ಕೇಂದ್ರ ಬಜೆಟ್ 2022 ಅನ್ನು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಡನೆ ಮಾಡುತ್ತಿದ್ದು, ಭಾರತದ ಬೆಳವಣಿಗೆಯು ಶೇಕಡ 9.2 ಎಂದು ಅಂದಾಜಿಸಲಾಗಿದೆ ಎಂದು ತಿಳಿಸಿದ್ದಾರೆ. "2023 ರ ಹಣಕಾಸು ವರ್ಷದಲ್ಲಿ ಭಾರತದ ಆರ್ಥಿಕ ಬೆಳವಣಿಗೆಯು 9.2 ಶೇಕಡಾ ಎಂದು ಅಂದಾಜಿಸಲಾಗಿದೆ. ಇದು ಎಲ್ಲಾ ದೊಡ್ಡ ಆರ್ಥಿಕತೆಗಳಲ್ಲಿ ಅತ್ಯಧಿಕ ಬೆಳವಣಿಗೆ ಆಗಿದೆ," ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಗಳವಾರ ಸಂಸತ್ತಿನಲ್ಲಿ ತಮ್ಮ ಬಜೆಟ್ 2022 ಭಾಷಣದಲ್ಲಿ ಹೇಳಿದರು.
ಆರ್ಥಿಕ ಬೆಳವಣಿಗೆಯನ್ನು ಅಭಿನಂದಿಸುವುದು ಬಜೆಟ್‌ನ ಕೇಂದ್ರಬಿಂದುವಾಗಿರುತ್ತದೆ. ಬಜೆಟ್ ಫಿನ್‌ಟೆಕ್ ಮತ್ತು ತಂತ್ರಜ್ಞಾನ ಆಧಾರಿತ ಅಭಿವೃದ್ಧಿಯನ್ನು ಉತ್ತೇಜಿಸುತ್ತದೆ ಎಂದು ಕೂಡಾ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ. ಮುಂದಿನ 25 ವರ್ಷಗಳಲ್ಲಿ ಆರ್ಥಿಕ ಬೆಳವಣಿಗೆಗೆ ಬಜೆಟ್ ಅಡಿಪಾಯ ಹಾಕುತ್ತದೆ ಎಂದು ಭರವಸೆ ನೀಡಿದರು.
ಮುಂಬರುವ ಹಣಕಾಸು ವರ್ಷದಲ್ಲಿ ಭಾರತವು ಸವಾಲುಗಳನ್ನು ಎದುರಿಸಲು ಸಿದ್ಧವಾಗಿದೆ ಎಂದು ಹಣಕಾಸು ಸಚಿವರು ಹೇಳಿದರು. ಎಲ್ಲರ ಪ್ರಾರ್ಥನೆಯಿಂದ ರಾಷ್ಟ್ರವು ಮುಂದೆ ಬೆಳೆಯಲು ಸಾಧ್ಯವಾಗುತ್ತದೆ ಎಂದರು. ಡಿಸೆಂಬರ್ 2021 ರಲ್ಲಿ ನಡೆದ ತನ್ನ ಹಣಕಾಸು ನೀತಿ ಸಮಿತಿ ಸಭೆಯಲ್ಲಿ ಭಾರತೀಯ ರಿಸರ್ವ್ ಬ್ಯಾಂಕ್ ಅಂದಾಜಿಸಿರುವ 9.5 ಶೇಕಡಾ ಬೆಳವಣಿಗೆಗಿಂತ ಹಣಕಾಸು ವರ್ಷ 2022ರ ಜಿಡಿಪಿ ಬೆಳವಣಿಗೆಯ ಅಂದಾಜು ಕಡಿಮೆ ಆಗಿದೆ. 9.2 ಶೇಕಡಾ ಎಂದು ಅಂದಾಜು ಮಾಡಲಾಗಿದೆ.

