ಬೆಂಗಳೂರಿನ ಕೆಲವು ಭಾಗಗಳಲ್ಲಿ ಸೋಮವಾರ ಸಂಜೆ ಗುಡುಗು ಸಹಿತ ಹಗುರದಿಂದ ಮಳಯಾಗಿದೆ. ಇಂದು ಸಹ ಮಳೆಯ ವಾತವರಣ ಮುಂದುವರೆದಿದ್ದು, ಬೆಳ್ಳೆಂ ಬೆಳ್ಳಗ್ಗೆ ಬೆಂಗಳೂರಿನಲ್ಲಿ ಮೋಡ ಕವಿದ ವಾತವರಣವಿದೆ. ಇಂದು ಕೂಡ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹಮಾಮಾನ ಇಲಾಖೆ ಸೂಚನೆಯನ್ನು ಕೊಟ್ಟಿದೆ.
ಹೌದು, ಮುಂದಿನ ಎರಡು ದಿನಗಳ ಕಾಲ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣವಿರಲಿದ್ದು, ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದ್ದು, ಗಂಟೆಗೆ 30 ರಿಂದ 40 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ.

ಮುಂದಿನ ವಾರ ರಾಜ್ಯದ ವಿವಿಧ ಭಾಗಗಳಲ್ಲಿ 40-50 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದ್ದು,ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತ ಹವಾಮಾನ ಇಲಾಖೆ (ಐಎಂಡಿ) 18 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ(Yellow Alert) ಮಾಡಿದೆ.
ಆಂಧ್ರಪ್ರದೇಶದ ಕರಾವಳಿ ಮಧ್ಯ ಭಾಗಗಳು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ, ಸಮುದ್ರ ಮಟ್ಟದಿಂದ 0.9ಕಿ.ಮೀ ಎತ್ತರದಲ್ಲಿ ಮೇಲ್ಮಟ್ಟದ ವಾಯು ಚಂಡಮಾರುತದ ಪ್ರಸರಣವಿದ್ದು, ಇದರ ಪರಿಣಾಮವಾಗಿ, ರಾಜ್ಯದ ಹಲವು ಭಾಗಗಳಲ್ಲಿ ಮಳೆ ಮುಂದುವರಿಯುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ.
ಯಾವೆಲ್ಲಾ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್?
ರಾಯಚೂರು, ಕೊಪ್ಪಳ, ಗದಗ, ಧಾರವಾಡ, ಹಾವೇರಿ, ದಾವಣಗೆರೆ, ಶಿವಮೊಗ್ಗ, ಚಿತ್ರದುರ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು ನಗರ, ತುಮಕೂರು ಮತ್ತು ಕೋಲಾರದಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಇಂದು
ವಿವಿಧೆಡೆಯಲ್ಲಿ ಮಳೆ
ಹವಾಮಾನ ಇಲಾಖೆಯ ಸೂಚನೆಯ ಪ್ರಕಾರ ಇಂದು ಕೆಲವು ಜಿಲ್ಲೆಗಳಲ್ಲಿ ಭಾರೀ ಗಾಳಿಯೊಂದಿಗೆ ಮಳೆಯಾಗುವ ಸಾಧ್ಯತೆಯಿದೆ. ಮಂಗಳವಾರವೂ ಬೆಂಗಳೂರು ನಗರ ಸೇರಿದಂತೆ 15 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದ್ದು.
ದಕ್ಷಿಣ ಒಳನಾಡಿನ ಹೆಚ್ಚಿನ ಪ್ರದೇಶಗಳಲ್ಲಿ ಮಳೆಯಾಗುವ ನಿರೀಕ್ಷೆಯಿದೆ.
ಮುಂದಿನ ವಾರ ಎಲ್ಲಿಲ್ಲೆ ಮಳೆ?
