For Quick Alerts
ALLOW NOTIFICATIONS  
For Daily Alerts

ಏಪ್ರಿಲ್ 25ರಂದು ಬಿಟ್ ಕಾಯಿನ್ ಮೌಲ್ಯ ಎಷ್ಟಿದೆ?

|

ಬೆಂಗಳೂರು, ಏಪ್ರಿಲ್ 25: ಡಿಜಿಟಲ್ ಕರೆನ್ಸಿ ಕ್ರಿಪ್ಟೋಕರೆನ್ಸಿ ಬಿಟ್ ಕಾಯಿನ್ 60 ಸಾವಿರ ಡಾಲರ್ ಗಡಿ ಭರ್ಜರಿ ಗಳಿಕೆ ಹೊಂದಿದ ಬಳಿಕ ಹೆಚ್ಚಿನ ಪ್ರಮಾಣದಲ್ಲಿ ಏರಿಕೆ ಕಂಡು ಬಂದಿಲ್ಲ. ಇನ್ನು ಗಳಿಕೆಗೆ ಸಂಬಂಧಿಸಿದಂತೆ, ಕಳೆದ ಒಂದು ವರ್ಷದಲ್ಲಿ, ಬಿಟ್‌ಕಾಯಿನ್ ಶೇಕಡಾ 103.72ರಷ್ಟು ಲಾಭವನ್ನು ನೀಡಿದೆ. ಬಿಟ್‌ಕಾಯಿನ್ ಸಾರ್ವಕಾಲಿಕ ಹೆಚ್ಚಿನ ಬೆಲೆ 61,556.59 ಡಾಲರ್ ಆಗಿದ್ದು, ಇನ್ನೂ ಈ ದಾಖಲೆ ಮತ್ತೊಮ್ಮೆ ಮುರಿದಿಲ್ಲ.

ಏಪ್ರಿಲ್ 25 ರಂದು ಈ ಸಮಯಕ್ಕೆ ಬಿಟ್ ಕಾಯಿನ್ ಮೌಲ್ಯ:
ಬಿಟ್ ಕಾಯಿನ್ ಬೆಲೆ: $49,259.58
ಒಟ್ಟಾರೆ ಮಾರುಕಟ್ಟೆ ಮೌಲ್ಯ: $923,595,952,113
ಒಂದು ಬಿಟ್ ಕಾಯಿನ್ ಬೆಲೆ = 36,92,972.17ರು
(1 USD=74.93 ರುಪಾಯಿ)

ಏಪ್ರಿಲ್ 25ರಂದು ಬಿಟ್ ಕಾಯಿನ್ ಮೌಲ್ಯ ಎಷ್ಟಿದೆ?

ಕಳೆದ 24 ಗಂಟೆಗಳಲ್ಲಿ ಶೇ 0.59ರಷ್ಟು ಇಳಿಕೆ ಕಂಡಿದೆ. ಈ ವಾರ ಶೇ 9.60ರಷ್ಟು ಇಳಿಕೆಯಾಗಿದೆ. ಈ ನಡುವೆ ಮತ್ತೊಂದು ಡಿಜಿಟಲ್ ಕರೆನ್ಸಿ ಇಥೆರಿಯಂ (Ethereum) ಕಳೆದ 24 ಗಂಟೆಗಳಲ್ಲಿ ಶೇ 0.31ರಷ್ಟು ಇಳಿಕೆ ಕಂಡರೂ 2,253.59 ಡಾಲರ್ ಮೌಲ್ಯ ಪಡೆದಿದೆ. ಒಟ್ಟಾರೆ $261,641,081,648ಮೌಲ್ಯ ಹೊಂದಿದೆ.

ಬಿಟ್‌ಕಾಯಿನ್‌: ಇದು ಅತ್ಯಂತ ಜನಪ್ರಿಯ ಕ್ರಿಪ್ಟೋಕರೆನ್ಸಿಯಾಗಿದೆ. ಡಿಜಿಟಲ್ ಕರೆನ್ಸಿಯಾಗಿರುವುದರಿಂದ ಯಾವುದೇ ರೀತಿಯಲ್ಲಿ ಮುದ್ರಣ ರೂಪದಲ್ಲಿ ಸಿಗುವುದಿಲ್ಲ. ರೂಪಾಯಿ, ಡಾಲರ್, ಯುರೋ ಗಳಂತೆ ಭೌತಿಕ ರೂಪದಲ್ಲಿ ಇರುವುದಿಲ್ಲ. ಯಾವುದೇ ದೇಶ, ಭಾಷೆ, ಬ್ಯಾಂಕುಗಳಿಗೆ ಇದು ಸೀಮಿತವಾಗಿಲ್ಲ. ಭಾರತ, ಸೌದಿ ಅರೇಬಿಯಾ, ಅಲ್ಜೀರಿಯಾ, ಬೊಲಿವಿಯಾ ಅನೇಕ ದೇಶಗಳಲ್ಲಿ ನಿಷೇಧವಾಗಿರುವ ಕ್ರಿಪ್ಟೋ ಕರೆನ್ಸಿ ಇತ್ತೀಚೆಗೆ ಭಾರಿ ಬೇಡಿಕೆ ಪಡೆದು ತನ್ನ ಮೌಲ್ಯ ಹೆಚ್ಚಿಸಿಕೊಂಡಿದೆ. ಆದರೆ, ಡಿಜಿಟಲ್ ಆಸ್ತಿ ರೂಪದಲ್ಲಿ ಕ್ರಿಪ್ಟೋ ಕರೆನ್ಸಿ ಬಳಕೆಯಾಗಬಹುದೇ ಹೊರತೂ ಸಾಮಾನ್ಯ ವ್ಯವಹಾರಕ್ಕೆ ಸೂಕ್ತವಲ್ಲ ಎಂದು ತಜ್ಞರು ಕೂಡಾ ಅಭಿಪ್ರಾಯಪಟ್ಟಿದ್ದಾರೆ.

English summary

Bitcoin rate steady On April 25: Latest Rate Here

Ethereum Rate Plunges than Bitcoin. Bitcoin rate steady On April 25: Here are the Latest Rate and Market Cap of major cryptocurrencies.
Company Search
COVID-19
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X