ಬಜೆಟ್ (budget) ಮಂಡನೆಗೆ ದಿನಗಣನೆ ಆರಂಭವಾಗಿದ್ದು, ಎಲ್ಲರ ಚಿತ್ತ ಬಜೆಟ್ ನತ್ತ ನಟ್ಟಿದೆ. ಹೌದು,ಈ ಬಾರಿಯ ಬಜೆಟ್ ಬಗ್ಗೆ ಎಲ್ಲಾ ವಲಯದಲ್ಲೂ ನಿರೀಕ್ಷೆಗಳು ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇವೆ. ಪ್ರತಿ ವರ್ಷದಂತೆ ಈ ಬಾರಿಯೂ ಹೊಸ ಬಜೆಟ್ ಬಗ್ಗೆ ಜನಸಾಮಾನ್ಯರಲ್ಲಿ ಸಾಕಷ್ಟು ನಿರೀಕ್ಷೆಗಳಿವೆ. ಮೋದಿ ಸರ್ಕಾರ(Modi government) ಇವರ ಬೇಡಿಕೆ ಈಡೇರಿಸುತ್ತಾ? ಈ ಬಾರಿಯ ಬಜೆಟ್‌ನಲ್ಲಿ ಜನಸಾಮಾನ್ಯರಲ್ಲಿ ಇರುವ ನಿರೀಕ್ಷೆಗಳಿವೆ ಅವುಗಳು ಯಾವುವು ಎಂಬ ಹೆಚ್ಚಿನ ಮಾಹಿತಿಯನ್ನು ಈ ಲೇಖನದಲ್ಲಿ ತಿಳಿಯೋಣ ಬನ್ನಿ...
ಹೌದು ಈ ಬಾರಿಯ ಬಜೆಟ್‌ನಲ್ಲಿ ಜನಸಾಮಾನ್ಯರಲ್ಲಿ ಸಾಕಷ್ಟು ನಿರೀಕ್ಷೆಗಳಿವೆ.ಬಜೆಟ್‌ನಲ್ಲಿರುವ ಘೋಷಣೆಗಳು ನೇರವಾಗಿ ಪ್ರತಿಯೊಬ್ಬರ ಮೇಲೂ ಪ್ರಭಾವ ಬೀರುತ್ತವೆ.ಪ್ರತಿನಿತ್ಯದ ಅಗತ್ಯ ವಸ್ತುಗಳ ಬೆಲೆಯಿಂದ ಹಿಡಿದು ಆದಾಯ ತೆರಿಗೆವರೆಗೆ ಎಲ್ಲವೂ ಬಜೆಟ್ ಘೋಷಣೆಯ ಆಧಾರದ ಮೇಲೆಯೇ ನಿಂತಿದೆ. ಕೇಂದ್ರ ಬಜೆಟ್‌ನ್ನು ಕೇಂದ್ರ ಹಣಕಾಸು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ (Nirmala Sitharaman) ಅವರು ತಮ್ಮ ಎಂಟನೇ ದಾಖಲೆಯ ಬಜೆಟ್‌ನ್ನು(budget 2025) ಸಂಸತ್ತಿನಲ್ಲಿ ಫೆಬ್ರವರಿ 1, 2025 ರಂದು ಮಂಡಿಸಲಿದ್ದಾರೆ. ಪ್ರಧಾನಿ ನರೇಂದ್ರ ಮೋದಿ(Narendra Modi) ಅವರು 3.0 ಅಧಿಕಾರಕ್ಕೆ ಬಂದ ನಂತರ ಇದು ಎರಡನೇ ಪೂರ್ಣ ಪ್ರಮಾಣದ ಕೇಂದ್ರ ಬಜೆಟ್ ಇದಾಗಿದೆ.