ಮುಂದಿನ ವಾರ ಕರಾವಳಿ ಮತ್ತು ಉತ್ತರ ಒಳನಾಡಿನ ಕರ್ನಾಟಕದ ಹೆಚ್ಚಿನ ಜಿಲ್ಲೆಗಳಲ್ಲಿ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ಕಲಬುರಗಿ, ಯಾದಗಿರಿ ಮತ್ತು ಬೀದರ್‌ನಲ್ಲಿ ಒಣ ಹವಾಮಾನದ ನಿರೀಕ್ಷೆಯಿದೆ ಎಂದು ಐಎಂಡಿ ತಿಳಿಸಿದೆ.
ಬೆಂಗಳೂರಿನ ಹವಾಮಾನ ಕೇಂದ್ರದ ಮುಖ್ಯಸ್ಥರಾದ ಎನ್. ಪುವಿಯರಸನ್, ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 34°C ಮತ್ತು 21°C ಇರುವ ಸಾಧ್ಯತೆಯಿದೆ ಎಂದು ಹೇಳಿದ್ದಾರೆ . ಪ್ರಸ್ತುತ ಮಳೆಯು ಪೂರ್ವ ಮಾನ್ಸೂನ್ ಮಳೆಯ ಭಾಗವಾಗಿದ್ದು, ಇದು ವಿರಳವಾಗಿ ಗುಡುಗು ಸಹಿತ ಮಳೆಯಾಗುತ್ತದೆ ಎಂದು ಅವರು ಹೇಳಿದ್ದಾರೆ.
ಬೆಂಗಳೂರಿಗೆ ಮಳೆ ಕಾಟ!
ಬೆಂಗಳೂರಿನಲ್ಲಿ ಇನ್ನೂ ಕೆಲವು ಗಂಟೆಗಳಲ್ಲಿ ಮಳೆಯಾಗುವ ನಿರೀಕ್ಷೆ ಇದೆ. ಸಂಚಾರ ದಟ್ಟಣೆಯಾಗಿ ಬೆಂಗಳೂರಿಗೆ ಮಳೆ ಕಾಟ ಎದುರಾಗಬಹುದು.ಹೆಚ್ಚಿನ ಮಳೆಯು ಸೆಂಟ್ರಲ್ ಬ್ಯುಸಿನೆಸ್ ಡಿಸ್ಟ್ರಿಕ್ಟ್ (ಸಿಬಿಡಿ) ಗೆ ಸೀಮಿತವಾಗಿದ್ದರೂ, ಉತ್ತರ ಬೆಂಗಳೂರಿನ ಬಾಣಸವಾಡಿ, ಹೆಬ್ಬಾಳ ಮತ್ತು ಹೊರಮಾವು ಮತ್ತು ದಕ್ಷಿಣ ಬೆಂಗಳೂರಿನ ಜಯನಗರ, ಕೆಂಗೇರಿ ಮತ್ತು ಆರ್ ಆರ್ ನಗರಗಳಲ್ಲಿ ತುಂತುರು ಮಳೆಯಾದ ವರದಿಯಾಗಿದೆ.
ಬಿಟಿಎಂ ಲೇಔಟ್, ಎಲೆಕ್ಟ್ರಾನಿಕ್ಸ್ ಸಿಟಿ ಮತ್ತು ವರ್ತೂರುಗಳಲ್ಲಿಯೂ ಸಹ ಸಾಧಾರಣ ಮಳೆಯಾಗಿದೆ. ನಿನ್ನೆ ಆದ ಮಳೆಯಿಂದಾಗಿ ಹೆಬ್ಬಾಳ ವಿಮಾನ ನಿಲ್ದಾಣದ ಕಡೆಗೆ ಹೋಗುವ ಇಳಿಜಾರು, ಸಂದೀಪ್ ಉನ್ನಿಕೃಷ್ಣನ್ ರಸ್ತೆ ಮತ್ತು ಸುಮನಹಳ್ಳಿ ಸೇತುವೆ ಸೇರಿದಂತೆ ಪ್ರಮುಖ ರಸ್ತೆಗಳು ಜಲಾವೃತಗೊಂಡಿವೆ.
ಇನ್ನೂ ಕೆಲವೇ ತಿಂಗಳುಗಳಲ್ಲಿ ಮುಂಗಾರು ಮಳೆಯ ಆರಂಭವಾಗಲಿದೆ.


Click it and Unblock the Notifications