Union budget 2025: ಬಜೆಟ್ ಮಂಡನೆಗೆ ದಿನಗಣನೆ ಆರಂಭವಾಗಿದೆ. ಕೇಂದ್ರ ಹಣಕಾಸು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ (Nirmala Sitharaman) ಅವರು ತಮ್ಮ ಎಂಟನೇ ದಾಖಲೆಯ ಬಜೆಟ್‌ನ್ನು(budget) ಸಂಸತ್ತಿನಲ್ಲಿ ಮಂಡಿಸಲಿದ್ದಾರೆ. ಪ್ರಧಾನಿ ನರೇಂದ್ರ ಮೋದಿ(Narendra Modi) ಅವರು 3.0 ಅಧಿಕಾರಕ್ಕೆ ಬಂದ ನಂತರ ಇದು ಎರಡನೇ ಪೂರ್ಣ ಪ್ರಮಾಣದ ಕೇಂದ್ರ ಬಜೆಟ್ ಆಗಿದೆ.
ಹೌದು,ಈ ಬಾರಿಯ ಬಜೆಟ್ ಮೇಲೆ ಹಲವಾರು ವಲಯಗಳಿಂದ ಭಾರೀ ನಿರೀಕ್ಷೆಗಳಿವೆ. ಫೆಬ್ರವರಿ 1, 2025 ರಂದು, ಸೀತಾರಾಮನ್ ಅವರು ಮೋದಿ 3.0 ಅಡಿಯಲ್ಲಿ ತಮ್ಮ ಎಂಟನೇ ಮತ್ತು ಎರಡನೇ ಪೂರ್ಣ ಪ್ರಮಾಣದ ಬಜೆಟ್ ಅನ್ನು ಮಂಡಿಸುತ್ತಾರೆ.

