ಬೆಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ವೇರ್ ಹೌಸ್ ನಲ್ಲಿ ಇದ್ದ 2.6 ಕೇಜಿ ಚಿನ್ನ ನಾಪತ್ತೆಯಾದ ಆರೋಪದಲ್ಲಿ ಸಿಬಿಐನಿಂದ ಆರು ಕಸ್ಟಮ್ಸ್ ಅಧಿಕಾರಿಗಳ ವಿರುದ್ಧ ಪ್ರಕರಣ ದಾಖಲಾಗಿದೆ. ಜೂನ್ 8, 2012ರಿಂದ ಮಾರ್ಚ್ 26, 2014ರ ಮಧ್ಯೆ 13 ಪ್ರಯಾಣಿಕರಿಂದ ಕೆಂಪೇಗೌಡ ಅಂತರರಾಷ್ಟ್ರೀಯ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಚಿನ್ನವನ್ನು ವಶಪಡಿಸಿಕೊಳ್ಳಲಾಗಿತ್ತು.
ಅಕ್ಟೋಬರ್ 12, 2020ರಂದು ಸಿಬಿಐನಿಂದ ಇಬ್ಬರು ಅಸಿಸ್ಟೆಂಟ್ ಕಮಿಷನರ್, ಮೂವರು ಕೇಂದ್ರೀಯ ತೆರಿಗೆ ಸೂಪರಿಂಟೆಂಡೆಂಟ್ ಗಳು ಹಾಗೂ ಇತರ ಅಧಿಕಾರಿಗಳ ವಿರುದ್ಧ ಪ್ರಕರಣ ದಾಖಲಾಗಿದೆ.
ಡೈರೆಕ್ಟೊರೇಟ್ ಆಫ್ ಜನರಲ್ ವಿಜಿಲೆನ್ಸ್ ಆಫ್ ಹೈದರಾಬ್ ವಲಯ ಘಟಕದ ಕಸ್ಟಮ್ಸ್ ಇಲಾಖೆ ಆಂತರಿಕ ತನಿಖೆ ನಡೆಸಲಾಗಿದೆ. ವಶಪಡಿಸಿಕೊಂಡು, ವೇರ್ ಹೌಸ್ ನಲ್ಲಿ ಇಟ್ಟಿದ್ದ ಚಿನ್ನ ನಾಪತ್ತೆ ಆಗಿದ್ದ ಪ್ರಕರಣದಲ್ಲಿ ಅಧಿಕಾರಿಗಳು ಭಾಗಿ ಆಗಿರುವ ಆರೋಪ ಕಂಡುಬಂದಿದೆ ಎಂದು ತಮ್ಮ ವರದಿಯಲ್ಲಿ ಸಿಬಿಐನಿಂದ ಹೇಳಲಾಗಿದೆ.

ವಿಮಾನ ನಿಲ್ದಾಣದಲ್ಲಿ ಇವರು ಕಾರ್ಯ ನಿರ್ವಹಿಸುತ್ತಿದ್ದ ಅವಧಿಯಲ್ಲಿ ಚಿನ್ನ ನಾಪತ್ತೆಯಾಗಿದೆ. ವಶಪಡಿಸಿಕೊಂಡ ಚಿನ್ನದ ಬ್ಯಾಗೇಜ್ ಅನ್ನು ಗೋಡೌನ್ ನಲ್ಲಿ ಇಟ್ಟು, ಅದರ ಉಸ್ತುವಾರಿ ಈ ಆರು ಅಧಿಕಾರಿಗಳಿಗೆ ವಹಿಸಲಾಗಿತ್ತು ಎಂದು ಸಿಬಿಐ ಹೇಳಿದೆ.
More From GoodReturns

ಎಮಿಯಾಕ್ ಟೆಕ್ನಾಲಜೀಸ್ ಐಪಿಒ: ಹೂಡಿಕೆದಾರರ ಮುಗಿಬಿದ್ದ ಭರ್ಜರಿ ಬೇಡಿಕೆ!

ಆರ್ಬಿಐ ರೆಪೋ ದರ ಸ್ಥಿರತೆ: ನಿಮ್ಮ ಇಎಂಐ ಹೊರೆ ಇಳಿಯುತ್ತಾ?

ಆರ್ಬಿಐ ಪಾಲಿಸಿಗೂ ಮುನ್ನ ನಿಮ್ಮ ಬಂಡವಾಳಕ್ಕೆ ಈ ರಕ್ಷಣೆ ಬೇಕೇ?

ಆರ್ಬಿಐ ಪಾಲಿಸಿ ಅಬ್ಬರ: ನಿಮ್ಮ ಹಣ ಉಳಿಸಲು ಈ ತಂತ್ರ ಬಳಸಿ

ಸೇಫ್ಟಿ ಕಂಟ್ರೋಲ್ಸ್ ಐಪಿಒ: ಹೂಡಿಕೆದಾರರೇ ಇಂದೇ ಕೊನೆಯ ಅವಕಾಶ!

ಆರ್ಬಿಐ ಬಡ್ಡಿ ದರ: ನಿಮ್ಮ ಇಎಂಐ ಹೊರೆ ಕಡಿಮೆಯಾಗುತ್ತಾ?

ಆರ್ಬಿಐ ಪಾಲಿಸಿ: ಇಂದಿನ ನಿರ್ಧಾರ ನಿಮ್ಮ ಹೂಡಿಕೆಯನ್ನು ಬದಲಿಸುತ್ತಾ?

ಗೃಹ ಸಾಲದ ಇಎಂಐ ಇಳಿಕೆ: ಆರ್ಬಿಐ ನಿರ್ಧಾರದ ಅಸಲಿ ಸತ್ಯ

ಹೋಮ್ ಲೋನ್ ಇಎಂಐ ಉಳಿಸಲು ಈ ಟ್ರಿಕ್ ಬಳಸಿ ನೋಡಿ

ಆರ್ಬಿಐ ರೆಪೋ ದರ ಸ್ಥಿರ: ನಿಮ್ಮ ಇಎಂಐ ಹೊರೆ ಇಳಿಯುತ್ತಾ?

ಚಿನ್ನದ ಬೆಲೆ ಏರಿಕೆ: ಹೂಡಿಕೆದಾರರೇ ಎಚ್ಚರ, ಈ ತಪ್ಪು ಮಾಡಬೇಡಿ!



Click it and Unblock the Notifications