ಕೇಂದ್ರ ಬಜೆಟ್‌ಗೆ ಕ್ಷಣಗಣನೆ ಶುರುವಾಗಿದೆ. ದೇಶದ ಜನರ ಕಾಯುವಿಕೆ ನಾಳೆ ತೆರೆಬೀಳಲಿದೆ. ಮೋದಿ 3.0 (Narendra Modi) ಸರ್ಕಾರದ ಬಹುನಿರೀಕ್ಷಿತ ಬಜೆಟ್ (Union Budget 2025) ಮಂಡನೆಯಾಗಲಿದೆ. ಎಲ್ಲರ ಚಿತ್ತ ಕೇಂದ್ರ ಬಜೆಟ್‌ನತ್ತ ನೆಟ್ಟಿದೆ. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ (Nirmala Sitharaman) ಅವರು ಸಂಸತ್ತಿನಲ್ಲಿ ತಮ್ಮ ದಾಖಲೆಯ 8ನೇ ಬಾರಿಗೆ ಕೇಂದ್ರ ಬಜೆಟ್ ಮಂಡಿಸಲಿದ್ದಾರೆ. ಇಂದಿನಿಂದ ಬಜೆಟ್ ಅಧಿವೇಶನ ಆರಂಭವಾಗಿದ್ದು, ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಉಭಯ ಸದನಗಳ ಜಂಟಿ ಸಭೆಯನ್ನುದ್ದೇಶಿಸಿ ಭಾಷಣ ಮಾಡಿದರು. ಅದರಲ್ಲಿ ಹಲವು ವಿಷಯಗಳನ್ನು ಅವರು ಪ್ರಸ್ತಾಪಿಸಿದ್ದಾರೆ. ಅವು ಯಾವುವು ಎಂಬ ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ.
ಹೌದು, 2025ನೇ ಸಾಲಿನ ಸಂಸತ್ತಿನ ಬಜೆಟ್ ಅಧಿವೇಶ ಶುಕ್ರವಾರ ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಅವರು ಉಭಯ ಸದನಗಳ ಜಂಟಿ ಸಭೆಯನ್ನುದ್ದೇಶಿಸಿ ಭಾಷಣ ಮಾಡುವ ಮೂಲಕ ಆರಂಭಗೊಂಡಿದೆ. ಈ ಭಾಷಣದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಮಾಧ್ಯಮ ವರ್ಗದ ಕನಸಿನ ಸೂರಿನ ಬಗ್ಗೆ ಭರವಸೆಯನ್ನು ಕೊಟ್ಟಿದ್ದಾರೆ.

