ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಕೇಂದ್ರ ಬಜೆಟ್ ಅನ್ನು ಮಂಡನೆ ಮಾಡುತ್ತಿದ್ದಾರೆ. ಈ ನಡುವೆ ದೇಶದಲ್ಲಿ ಇಂದು ಚಿನ್ನದ ಬೆಲೆ ಇಳಿಕೆ ಆಗಿದೆ. ಫೆಬ್ರವರಿ 01ರಂದು 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆಯು 1000 ರೂಪಾಯಿ ಇಳಿಕೆ ಆಗಿದ್ದು ಚಿನ್ನದ ಬೆಲೆಯು 44,900 ರೂ ಆಗಿದೆ.
ಚಿನ್ನದ ಬೆಲೆ ಒಂದು ನಗರದಿಂದ ಮತ್ತೊಂದು ನಗರಕ್ಕೆ ಬದಲಾಗುತ್ತದೆ. ಮುಖ್ಯವಾದ ವಿಷಯವೆಂದರೆ ಸಾಮಾನ್ಯ ಚಿನ್ನದ ದರ ಮತ್ತು ಹಾಲ್‌ಮಾರ್ಕ್ ಚಿನ್ನದ ದರಗಳ ನಡುವೆ ಯಾವುದೇ ವ್ಯತ್ಯಾಸವಿಲ್ಲ. ನಿಮಗೆ ಹಾಲ್‌ಮಾರ್ಕ್ ಮಾಡಿದ ಚಿನ್ನದ ದರವನ್ನು ನೀಡಲು ಯಾರೂ ಹೆಚ್ಚುವರಿ ಶುಲ್ಕ ವಿಧಿಸುವುದಿಲ್ಲ. ಸಾಮಾನ್ಯ ಚಿನ್ನವನ್ನು ಮಾರಾಟ ಮಾಡುವ ದರವೇ ಇದು. ಬೆಂಗಳೂರಿನಲ್ಲಿ ಆಯಾ ದಿನದ ಚಿನ್ನದ ಬೆಲೆಯನ್ನು ಚಿನ್ನದ ವ್ಯಾಪಾರಿಗಳ ಒಕ್ಕೂಟ ಅಥವಾ ಸ್ವತಃ ಚಿನ್ನದ ವ್ಯಾಪಾರಿಗಳು ನಿರ್ಧರಿಸುತ್ತಾರೆ. ದೈನಂದಿನ ಚಿನ್ನದ ಬೆಲೆ ಅಂತಾರಾಷ್ಟ್ರೀಯ ಟ್ರೆಂಡ್ ಮತ್ತು ಚಿನ್ನದ ಮೇಲಿನ ಆಮದು ಸುಂಕವನ್ನು ಆಧರಿಸಿರುತ್ತದೆ. ಡಾಲರ್ ಮೌಲ್ಯ ಹೆಚ್ಚಾದಂತೆ ಚಿನ್ನದ ಮೌಲ್ಯ ಕುಸಿತ ಕಾಣುವುದನ್ನು ಜಾಗತಿಕ ಮಾರುಕಟ್ಟೆಯಲ್ಲಿ ಕಾಣಬಹುದು.
ಎಂಸಿಎಕ್ಸ್‌ನಲ್ಲಿ ಫೆಬ್ರವರಿ 1ರ ವಹಿವಾಟು ಫ್ಯೂಚರ್ ಗೋಲ್ಡ್ ಕೊಂಚ ಹಿಗ್ಗಿ 47781.00 ರು ಆಗಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ, ಸ್ಪಾಟ್ ಗೋಲ್ಡ್ ಪ್ರತಿ ಔನ್ಸ್ (1 ounce=28.3495 ಗ್ರಾಂ) ಗೆ ಶೇ 0.22ರಷ್ಟು ಏರಿಕೆಯಾಗಿ 1,801.95 ಯುಎಸ್ ಡಾಲರ್‌ನಷ್ಟಿದೆ. ಬೆಳ್ಳಿ ಪ್ರತಿ ಔನ್ಸ್ ಬೆಲೆ ಶೇ 0.19ರಷ್ಟು ಏರಿಕೆಯಾಗಿ 22.53 ಯುಎಸ್ ಡಾಲರ್ ಆಗಿದೆ.

ಬೆಂಗಳೂರಿನಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 44,900 ರೂ ಇದೆ. ಮುಂಬೈನಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 44,900 ರೂ ಇದ್ದು ದೆಹಲಿಯಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 44,900 ರೂ ಇದೆ. ಚೆನ್ನೈನಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 45,270 ರೂ ಇದೆ. ಕೋಲ್ಕತ್ತದಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 44,900 ರೂಪಾಯಿ ಆಗಿದೆ.
ಈ ಬೆಲೆ ಕುಸಿತವು ಗ್ರಾಹಕರನ್ನು ಚಿನ್ನ ಖರೀದಿಸಲು ಆಕರ್ಷಿಸುತ್ತಿದೆ. ಆದರೆ, ಚಿನ್ನದ ಬೆಲೆಯಲ್ಲಿ ಇಳಿಕೆ ಕಂಡುಬಂದರೆ, ಬೆಳ್ಳಿಯ ಬೆಲೆಯಲ್ಲಿ ಸ್ವಲ್ಪ ಹೆಚ್ಚಳವಾಗಿದೆ. ದೇಶದ ವಿವಿಧ ನಗರಗಳಲ್ಲಿ 10 ಗ್ರಾಂ 22-ಕ್ಯಾರೆಟ್ ಚಿನ್ನದ ಪ್ರಸ್ತುತ ಬೆಲೆ ಇಲ್ಲಿದೆ ಮುಂದೆ ಓದಿ...
ನಗರವಾರು ದರ ಹೇಗಿದೆ?
ಚೆನ್ನೈ - 22ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 45,270 ರೂ
ಮುಂಬೈ - 10 ಗ್ರಾಂ 22 ಕ್ಯಾರೆಟ್ ಚಿನ್ನಕ್ಕೆ 44,900 ರೂ
ಕೋಲ್ಕತ್ತಾ - 10 ಗ್ರಾಂ 22-ಕ್ಯಾರೆಟ್ ಚಿನ್ನಕ್ಕೆ 44,900 ರೂ
ಬೆಂಗಳೂರು - 10 ಗ್ರಾಂ 22 ಕ್ಯಾರೆಟ್ ಚಿನ್ನಕ್ಕೆ 44,900 ರೂ
ಹೈದರಾಬಾದ್ - 10 ಗ್ರಾಂ 22 ಕ್ಯಾರೆಟ್ ಚಿನ್ನಕ್ಕೆ 44,900 ರೂ
ಪುಣೆ - 10 ಗ್ರಾಂ 22 ಕ್ಯಾರೆಟ್ ಚಿನ್ನಕ್ಕೆ 44,850 ರೂ
ಅಹಮದಾಬಾದ್ - 10 ಗ್ರಾಂ 22 ಕ್ಯಾರೆಟ್ ಚಿನ್ನಕ್ಕೆ 45,000 ರೂ
ಚಂಡೀಗಢ - 10 ಗ್ರಾಂ 22 ಕ್ಯಾರೆಟ್ ಚಿನ್ನಕ್ಕೆ 45,600 ರೂ.


Click it and Unblock the Notifications