ಬಜೆಟ್‌ನಲ್ಲಿ ದಿನ ಬಳಸುವ ವಸ್ತುಗಳಿಂದ ಹಿಡಿದು, ಆಟೋಮೊಬೈಲ್, ಗ್ಯಾಜೆಟ್ಸ್ ಸೇರಿ ಎಲ್ಲಾ ವಸ್ತುಗಳ ಬೆಲೆ ಬಜೆಟ್ ಮೇಲೆ ಅವಲಂಬನೆಯಾಗಿರುತ್ತದೆ. ಅದರಲ್ಲೂ ತೆರಿಗೆ ಸಂಬಂಧಿಸಿದ ವಿಚಾರದಲ್ಲಿ ಹಲವು ಬದಲಾವಣೆಗಳು ಬೆಲೆ ಏರಿಕೆಯ ಏರಿಳಿತದ ಮೇಲೆ ನೇರವಾಗಿ ಪ್ರಭಾವನ್ನು ಬೀರುತ್ತದೆ. ಈ ವರ್ಷ ಸಾಮಾನ್ಯ ಜನರು ದಿನ ಬಳಸುವ ವಸ್ತುಗಳು, ಎಲೆಕ್ಟ್ರಾನಿಕ್ಸ್ ವಸ್ತುಗಳು ಮೇಲೆ ಭಾರೀ ನಿರೀಕ್ಷೆಗಳನ್ನು ಇಟ್ಟುಕೊಂಡಿದ್ದಾರೆ.
ಅದರಲ್ಲೂ ಡಿಜಿಟಲ್ ಉತ್ಪನ್ನಗಳ ಬೆಲೆಯಲ್ಲಿ ಇಳಿಕೆ ಸಾಧ್ಯತೆಯ ಮೇಲೆ ಹೆಚ್ಚಿನ ನಿರೀಕ್ಷೆಗಳು ಇವೆ. ನರೇಂದ್ರ ಮೋದಿ ಸರ್ಕಾರ ಡಿಜಿಟಲ್ ಇಂಡಿಯಾಕ್ಕೆ ಹೆಚ್ಚು ಒತ್ತು ನೀಡುವುದರಿಂದ ಜನಸಾಮಾನ್ಯರು ಹೆಚ್ಚು ಡಿಜಿಟಲ್ ಉತ್ಪನ್ನಗಳನ್ನು ಬಳಸಲು ಪ್ರೋತ್ಸಾಹಿಸಿದ್ದಾರೆ. ಹೀಗಾಗಿ ಈ ಬಾರಿಯ ಬಜೆಟ್‌ನಲ್ಲಿ ಡಿಜಿಟಲ್ ಉತ್ಪನ್ನಗಳ ಬೆಲೆಯಲ್ಲಿ ಇಳಿಕೆ ಸಾಧ್ಯತೆ ಇರಬಹುದು.
ಎಲೆಕ್ಟ್ರಾನಿಕ್ಸ್ ವಸ್ತುಗಳು, ಫೋನ್, ಲ್ಯಾಪ್‌ಟಾಪ್, ಟಿವಿ ಇತ್ಯಾದಿಗಳ ಬೆಲೆ ಕಡಿಮೆಯಾದರೆ ಇವುಗಳ ಮಾರಾಟ ಸಹ ಮಾರುಕಟ್ಟೆಯಲ್ಲಿ ಹೆಚ್ಚಾಗುತ್ತಿದೆ ಇದರಿಂದ ಡಿಜಿಟಲ್ ಇಂಡಿಯಾ ಮತ್ತಷ್ಟು ವಿಸ್ತರಿಸುತ್ತದೆ. ಆದ್ದರಿಂದ,ಬಜೆಟ್‌ನಲ್ಲಿ ಈ ರೀತಿಯ ವಸ್ತುಗಳ ಬೆಲೆ ಕಡಿಮೆಯಾಗುತ್ತದೆಯೇ ಇಲ್ಲವೂ ಎಂಬುವುದನ್ನು ಕಾದುನೋಡಬೇಕಿದೆ.
