ಲಕ್ಷ್ಮಿ ವಿಲಾಸ್ ಬ್ಯಾಂಕ್ ಅನ್ನು ಡಿಬಿಎಸ್‌ ಇಂಡಿಯಾದೊಂದಿಗೆ ವಿಲೀನಗೊಳಿಸಲು ಕ್ಯಾಬಿನೆಟ್ ಅನುಮೋದನೆ

ತಮಿಳುನಾಡು ಮೂಲದ ಖಾಸಗಿ ವಲಯದ ಬ್ಯಾಂಕ್ ಲಕ್ಷ್ಮಿ ವಿಲಾಸ್ ಬ್ಯಾಂಕನ್ನು, ಸಿಂಗಾಪುರದ ಮೂಲದ ಬಹುದೊಡ್ಡ ಬ್ಯಾಂಕ್ ಡಿಬಿಎಸ್ ಗ್ರೂಪ್‌ನೊಂದಿಗೆ ವಿಲೀನಗೊಳಿಸುವ ಕಾರ್ಯಕ್ಕೆ ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ.

ಬ್ಯಾಂಕಿನ ಆರ್ಥಿಕ ಸ್ಥಿತಿ ಹದಗೆಟ್ಟು ಆರ್‌ಬಿಐನಿಂದ ನಿಷೇಧಕ್ಕೊಳಗಾಗಿದ್ದ ಲಕ್ಷ್ಮೀ ವಿಲಾಸ್ ಬ್ಯಾಂಕ್ ಒಂದು ತಿಂಗಳ ನಿಷೇಧಕ್ಕೊಳಪಟ್ಟಿದ್ದು, ಡಿಸೆಂಬರ್ 16ರ ಗಡುವಿನ ಮೊದಲು ಬ್ಯಾಂಕ್ ಅನ್ನು ಡಿಬಿಎಸ್ ಬ್ಯಾಂಕ್ ಇಂಡಿಯಾದೊಂದಿಗೆ ಸಮಯೋಚಿತವಾಗಿ ವಿಲೀನಗೊಳಿಸುವ ಕಾರ್ಯ ನಡೆದಿದೆ. ಈ ಮೂಲಕ ಭಾರತೀಯ ಬ್ಯಾಂಕ್‌ವೊಂದನ್ನು ವಿದೇಶಿ ಘಟಕದತ್ತ ವಿಲೀನಗೊಳಿಸುವ ಮೊದಲ ಉದಾಹರಣೆಯು ಇದಾಗಿದೆ.

ಒಪ್ಪಂದದ ಪ್ರಕಾರ, ಡಿಬಿಎಸ್‌ಗೆ 563 ಶಾಖೆಗಳು, 974 ಎಟಿಎಂಗಳು ಮತ್ತು ಚಿಲ್ಲರೆ ಹೊಣೆಗಾರಿಕೆಗಳಲ್ಲಿ 1.6 ಬಿಲಿಯನ್ ಫ್ರ್ಯಾಂಚೈಸ್ ದೊರೆತಿದೆ. 94 ವರ್ಷದಷ್ಟು ಹಳೆಯದಾದ ಎಲ್‌ವಿಎಸ್‌ ಬ್ಯಾಂಕ್ನಲ್ಲಿನ ಠೇವಣಿಗಳು ಡಿಬಿಎಸ್‌ ಇಂಡಿಯಾದ ಜೊತೆಗೆ ವಿಲೀನಗೊಳ್ಳಲಿದೆ.

LVB ಅನ್ನು DBSನೊಂದಿಗೆ ವಿಲೀನಗೊಳಿಸಲು ಕ್ಯಾಬಿನೆಟ್ ಅನುಮೋದನೆ

ಆರ್‌ಬಿಐ ನವೆಂಬರ್ 17ರಿಂದ ಡಿಸೆಂಬರ್ 16ರವರೆಗೆ ಬ್ಯಾಂಕ್ ಅನ್ನು ನಿಷೇಧಕ್ಕೊಳಪಡಿಸಿತ್ತು. ಜೊತೆಗೆ ಈ ಬ್ಯಾಂಕಿನ ಗ್ರಾಹಕರು ಖಾತೆಯಿಂದ ತಿಂಗಳಿಗೆ 25,000 ರೂಪಾಯಿ ಹಣವನ್ನು ಮಾತ್ರ ಹಿಂಪಡೆಯಲು ಸಾಧ್ಯವಿದೆ ಎಂದು ಹಣಕಾಸು ಸಚಿವಾಲಯ ಪ್ರಕಟಣೆಯಲ್ಲಿ ತಿಳಿಸಿತ್ತು.

ಲಕ್ಷ್ಮೀ ವಿಲಾಸ್ ಬ್ಯಾಂಕ್ ಆರ್ಥಿಕ ಸ್ಥಿತಿಯು ನಿರಂತರವಾಗಿ ಕುಸಿಯುತ್ತಾ ಸಾಗಿತ್ತು. ಕಳೆದ ಮೂರು ವರ್ಷಗಳಿಂದ ಸತತವಾಗಿ ನಷ್ಟ ಆಗುತ್ತಿತ್ತು. ಯಾವುದೇ ಸರಿಯಾದ ವ್ಯೂಹಾತ್ಮಕ ಯೋಜನೆ ಇಲ್ಲದೆ, ಎನ್ ಪಿಎ (ಅನುತ್ಪಾದಕ ಸಾಲ) ಹೆಚ್ಚಾಗಿ ನಷ್ಟ ಮುಂದುವರಿದಿದೆ. ಬ್ಯಾಂಕ್ ನಲ್ಲೂ ಸತತವಾಗಿ ವಿತ್ ಡ್ರಾ ಮುಂದುವರಿದಿದೆ ಮತ್ತು ನಗದು ಕಡಿಮೆ ಆಗಿದೆ. ಜತೆಗೆ ಗಂಭೀರವಾದ ಆಡಳಿತಾತ್ಮಕ ಸಮಸ್ಯೆಗಳಿದ್ದವು, ಹೀಗಾಗಿ ಬ್ಯಾಂಕ್ ನಿಷೇಧಕೊಳಗಾಗಿದೆ. ಆದಾಗ್ಯೂ ಠೇವಣಿದಾರರ ಹಣ ಸುರಕ್ಷಿತವಾಗಿದೆ ಎಂದು ಆರ್‌ಬಿಐ ಹೇಳಿದೆ.

ಇನ್ನು ಲಕ್ಷ್ಮಿ ವಿಲಾಸ್ ಬ್ಯಾಂಕ್ ಲಿಮಿಟೆಡ್‌ನ ಎಲ್ಲಾ ಬ್ರ್ಯಾಂಚ್‌ಗಳು ನವೆಂಬರ್ 27ರಿಂದ ಡಿಬಿಎಸ್ ಬ್ಯಾಂಕ್ ಇಂಡಿಯಾ ಲಿಮಿಟೆಡ್‌ ಆಗಿ ಕಾರ್ಯ ನಿರ್ವಹಿಸಲಿದೆ ಎಂದು ಆರ್‌ಬಿಐ ಟ್ವೀಟ್ ಮಾಡಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+