ಸ್ವಂತ ಸೂರಿನ ಕನಸು ಈಡೇರಿಸಲು ಸರ್ಕಾರ ಬದ್ಧ
ದೇಶದ ಮಧ್ಯಮವರ್ಗದವರ ಸ್ವಂತ ಸೂರಿನ ಕನಸು ಈಡೇರಿಸಲು ಈ ಸರ್ಕಾರ ಬದ್ಧವಾಗಿದೆ ಎಂದು ರಾಷ್ಟ್ರಪತಿ ದೌಪದಿ ಮುರ್ಮು ಅವರು ಹೇಳಿದ್ದರು.ವಸತಿ ಯೋಜನೆಗಳು ತಮ್ಮ ಮನೆ ಹೊಂದುವ ಕನಸನ್ನು ನನಸಾಗಿಸಲು ಅನುವು ಮಾಡಿಕೊಡುತ್ತವೆ. ಸರ್ಕಾರದ ಉಪಕ್ರಮಗಳು 25 ಕೋಟಿ ಜನರನ್ನು ತೀವ್ರ ಬಡತನದಿಂದ ಯಶಸ್ವಿಯಾಗಿ ಹೊರತಂದಿವೆ, ಆರ್ಥಿಕ ಸೇರ್ಪಡೆ ಮತ್ತು ಸಾಮಾಜಿಕ ಉನ್ನತಿಯ ಮೇಲೆ ಆಡಳಿತದ ಗಮನವನ್ನು ಬಲಪಡಿಸಿವೆ ಎಂದು ಹೇಳಿದ್ದರು.
ಕೇಂದ್ರ ಮೂರು ಪಟ್ಟು ವೇಗದಲ್ಲಿ ಕೆಲಸ ಮಾಡುತ್ತಿದೆ
ಹಿಂದಿನ ಆಡಳಿತಗಳಿಗಿಂತ ಮೂರನೇ ಅವಧಿಯು ಮೋದಿ ಸರ್ಕಾರದ ಮೂರನೇ ಅವಧಿಯು ಮೂರು ಪಟ್ಟು ವೇಗದಲ್ಲಿ ಕೆಲಸ ಮಾಡುತ್ತಿದೆ ಇದರಿಂದ ದೇಶದಲ್ಲಿ ಹಲವಾರು ಅಭಿವೃದ್ದಿ ಕಾರ್ಯಗಳು ಜಾರಿಗೆ ಬಂದಿದೆ ಎಂದು ಮಾಹಿತಿಯನ್ನು ತಿಳಿಸಿದ್ದರು.
ಭಾರತ ವಿಶ್ವದ ಮೂರನೇ ಅತಿದೊಡ್ಡ ಆರ್ಥಿಕತೆಯ ದೇಶ
ವಿಶ್ವದ ಮೂರನೇ ಅತಿದೊಡ್ಡ ಆರ್ಥಿಕತೆಯ ದೇಶವಾಗಿ ಭಾರತ ಹೊರಹೊಮ್ಮತ್ತದೆ ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಹೇಳಿದರು. ಆರ್ಥಿಕ ಬೆಳವಣಿಗೆ ಮತ್ತು ಅಭಿವೃದ್ಧಿಯನ್ನು ಹೆಚ್ಚಿಸಲು ಸರ್ಕಾರವು ಪ್ರಮುಖ ನಿರ್ಧಾರಗಳನ್ನು ಜಾರಿಗೆ ತರಲಿದೆ ಎಂದು ಭಾಷಣವನ್ನು ಮಾಡಿದ್ದರು.
ರೈತರಿಗೆ ಬೆಂಬಲ
ಕೇಂದ್ರ ಸರ್ಕಾರ ರೈತರನ್ನು ಬೆಂಬಲಿಸುವ ಸರ್ಕಾರದ ಬದ್ಧತೆಯನ್ನು ಹೊಂದಿದೆ. ಪಿಎಂ-ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ಲಕ್ಷಾಂತರ ರೈತರಿಗೆ 41,000 ಕೋಟಿ ರೂಪಾಯಿಗಳನ್ನು ವಿತರಿಸಲಾಗಿದೆ ಎಂದು ಹೇಳಿದರು. ಈ ಉಪಕ್ರಮವು ರೈತರಿಗೆ ನೇರ ಆರ್ಥಿಕ ನೆರವು ನೀಡುವುದನ್ನು ಮುಂದುವರೆಸಿದೆ.
ಯುವ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿ
ಕೇಂದ್ರ ಸರ್ಕಾರವು ಯುವ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ಹೆಚ್ಚಿನ ಆದ್ಯತೆಯನ್ನು ನೀಡಿದೆ. ಭಾರತದ ಜನಸಂಖ್ಯಾ ಲಾಭಾಂಶವನ್ನು ಬಳಸಿಕೊಳ್ಳಲು ಶೈಕ್ಷಣಿಕ ಅವಕಾಶಗಳನ್ನು ವಿಸ್ತರಿಸಲು ಮತ್ತು ಹೊಸ ಉದ್ಯೋಗಗಳನ್ನು ಸೃಷ್ಟಿಸಲು ಸರ್ಕಾರವು ನಿರಂತರ ಪ್ರಯತ್ನ ಮಾಡುತ್ತಿದೆ ಎಂದು ಹೇಳಿದ್ದರು.
ವಿಶ್ವದ ಮೂರನೇ ಅತಿದೊಡ್ಡ ಮೆಟ್ರೋ ಜಾಲ
ಭಾರತವು ಭಾರತದ ಮೆಟ್ರೋ ರೈಲು ಜಾಲವು ಈಗ 1,000 ಕಿಲೋಮೀಟರ್ ಮೈಲಿಗಲ್ಲನ್ನು ದಾಟಿದೆ ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಹೇಳಿದ್ದಾರೆ ಭಾರತವು ಆರ್ಥಿಕ, ಸಾಮಾಜಿಕ ಮತ್ತು ರಾಜಕೀಯ ಸ್ಥಿರತೆ ಹೊಂದುವ ಮೂಲಕ ವಿಶ್ವಕ್ಕೆ ಮಾದರಿಯಾಗಿದೆ. ದೇಶದ ಗಡಿಯನ್ನು ಭದ್ರಗೊಳಿಸುವಲ್ಲಿ ಸರ್ಕಾರವು ಐತಿಹಾಸಿಕ ಹೆಜ್ಜೆ ಇಟ್ಟಿದೆ.
ನಾಳೆ ನಿರ್ಮಲಾ ಸೀತಾರಾಮನ್ ಸತತ 8ನೇ ಬಜೆಟ್
ನಾಳೆಯೇ ಕೇಂದ್ರ ಬಜೆಟ್. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಫೆ.1ರಂದು ಪ್ರಧಾನಿ ಮೋದಿ ಸರ್ಕಾರದ 3ನೇ ಅವಧಿಯ 2ನೇ ಬಜೆಟ್ ಮಂಡಿಸಲಿದ್ದಾರೆ. ಈ ಮೂಲಕ ಸೀತಾರಾಮನ್ ಸತತ 8ನೇ (7 ಪೂರ್ಣಾವಧಿ, 2024ರ ಫೆಬ್ರವರಿ 1 ರಂದು ಮಧ್ಯಂತರ ಬಜೆಟ್) ಬಾರಿ ಬಜೆಟ್ ಮಂಡಿಸಿದ ದಾಖಲೆ ನಿರ್ಮಿಸಲಿದ್ದಾರೆ. ಇನ್ನೂ 3 ಬಜೆಟ್ ಮಂಡಿಸಿದರೆ ಒಟ್ಟು 11 ಬಜೆಟ್ ಮಂಡಿಸಿದ ಸಾರ್ವಕಾಲಿಕ ದಾಖಲೆಯನ್ನು ಅವರು ಸೃಷ್ಟಿಸಲಿದ್ದಾರೆ. ಮಾಜಿ ಪ್ರಧಾನಿ ದಿವಂಗತ ಮೊರಾರ್ಜಿ ದೇಸಾಯಿ 10 ಬಾರಿ ಬಜೆಟ್ ಮಂಡಿಸಿದ್ದರು.
More From GoodReturns

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

High Speed Train: ಬೆಂಗಳೂರಿಗೆ ಮತ್ತೊಂದು ಹೈಸ್ಪೀಡ್ ರೈಲು! ಇನ್ಮೇಲೆ ಹೈದರಾಬಾದ್ಗೆ ಬರೀ 2 ಗಂಟೆ ಜರ್ನಿ

Train Service: ಬೆಂಗಳೂರು-ಕೇರಳ ಪ್ರಯಾಣ ಈಗ ಇನ್ನೂ ಸುಲಭ…ಕೇವಲ 230 ರೂ., ಹೆಚ್ಚು ಸೌಕರ್ಯ!

Gold Rate Bengaluru: ಇಂದೂ ಚಿನ್ನದ ಬೆಲೆ ಇಳಿಕೆ…24 ಕ್ಯಾರಟ್ನಲ್ಲಿ ಒಂದೇ 4,900 ರೂ. ಕುಸಿತ!

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ



Click it and Unblock the Notifications