ಕರ್ನಾಟಕದಲ್ಲಿ ಬೈಕ್ ಟ್ಯಾಕ್ಸಿ ಸೇವೆ ನಿಷೇಧವಾಗಬೇಕೆಂಬ (Bike Taxi Ban in Karnataka) ಕೂಗು ಹಲವು ದಿನಗಳಿಂದ ಭಾರೀ ಚರ್ಚೆಗೆ ಗ್ರಾಸವಾಗಿತ್ತು.ಈ ಬಗ್ಗೆ ಹಲವು ಸಂಘಟನೆಗಳು ನಿಷೇಧ ಹೇರಬೇಕೆಂದು ಸರ್ಕಾರಕ್ಕೆ ಆಗ್ರಹಿಸಿತ್ತು. ಆದರೆ ಇದೀಗ ಕರ್ನಾಟಕದಲ್ಲಿ ಬೈಕ್ ಟ್ಯಾಕ್ಸಿ ಚಾಲಕರಿಗೆ ದೊಡ್ಡ ರಿಲೀಫ್ ಸಿಕ್ಕಿದೆ. ಕರ್ನಾಟಕ ಹೈಕೋರ್ಟ್ (Karnataka High Court) ಇಂದು (ಜ.23) ರಾಜ್ಯ ಸರ್ಕಾರದ 2023ರ ಬೈಕ್ ಟ್ಯಾಕ್ಸಿ ನಿಷೇಧವನ್ನು ಸಂಪೂರ್ಣವಾಗಿ ರದ್ದುಗೊಳಿಸಿದೆ. ಈ ಆದೇಶದಿಂದ ರ್ಯಾಪಿಡೋ, ಊಬರ್, ಓಲಾ ಬೈಕ್ ಮುಂತಾದ ಆಪ್‌ಗಳನ್ನು ಬಳಸಿಕೊಂಡು ಬೈಕ್ ಟ್ಯಾಕ್ಸಿ ಸೇವೆ ನೀಡುತ್ತಿದ್ದವರಿಗೆ ಗುಡ್ ನ್ಯೂಸ್ ಸಿಕ್ಕಿದೆ.

ಕರ್ನಾಟಕದಲ್ಲಿ ಬೈಕ್ ಟ್ಯಾಕ್ಸಿ ಸೇವೆಗಳ ಮೇಲೆ ಹೇರಿರುವ ನಿಷೇಧವನ್ನು ಕೊನೆಗೂ ಹೈಕೋರ್ಟ್ ಇತ್ಯರ್ಥಗೊಳಿಸಿದೆ. ಸರ್ಕಾರದ ನಿಷೇಧ ಆದೇಶವನ್ನು ಪ್ರಶ್ನಿಸಿ ಬೈಕ್ ಟ್ಯಾಕ್ಸ್ ಅಗ್ರಿಗೇಟರ್‌ಗಳು ಹೈಕೋರ್ಟ್ ಮೆಟ್ಟಿಲೇರಿತ್ತು. ಇದೀಗ ಈ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ಮತ್ತು ನ್ಯಾಯಮೂರ್ತಿ ಸಿ.ಎಂ.ಜೋಶಿ ಅವರಿದ್ದ ವಿಭಾಗೀಯ ಪೀಠ, ಕರ್ನಾಟಕದಲ್ಲಿ ಬೈಕ್ ಟ್ಯಾಕ್ಸಿಯ ಸೇವೆಗಳ ಮೇಲಿದ್ದ ನಿಷೇಧವನ್ನು ರದ್ದುಗೊಳಿಸಿ ಮಹತ್ವದ ತೀರ್ಪು ನೀಡಿದೆ.
ಕರ್ನಾಟಕ ಹೈಕೋರ್ಟ್ ಮಹತ್ವದ ತೀರ್ಪು!
ಕರ್ನಾಟಕ ಹೈಕೋರ್ಟ್ ರಾಜ್ಯದ ಸಾರಿಗೆ ಕ್ಷೇತ್ರಕ್ಕೆ ಸಂಬಂಧಿಸಿದ ಮಹತ್ವದ ತೀರ್ಪು ನೀಡಿದೆ. ಬೈಕ್ ಟ್ಯಾಕ್ಸಿಗಳ ಮೇಲೆ ರಾಜ್ಯ ಸರ್ಕಾರ ವಿಧಿಸಿದ್ದ ನಿಷೇಧ ಆದೇಶವನ್ನು ಅಧಿಕೃತವಾಗಿ ರದ್ದುಗೊಳಿಸಿದೆ. ಈ ಮೂಲಕ ಬೈಕ್ ಟ್ಯಾಕ್ಸಿಗಳ ಸಂಚಾರಕ್ಕೆ ಮುಕ್ತ ಅವಕಾಶವನ್ನು ನೀಡಿದೆ. ಇನ್ನು ಹೈಕೋರ್ಟ್‌ನ ಈ ತೀರ್ಪಿನಿಂದ ರಾಜ್ಯದ ಜನರಿಗೆ ಮತ್ತು ಗಿಗ್ ವರ್ಕರ್‌ಗಳು ನಿಟ್ಟುಸಿರು ಬಿಡುವಂತಾಗಿದೆ.