ಆಮದು ಸುಂಕ ಕಡಿಮೆ ಮಾಡುವ ಸಾಧ್ಯತೆ
ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಈ ಬಾರಿಯ ಬಜೆಟ್‌ನಲ್ಲಿ ಎಲೆಕ್ಟ್ರಾನಿಕ್ ಉತ್ಪನ್ನಗಳ ತಯಾರಿಕೆಗೆ ಅಗತ್ಯವಾದ ವಸ್ತುಗಳ ಮೇಲಿನ ಆಮದು ಸುಂಕವನ್ನು ಕಡಿಮೆ ಮಾಡುವುದಾಗಿ ಘೋಷಿಸಿದರೆ, ಎಲ್ಲಾ ಎಲೆಕ್ಟ್ರಾನಿಕ್ಸ್ ವಸ್ತುಗಳ ಬೆಲೆ ಕಡಿಮೆಯಾಗುವ ಸಾಧ್ಯತೆಯಿದೆ. ಇದರಿಂದಾಗಿ ಮೊಬೈಲ್, ಸ್ಮಾರ್ಟ್ ಟಿವಿ, ಲ್ಯಾಪ್‌ಟಾಪ್‌ಗಳು ಕಡಿಮೆ ಬೆಲೆಯಲ್ಲಿ ಲಭ್ಯವಾಗಬಹುದು.
ಈ ಬಾರಿಯ ಬಜೆಟ್‌ನಲ್ಲಿ ಎಲೆಕ್ಟ್ರಾನಿಕ್ಸ್ ವಸ್ತುಗಳು ಕಡಿಮೆಯಾದ್ದರೆ ಜನಸಾಮಾನ್ಯರಿಗೆ ಖಷಿಯಾಗುತ್ತದೆ. ಇದರಿಂದ ಡಿಜಿಟಲ್ ಇಂಡಿಯಾ ಹೆಚ್ಚಾಗುತ್ತದೆ.
ಜನವರಿ 31ರಿಂದ ಕೇಂದ್ರ ಬಜೆಟ್ ಅಧಿವೇಶನ ಆರಂಭ
ಪ್ರಸಕ್ತ ಬಜೆಟ್ ಅಧಿವೇಶನವು ಜನವರಿ 31ರಿಂದ ಆರಂಭವಾಗುತ್ತದೆ. ರಾಷ್ಟ್ರಪತಿ ಭಾಷಣದ ಮೇಲಿನ ಚರ್ಚೆಗಳು ಲೋಕಸಭೆ ಹಾಗೂ ರಾಜ್ಯಸಭೆಯಲ್ಲಿ ನಡೆಯಲಿದೆ. ನೂತನ ಸಂಸತ್ ಭವನದ ಲೋಕಸಭೆಯ ಸಭಾಂಗಣದಲ್ಲಿ ಉಭಯ ಸದನಗಳನ್ನು ಉದ್ದೇಶಿಸಿ ರಾಷ್ಟ್ರಪತಿ ದ್ರೌಪದಿ ಮುರ್ಮು ಮಾತನಾಡಲಿದ್ದಾರೆ.
ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಶನಿವಾರ ಕೇಂದ್ರ ಬಜೆಟ್ ಮಂಡಿಸಲಿದ್ದಾರೆ. ಫೆಬ್ರವರಿ 3, 4ರಂದು ಹಾಗೂ ರಾಜ್ಯಸಭೆಗೆ 3 ದಿನಗಳ ಅವಕಾಶ ನೀಡಲಾಗಿದೆ. ಪ್ರಧಾನಿ ಮೋದಿ ಫೆಬ್ರವರಿ 6ರಂದು ಚರ್ಚೆಗೆ ಉತ್ತರಿಸುವ ಸಾಧ್ಯತೆ ಇದೆ.
ಈ ಬಾರಿಯ ಬಜೆಟ್‌ನಲ್ಲಿ ಸಾಮಾನ್ಯ ಜನರಿಗೆ ಸಿಹಿ ಸಿಗುತ್ತದೆಯೋ ಅಥವಾ ಕಹಿ ಸಿಗುತ್ತದೆಯೋ ಎಂಬುವುದನ್ನು ಬಜೆಟ್ ಪೋಷಣೆಯವರೆಗೂ ಕಾದುನೋಡಬೇಕಿದೆ.


Click it and Unblock the Notifications