ಬೆಂಗಳೂರು ನಮ್ಮ ಮೆಟ್ರೋ ಹಸಿರು ಮಾರ್ಗದಲ್ಲಿ ನಾಗಸಂದ್ರ - ಮಾದಾವರ ನಡುವಿನ ವಿಸ್ತೃತ ಮಾರ್ಗದಲ್ಲಿ ರೈಲು ಸಂಚಾರ ಆರಂಭಕ್ಕೆ ದಿನಗಣನೆ ಶುರುವಾಗಿದೆ. ಮೂಲಗಳ ಪ್ರಕಾರ ಅಕ್ಟೋಬರ್ ಎರಡು ಅಥವಾ ಮೂರನೇ ವಾರದಲ್ಲೇ ವಿಸ್ತೃತ ಮಾರ್ಗದಲ್ಲಿ ವಾಣಿಜ್ಯ ಕಾರ್ಯಾಚರಣೆ ಆರಂಭವಾಗುವುದು ಬಹುತೇಕ ಖಚಿತವಾಗಿದೆ.
ಮೆಟ್ರೋ ರೈಲ್ವೆ ಸುರಕ್ಷತಾ ಆಯುಕ್ತರ (CMRS) ನಾಗಸಂದ್ರ ಮಾದಾವರ ನಡುವಿನ ಮಾರ್ಗದಲ್ಲಿ ಸುರಕ್ಷತಾ ತಪಾಸಣೆಗಳನ್ನು ನಡೆಸಿದ್ದು, ವಾಣಿಜ್ಯ ಕಾರ್ಯಾಚರಣೆಗೆ ಅನುಮೋದನೆ ಸಿಕ್ಕಿದ್ದು, ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಷನ್ ಲಿಮಿಟೆಡ್ (BMRCL) ವಾಣಿಜ್ಯ ಕಾರ್ಯಾಚರಣೆ ಆರಂಭಿಸಲು ಸಿದ್ಧತೆ ಮಾಡಿಕೊಳ್ಳುತ್ತಿದೆ.

