ಜರ್ಮನಿಯ ಐಷಾರಾಮಿ ಕಾರು ತಯಾರಕ ಬಿಎಂಡಬ್ಲ್ಯು ಇಂಡಿಯಾ ತನ್ನ 46 ವರ್ಷದ ಅಧ್ಯಕ್ಷ ಮತ್ತು ಸಿಇಒ ರುದ್ರತೇಜ್ ಸಿಂಗ್ ಅವರ ಹಠಾತ್ ನಿಧನದಿಂದ ತತ್ತರಿಸಿದೆ. ಸೋಮವಾರ ಬೆಳಗ್ಗೆ ಹೃದಯಾಘಾತದಿಂದಾಗಿ ರುದ್ರತೇಜ್ ಸಿಂಗ್(46) ಅವರು ನಿಧನರಾಗಿದ್ದಾರೆ.
ರುದ್ರತೇಜ್ ಅವರು ಬಿಎಂಡಬ್ಲ್ಯು ಗ್ರೂಪ್‌ಗೆ 2019ರ ಆಗಸ್ಟ್‌ನಲ್ಲಿ ಸೇರ್ಪಡೆಯಾಗಿದ್ದರು. ಇದಕ್ಕೂ ಮೊದಲು ಅವರು ರಾಯಲ್ ಎನ್‌ಫೀಲ್ಡ್‌ನಲ್ಲಿ ಗ್ಲೋಬಲ್ ಪ್ರೆಸಿಡೆಂಟ್ ಆಗಿ ನಾಲ್ಕು ವರ್ಷ ಆರು ತಿಂಗಳು ಕೆಲಸ ಮಾಡಿದರು. ಇಷ್ಟಲ್ಲದೆ ಇವರು ವಾಹನ ತಯಾರಿಕೆ ಮತ್ತು ಇತರ ಉದ್ದಿಮೆಗಳಲ್ಲಿ 25 ವರ್ಷಕ್ಕಿಂತ ಹೆಚ್ಚಿನ ಸೇವಾ ಅನುಭವ ಹೊಂದಿದ್ದರು.

ಅವರ ಸಾವಿಗೆ ಕಾರಣವನ್ನು ಇನ್ನೂ ಕಂಡುಹಿಡಿಯಲಾಗುತ್ತಿದೆ ಎಂದು ಕಂಪನಿ ಹೇಳಿದೆ. ರುದ್ರತೇಜ್ ಸಿಂಗ್ ಅವರನ್ನು ರೂಡಿ ಎಂದು ಅವರ ಸ್ನೇಹಿತರು ಮತ್ತು ಸಹೋದ್ಯೋಗಿಗಳು ಪ್ರೀತಿಯಿಂದ ಕರೆಯುತ್ತಿದ್ದಂತೆ. ಗುರಗಾಂವ್‌ನಲ್ಲಿರುವ ತಮ್ಮ ಮನೆಯಲ್ಲಿ ಟ್ರೆಡ್‌ಮಿಲ್‌ನಲ್ಲಿ ರನ್ ಮಾಡುವಾಗ ಹೃದಯ ಸ್ತಂಭನದಿಂದ ಸಾವನ್ನಪ್ಪಿದರು ಎಂದು ಹೇಳಲಾಗಿದೆ.
ಭಾರತೀಯ ವಾಹನ ಉದ್ಯಮಕ್ಕೆ ಪ್ರವೇಶಿಸುವ ಮೊದಲು ರುದ್ರತೇಜ್ ಸಿಂಗ್ ಅವರಿಗೆ ಯೂನಿಲಿವರ್‌ನಲ್ಲಿ 16 ವರ್ಷಗಳ ಅನುಭವವಿತ್ತು. ಅವರು 1998 ರಲ್ಲಿ ಯುನಿಲಿವರ್‌ನ ಪಶ್ಚಿಮ ಯುಪಿ ವಲಯದ ಏರಿಯಾ ಸೇಲ್ಸ್ ಮ್ಯಾನೇಜರ್ ಆಗಿ ಸೇರಿಕೊಂಡರು. ಅಲ್ಲಿಂದ ಅವರು ಅಕ್ಟೋಬರ್ 2012 ರಲ್ಲಿ ದಕ್ಷಿಣ ಏಷ್ಯಾ ಪ್ರದೇಶದ ಉಪಾಧ್ಯಕ್ಷರಾದರು.
More From GoodReturns

Silver Rate Today: ಭಾರತದಲ್ಲಿ ನಿಂತಲ್ಲೇ ನಿಂತ ಬೆಳ್ಳಿ ಬೆಲೆ! ಎಷ್ಟಿದೆ ಇಂದಿನ ದರ?

Silver Rate: ಭಾರತದಲ್ಲಿ ನಿಂತಲ್ಲೇ ನಿಂತ ಬೆಳ್ಳಿ ದರ! ಎಷ್ಟಿದೆ ಗೊತ್ತಾ ಬೆಲೆ?

Biggest Airport: ಭಾರತದ ಅತಿದೊಡ್ಡ ವಿಮಾನ ನಿಲ್ದಾಣ ಸಂಚಾರಕ್ಕೆ ಸಿದ್ಧ; 45 ದಿನದೊಳಗೆ ಆರಂಭ

Natural Gas Supply: ದೇಶದಲ್ಲಿ ಅನಿಲ ಕೊರತೆ..ಹೊಸ ಆದೇಶದ ಪ್ರಕಾರ ಯಾರಿಗೆ ಮೊದಲ ಆದ್ಯತೆ ಎಂದು ತಿಳಿಯಿರಿ

LPG Cylinder Shortage Live Updates: ಭಾರತದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ಪಿಎಂ ಮೋದಿ ಮಹತ್ವದ ಸಭೆ

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Silver Price Today: ಭಾನುವಾರ ನಿಂತಲ್ಲೇ ನಿಂತ ಬೆಳ್ಳಿ ದರ! ಅತ್ತ ಏರಿಕೆಯೂ ಇಲ್ಲ, ಇಳಿಕೆಯೂ ಇಲ್ಲ

Egg Price Down: ಬೆಂಗಳೂರು ಮೊಟ್ಟೆ ಪ್ರಿಯರಿಗೆ ಗುಡ್ ನ್ಯೂಸ್; ಬೆಲೆ ಭಾರೀ ಇಳಿಕೆ

LPG ಪೂರೈಕೆಯಲ್ಲಿ ಕೊರತೆ; ದೇಶದಲ್ಲಿ ಎಲ್ಪಿಜಿ ಉತ್ಪಾದನೆ 10% ಹೆಚ್ಚಳ

India Oil: ಇಸ್ರೇಲ್, ಯುಎಸ್ ಮತ್ತು ಇರಾನ್ ನಡುವೆ ವಾರ್! ಭಾರತದ ಕಚ್ಚಾ ತೈಲದ ಮೇಲೆ ಪರಿಣಾಮ ಬೀರಿದ್ದು ಹೇಗೆ?

Market Prediction: ನಾಳೆ ಹೇಗಿರಲಿದೆ ಷೇರು ಮಾರುಕಟ್ಟೆ? ಲಾಭವೋ? ನಷ್ಟವೋ? ಇಲ್ಲಿದೆ ಓದಿ



Click it and Unblock the Notifications