ಬ್ಲ್ಯೂಚಿಪ್ ಷೇರುಗಳಾದ ಹೀರೋ ಮೋಟೋಕಾರ್ಪ್, ಲಾರ್ಸನ್ ಅಂಡ್ ಟೂಬ್ರೋ ಮತ್ತು ಹಿಂದೂಸ್ತಾನ್ ಜಿಂಕ್ ಸೋಮವಾರದಂದು 52 ವಾರಗಳ ಕನಿಷ್ಠ ಮಟ್ಟವನ್ನು ತಲುಪಿವೆ. ಸೆನ್ಸೆಕ್ಸ್ ಸೂಚ್ಯಂಕವು 400 ಪಾಯಿಂಟ್ ನಷ್ಟು ಇಳಿದಿದೆ. ಜಾಗತಿಕ ಮಟ್ಟದಲ್ಲಿ ಕೊರೊನಾ ವೈರಾಣು ವ್ಯಾಪಿಸಿರುವ ಹಿನ್ನೆಲೆಯಲ್ಲಿ ಹೀಗೆ ದಿಢೀರ್ ಕುಸಿತ ಕಂಡಿದೆ.
ಎನ್ ಎಸ್ ಇಯಲ್ಲಿ ಹೀರೋ ಮೋಟೋಕಾರ್ಪ್ ಷೇರುಗಳು 52 ವಾರದ ಕನಿಷ್ಠ ಮಟ್ಟವಾದ ರು. 2,190.30 ತಲುಪಿತು. ಕಳೆದ ಕೆಲವು ತ್ರೈ ಮಾಸಿಕದಿಂದ ನಿರಂತರವಾಗಿ ಇಳಿಕೆ ಕಾಣುತ್ತಿರುವುದರಿಂದ ಹೂಡಿಕೆದಾರರು ಈ ಷೇರಿನ ಬಗ್ಗೆ ಆಸಕ್ತಿ ಕಳೆದುಕೊಳ್ಳುತ್ತಿದ್ದಾರೆ. 4 ಪರ್ಸೆಂಟ್ ತನಕ ಡಿವಿಡೆಂಡ್ ಪ್ರತಿಫಲ ನಿರೀಕ್ಷೆ ಮಾಡಬಹುದಾದ ಷೇರು ಇದು.
ಇದೇ ರೀತಿ 52 ವಾರಗಳ ಕನಿಷ್ಠ ಮಟ್ಟಕ್ಕೆ ಮುಟ್ಟಿದ ಮತ್ತೊಂದು ಕಂಪೆನಿಯೆಂದರೆ ಹಿಂದೂಸ್ತಾನ್ ಜಿಂಕ್. ಅದು 179 ರುಪಾಯಿಗೆ ಕುಸಿದಿದೆ. ಡಿಸೆಂಬರ್ ಅಂತ್ಯಕ್ಕೆ ಕೊನೆಯಾದ ತ್ರೈಮಾಸಿಕದಲ್ಲಿ ಫಲಿತಾಂಶ ಚೆನ್ನಾಗಿಲ್ಲ ಎಂಬ ಕಾರಣಕ್ಕೆ ಈ ಪರಿಸ್ಥಿತಿ ಆಗಿದೆ.

ಆರ್ಥಿಕತೆ ಹಿಂಜರಿತದ ಬಗ್ಗೆ ಹೂಡಿಕೆದಾರರು ಆತಂಕಗೊಂಡಿರುವುದರಿಂದ ಲಾರ್ಸನ್ ಅಂಡ್ ಟೂಬ್ರೋ (ಎಲ್ ಅಂಡ್ ಟಿ) 52 ವಾರಗಳ ಕನಿಷ್ಠ ಮಟ್ಟ ಮುಟ್ಟಿದೆ. ರು. 1252.65ರಲ್ಲಿ ವಹಿವಾಟು ನಡೆಸುತ್ತಿದೆ. ಈ ಎಲ್ಲ ಷೇರುಗಳಲ್ಲಿ ಮೌಲ್ಯಯುತ ಖರೀದಿಗೆ ಮುಂದಾದರೆ ಮುಂಬರುವ ದಿನಗಳಲ್ಲಿ ಉತ್ತಮ ಏರಿಕೆ ಕಾಣುವ ಸಾಧ್ಯತೆ ಇದೆ.
More From GoodReturns

ಚಿನ್ನದ ಬೆಲೆ ಸ್ಥಿರ: ಆರ್ಬಿಐ ನಿರ್ಧಾರದಿಂದ ದರ ಇಳಿಕೆಯಾಗುತ್ತಾ?

ಎಮಿಯಾಕ್ ಟೆಕ್ನಾಲಜೀಸ್ ಐಪಿಒ: ಹೂಡಿಕೆದಾರರ ಮುಗಿಬಿದ್ದ ಭರ್ಜರಿ ಬೇಡಿಕೆ!

ಆರ್ಬಿಐ ನಿರ್ಧಾರದಿಂದ ನಿಮ್ಮ ಇಎಂಐ ಹೊರೆ ಹೆಚ್ಚಾಗಲಿದೆಯೇ? ಎಚ್ಚರ!

ಆರ್ಬಿಐ ರೆಪೋ ದರ ಸ್ಥಿರತೆ: ನಿಮ್ಮ ಇಎಂಐ ಹೊರೆ ಇಳಿಯುತ್ತಾ?

ಆರ್ಬಿಐ ಪಾಲಿಸಿಗೂ ಮುನ್ನ ನಿಮ್ಮ ಬಂಡವಾಳಕ್ಕೆ ಈ ರಕ್ಷಣೆ ಬೇಕೇ?

ಆರ್ಬಿಐ ನಿರ್ಧಾರದ ನಂತರ ನಿಮ್ಮ ಹಣಕ್ಕೆ ಯಾವುದು ಬೆಸ್ಟ್?

ಆರ್ಬಿಐ ಪಾಲಿಸಿ ಅಬ್ಬರ: ನಿಮ್ಮ ಹಣ ಉಳಿಸಲು ಈ ತಂತ್ರ ಬಳಸಿ

ಆರ್ಬಿಐ ಬಡ್ಡಿ ದರ: ನಿಮ್ಮ ಇಎಂಐ ಹೊರೆ ಕಡಿಮೆಯಾಗುತ್ತಾ?

ಆರ್ಬಿಐ ನಿರ್ಧಾರ: ನಿಮ್ಮ ಎಸ್ಐಪಿ ಮತ್ತು ಇಎಂಐ ಬದಲಾಯಿಸಬೇಕೇ?

ಸೇಫ್ಟಿ ಕಂಟ್ರೋಲ್ಸ್ ಐಪಿಒ: ಹೂಡಿಕೆದಾರರೇ ಇಂದೇ ಕೊನೆಯ ಅವಕಾಶ!

ಗೃಹ ಸಾಲದ ಇಎಂಐ ಇಳಿಕೆ: ಆರ್ಬಿಐ ನಿರ್ಧಾರದ ಅಸಲಿ ಸತ್ಯ



Click it and Unblock the Notifications