For Quick Alerts
ALLOW NOTIFICATIONS  
For Daily Alerts

ಮೇ 9ರಂದು ಡಿಜಿಟಲ್ ದುಡ್ಡು ಬಿಟ್ ಕಾಯಿನ್ ಮೌಲ್ಯ ಸ್ಥಿರ

|

ಬೆಂಗಳೂರು, ಮೇ 9: ಡಿಜಿಟಲ್ ಕರೆನ್ಸಿ ಕ್ರಿಪ್ಟೋಕರೆನ್ಸಿ ಬಿಟ್ ಕಾಯಿನ್, ಇಥೆರಿಯಂ, ಡೋಜ್ ಕಾಯಿನ್ ಸೇರಿದಂತೆ ಹಲವು ಕರೆನ್ಸಿಗಳ ಮೌಲ್ಯ ಸ್ಥಿರವಾಗಿದ್ದು, ಕೆಲವು ಉತ್ತಮ ಮೌಲ್ಯ ಪಡೆದುಕೊಳ್ಳುತ್ತಿವೆ. ಕೊರೊನಾ ಸಂಕಷ್ಟದ ಕಾಲದಲ್ಲಿ ಡಿಜಿಟಲ್ ದುಡ್ಡಿನ ಮೇಲೆ ಹೂಡಿಕೆ ಮಾಡಲು ಅನೇಕ ಉದ್ಯಮಿಗಳು ಮುಂದಾಗಿದ್ದಾರೆ.

ಕ್ರಿಪ್ಟೋಕರೆನ್ಸಿ ಮಾರುಕಟ್ಟೆ ಮೌಲ್ಯ $2 ಟ್ರಿಲಿಯನ್‌ಗೆ ಏರಿಕೆಯಾಗಿದೆ. ಈ ನಡುವೆ ಬಿಟ್ ಕಾಯಿನ್ ಈ ಹಿಂದಿನ $61,222 ಮೌಲ್ಯ ದಾಖಲೆ ಮುರಿದು ಏಪ್ರಿಲ್ ತಿಂಗಳಲ್ಲಿ ಮೊದಲ ಬಾರಿಗೆ 64 ಸಾವಿರ ಡಾಲರ್ ಮೌಲ್ಯಕ್ಕೇರಿತ್ತು.

ಎಲ್ಲಾ ಕ್ರಿಪ್ಟೋಕರೆನ್ಸಿಗಳ ಮೌಲ್ಯ ಒಟ್ಟಾರೆ 2,438,056,585,701 ಟ್ರಿಲಿಯನ್ ಡಾಲರ್ ದಾಟಿದೆ. ಕಳೆದ ಒಂದು ವರ್ಷದಲ್ಲಿ, ಬಿಟ್‌ಕಾಯಿನ್ ಶೇಕಡಾ 103.72ರಷ್ಟು ಲಾಭವನ್ನು ನೀಡಿದೆ.

ಮೇ 9ರಂದು ಡಿಜಿಟಲ್ ದುಡ್ಡು ಬಿಟ್ ಕಾಯಿನ್ ಮೌಲ್ಯ ಸ್ಥಿರ

ಮೇ 9ರಂದು ಈ ಸಮಯ(10:00)ಕ್ಕೆ ಬಿಟ್ ಕಾಯಿನ್ ಮೌಲ್ಯ:
ಬಿಟ್ ಕಾಯಿನ್ ಬೆಲೆ: $58,327.88
ಒಟ್ಟಾರೆ ಮಾರುಕಟ್ಟೆ ಮೌಲ್ಯ: $1,096,110,227,030
ಒಂದು ಬಿಟ್ ಕಾಯಿನ್ ಬೆಲೆ = 42,81,806.10 ರು
(1 USD=73.25 ರುಪಾಯಿ)

ಬಿಟ್ ಕಾಯಿನ್ ಕಳೆದ 24 ಗಂಟೆಗಳಲ್ಲಿ ಶೇ 0.14ರಷ್ಟು ಏರಿಕೆ ಕಂಡಿದೆ. ಈ ವಾರ ಶೇ 3.80ರಷ್ಟು ಏರಿಕೆಯಾಗಿದೆ. ಈ ನಡುವೆ ಮತ್ತೊಂದು ಡಿಜಿಟಲ್ ಕರೆನ್ಸಿ ಇಥೆರಿಯಂ (Ethereum) ಕಳೆದ 24 ಗಂಟೆಗಳಲ್ಲಿ ಶೇ 8.46ರಷ್ಟು ಏರಿಕೆ ಕಂಡು 3,869.15ಡಾಲರ್ ಮೌಲ್ಯ ಪಡೆದಿದೆ. ಈ ವಾರದಲ್ಲಿ 34.91% ಏರಿಕೆಯಾಗಿ ಒಟ್ಟಾರೆ $451,031,978,343ಮೌಲ್ಯ ಹೊಂದಿದೆ.

ಬಿಟ್‌ಕಾಯಿನ್‌: ಇದು ಅತ್ಯಂತ ಜನಪ್ರಿಯ ಕ್ರಿಪ್ಟೋಕರೆನ್ಸಿಯಾಗಿದೆ. ಡಿಜಿಟಲ್ ಕರೆನ್ಸಿಯಾಗಿರುವುದರಿಂದ ಯಾವುದೇ ರೀತಿಯಲ್ಲಿ ಮುದ್ರಣ ರೂಪದಲ್ಲಿ ಸಿಗುವುದಿಲ್ಲ. ರೂಪಾಯಿ, ಡಾಲರ್, ಯುರೋ ಗಳಂತೆ ಭೌತಿಕ ರೂಪದಲ್ಲಿ ಇರುವುದಿಲ್ಲ. ಯಾವುದೇ ದೇಶ, ಭಾಷೆ, ಬ್ಯಾಂಕುಗಳಿಗೆ ಇದು ಸೀಮಿತವಾಗಿಲ್ಲ. ಭಾರತ, ಸೌದಿ ಅರೇಬಿಯಾ, ಅಲ್ಜೀರಿಯಾ, ಬೊಲಿವಿಯಾ ಅನೇಕ ದೇಶಗಳಲ್ಲಿ ನಿಷೇಧವಾಗಿರುವ ಕ್ರಿಪ್ಟೋ ಕರೆನ್ಸಿ ಇತ್ತೀಚೆಗೆ ಭಾರಿ ಬೇಡಿಕೆ ಪಡೆದು ತನ್ನ ಮೌಲ್ಯ ಹೆಚ್ಚಿಸಿಕೊಂಡಿದೆ. ಆದರೆ, ಡಿಜಿಟಲ್ ಆಸ್ತಿ ರೂಪದಲ್ಲಿ ಕ್ರಿಪ್ಟೋ ಕರೆನ್ಸಿ ಬಳಕೆಯಾಗಬಹುದೇ ಹೊರತೂ ಸಾಮಾನ್ಯ ವ್ಯವಹಾರಕ್ಕೆ ಸೂಕ್ತವಲ್ಲ ಎಂದು ತಜ್ಞರು ಕೂಡಾ ಅಭಿಪ್ರಾಯಪಟ್ಟಿದ್ದಾರೆ.

English summary

Bitcoin price steady on May 09

After surge of record $64,000 for the first time in April, Bitcoin price today(May 09) is steady in early trade.
Story first published: Sunday, May 9, 2021, 10:12 [IST]
Company Search
COVID-19
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X