ಈ ಬಾರಿಯ ಬಜೆಟ್ ಮೇಲೆ ಹಣಕಾಸು ವಲಯಕ್ಕೆ ಸಂಬಂಧಿಸಿದ ವಿವಿಧ ವಿಚಾರಗಳ ಕುರಿತು ಅನೇಕ ಚರ್ಚೆಗಳು ನಡೆಯುತ್ತವೆ. ಇವುಗಳಲ್ಲಿ ಪ್ರಮುಖವಾದವು ಜಿಡಿಪಿ ಮತ್ತು ಹಣದುಬ್ಬರ. ಹಣದುಬ್ಬರವನ್ನು ಕಡಿಮೆ ಮಾಡುವ ಮೂಲಕ ಅಗತ್ಯ ವಸ್ತುಗಳ ಬೆಲೆ ಏರಿಕೆಯನ್ನು ತಡೆಯುವುದು ಸರ್ಕಾರದ ಪ್ರಮುಖ ಗುರಿಯಾಗುತ್ತದೆ ಎಂಬುವುದನ್ನು ಈ ಬಾರಿಯ ಬಜೆಟ್ ಮಂಡನೆಯವರೆಗೂ ಕಾದುನೋಡಬೇಕಿದೆ.
2 ಹಂತಗಳಲ್ಲಿ ಬಜೆಟ್ ಅಧಿವೇಶ.. ಫೆಬ್ರವರಿ 1ಕ್ಕೆ ಬಜೆಟ್
ಸಂಸತ್ತಿನಲ್ಲಿ ಬಜೆಟ್ ಅಧಿವೇಶನವು ಎರಡು ಹಂತಗಳಲ್ಲಿ ನಡೆಯಲಿದೆ. ಜನವರಿ 31 ರಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಸಂಸತ್ತಿನ ಉಭಯ ಸದನಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಫೆಬ್ರವರಿ 1 ರಂದು ಲೋಕಸಭೆಯಲ್ಲಿ ಬಜೆಟ್ ಮಂಡಿಸಲಿದ್ದಾರೆ. ಅಧಿವೇಶನದ ಮೊದಲ ಭಾಗವು ಜನವರಿ 31 ರಿಂದ ಫೆಬ್ರವರಿ 13 ರವರೆಗೆ ನಡೆಯಲಿದೆ. ಅಧಿವೇಶನದ ಎರಡನೇ ಭಾಗವು ಮಾರ್ಚ್ 10 ರಂದು ಪ್ರಾರಂಭವಾಗಿ ಏಪ್ರಿಲ್ 4 ರವರೆಗೆ ಮುಂದುವರಿಯುತ್ತದೆ.
ಜನವರಿ 31ರಿಂದ ಕೇಂದ್ರ ಬಜೆಟ್ ಅಧಿವೇಶನ ಆರಂಭ
ಪ್ರಸಕ್ತ ಬಜೆಟ್ ಅಧಿವೇಶನವು ಜನವರಿ 31ರಿಂದ ಆರಂಭವಾಗಲಿದ್ದು, ರಾಷ್ಟ್ರಪತಿ ಭಾಷಣದ ಮೇಲಿನ ಚರ್ಚೆ ಲೋಕಸಭೆ ಹಾಗೂ ರಾಜ್ಯಸಭೆಯಲ್ಲಿ ನಡೆಯಲಿದೆ. ನೂತನ ಸಂಸತ್ ಭವನದ ಲೋಕಸಭೆಯ ಸಭಾಂಗಣದಲ್ಲಿ ಉಭಯ ಸದನಗಳನ್ನು ಉದ್ದೇಶಿಸಿ ರಾಷ್ಟ್ರಪತಿ ದ್ರೌಪದಿ ಮುರ್ಮು ಮಾತನಾಡಲಿದ್ದಾರೆ. ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಶನಿವಾರ ಕೇಂದ್ರ ಬಜೆಟ್ ಮಂಡಿಸಲಿದ್ದಾರೆ. ಫೆಬ್ರವರಿ 3, 4ರಂದು ಹಾಗೂ ರಾಜ್ಯಸಭೆಗೆ 3 ದಿನಗಳ ಅವಕಾಶ ನೀಡಲಾಗಿದೆ. ಪ್ರಧಾನಿ ಮೋದಿ ಫೆಬ್ರವರಿ 6ರಂದು ಚರ್ಚೆಗೆ ಉತ್ತರಿಸುವ ಸಾಧ್ಯತೆ ಇದೆ.
ಕೇಂದ್ರ ಬಜೆಟ್ ಎಂದರೇನು?
ಕೇಂದ್ರ ಬಜೆಟ್ ಎಂದರೆ ದೇಶ ಆಯವ್ಯಯದ ಲೆಕ್ಕಾಚಾರವಾಗಿದೆ.
ದಿನಾಂಕ, ಸಮಯ ಯಾವಾಗ?
ಬಜೆಟ್‌ನ್ನು ಹಣಕಾಸು ಸಚಿವೆ ಸೀತಾರಾಮನ್ ಅವರು ಫೆಬ್ರವರಿ 1, 2025 ರಂದು ಸಂಸತ್ತಿನಲ್ಲಿ ಕೇಂದ್ರ ಬಜೆಟ್ ಮಂಡನೆ ಮಾಡಲಿದ್ದಾರೆ. ಬಜೆಟ್ ಭಾಷಣವು ಲೋಕಸಭೆಯಲ್ಲಿ ಬೆಳಿಗ್ಗೆ 11.00 ಗಂಟೆಗೆ ಶುರುವಾಗುತ್ತದೆ.
ಕೇಂದ್ರ ಬಜೆಟ್ ನೇರಪ್ರಸಾರ ವೀಕ್ಷಿಸುವುದು ಹೇಗೆ?
2025ರ ಕೇಂದ್ರ ಬಜೆಟ್ ಅನ್ನು ಸಂಸತ್ತಿನ ಅಧಿಕೃತ ಚಾನೆಲ್‌ಗಳು, ದೂರದರ್ಶನ ಮತ್ತು ಸಂಸದ್ ಟಿವಿಯಲ್ಲಿ ನೇರಪ್ರಸಾರ ಮಾಡಲಾಗುತ್ತದೆ. ಇದನ್ನು ಸರ್ಕಾರದ ಅಧಿಕೃತ YouTube ಚಾನೆಲ್‌ಗಳಲ್ಲಿ ಸ್ಟ್ರೀಮ್ ಮಾಡಲಾಗುತ್ತದೆ ಇದನ್ನು ಸಹ ನೀವು ವೀಕ್ಷಣೆ ಮಾಡಬಹುದು.
ನಿಮಗೆ ಬಜೆಟ್ ಪ್ರತಿ ಎಲ್ಲಿ ಸಿಗುತ್ತದೆ?
ಬಜೆಟ್ ಪ್ರತಿ ಕೇಂದ್ರ ಸರ್ಕಾರದ ಅಧಿಕೃತ ವೆಬ್ ಪೋರ್ಟಲ್ www.indiabudget.gov.in ನಲ್ಲೂ ಬಜೆಟ್ ಪ್ರತಿಗಳು ಸಿಗುತ್ತವೆ. ಈ ದಾಖಲೆಗಳು ಹಿಂದಿ ಮತ್ತು ಇಂಗ್ಲಿಷ್ ಎರಡೂ ಭಾಷೆಗಳಲ್ಲಿ ನಿಮಗೆ ಸಿಗುತ್ತದೆ.
ಡೈಲಿಹಂಟ್‌ನಲ್ಲಿ ಬಜೆಟ್ ಲೈವ್
ಪ್ರತಿ ವರ್ಷವೂ ಕೂಡ ಡೈಲಿಹಂಟ್‌ನಲ್ಲಿ ಬಜೆಟ್ ಲೈವ್ ನೀಡಲಾಗುತ್ತದೆ. ಅದರಂತೆಯೇ ಈ ವರ್ಷವೂ ಸಹ ಡೈಲಿಹಂಟ್‌ನಲ್ಲಿ ಬಜೆಟ್ ಲೈವ್ ನೀಡಲಾಗುತ್ತದೆ. ಡೈಲಿಹಂಟ್ ಬಜೆಟ್‌ನ ರಿಯಲ್ ಟೈಮ್ ಅಪ್‌ಡೇಟ್ ಅನ್ನು ನೀಡಲಿದೆ. ಸುದ್ದಿ, ಪ್ರತಿಕ್ರಿಯೆ, ವಿಮರ್ಶೆಯನ್ನು ಕೂಡಾ ಪ್ರಕಟಿಸಲಿದೆ. ಕ್ಷಣ ಕ್ಷಣದ ಲೈವ್ ಅಪ್ಡೇಟ್‌ಗಾಗಿ ಡೈಲಿಹಂಟ್ ಫಾಲೋ ಮಾಡಿ.
More From GoodReturns

