ಬೆಂಗಳೂರು, ಸೆಪ್ಟೆಂಬರ್ 3: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯಲ್ಲಿ ನಿವೇಶನಗಳಲ್ಲಿ ಕಟ್ಟಡಗಳನ್ನು ನಿರ್ಮಿಸಲು ಆನ್‌ಲೈನ್ ಮೂಲಕ ಕಟ್ಟಡ ಯೋಜನೆ ಅನುಮೋದನೆ ಪ್ರಕ್ರಿಯೆಯನ್ನು ಪ್ರಾರಂಭಿಸುವುದಾಗಿ ಬೆಂಗಳೂರು ಅಭಿವೃದ್ಧಿ ಸಚಿವರೂ ಆಗಿರುವ ಡಿಸಿಎಂ ಡಿಕೆ ಶಿವಕುಮಾರ್ ಅವರು ಮಹತ್ವದ ಘೋಷಣೆ ಮಾಡಿದ್ದಾರೆ.
ಕಟ್ಟಡ ನಕ್ಷೆ ಮಂಜೂರಾತಿ ವಿಚಾರದಲ್ಲಿ ಬೆಂಗಳೂರು ನಗರದ ಜನರಿಗೆ ಆಗುತ್ತಿರುವ ತೊಂದರೆ ತಪ್ಪಿಸಲು ʼನಂಬಿಕೆ ನಕ್ಷೆʼ ಯೋಜನೆ ಜಾರಿಗೆ ತರಲಾಗುತ್ತಿದೆ. ಜನರೇ ತಮ್ಮ ಕಟ್ಟಡ ನಕ್ಷೆಯನ್ನು ಅನುಮೋದಿತ ಕಟ್ಟಡ ವಿನ್ಯಾಸಕಾರರು ಅಥವಾ ಎಂಜಿನಿಯರ್ ಗಳ ಬಳಿ ಅನುಮೋದಿಸಿಕೊಂಡು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಿ ಮಂಜೂರಾತಿ ಪಡೆದುಕೊಳ್ಳುವ ಯೋಜನೆ ಇದಾಗಿದೆ. 50/80 ವಿಸ್ತೀರ್ಣದ ವರೆಗಿನ ನಿವೇಶನಗಳಿಗೆ ಈ ಯೋಜನೆ ಅನ್ವಯವಾಗಲಿದೆ" ಎಂದು ಡಿಸಿಎಂ ವಿವರಿಸಿದ್ದಾರೆ.

