For Quick Alerts
ALLOW NOTIFICATIONS  
For Daily Alerts

ಡಿಜಿಟಲ್ ಕರೆನ್ಸಿಯನ್ನು ನಗದಿನೊಂದಿಗೆ ಬದಲಾಯಿಸಿಕೊಳ್ಳಬಹುದು: ಮೋದಿ

|

ನವದೆಹಲಿ, ಫೆಬ್ರವರಿ 2: ಡಿಜಿಟಲ್ ಕರೆನ್ಸಿಯನ್ನು ನಗದಿನೊಂದಿಗೆ ಬದಲಾಯಿಸಿಕೊಳ್ಳಬಹುದು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

 

ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು 2022ರ ಕೇಂದ್ರ ಬಜೆಟ್‌ನಲ್ಲಿ ಸೆಂಟ್ರಲ್ ಬ್ಯಾಂಕ್ ಡಿಜಿಟಲ್ ಕರೆನ್ಸಿ ಘೋಷಣೆ ಮಾಡಿದ ಬಳಿಕ, ಪ್ರಧಾನಿ ನರೇಂದ್ರ ಮೋದಿ ಅವರು ಬುಧವಾರ ರಾಷ್ಟ್ರವನ್ನುದ್ದೇಶಿಸಿ ಮಾಡಿದ ಭಾಷಣದಲ್ಲಿ ಈ ವಿಷಯದ ಬಗ್ಗೆ ಪ್ರಸ್ತಾಪಿಸಿದ್ದಾರೆ.

ಡಿಜಿಟಲ್ ಕರೆನ್ಸಿಯೊಂದಿಗೆ ನಗದು ಹಣವನ್ನೂ ಬದಲಾಯಿಸಿಕೊಳ್ಳಬಹುದು ಎಂಬುದಾಗಿ ತಿಳಿಸಿದ್ದಾರೆ. ಮುಂಬರುವ ವರ್ಷದಲ್ಲಿ ಡಿಜಿಟಲ್ ಕರೆನ್ಸಿ ಡಿಜಿಟಲ್ ಆರ್ಥಿಕತೆಗೆ ಉತ್ತೇಜನ ನೀಡಲಿದೆ ಎಂದು ಹೇಳಿರುವ ಪ್ರಧಾನಿ ಮೋದಿ, ಆರ್‌ಬಿಐ ಬೆಂಬಲಿತ ಸಿಬಿಡಿಸಿಯನ್ನು ಕೇಂದ್ರ ಬ್ಯಾಂಕ್ ನಿಯಂತ್ರಿಸುತ್ತದೆ ಮತ್ತು ಮೇಲ್ವಿಚಾರಣೆ ಮಾಡುತ್ತದೆ ಮತ್ತು ಭಾರತದ ಫಿಯೆಟ್ ಕರೆನ್ಸಿಯ ಡಿಜಿಟಲ್ ಅವತಾರವಾಗಲಿದೆ ಎಂದು ಹೇಳಿದ್ದಾರೆ.

ಡಿಜಿಟಲ್ ಕರೆನ್ಸಿಯನ್ನು ನಗದಿನೊಂದಿಗೆ ಬದಲಾಯಿಸಿಕೊಳ್ಳಬಹುದು

ಆರ್‌ಬಿಐನ ಡಿಜಿಟಲ್ ಕರೆನ್ಸಿಯು ಭೌತಿಕ ಕರೆನ್ಸಿಯ ಪರಿಷ್ಕೃತ ಆವೃತ್ತಿಯಾಗಿರುವುದರಿಂದ ಕಾನೂನು ಟೆಂಡರ್ ಆಗಿರುತ್ತದೆ ಎಂದು ಪ್ರಧಾನಿ ಸುಳಿವು ನೀಡಿದ್ದಾರೆ.
ಜನರು ಡಿಜಿಟಲ್ ಕರೆನ್ಸಿಯನ್ನು ಭೌತಿಕ ಕರೆನ್ಸಿಗೆ ಮತ್ತು ಪ್ರತಿಯಾಗಿ ಸುಲಭವಾಗಿ ಪರಿವರ್ತಿಸಬಹುದು ಎಂದು ಮೋದಿ ಹೇಳಿದರು.

ಇದು ಭಾರತದ ಡಿಜಿಟಲ್ ಆರ್ಥಿಕತೆ ಮತ್ತು ಪರಿಸರ ವ್ಯವಸ್ಥೆಯನ್ನು ಬಲಪಡಿಸುತ್ತದೆ ಎಂದು ತಿಳಿಸಿದ್ದಾರೆ. ಡಿಜಿಟಲ್ ಕರೆನ್ಸಿ ವಿತರಣೆಗೆ ಕೇಂದ್ರ ಸರ್ಕಾರ ತೀರ್ಮಾನಿಸಿದೆ. ಬ್ಲಾಕ್‌ಚೈನ್‌ ಟೆಕ್ನಾಲಜಿ ಮೂಲಕ ಡಿಜಿಟಲ್ ರೂಪಾಯಿ ವಿತರಣೆಗೆ ನಿರ್ಧರಿಸಿದೆ.

2022-23ರಲ್ಲಿ ಬ್ಲಾಕ್ ಚೈನ್ ತಂತ್ರಜ್ಞಾನ ಬಳಸಿ ಡಿಜಿಟಲ್ ಹಣ ಬಿಡುಗಡೆ ಮಾಡಲಾಗುವುದು ಎಂದು ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ. ಆರ್‌ಬಿಐ ತನ್ನದೇ ಆದ ವರ್ಚ್ಯುವಲ್ ಕರೆನ್ಸಿ ಆವೃತ್ತಿಯನ್ನು ಹೊರತರುವ ಪ್ರಕ್ರಿಯೆಯಲ್ಲಿದೆ ಎಂದು ಅವರು ಹೇಳಿದ್ದಾರೆ.