ಈ ಹಿಂದೆ ಏಕಸದಸ್ಯ ಪೀಠವು ಬೈಕ್ ಟ್ಯಾಕ್ಸಿ ಸೇವೆಯನ್ನು ಅಕ್ರಮ ಎಂದು ಕರೆದು, ನಿಷೇಧ ಹೇರಿತ್ತು. ಆದ್ರೆ ಈ ತೀರ್ಪಿನ ವಿರುದ್ಧ ರ್ಯಾಪಿಡೋ, ಊಬರ್, ಓಲಾ ಸೇರಿ ಹಲವು ಬೈಕ್ ಟ್ಯಾಕ್ಸಿ ಸೇವಾ ಕಂಪನಿಗಳು ಕೆಂಡಾಮಂಡಲವಾಗಿ ಹೈಕೋರ್ಟ್‌ಗೆ ಪ್ರಶ್ನೆ ಅರ್ಜಿಯನ್ನು ಸಲ್ಲಿಸಿತ್ತು. ಆದರೆ ಇದೀಗ ಹೈಕೋರ್ಟ್ ವಿಭಾಗೀಯ ಪೀಠ ಈ ಅರ್ಜಿಯನ್ನು ವಿಚಾರಿಸಿ ಸರ್ಕಾರದ ನಿಷೇಧ ಆದೇಶಕ್ಕೆ ಬ್ರೇಕ್ ಕೊಟ್ಟಿದೆ.
ಯಾವಾಗಿನಿಂದ ನಿಷೇಧ ಚರ್ಚೆ ಶುರು?
ಬೈಕ್ ಟ್ಯಾಕ್ಸಿ ಸೇವೆಯನ್ನು 2023 ರಲ್ಲೇ ಕರ್ನಾಟಕ ಸರ್ಕಾರ ನಿಷೇಧ ಮಾಡಿ ಆದೇಶ ಹೊರಡಿಸಿತ್ತು. ಆದ್ರೆ ಇದರ ವಿರುದ್ಧ ಬೈಕ್ ಟ್ಯಾಕ್ಸಿ ಅಗ್ರಿಗೇಟರ್‌ಗಳು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿತ್ತು. ಅದರ ವಿಚಾರ 2025ರ ಜೂನ್ ವೇಳೆ ನಡೆದು, ಬೈಕ್ ಟ್ಯಾಕ್ಸಿ ಸೇವೆಗೆ ನಿಷೇಧ ಹೇರಲಾಗಿತ್ತು. ಇನ್ನು ರಾಜ್ಯ ಸರ್ಕಾರವು ಮೋಟಾರ್ ವಾಹನ ಕಾಯ್ದೆಯಡಿ ಸೂಕ್ತ ನಿಯಮಗಳನ್ನು ರೂಪಿಸದ ಕಾರಣ ಏಕಸದಸ್ಯ ನ್ಯಾಯಾಧೀಶರು ಸರ್ಕಾರದ ಆದೇಶಕ್ಕೆ ಬದ್ಧರಾಗಿದ್ದರು.
ಆದರೆ ಏಕಸದಸ್ಯ ನೀಡಿದ ತೀರ್ಪು ಪ್ರಶ್ನಿಸಿ ಮತ್ತೆ ಬೈಕ್ ಟ್ಯಾಕ್ಸಿ ಅಗ್ರಿಗೇಟರ್‌ಗಳು ಹೈಕೋರ್ಟ್ ಮೆಟ್ಟಿಲೇರಿದ್ದರು. ಇದೀಗ ಕೊನೆಗೂ ಹೈಕೋರ್ಟ್ ವಿಭಾಗೀಯ ಪೀಠ ಸರ್ಕಾರದ ಆದೇಶಕ್ಕೆ ಅಂತ್ಯ ಹಾಡಿದೆ. "ಜನರ ಜೀವನಕ್ಕೆ ಸಂಬಂಧಿಸಿದ ಸೇವೆ ಇದು. ನಿಷೇಧದ ಬದಲು ನಿಯಂತ್ರ ಮಾಡಿದರೆ ಒಳ್ಳೆಯದು" ಎಂದು ಸರ್ಕಾರಕ್ಕೆ ಪ್ರಶ್ನೆ ಮಾಡಿದೆ. ಆ ಬಳಿಕ ನಿಷೇಧವನ್ನು ತೆರವುಗೊಳಿಸಿ, ಸರ್ಕಾರದ ಆದೇಶವನ್ನು ರದ್ದುಗೊಳಿಸಿದೆ.


Click it and Unblock the Notifications