ನವದೆಹಲಿ, ಫೆಬ್ರುವರಿ 1: ಪ್ರಸಕ್ತ ಸಾಲಿನ ಬಜೆಟ್ ಮಂಡನೆ ಹಿನ್ನೆಲೆಯಲ್ಲಿ ಅಧಿವೇಶ ಆರಂಭಕ್ಕೂ ಮುನ್ನ ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ಕೇಂದ್ರ ಸಚಿವ ಸಂಪುಟ ಸಭೆ ಸಂಸತ್ ಭವನದಲ್ಲಿ ನಡೆದಿದೆ. ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ಅವರು ಬಜೆಟ್ ಮಂಡನೆ ಮಾಡಲಿದ್ದು, ಅದಕ್ಕೂ ಮೊದಲು ಬಜೆಟ್‌ಗೆ ಸಂಪುಟದ ಅನುಮೋದನೆ ದೊರಕಬೇಕಿದೆ.
ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನಡೆಯಲಿರುವ ಸಭೆಯಲ್ಲಿ ಬಜೆಟ್ ಸ್ವರೂಪದ ಕುರಿತು ಚರ್ಚೆ ನಡೆಯಲಿದ್ದು, ಬಳಿಕ ಅದಕ್ಕೆ ಔಪಚಾರಿಕ ಅನುಮೋದನೆ ದೊರಕಲಿದೆ. ಸಭೆ ಮುಗಿದ ಬಳಿಕ ಅಧಿವೇಶನ ಆರಂಭವಾಗಲಿದ್ದು, ನಿರ್ಮಲಾ ಸೀತಾರಾಮನ್ ಬಜೆಟ್ ಮಂಡನೆ ಮಾಡಲಿದ್ದಾರೆ. ಅವರಿಗೆ ಹಣಕಾಸು ಖಾತೆ ರಾಜ್ಯ ಸಚಿವ ಅನುರಾಗ್ ಠಾಕೂರ್ ನೆರವು ನೀಡಲಿದ್ದಾರೆ.
ಇದಕ್ಕೂ ಮುನ್ನ ರಾಷ್ಟ್ರಪತಿ ಭವನದಲ್ಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರನ್ನು ಭೇಟಿ ಮಾಡಿದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಅವರ ಕಿರಿಯ ಸಹೋದ್ಯೋಗಿ ಅನುರಾಗ್ ಠಾಕೂರ್ ಮತ್ತು ಹಿರಿಯ ಅಧಿಕಾರಿಗಳು ಸಮಾಲೋಚನೆ ನಡೆಸಿದರು.

ಬಜೆಟ್ ಮಂಡನೆ ಮುಗಿದು ಅಧಿವೇಶನ ಮುಕ್ತಾಯವಾದ ನಂತರ ಸಂಜೆ 4.30ರ ಸುಮಾರಿಗೆ ಕಾಂಗ್ರೆಸ್ ಪಕ್ಷ ಸುದ್ದಿಗೋಷ್ಠಿ ನಡೆಸಲಿದೆ. ಈ ಬಾರಿಯ ಬಜೆಟ್ ಬಗ್ಗೆ ಜನರಲ್ಲಿ ಅಪಾರ ನಿರೀಕ್ಷೆಗಳಿವೆ. ನಿರುದ್ಯೋಗ ಸಮಸ್ಯೆ, ಆರ್ಥಿಕ ಸಂಕಷ್ಟ, ಕೊರೊನಾ ವೈರಸ್ ಸೋಂಕಿನಿಂದ ಉಂಟಾಗಿರುವ ಸಮಸ್ಯೆಗಳು ಸೇರಿದಂತೆ ಅನೇಕ ವಲಯಗಳಲ್ಲಿನ ಸವಾಲುಗಳಿಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಬಜೆಟ್ ನೆರವಾಗಲಿದೆ ಎಂದು ನಿರೀಕ್ಷಿಸಲಾಗಿದೆ.
More From GoodReturns

Silver Rate Kannada: ಬೆಳ್ಳಿ ಪ್ರಿಯರಿಗೆ ಗುಡ್ ನ್ಯೂಸ್; ಒಂದೇ ದಿನ 5,000 ರೂ. ಇಳಿಕೆ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

T20 World Cup: ಟಿ20 ವಿಶ್ವಕಪ್ನಲ್ಲಿ ನ್ಯೂಜಿಲೆಂಡ್ ವಿರುದ್ಧ ಭಾರತ 96 ರನ್ಗಳ ಗೆಲುವು...ತಂಡಕ್ಕೆ ಸಿಕ್ಕ ಬಹುಮಾನಗಳೇನು?

Silver Rate: ಭಾರತದಲ್ಲಿ ನಿಂತಲ್ಲೇ ನಿಂತ ಬೆಳ್ಳಿ ದರ! ಎಷ್ಟಿದೆ ಗೊತ್ತಾ ಬೆಲೆ?

Bank Holidays: ಮಾರ್ಚ್ನಲ್ಲಿ ಬ್ಯಾಂಕ್ಗಳಿಗೆ 18 ದಿನ ರಜೆ! ಗ್ರಾಹಕರೇ ಇಲ್ಲಿ ಗಮನಿಸಿ

Silver Rate Kannada: ಬೆಳ್ಳಿ ದರದಲ್ಲಿ ಇಂದು ಭರ್ಜರಿ ಇಳಿಕೆ! ಒಂದೇ ದಿನ 20,000 ರೂ. ಕುಸಿತ

Silver Price Today: ಭಾನುವಾರ ನಿಂತಲ್ಲೇ ನಿಂತ ಬೆಳ್ಳಿ ದರ! ಅತ್ತ ಏರಿಕೆಯೂ ಇಲ್ಲ, ಇಳಿಕೆಯೂ ಇಲ್ಲ

Silver Rate Today: ಒಂದೇ ದಿನ 10,000 ಇಳಿಕೆ ಕಂಡ ಬೆಳ್ಳಿ ದರ! ಎಷ್ಟಿದೆ ಗೊತ್ತಾ ಬೆಲೆ?

India Oil: ಇಸ್ರೇಲ್, ಯುಎಸ್ ಮತ್ತು ಇರಾನ್ ನಡುವೆ ವಾರ್! ಭಾರತದ ಕಚ್ಚಾ ತೈಲದ ಮೇಲೆ ಪರಿಣಾಮ ಬೀರಿದ್ದು ಹೇಗೆ?

Market Prediction: ನಾಳೆ ಹೇಗಿರಲಿದೆ ಷೇರು ಮಾರುಕಟ್ಟೆ? ಲಾಭವೋ? ನಷ್ಟವೋ? ಇಲ್ಲಿದೆ ಓದಿ

iPhone EMI: ಐಫೋನ್ EMIನಲ್ಲಿ ತಗೊಳೋದು ಎಷ್ಟು ಸೇಫ್? ಮಾಸಿಕ ಪಾವತಿ ಸುಲಭ, ಆದರೆ ನಿಮ್ಮ ಹಣಕಾಸು ಸುರಕ್ಷಿತವೇ?



Click it and Unblock the Notifications