ಬೆಂಗಳೂರು ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣ ಯೋಜನೆ ವೇಗ ಪಡೆದುಕೊಂಡಿದೆ. ಎರಡನೇ ವಿಮಾನ ನಿಲ್ದಾಣಕ್ಕೆ ಸ್ಥಳ ನಿಗದಿ ಮಾಡಲು ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ ಬಿ ಪಾಟೀಲ, ಡಿಸಿಎಂ ಡಿ.ಕೆ. ಶಿವಕುಮಾರ್, ಐಟಿ-ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಶುಕ್ರವಾರ ಅಧಿಕಾರಿಗಳ ಜೊತೆ ಸಭೆ ನಡೆಸಿದ್ದಾರೆ. ಐದು ಸ್ಥಳಗಳನ್ನು ಗುರುತಿಸಲಾಗಿದ್ದು, ಮುಂದಿನ ವಾರದೊಳಗೆ ಸ್ಥಳವನ್ನು ಅಂತಿಮಗೊಳಿಸಲಾಗುವುದು ಎಂದು ಸಚಿವ ಎಂ.ಬಿ. ಪಾಟೀಲ್ ಹೇಳಿದ್ದಾರೆ.
ಡಾಬಸ್‌ಪೇಟೆ, ನೆಲಮಂಗಲ, ಬಿಡದಿ, ಹಾರೋಹಳ್ಳಿ ಸೇರಿದಂತೆ ಐದು ಸ್ಥಳಗಳನ್ನು ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣಕ್ಕಾಗಿ ಗುರುತಿಸಲಾಗಿದೆ. ಶುಕ್ರವಾರ ನಡೆದ ಸಭೆಯಲ್ಲಿ ಮತ್ತೊಂದು ಸ್ಥಳದ ಬಗ್ಗೆ ಕೂಡ ಚರ್ಚೆ ನಡೆಸಲಾಗಿದ್ದು, ಇನ್ನೊಂದು ವಾರದಲ್ಲಿ ಸ್ಥಳ ನಿಗದಿ ಮಾಡಲಾಗುವುದು ಎಂದು ಎಂಬಿ ಪಾಟೀಲ್ ಹೇಳಿದ್ದಾರೆ.

