ದೇಶದ ರೈತರಿಗಾಗಿ ಕೇಂದ್ರ ಸರ್ಕಾರ ಜಾರಿಗೆ ತಂದ ಯೋಜನೆಗಳಲ್ಲಿ ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆ ಕೂಡಾ ಒಂದು. ರೈತರ (Farmers) ಅಭಿವೃದ್ಧಿಗಾಗಿ ರಾಜ್ಯ ಸರ್ಕಾರ, ಕೇಂದ್ರ ಸರ್ಕಾರ ಈಗಾಗಲೇ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದೆ. ಅದರಲ್ಲೂ ರೈತರನ್ನು ಆರ್ಥಿಕವಾಗಿ ಸಬಲರನ್ನಾಗಿ ಮಾಡುವ ಉದ್ದೇಶದಿಂದ ಜಾರಿಗೆ ತಂದ ಯೋಜನೆಗಳಲ್ಲಿ ಪಿಎಂ ಕಿಸಾನ್ ಸಮ್ಮಾನ್ ಯೋಜನೆ (PM Kisan Samman Yojana) ಕೂಡಾ ಒಂದು.

ಆದರೆ ಇತ್ತೀಚೆಗೆ ಈ ಯೋಜನೆಯ ಬಗ್ಗೆ ಭಾರೀ ಚರ್ಚೆ ಹುಟ್ಟುಹಾಕಿದೆ. ಪಿಎಂ ಕಿಸಾನ್ ಯೋಜನೆಯ 21ನೇ ಕಂತಿನ ಹಣಕ್ಕಾಗಿ ಇಡೀ ದೇಶದ ರೈತರು ಕಾದು ಕುಳಿತಿದ್ದಾರೆ. ಆದ್ರೆ ಇನ್ನೂ ಹಣ ಬಂದಿಲ್ಲ ಎಂಬ ಚಿಂತೆಯಲ್ಲೂ ಇದ್ದಾರೆ. ಇದೀಗ ಕೇಂದ್ರ ಸರ್ಕಾರ ಈ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟಿದೆ.
ಕೇಂದ್ರದಿಂದ ಬಿಗ್ ಅಪ್ಡೇಟ್!
ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಭಾರೀ ಸುಳ್ಳು ಸುದ್ದಿಗಳು ಹರಿದಾಡುತ್ತದೆ. ಇದರಿಂದ ರೈತರು ಕೂಡಾ ಗೊಂದಲಕ್ಕೊಳಗಾಗುತ್ತಿದ್ದಾರೆ. ಆದರೆ ಇದನ್ನು ಕೇಂದ್ರ ಗಮನಿಸಿದ್ದು, ಈ ಬಗ್ಗೆ ಸ್ಪಷ್ಟನೆ ನೀಡಿದೆ. ಈ ಬಗ್ಗೆ ಅಧಿಕೃತವಾಗಿ ವೆಬ್‌ಸೈಟ್‌ನಲ್ಲಿ ಪ್ರಕಟಿಸಿದ್ದು, ಈ ಮೂಲಕ ಎಲ್ಲಾ ಸುಳ್ಳು ಸಂದೇಶಗಳಿಗೆ ತೆರೆ ಎಳೆದಿದೆ. ಹಾಗಿದ್ರೆ ಕೇಂದ್ರ ಸರ್ಕಾರ ನೀಡಿದ ಸ್ಪಷ್ಟನೆ ಏನು ಎಂಬುದರ ಬಗ್ಗೆ ಮಾಹಿತಿ ಇಲ್ಲಿದೆ.