ಆರ್ಥಿಕ ಸಮೀಕ್ಷೆ ಹೇಳುವುದು ಏನು?
2021-22 ನೇ ಸಾಲಿನ ಆರ್ಥಿಕ ಸಮೀಕ್ಷೆಯನ್ನು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಲೋಕಸಭೆಯಲ್ಲಿ ಮಂಡನೆ ಮಾಡಿದ್ದಾರೆ. ಈ ಆರ್ಥಿಕ ಸಮೀಕ್ಷೆಯಲ್ಲಿ 2023ರ ಸಾಲಿನಲ್ಲಿ ಜಿಡಿಪಿ ಬೆಳವಣಿಗೆ ದರವನ್ನು ಶೇ.8-8.5 ಎಂದು ಅಂದಾಜು ಮಾಡಲಾಗಿದ್ದು, 2022ನೇ ಸಾಲಿನಲ್ಲಿ ದೇಶದ ಜಿಡಿಪಿ ಶೇ. 9.2 ಪ್ರಗತಿ ದಾಖಲಿಸುವ ನಿರೀಕ್ಷೆ ವ್ಯಕ್ತಪಡಿಸಿದೆ.
ಇನ್ನು 2022ನೇ ಸಾಲಿನಲ್ಲಿ ದೇಶದಲ್ಲಿ ಕೃಷಿ ಕ್ಷೇತ್ರದ ಬೆಳವಣಿಗೆ ದರ ಶೇಕಡ 3.9 ಹಾಗೂ ಕೈಗಾರಿಕಾ ಕ್ಷೇತ್ರದ ಬೆಳವಣಿಗೆ ದರ ಶೇಕಡ 11.8 ಆಗಿರಲಿದೆ ಎಂದು ಆರ್ಥಿಕ ಸಮೀಕ್ಷೆಯು ಅಂದಾಜು ಮಾಡಿದೆ. ವಿಶ್ವಬ್ಯಾಂಕ್ ಪ್ರಕಾರ ಭಾರತವು ಸುಮಾರು ಶೇಕಡ 8.7ರಷ್ಟು ಜಿಡಿಪಿ ಬೆಳವಣಿಗೆ ಹೊಂದುವ ನಿರೀಕ್ಷೆ ಇದೆ. ಆದರೆ ಕೇಂದ್ರ ಸರ್ಕಾರದ ಆರ್ಥಿಕ ಸಮೀಕ್ಷೆಯು 2023ರ ಸಾಲಿನಲ್ಲಿ ಜಿಡಿಪಿ ಬೆಳವಣಿಗೆ ದರವನ್ನು ಶೇ.8-8.5 ಎಂದು ಅಂದಾಜು ಮಾಡಿದೆ.
ಸೇವಾ ವಲಯ 2022ನೇ ಸಾಲಿನಲ್ಲಿ ಶೇ.8.2ರಷ್ಟು ಬೆಳವಣಿಗೆ ದಾಖಲಿಸಲಿದೆ ಎಂಬ ನಿರೀಕ್ಷೆಯನ್ನು ಆರ್ಥಿಕ ಸಮೀಕ್ಷೆ ವ್ಯಕ್ತಪಡಿಸಿದೆ. ಭಾರತವು ಬಂಡವಾಳ ವೆಚ್ಚವನ್ನು ನಿಭಾವಣೆ ಮಾಡಬಲ್ಲಷ್ಟು ಸದೃಢವಾದ ಆರ್ಥಿಕತೆಯನ್ನು ಹೊಂದಿದೆ ಎಂದು ಕೂಡಾ ಆರ್ಥಿಕ ಸಮೀಕ್ಷೆಯು ಉಲ್ಲೇಖ ಮಾಡಿದೆ.
More From GoodReturns

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Gold Rate Today: ಮಧ್ಯಪ್ರಾಚ್ಯದಲ್ಲಿ ಸಂಘರ್ಷ; ಚಿನ್ನದ ಬೆಲೆ ಸ್ಥಿರ! ಎಷ್ಟಿದೆ ದರ?

Bengaluru to Pune: ಈ ಯೋಜನೆಯಿಂದ ಬೆಂಗಳೂರು-ಪುಣೆ ಪ್ರಯಾಣ 7 ಗಂಟೆ ಮಾತ್ರ...ಹೊಸ ಹೆದ್ದಾರಿ ಯೋಜನೆ ವಿವರ!

Karnataka Budget: ಏರಿಕೆಯಾಗುತ್ತಿರುವ ಸಾಲ, ಹೆಚ್ಚುತ್ತಿರುವ ವೆಚ್ಚ...ಬಜೆಟ್ನಲ್ಲಿ ಸಮತೋಲನ ಸಾಧಿಸುವುದು ಸಾಧ್ಯವೇ?



Click it and Unblock the Notifications