ಬೆಂಗಳೂರು, ಫೆಬ್ರವರಿ 9: 'ಒಂದು ಜಿಲ್ಲೆ, ಒಂದು ಉತ್ಪನ್ನ' ಯೋಜನೆಯಡಿ ಕೇಂದ್ರದ 193 ಕೋಟಿ ರೂಪಾಯಿ ಬಡ್ಡಿ ರಹಿತ ಸಾಲದ ನೆರವಿನಿಂದ ಮೈಸೂರಿನಲ್ಲಿ ಯೂನಿಟಿ ಮಾಲ್ ನಿರ್ಮಿಸಲು ಕರ್ನಾಟಕ ಸಚಿವ ಸಂಪುಟ ಒಪ್ಪಿಗೆ ನೀಡಿದೆ.
ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆಯಿಂದ ಮೈಸೂರು ವಸ್ತುಪ್ರದರ್ಶನ ಪ್ರಾಧಿಕಾರದ 6.5 ಎಕರೆ ಜಾಗದಲ್ಲಿ ಮಾಲ್ ನಿರ್ಮಿಸಲಾಗುವುದು ಎಂದು ರಾಜ್ಯ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್‌ಕೆ ಪಾಟೀಲ್ ಸುದ್ದಿಗಾರರಿಗೆ ತಿಳಿಸಿದ್ದಾರೆ.

ಯೂನಿಟಿ ಮಾಲ್ ವಸ್ತುಪ್ರದರ್ಶನ ಕೇಂದ್ರವಲ್ಲದೆ, ಒಂದು ಉತ್ಪನ್ನವನ್ನು ಪ್ರೋತ್ಸಾಹಿಸುವ ಉದ್ದೇಶ ಹೊಂದಿದ್ದರೂ, ಸಹಜವಾಗಿಯೇ ಹೆಚ್ಚು ಜನರನ್ನು ಆಕರ್ಷಿಸುವ ಉದ್ದೇಶ ಹೊಂದಿರುತ್ತದೆ. ಆ ಮಾಲ್‌ನಲ್ಲಿ ಇತರ ಉತ್ಪನ್ನಗಳೂ ಇರುತ್ತವೆ. ಯೋಜನೆಗೆ 193 ಕೋಟಿ ರೂಪಾಯಿ ವೆಚ್ಚವಾಗಲಿದೆ ಎಂದು ಸಚಿವರು ಹೇಳಿದರು.
ರಾಜ್ಯದ 18 ವೈದ್ಯಕೀಯ ಕಾಲೇಜುಗಳಲ್ಲಿ 176.7 ಕೋಟಿ ರೂ.ಗಳ ಅಂದಾಜು ವೆಚ್ಚದಲ್ಲಿ 114 ಮಾಡ್ಯುಲರ್ ಆಪರೇಷನ್ ಥಿಯೇಟರ್‌ಗಳನ್ನು ಸ್ಥಾಪಿಸಲು ಸಚಿವ ಸಂಪುಟ ಅನುಮೋದನೆ ನೀಡಿದೆ. ಅಂಗನವಾಡಿ ಕಾರ್ಯಕರ್ತೆಯರು ಮತ್ತು ಆರೋಗ್ಯ ಕಾರ್ಯಕರ್ತರಿಗೆ 75,938 ಸ್ಮಾರ್ಟ್‌ಫೋನ್‌ಗಳನ್ನು ವಿತರಿಸಲು ನಿರ್ಧರಿಸಲಾಗಿದೆ. ಪ್ರತಿ ಮೊಬೈಲ್ ಫೋನ್ 11,800 ರೂ. ಆಗಿರುತ್ತದೆ. ಕಲಬುರಗಿಯಲ್ಲಿ 150 ಹಾಸಿಗೆಗಳ ಪ್ರಾದೇಶಿಕ ಕ್ಯಾನ್ಸರ್ ಆಸ್ಪತ್ರೆ ಸ್ಥಾಪಿಸಲು ಸಚಿವ ಸಂಪುಟ ಒಪ್ಪಿಗೆ ನೀಡಿದೆ.
More From GoodReturns