ಈ ಬಾರಿಯ ಬಜೆಟ್​ನಲ್ಲಿ ಬಂಡವಾಳ ವೆಚ್ಚವನ್ನು ಶೇ 35.4ರಷ್ಟು ಹೆಚ್ಚಿಸಲಾಗಿದೆ. ದೇಶದ ರಾಷ್ಟ್ರೀಯ ಆಸ್ತಿ ಹೆಚ್ಚಿಸುವ ಉದ್ದೇಶಕ್ಕೆ ಈ ನಿಧಿ ಬಳಕೆಯಾಗಲಿದೆ. ಒಟ್ಟು ಜಿಡಿಪಿಯ ಶೇ 2.9ರಷ್ಟು ಮೊತ್ತವನ್ನು ಬಂಡವಾಳ ವೆಚ್ಚಕ್ಕೆ ಮೀಸಲಿಡಲಾಗಿದೆ. 2022-2023ರ ಆರ್ಥಿಕ ವರ್ಷದಲ್ಲಿ ಭಾರತ ಸರ್ಕಾರವು 10.9 ಲಕ್ಷ ಕೋಟಿ ರೂ. ಮೊತ್ತವನ್ನು ಬಂಡವಾಳ ವೆಚ್ಚಕ್ಕೆ ಬಳಸಲು ನಿರ್ಧರಿಸಿದೆ.

 

ಬಂಡವಾಳ ಹೂಡಿಕೆ ಮೂಲಕ ಆರ್ಥಿಕ ಪ್ರಗತಿಗೆ ಯೋಜನೆ ಜಾರಿಗೊಳಿಸಲಾಗುವುದು. ಇಂಧನ ಕ್ಷೇತ್ರದಲ್ಲಿ ಖಾಸಗಿ ಬಂಡವಾಳ ಹೂಡಿಕೆಗೆ ಅವಕಾಶ ನೀಡಲಾಗುವುದು. 7.5 ಲಕ್ಷ ಕೋಟಿ ಬಂಡವಾಳ ಹೂಡಿಕೆಗೆ ಕೇಂದ್ರ ನಿರ್ಧಾರ ಮಾಡಿದೆ.

ತಪ್ಪುಗಳನ್ನು ಸರಿಪಡಿಸಿಕೊಳ್ಳಲು ಅಪ್​ಡೇಟೆಡ್​ ರಿಟರ್ನ್ ಫೈಲ್ ಮಾಡಬಹುದು. ಆ ಅಸೆಸ್​ಮೆಂಟ್​ನಿಂದ ಎರಡು ವರ್ಷದೊಳಗೆ ಮಾಡಬಹುದು. ದೇಶದಲ್ಲಿ ಹೊಸ ರಿಟರ್ನ್ಸ್ ಪರಿಚಯ ಮಾಡಲು ಕೇಂದ್ರ ತೀರ್ಮಾನಿಸಿದೆ. ತೆರಿಗೆ ಪಾವತಿ, ರಿಟರ್ನ್ಸ್ ಸಲ್ಲಿಕೆಗೆ ಹೊಸ ನೀತಿ ಜಾರಿಮಾಡಲಾಗುವುದು. ತೆರಿಗೆ ಸಲ್ಲಿಕೆ ವೇಳೆ ಸಮಸ್ಯೆ ಕಂಡು ಬಂದರೆ 2 ವರ್ಷದೊಳಗೆ ತಪ್ಪು ಸರಿಪಡಿಸುವುದಕ್ಕೆ ಅವಕಾಶ ನೀಡಲಾಗಿದೆ.

ಸಹಕಾರ ಸಂಘಗಳ ಮೇಲಿನ ಸರ್​ಚಾರ್ಜ್ ಇಳಿಕೆ ಮಾಡಲಾಗಿದೆ. ಶೇಕಡಾ 12ರಿಂದ ಶೇಕಡಾ 7ಕ್ಕೆ ಇಳಿಕೆ ಮಾಡಲು ನಿರ್ಧರಿಸಲಾಗಿದ್ದು, ಸಹಕಾರ ಸಂಘಗಳಿಗೆ ಕೇಂದ್ರ ಸರ್ಕಾರ ಸಿಹಿ ಸುದ್ದಿ ನೀಡಿದೆ. 10 ಕೋಟಿಯೊಳಗಿನ ಆದಾಯದ ಸಹಕಾರ ಸಂಘಗಳಿಗೆ ಇದು ಅನ್ವಯವಾಗುತ್ತದೆ. ಕೋ- ಆಪರೇಟಿವ್ ಸೊಸೈಟಿಗಳಿಗೂ ಇನ್ನು ಮುಂದೆ ಶೇ 15ರ ತೆರಿಗೆ. ತೆರಿಗೆ ಪದ್ಧತಿಯಲ್ಲಿ ಇರುವ ಹಲವು ಸಂಕೀರ್ಣ ಅಂಶಗಳನ್ನು ಸರಳಗೊಳಸಲಿ ಸರ್ಕಾರ ಮುಂದಾಗಿದೆ.

English summary

Budget 2022: Modi Says Digital Currencies Could Be Traded For Cash

Prime Minister Narendra Modi on Wednesday said the digital rupee, proposed in the union budget, could be exchanged for cash and will open new opportunities in the fintech sector.
Story first published: Wednesday, February 2, 2022, 18:59 [IST]
Company Search
COVID-19
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X