾರ್ಕ್ ಸುತ್ತಮುತ್ತಲು ಟ್ರಾಫಿಕ್ ಜಾಮ್ ಉಂಟಾಗುವ ಸಾಧ್ಯತೆ ಇದೆ. ಆದ್ದರಿಂದ ಈ ರಸ್ತೆಗಳನ್ನು ತಪ್ಪಿಸಿ ಪರ್ಯಾಯ ಮಾರ್ಗಗಳನ್ನು ಬಳಸುವಂತೆ, ಪೊಲೀಸ್ ಇಲಾಖೆಯೊಂದಿಗೆ ಸಹಕರಿಸುವಂತೆ ಸಲಹೆ ನೀಡಲಾಗಿದೆ.


Click it and Unblock the Notifications