ನೆಲಮಂಗಲ ಸಮೀಪದ ಸ್ಥಳವೇ ಅಂತಿಮ
ಈಗ ಗುರುತಿಸಿರುವ ಐದು ಸ್ಥಳಗಳಲ್ಲಿ ನೆಲಮಂಗಲ-ಕುಣಿಗಲ್ ರಾಷ್ಟ್ರೀಯ ಹೆದ್ದಾರಿ 75 ಪಕ್ಕದಲ್ಲಿರುವ ಸ್ಥಳವನ್ನೇ ಬಹುತೇಕ ಅಂತಿಮಗೊಳಿಸುವ ಸಾಧ್ಯತೆ ಇದೆ ಎನ್ನಲಾಗಿದೆ. ಎಲ್ಲಾ ದೃಷ್ಟಿಯಿಂದಲೂ ಈ ಸ್ಥಳವೇ ಉತ್ತಮ ಆಯ್ಕೆ ಎನ್ನುವ ಅಭಿಪ್ರಾಯ ಕೂಡ ವ್ಯಕ್ತವಾಗುತ್ತಿದೆ. ನೆಲಮಂಗಲ - ಕುಣಿಗಲ್ ನಡುವಿನ ರಾಷ್ಟ್ರಿಯ ಹೆದ್ದಾರಿ 75ರ ಸಮೀಪವೇ ಈ ಸ್ಥಳವನ್ನು ಗುರುತಿಸಲಾಗಿದೆ.
ಬೆಂಗಳೂರಿಗೆ ಉತ್ತಮ ರಸ್ತೆ ಸಂಪರ್ಕವಿದ್ದು, ನೆಲಮಂಗಲದವರೆಗೆ ಮೆಟ್ರೋ ಮಾರ್ಗ ವಿಸ್ತರಣೆ ಯೋಜನೆ ಕೂಡ ಇರುವುದರಿಂದ ಸಂಪರ್ಕ ಕೂಡ ಸುಲಭವಾಗಲಿದೆ. ಇಲ್ಲಿ ಗುರುತಿಸಿರುವ ಸ್ಥಳದಲ್ಲಿ ಸರ್ಕಾರಿ ಜಮೀನು ಕೂಡ ಹೆಚ್ಚಾಗಿರುವ ಕಾರಣ, ಖಾಸಗಿ ಜಮೀನಿಗೆ ನೀಡಬೇಕಾದ ವೆಚ್ಚದ ಪ್ರಮಾಣ ಕೂಡ ಕಡಿಮೆಯಾಗುವುದರಿಂದ ಸರ್ಕಾರ ಈ ಸ್ಥಳವನ್ನೇ ಅಂತಿಮಗೊಳಿಸುವ ಸಾಧ್ಯತೆ ಇದೆ ಎನ್ನಲಾಗಿದೆ.
ತುಮಕೂರು ಬಳಿ ವಿಮಾನ ನಿಲ್ದಾಣಕ್ಕೆ ಮನವಿ
ಗೃಹ ಸಚಿವ ಜಿ. ಪರಮೇಶ್ವರ್ ತುಮಕೂರು ಬಳಿ ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಾಗಲಿ ಎಂದು ಒತ್ತಾಯಿಸಿದ್ದಾರೆ. ತುಮಕೂರು ಈಗಾಗಲೇ ಏಷ್ಯಾದ ಅತಿದೊಡ್ಡ ಕೈಗಾರಿಕಾ ಕೇಂದ್ರವಾಗಿ ಅಭಿವೃದ್ಧಿ ಹೊಂದುತ್ತಿದೆ, ಹಂತ ಹಂತವಾಗಿ 20,000 ಎಕರೆಗಳಲ್ಲಿ ಕೈಗಾರಿಕಾ ಪ್ರದೇಶ ಹರಡಿಕೊಂಡಿದೆ. ಈಗಾಗಲೇ 150ಕ್ಕೂ ಹೆಚ್ಚು ಕೈಗಾರಿಕೆಗಳನ್ನು ಸ್ಥಾಪನೆ ಮಾಡಲಾಗಿದೆ. ಜಪಾನಿಸ್ ಟೌನ್‌ಶಿಪ್ ಕೆಲಸ ಕೂಡ ನಡೆಯುತ್ತಿದೆ. ಎಚ್‌ಎಎಲ್‌ನ ಹೆಲಿಕಾಪ್ಟರ್ ಕಾರ್ಖಾನೆ ಮತ್ತು ಉತ್ಪಾದನೆ ನಿಟ್ಟೂರು ಬಳಿ ಪ್ರಾರಂಭವಾಗಿದೆ ಇದೆಲ್ಲವನ್ನೂ ಪರಿಗಣಿಸಿ ತುಮಕೂರು ಸಮೀಪ ವಿಮಾನ ನಿಲ್ದಾಣ ನಿರ್ಮಾಣ ಮಾಡಿದರೆ ಅನುಕೂಲವಾಗಲಿದೆ ಎಂದು ಹೇಳಿದರು.
ರಾಷ್ಟ್ರೀಯ ಹೆದ್ದಾರಿ 75ರ ಉದ್ದಕ್ಕೂ ನೆಲಮಂಗಲ ಮತ್ತು ಕುಣಿಗಲ್ ನಡುವಿನ ಪ್ರದೇಶವನ್ನು ಹೊಸ ವಿಮಾನ ನಿಲ್ದಾಣಕ್ಕೆ ಅತ್ಯಂತ ಸೂಕ್ತ ಸ್ಥಳವೆಂದು ಗುರುತಿಸಲಾಗಿದೆ. ಈ ಬಗ್ಗೆ ಇನ್ನೂ ಅಂತಿಮ ನಿರ್ಧಾರ ಮಾಡಬೇಕಾಗಿದೆ ಎಂದು ಹೇಳಿದರು.
ಬೆಂಗಳೂರು, ಭಾರತದ ಮೂರನೇ ಅತಿದೊಡ್ಡ ನಗರವಾಗಿದ್ದು, ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ (ಕೆಐಎ) ಪೂರ್ಣ ಸಾಮರ್ಥ್ಯದಲ್ಲಿ ಕಾರ್ಯನಿರ್ವಹಿಸುತ್ತಿದೆ. ದೆಹಲಿ ಮತ್ತು ಮುಂಬೈನಂತಹ ಪ್ರಮುಖ ನಗರಗಳು ಮುಂದಿನ ವರ್ಷದಲ್ಲಿ ಹೊಸ ವಿಮಾನ ನಿಲ್ದಾಣಗಳನ್ನು ತೆರೆಯಲು ಸಿದ್ಧವಾಗಿದೆ, ಬೆಂಗಳೂರು ಕೂಡ ಇದೇ ರೀತಿ ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಹೊಂದಬೇಕಾಗಿದ್ದು ಈಗಿನಿಂದಲೇ ಯೋಜನೆ ರೂಪಿಸಲಾಗುತ್ತಿದೆ.
More From GoodReturns