ಮಹಾನಗರ ಪಾಲಿಕೆ (ಬಿಬಿಎಂಪಿ)ಯ ಎಲ್ಲಾ ಎಂಟು ವಲಯಗಳಲ್ಲಿ 'ನಂಬಿಕೆ ನಕ್ಷೆ' (ವಿಶ್ವಾಸಾರ್ಹ ಯೋಜನೆ) ಆರಂಭಿಸಲಾಗುವುದು. ಬಿಡಿಎ (ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ) ಅಥವಾ ಕರ್ನಾಟಕ ಹೌಸಿಂಗ್ ಬೋರ್ಡ್ ಅಭಿವೃದ್ಧಿಪಡಿಸಿದ 50/80 ವಿಸ್ತೀರ್ಣದವರೆಗಿನ ನಿವೇಶನಗಳನ್ನೇ ಹೆಚ್ಚಾಗಿ ಅಭಿವೃದ್ಧಿಪಡಿಸಿರುತ್ತಾರೆ. ಇಷ್ಟು ವಿಸ್ತೀರ್ಣದ ನಿವೇಶನದಲ್ಲಿ ಮನೆ ನಿರ್ಮಾಣ ಹಾಗೂ ನವೀಕರಣಕ್ಕೆ ಜನರು ಯಾವುದೇ ತೊಂದರೆಯಿಲ್ಲದೇ ಮುಂದಾಗಬಹುದು. ಅನುಮೋದಿತ ಲೆಕ್ಕ ಪರಿಶೋದಕರಂತೆ ಅನುಮೋದಿತ ಎಂಜಿನಿಯರ್ ಗಳು ಹಾಗೂ ಕಟ್ಟಡ ವಿನ್ಯಾಸಕಾರರ ಮೂಲಕ ತಾತ್ಕಾಲಿಕ ಕಟ್ಟಡ ನಕ್ಷೆಗೆ ಅನುಮತಿ ನೀಡಲಾಗುವುದು. ನಂತರಯೋಜನೆಗಳ ಅನುಮೋದನೆಯ ನಂತರ ಯೋಜನೆ ಪ್ರಕಾರ ನಿರ್ಮಾಣವಾಗಿದೆಯೇ ಎಂಬುದನ್ನು ಪರಿಶೀಲಿಸಲಾಗುವುದು " ಎಂದು ಹೇಳಿದ್ದಾರೆ
"ಮೊದಲು ಬಿಬಿಎಂಪಿಯ 2 ವಲಯಗಳಲ್ಲಿ ಪ್ರಾಯೋಗಿಕವಾಗಿ ಈ ಯೋಜನೆಯನ್ನು ಜಾರಿಗೆ ತರಲಾಗಿತ್ತು. ಮಾರ್ಚ್‌ನಲ್ಲಿ ಆರ್‌ಆರ್‌ನಗರ ಮತ್ತು ದಾಸರಹಳ್ಳಿ ವಲಯಗಳಲ್ಲಿ ನಡೆಸಿದ ಪ್ರಾಯೋಗಿಕ ಅಧ್ಯಯನದ ನಂತರ ಬಿಬಿಎಂಪಿಯಾದ್ಯಂತ 'ನಂಬಿಕೆ ನಕ್ಷೆ'ಯನ್ನು ವಿಸ್ತರಿಸಲಾಗುತ್ತಿದೆ. ಈ ಯೋಜನೆಯ ಸಾಧಕ ಭಾದಕಗಳನ್ನು ಸರಿಪಡಿಸಿ ಪ್ರಸ್ತುತ ಬಿಬಿಎಂಪಿಯ ಎಲ್ಲಾ ಎಂಟು ವಲಯಗಳಿಗೆ ವಿಸ್ತರಿಸಲಾಗುತ್ತಿದೆ. ಇದರಿಂದ ಜನರು ಪಾಲಿಕೆಗೆ ಅಲೆಯುವುದು ತಪ್ಪುತ್ತದೆ" ಎಂದು ಹೇಳಿದ್ದಾರೆ.
ಬೆಂಗಳೂರಿನಲ್ಲಿ ನಗರದಾದ್ಯಂತ 2,795 ರಸ್ತೆಗುಂಡಿಗಳು, ಪ್ರಮುಖ ರಸ್ತೆಗಳ ದುರಸ್ತಿಗೆ ರೂ. 660 ಕೋಟಿ
"ಬಿಬಿಎಂಪಿ ವಲಯದಲ್ಲಿ 2,795 ರಸ್ತೆಗುಂಡಿಗಳನ್ನು ಗುರುತಿಸಲಾಗಿದೆ ಎಲ್ಲಾ ರಸ್ತೆ ಗುಂಡಿಗಳನ್ನು ಮುಂದಿನ 15 ದಿನಗಳಲ್ಲಿ ಸಂಪೂರ್ಣವಾಗಿ ಮುಚ್ಚಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ರೂ. 660 ಕೋಟಿ ವೆಚ್ಚದಲ್ಲಿ ಪ್ರಮುಖ ರಸ್ತೆಗಳನ್ನು ದುರಸ್ತಿ ಕೆಲಸ ಕೈಗೆತ್ತಿಕೊಳ್ಳಲಾಗುವುದು" ಎಂದರು.
"ಇತ್ತೀಚೆಗೆ ದೆಹಲಿಗೆ ಭೇಟಿ ನೀಡಿದಾಗ ಮುಖ್ಯರಸ್ತೆಗಳನ್ನು ಬಿಟ್ಟು ಒಳ ರಸ್ತೆಗಳಲ್ಲಿ ಓಡಾಡಿದೆ. ಅವರಿಗಿಂತ ನಾವೇ ಎಷ್ಟೋ ಮುಂದಿದ್ದೇವೆ. ಅವರನ್ನು ಟೀಕೆ ಮಾಡುತ್ತಿಲ್ಲ, ಅಲ್ಲಿನ ಪರಿಸ್ಥಿತಿ ಬೇರೆ ಇರಬಹುದು" ಎಂದಿದ್ದಾರೆ
ಇತ್ತೀಚೆಗೆ ದೆಹಲಿಗೆ ಭೇಟಿ ನೀಡಿದಾಗ ಮುಖ್ಯರಸ್ತೆಗಳನ್ನು ಬಿಟ್ಟು ಒಳ ರಸ್ತೆಗಳಲ್ಲಿ ಓಡಾಡಿದೆ. ಅವರಿಗಿಂತ ನಾವೇ ಎಷ್ಟೋ ಮುಂದಿದ್ದೇವೆ. ಅವರನ್ನು ಟೀಕೆ ಮಾಡುತ್ತಿಲ್ಲ, ಅಲ್ಲಿನ ಪರಿಸ್ಥಿತಿ ಬೇರೆ ಇರಬಹುದು"ಎಂದು ತಿಳಿಸಿದ್ದಾರೆ.
ಮಳೆ ಬಂದ ತಕ್ಷಣ ನಗರದಾದ್ಯಂತ ಎಲ್ಲೆಲ್ಲಿ ನೀರು ನಿಲ್ಲುತ್ತಿತ್ತು, ವಸತಿ ಪ್ರದೇಶಗಳಿಗೆ ನೀರು ನುಗ್ಗಿ ಜನರಿಗೆ ತೊಂದರೆ ಉಂಟಾಗುತ್ತಿತ್ತು ಅವುಗಳನ್ನು ಭಾಗಶಃ ಸರಿ ಪಡಿಸಲಾಗಿದೆ. ಇದಕ್ಕಾಗಿ ಅಧಿಕಾರಿಗಳಿಗೆ ಅಭಿನಂದನೆಗಳು. ರಾಜಕಾಲುವೆಯ 50 ಮೀ. ಸುತ್ತಳತೆಯಲ್ಲಿ ಯಾವುದೇ ನಿರ್ಮಾಣ ಕಾರ್ಯಗಳನ್ನು ಮಾಡುವಂತಿಲ್ಲ ಎಂದು ಎನ್ ಜಿಟಿಯ ನಿಯಮಗಳು ಸೇರಿದಂತೆ ಒಂದಷ್ಟು ನಿಯಮಗಳಿಗೆ. ಪ್ರಸ್ತುತ 300 ಕಿ.ಮೀ ಅನ್ನು ಗುರುತಿಸಿ 30 ಅಡಿ ರಸ್ತೆ ನಿರ್ಮಾಣ ಮಾಡಲಾಗುವುದು. ಭೂಮಿ ಬಿಟ್ಟುಕೊಡುವ ಖಾಸಗಿ ಜಮೀನುಗಳ ಮಾಲೀಕರಿಗೆ ಪರಿಹಾರವಾಗಿ ಟಿಡಿಆರ್ ನೀಡಲಾಗುವುದು. ಅದನ್ನು ಅವರು ಮಾರಾಟ ಮಾಡಿಕೊಳ್ಳಬಹುದು" ಎಂದಿದ್ದಾರೆ.
More From GoodReturns