Karnataka BPL Card: ಬಿಪಿಎಲ್ ಕಾರ್ಡ್ದಾರರಿಗೆ ಬಿಗ್ ಶಾಕ್! ಸರ್ಕಾರದ ಮಹತ್ವದ ಕ್ರಮ

Bengaluru 2nd Airport: ಬೆಂಗಳೂರು 2ನೇ ಏರ್ಪೋರ್ಟ್ಗೆ ಇದೇ ಸ್ಥಳ ಬೆಸ್ಟ್; ಉದ್ಯಮಿ ಕೊಟ್ರು ಬಿಗ್ ಟ್ವಿಸ್ಟ್

Mandya ARAI Centre: ಮಂಡ್ಯಕ್ಕೆ ಮತ್ತೊಂದು ಮೆಗಾ ಗಿಫ್ಟ್…500 ಕೋಟಿ ಹೂಡಿಕೆಯಲ್ಲಿ ARAIನ ಸುಧಾರಿತ ಕೇಂದ್ರ ಸ್ಥಾಪನೆ!

Karnataka Budget 2026: 4.49 ಲಕ್ಷ ಕೋಟಿಯ ದಾಖಲೆ ಬಜೆಟ್…ಈ ಬಜೆಟ್ನಲ್ಲಿ ಜನಸಾಮಾನ್ಯರಿಗೆ ಸಿಕ್ಕ ಕೊಡುಗೆ ಏನು?

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

North Karnataka: ಕೈಗಾರಿಕೆ, ಕೃಷಿ, ಶಿಕ್ಷಣ..ಉತ್ತರ ಕರ್ನಾಟಕಕ್ಕೆ ಸರ್ಕಾರದಿಂದ ಸಿಕ್ಕ ಹೊಸ ಯೋಜನೆಗಳು ಏನು?

Karnataka Budget 2026 Live Updates: ಕರ್ನಾಟಕ ಬಜೆಟ್ನ ಪ್ರಮುಖ ಘೋಷಣೆಗಳೇನು? ಇಲ್ಲಿದೆ ಸಂಪೂರ್ಣ ಮಾಹಿತಿ

Karnataka Highway: ರಾಜ್ಯದ ಈ ಭಾಗಕ್ಕೆ ಹೈವೇ ಡಿಮ್ಯಾಂಡ್…ಕೇಂದ್ರಕ್ಕೆ ಮನವಿ ಮಾಡಿದ ಸಂಸದೆ ಪ್ರಭಾ ಮಲ್ಲಿಕಾರ್ಜುನ್!

ಕರ್ನಾಟಕ ಬಜೆಟ್ 2026: ಕೃಷಿ, ಶಿಕ್ಷಣ, ಸಾರಿಗೆ, ವೈದ್ಯಕೀಯ ಕ್ಷೇತ್ರಗಳ ನಿರೀಕ್ಷೆ ಏನು? ಬಜೆಟ್ ಮೇಲೆ ಭಾರಿ ಬೇಡಿಕೆ

Karnataka Budget 2026–27: ಬೆಂಗಳೂರು ಮೂಲಸೌಕರ್ಯ ಮತ್ತು ಕಲ್ಯಾಣ ಯೋಜನೆಗಳಿಗೆ ಒತ್ತು ಸಾಧ್ಯತೆ!

Karnataka Budget: ಏರಿಕೆಯಾಗುತ್ತಿರುವ ಸಾಲ, ಹೆಚ್ಚುತ್ತಿರುವ ವೆಚ್ಚ...ಬಜೆಟ್ನಲ್ಲಿ ಸಮತೋಲನ ಸಾಧಿಸುವುದು ಸಾಧ್ಯವೇ?



Click it and Unblock the Notifications