ಅಕ್ಟೋಬರ್ 3ರಂದು ನಾಗಸಂದ್ರ - ಮಾದಾವರ ನಡುವಿನ ಹಸಿರು ಮಾರ್ಗದಲ್ಲಿ ಮೆಟ್ರೋ ರೈಲ್ವೆ ಸುರಕ್ಷತಾ ಆಯುಕ್ತರು ಪರಿಶೀಲನೆ ನಡೆಸಿದ್ದರು. ತಪಾಸಣೆ ಬಳಿಕ ರೈಲು ಸಂಚಾರ ಆರಂಭಿಸಲು ಮರುದಿನವೇ ಒಪ್ಪಿಗೆ ಸಿಕ್ಕಿದೆ ಎಂದು ಬಿಎಂಆರ್ ಸಿಎಲ್ ತಿಳಿಸಿತ್ತು.
3.7 ಕಿಮೀ ಮಾರ್ಗದಲ್ಲಿ ಸಂಚಾರ
ಹೊಸದಾಗಿ ಅನುಮೋದನೆ ಸಿಕ್ಕ ಬಳಿಕ, ಹಸಿರು ಮಾರ್ಗದ ಉದ್ದ 3.7 ಕಿಲೋ ಮೀಟರ್ ಗಳಷ್ಟು ಹೆಚ್ಚಾಗಲಿದೆ. ನಾಗಸಂದ್ರ - ಮಾದಾವರ ನಡುವೆ ರೈಲು ಸಂಚಾರ ಆರಂಭವಾದ ಬಳಿಕ ಹಸಿರು ಮಾರ್ಗ ಒಟ್ಟು ಉದ್ದ 33.46 ಕಿ.ಮೀಗೆ ಹೆಚ್ಚಾಗಲಿದೆ. ಕಾಮಗಾರಿ ಆರಂಭವಾದ ಏಳು ವರ್ಷಗಳ ಬಳಿಕ ಪೂರ್ಣಗೊಂಡಿದ್ದು, ಅಂತೂ ಇಂತು ರೈಲು ಓಡಾಡುವುದು ಖಚಿತವಾಗಿದೆ. ನೈಸ್ ರಸ್ತೆ ಬಳಿ ಭೂಸ್ವಾಧೀನ ಪ್ರಕ್ರಿಯೆ ಮತ್ತು ಕೋವಿಡ್ 19 ಸಾಂಕ್ರಾಮಿಕದ ವೇಳೆಯಲ್ಲಿ ಲಾಕ್‌ಡೌನ್ ಪರಿಣಾಮದಿಂದ ಕಾಮಗಾರಿ ತಡವಾಗಿದೆ.
ವಿಸ್ತೃತ ಮಾರ್ಗದಲ್ಲಿ ಮೂರು ಹೊಸ ನಿಲ್ದಾಣಗಳನ್ನು ನಿರ್ಮಾಣ ಮಾಡಲಾಗಿದೆ. ಮಂಜುನಾಥ ನಗರ, ಚಿಕ್ಕಬಿದರಕಲ್ಲು ಮತ್ತು ಮಾದಾವರದಲ್ಲಿ ಮೆಟ್ರೋ ನಿಲ್ದಾಣಗಳಿದ್ದು, ಈ ಭಾಗದ ನಾಗರಿಕರಿಗೆ ಭಾರಿ ಉಪಯೋಗವಾಗಲಿದೆ. ಅದರಲ್ಲೂ ಮುಖ್ಯವಾಗಿ ಮಾದಾವರ ನಿಲ್ದಾಣದ ಬಳಿಯೇ ಬೆಂಗಳೂರು ಇಂಟರ್ನ್ಯಾಷನಲ್ ಎಕ್ಸಿಬಿಷನ್ ಸೆಂಟರ್ (BIEC) ಇರುವ ಕಾರಣದಿಂದ ಪ್ರಮುಖ ವಸ್ತು ಪ್ರದರ್ಶನಗಳು, ಕಾರ್ಯಕ್ರಮದ ವೇಳೆ ಟ್ರಾಫಿಕ್ ಸಮಸ್ಯೆಯನ್ನು ಕಡಿಮೆ ಮಾಡಲಿದೆ ಎಂದು ನಿರೀಕ್ಷೆ ಮಾಡಲಾಗಿದೆ.
ಪ್ರಯಾಣಿಕರ ಸಂಖ್ಯೆ ಹೆಚ್ಚಳ
ಸದ್ಯ ನಮ್ಮ ಮೆಟ್ರೋ ಹಸಿರು ಮತ್ತು ನೇರಳೆ ಮಾರ್ಗಗಳಲ್ಲಿ ಪ್ರತಿ ದಿನ 8-9 ಲಕ್ಷ ಮಂದಿ ಪ್ರಯಾಣ ಮಾಡುತ್ತಿದ್ದಾರೆ. ಮಾದಾವರವರೆಗೆ ರೈಲು ಸಂಚಾರ ಆರಂಭವಾದ ಬಳಿಕ ಈ ಸಂಖ್ಯೆ ಮತ್ತಷ್ಟು ಹೆಚ್ಚಾಗಲಿದೆ. ಮುಖ್ಯವಾಗಿ ಮಾದಾವರಿಂದ ನಗರದ ವಿವಿಧ ಭಾಗಕ್ಕೆ ಸಂಚಾರ ಮಾಡುವವರಿಗೆ ಭಾರಿ ಅನುಕೂಲವಾಗಲಿದೆ.
ಹಳದಿ ಮಾರ್ಗದ ಅಪ್‌ಡೇಟ್
ಆರ್ ವಿ ರಸ್ತೆಯಿಂದ ಬೊಮ್ಮಸಂದ್ರ ನಡುವೆ ನಿರ್ಮಾಣವಾಗಿರುವ ಹಳದಿ ಮಾರ್ಗದಲ್ಲಿ ಈಗಾಗಲೇ ಚಾಲಕ ರಹಿತ ಮೆಟ್ರೋ ರೈಲು ಪ್ರಾಯೋಗಿಕ ಸಂಚಾರ ಆರಂಭಿಸಿದೆ. ಕಾಮಗಾರಿ ಮುಕ್ತಾಯವಾಗಿದ್ದರೂ, ಚಾಲಕ ರಹಿತ ಮೆಟ್ರೋ ರೈಲುಗಳು ಇನ್ನೂ ಪೂರೈಕೆಯಾಗದ ಕಾರಣ ವಾಣಿಜ್ಯ ಕಾರ್ಯಾಚರಣೆ ಆರಂಭ ಮತ್ತಷ್ಟು ವಿಳಂಬವಾಗುವ ಸಾಧ್ಯತೆ ಇದೆ. ಡಿಸೆಂಬರ್ ತಿಂಗಳಿನಲ್ಲೇ ಹಳದಿ ಮಾರ್ಗದಲ್ಲಿ ಮೆಟ್ರೋ ಸಂಚಾರ ಆರಂಭವಾಗಬೇಕಿತ್ತು, ಇದೀಗ 2025ರ ಆರಂಭದಲ್ಲಿ ಹಳದಿ ಮಾರ್ಗದಲ್ಲಿ ರೈಲು ಸಂಚಾರ ಆರಂಭವಾಗುವ ಸಾಧ್ಯತೆ ಇದೆ.
More From GoodReturns