ಎಮಿಯಾಕ್ ಟೆಕ್ನಾಲಜೀಸ್ ಐಪಿಒ: ಹೂಡಿಕೆದಾರರ ಮುಗಿಬಿದ್ದ ಭರ್ಜರಿ ಬೇಡಿಕೆ!

ಆರ್ಬಿಐ ರೆಪೋ ದರ ಸ್ಥಿರತೆ: ನಿಮ್ಮ ಇಎಂಐ ಹೊರೆ ಇಳಿಯುತ್ತಾ?

ಆರ್ಬಿಐ ಪಾಲಿಸಿಗೂ ಮುನ್ನ ನಿಮ್ಮ ಬಂಡವಾಳಕ್ಕೆ ಈ ರಕ್ಷಣೆ ಬೇಕೇ?

ಆರ್ಬಿಐ ಪಾಲಿಸಿ ಅಬ್ಬರ: ನಿಮ್ಮ ಹಣ ಉಳಿಸಲು ಈ ತಂತ್ರ ಬಳಸಿ

ಸೇಫ್ಟಿ ಕಂಟ್ರೋಲ್ಸ್ ಐಪಿಒ: ಹೂಡಿಕೆದಾರರೇ ಇಂದೇ ಕೊನೆಯ ಅವಕಾಶ!

ಆರ್ಬಿಐ ಬಡ್ಡಿ ದರ: ನಿಮ್ಮ ಇಎಂಐ ಹೊರೆ ಕಡಿಮೆಯಾಗುತ್ತಾ?

ಆರ್ಬಿಐ ಪಾಲಿಸಿ: ಇಂದಿನ ನಿರ್ಧಾರ ನಿಮ್ಮ ಹೂಡಿಕೆಯನ್ನು ಬದಲಿಸುತ್ತಾ?

ಗೃಹ ಸಾಲದ ಇಎಂಐ ಇಳಿಕೆ: ಆರ್ಬಿಐ ನಿರ್ಧಾರದ ಅಸಲಿ ಸತ್ಯ

ಆರ್ಬಿಐ ರೆಪೋ ದರ ಸ್ಥಿರ: ನಿಮ್ಮ ಇಎಂಐ ಹೊರೆ ಇಳಿಯುತ್ತಾ?

ಚಿನ್ನದ ಬೆಲೆ ಏರಿಕೆ: ಹೂಡಿಕೆದಾರರೇ ಎಚ್ಚರ, ಈ ತಪ್ಪು ಮಾಡಬೇಡಿ!

ಆರ್ಬಿಐ ರೆಪೋ ದರ: ನಿಮ್ಮ ಇಎಂಐ ಹೊರೆ ಹೆಚ್ಚಾಗುತ್ತಾ?



Click it and Unblock the Notifications