ಚಿನ್ನದ ಬೆಲೆ ಸ್ಥಿರ: ಆರ್ಬಿಐ ನಿರ್ಧಾರದಿಂದ ದರ ಇಳಿಕೆಯಾಗುತ್ತಾ?

ಎಮಿಯಾಕ್ ಟೆಕ್ನಾಲಜೀಸ್ ಐಪಿಒ: ಹೂಡಿಕೆದಾರರ ಮುಗಿಬಿದ್ದ ಭರ್ಜರಿ ಬೇಡಿಕೆ!

ಆರ್ಬಿಐ ನಿರ್ಧಾರದಿಂದ ನಿಮ್ಮ ಇಎಂಐ ಹೊರೆ ಹೆಚ್ಚಾಗಲಿದೆಯೇ? ಎಚ್ಚರ!

ಆರ್ಬಿಐ ರೆಪೋ ದರ ಸ್ಥಿರತೆ: ನಿಮ್ಮ ಇಎಂಐ ಹೊರೆ ಇಳಿಯುತ್ತಾ?

ಆರ್ಬಿಐ ಪಾಲಿಸಿಗೂ ಮುನ್ನ ನಿಮ್ಮ ಬಂಡವಾಳಕ್ಕೆ ಈ ರಕ್ಷಣೆ ಬೇಕೇ?

ಆರ್ಬಿಐ ನಿರ್ಧಾರದ ನಂತರ ನಿಮ್ಮ ಹಣಕ್ಕೆ ಯಾವುದು ಬೆಸ್ಟ್?

ಆರ್ಬಿಐ ಪಾಲಿಸಿ ಅಬ್ಬರ: ನಿಮ್ಮ ಹಣ ಉಳಿಸಲು ಈ ತಂತ್ರ ಬಳಸಿ

ಆರ್ಬಿಐ ಬಡ್ಡಿ ದರ: ನಿಮ್ಮ ಇಎಂಐ ಹೊರೆ ಕಡಿಮೆಯಾಗುತ್ತಾ?

ಆರ್ಬಿಐ ನಿರ್ಧಾರ: ನಿಮ್ಮ ಎಸ್ಐಪಿ ಮತ್ತು ಇಎಂಐ ಬದಲಾಯಿಸಬೇಕೇ?

ಸೇಫ್ಟಿ ಕಂಟ್ರೋಲ್ಸ್ ಐಪಿಒ: ಹೂಡಿಕೆದಾರರೇ ಇಂದೇ ಕೊನೆಯ ಅವಕಾಶ!

ಗೃಹ ಸಾಲದ ಇಎಂಐ ಇಳಿಕೆ: ಆರ್ಬಿಐ ನಿರ್ಧಾರದ ಅಸಲಿ ಸತ್ಯ



Click it and Unblock the Notifications