ಕೇಂದ್ರ ಸರ್ಕಾರ ವೆಬ್‌ಸೈಟ್‌ನಲ್ಲಿ ತಿಳಿಸಿದಂತೆ, ದೇಶಾದ್ಯಂತ ಹಲವು ರೈತರು ಪಿಎಂ ಕಿಸಾನ್ ಯೋಜನೆಗೆ ಪಿಎಂ ಕಿಸಾನ್ ಯೋಜನೆಯ ಮಾನದಂಡಗಳನ್ನು ಪಾಲಿಸಿಲ್ಲ. ಅಲ್ಲದೇ ರೈತರಲ್ಲದವರೂ ಕೂಡಾ ಅರ್ಜಿ ಸಲ್ಲಿಸಿದ್ದಾರೆ ಎನ್ನಲಾಗಿದೆ. ಅಂದರೆ ಪಿಎಂ ಕಿಸಾನ್ ಯೋಜನೆಗೆ ಅನರ್ಹರಾಗಿದ್ದರೂ, ಅರ್ಹರೆಂದು ಅರ್ಜಿ ಸಲ್ಲಿಸಿದ್ದಾರೆ. ಅಂತಹ ಅರ್ಜಿಗಳನ್ನು ಈಗಾಗಲೇ ಕೇಂದ್ರ ಪತ್ತೆ ಮಾಡಿದ್ದು, ಈ ಬಗ್ಗೆ ಅಧಿಕೃತವಾಗಿ ಹೇಳಿದೆ. ಆ ತನಿಖೆಯ ಪ್ರಕಾರ ಫೆಬ್ರವರಿ 1, 2019 ರ ನಂತರ ಭೂ ಮಾಲೀಕತ್ವದ ಹಕ್ಕುಗಳನ್ನು ಪಡೆದ ರೈತರು ಒಂದೇ ಕುಟುಂಬದಲ್ಲಿ ಒಬ್ಬರಿಗಿಂತ ಹೆಚ್ಚು ವ್ಯಕ್ತಿಗಳು ಹಣ ಪಡೆಯುತ್ತಿದ್ದಾರೆ ಎಂದು ವರದಿಯಾಗಿದೆ.
ಈ ಮೂಲಕ ಒಂದೇ ಮನೆಯಲ್ಲಿ ಹಲವು ಜನರು ಪಿಎಂ ಕಿಸಾನ್ ಹಣವನ್ನು ಪಡೆಯುತ್ತಿರುವವರನ್ನು ಅನರ್ಹರು ಎಂದು ಗುರುತಿಸಿ, ಕೇಂದ್ರ ಈ ಬಗ್ಗೆ ಪರಿಷ್ಕರಣೆ ನಡೆಸುತ್ತಿದೆ ಎಂದು ವರದಿಯಾಗಿದೆ.
ಇನ್ನು ಅನರ್ಹರೆಂದು ಗುರುತಿಸಲಾದವರನ್ನು ಕೇಂದ್ರ ಪಿಎಂ ಕಿಸಾನ್ ಫಲಾನುಭವಿಗಳ ಪಟ್ಟಿಯಿಂದ ತಾತ್ಕಾಲಿಕವಾಗಿ ತೆಗೆದುಹಾಕಲಾಗಿದೆ. ಒಂದು ವೇಳೆ ಅರ್ಹರೆಂದು ಸಾಬೀತು ಪಡಿಸಿದರೆ ಮತ್ತೆ ಅವರನ್ನು ಫಲಾನುಭವಿಗಳ ಪಟ್ಟಿಯಲ್ಲಿ ಸೇರಿಸಲಾಗುತ್ತದೆ. ಈ ಬಗ್ಗೆ ಕೇಂದ್ರ ಸರಿಯಾಗಿ ಪರಿಶೀಲನೆ ನಡೆಸಿ, ಅರ್ಹರಲ್ಲವರನ್ನು ಶಾಶ್ವತವಾಗಿ ಫಲಾನುಭವಿಗಳ ಪಟ್ಟಿಯಿಂದ ತೆಗೆದುಹಾಕಲಾಗುತ್ತದೆ ಎಂದು ಕೇಂದ್ರ ಹೇಳಿದೆ.
ಇನ್ನು ಫಲಾನುಭವಿಗಳು ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ ಅಧಿಕೃತ ವೆಬ್‌ಸೈಟ್‌ನಲ್ಲಿ ತಮ್ಮ ಹೆಸರನ್ನು ಪರಿಶೀಲಿಸಬಹುದು. ಇನ್ನು ಈ ವರ್ಷದ ಅಂತ್ಯದೊಳಗೆ ಪಿಎಂ ಕಿಸಾನ್ ಯೋಜನೆ 21ನೇ ಕಂತಿನ ಹಣ ಬಿಡುಗಡೆ ಮಾಡಬಹುದು ಎಂದು ಹೇಳಲಾಗಿದೆ.


Click it and Unblock the Notifications