ಚಿನ್ನದ ಬೆಲೆ ಸ್ಥಿರ: ಆರ್ಬಿಐ ನಿರ್ಧಾರದಿಂದ ದರ ಇಳಿಕೆಯಾಗುತ್ತಾ?

ಎಮಿಯಾಕ್ ಟೆಕ್ನಾಲಜೀಸ್ ಐಪಿಒ: ಹೂಡಿಕೆದಾರರ ಮುಗಿಬಿದ್ದ ಭರ್ಜರಿ ಬೇಡಿಕೆ!

ಆರ್ಬಿಐ ನಿರ್ಧಾರದಿಂದ ನಿಮ್ಮ ಇಎಂಐ ಹೊರೆ ಹೆಚ್ಚಾಗಲಿದೆಯೇ? ಎಚ್ಚರ!

ಆರ್ಬಿಐ ರೆಪೋ ದರ ಸ್ಥಿರತೆ: ನಿಮ್ಮ ಇಎಂಐ ಹೊರೆ ಇಳಿಯುತ್ತಾ?

ಆರ್ಬಿಐ ಪಾಲಿಸಿಗೂ ಮುನ್ನ ನಿಮ್ಮ ಬಂಡವಾಳಕ್ಕೆ ಈ ರಕ್ಷಣೆ ಬೇಕೇ?

ಆರ್ಬಿಐ ನಿರ್ಧಾರದ ನಂತರ ನಿಮ್ಮ ಹಣಕ್ಕೆ ಯಾವುದು ಬೆಸ್ಟ್?

ಆರ್ಬಿಐ ಪಾಲಿಸಿ ಅಬ್ಬರ: ನಿಮ್ಮ ಹಣ ಉಳಿಸಲು ಈ ತಂತ್ರ ಬಳಸಿ

ಆರ್ಬಿಐ ಬಡ್ಡಿ ದರ: ನಿಮ್ಮ ಇಎಂಐ ಹೊರೆ ಕಡಿಮೆಯಾಗುತ್ತಾ?

ಆರ್ಬಿಐ ನಿರ್ಧಾರ: ನಿಮ್ಮ ಎಸ್ಐಪಿ ಮತ್ತು ಇಎಂಐ ಬದಲಾಯಿಸಬೇಕೇ?

ಸೇಫ್ಟಿ ಕಂಟ್ರೋಲ್ಸ್ ಐಪಿಒ: ಹೂಡಿಕೆದಾರರೇ ಇಂದೇ ಕೊನೆಯ ಅವಕಾಶ!

ಗೃಹ ಸಾಲದ ಇಎಂಐ ಇಳಿಕೆ: ಆರ್ಬಿಐ ನಿರ್ಧಾರದ ಅಸಲಿ ಸತ್ಯ



Click it and Unblock the Notifications