ಎಮಿಯಾಕ್ ಟೆಕ್ನಾಲಜೀಸ್ ಐಪಿಒ: ಹೂಡಿಕೆದಾರರ ಮುಗಿಬಿದ್ದ ಭರ್ಜರಿ ಬೇಡಿಕೆ!

ಆರ್ಬಿಐ ರೆಪೋ ದರ ಸ್ಥಿರತೆ: ನಿಮ್ಮ ಇಎಂಐ ಹೊರೆ ಇಳಿಯುತ್ತಾ?

ಆರ್ಬಿಐ ಪಾಲಿಸಿಗೂ ಮುನ್ನ ನಿಮ್ಮ ಬಂಡವಾಳಕ್ಕೆ ಈ ರಕ್ಷಣೆ ಬೇಕೇ?

ಆರ್ಬಿಐ ಪಾಲಿಸಿ ಅಬ್ಬರ: ನಿಮ್ಮ ಹಣ ಉಳಿಸಲು ಈ ತಂತ್ರ ಬಳಸಿ

ಸೇಫ್ಟಿ ಕಂಟ್ರೋಲ್ಸ್ ಐಪಿಒ: ಹೂಡಿಕೆದಾರರೇ ಇಂದೇ ಕೊನೆಯ ಅವಕಾಶ!

ಆರ್ಬಿಐ ಬಡ್ಡಿ ದರ: ನಿಮ್ಮ ಇಎಂಐ ಹೊರೆ ಕಡಿಮೆಯಾಗುತ್ತಾ?

ಆರ್ಬಿಐ ಪಾಲಿಸಿ: ಇಂದಿನ ನಿರ್ಧಾರ ನಿಮ್ಮ ಹೂಡಿಕೆಯನ್ನು ಬದಲಿಸುತ್ತಾ?

ಗೃಹ ಸಾಲದ ಇಎಂಐ ಇಳಿಕೆ: ಆರ್ಬಿಐ ನಿರ್ಧಾರದ ಅಸಲಿ ಸತ್ಯ

ಹೋಮ್ ಲೋನ್ ಇಎಂಐ ಉಳಿಸಲು ಈ ಟ್ರಿಕ್ ಬಳಸಿ ನೋಡಿ

ಆರ್ಬಿಐ ರೆಪೋ ದರ ಸ್ಥಿರ: ನಿಮ್ಮ ಇಎಂಐ ಹೊರೆ ಇಳಿಯುತ್ತಾ?

ಚಿನ್ನದ ಬೆಲೆ ಏರಿಕೆ: ಹೂಡಿಕೆದಾರರೇ ಎಚ್ಚರ, ಈ ತಪ್ಪು ಮಾಡಬೇಡಿ!



Click it and Unblock the Notifications