ಕೆಫೆ ಕಾಫೀ ಡೇ ಸಂಸ್ಥಾಪಕ- ಉದ್ಯಮಿ ದಿವಂಗತ ವಿ.ಜಿ. ಸಿದ್ಧಾರ್ಥ ಅವರ ಮಗ ಅಮರ್ತ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹಿರಿಯ ಮಗಳು ಐಶ್ವರ್ಯಾ ಮದುವೆಗೆ ಸಿದ್ಧತೆ ನಡೆದಿದೆ ಎಂದು ಮೂಲಗಳನ್ನು ಉದಾಹರಿಸಿ 'ಟೈಮ್ಸ್ ಆಫ್ ಇಂಡಿಯಾ' ವರದಿ ಮಾಡಿದೆ. ಆ ಎರಡೂ ಕುಟುಂಬಗಳ ಮಧ್ಯೆ ಮದುವೆ ಮಾತುಕತೆ ನಡೆದಿದೆ ಎಂದು ಹೆಸರು ಹೇಳಲು ಇಚ್ಛಿಸದ ವ್ಯಕ್ತಿಯೊಬ್ಬರು ತಿಳಿಸಿದ್ದಾರೆ.
ಕಳೆದ ವರ್ಷ ಜುಲೈನಲ್ಲಿ ವಿ.ಜಿ.ಸಿದ್ಧಾರ್ಥ ಮಂಗಳೂರಿನಲ್ಲಿ ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಕೆಫೆ ಕಾಫೀ ಡೇ ಸಂಸ್ಥಾಪಕರಾದ ಸಿದ್ಧಾರ್ಥ, ಕರ್ನಾಟಕದ ಮಾಜಿ ಮುಖ್ಯಮಂತ್ರಿ ಎಸ್ಸೆಂ ಕೃಷ್ಣ ಅವರ ಅಳಿಯ ಕೂಡ ಹೌದು. ವಿ.ಜಿ. ಸಿದ್ಧಾರ್ಥಗೆ ವಿಪರೀತ ಸಾಲದ ಒತ್ತಡ ಇತ್ತು. ಜತೆಗೆ ಆದಾಯವನ್ನು ಮುಚ್ಚಿಟ್ಟಿದ್ದ ಆರೋಪ ಕೂಡ ಎದುರಿಸುತ್ತಿದ್ದರು.
ಡಿ.ಕೆ. ಶಿವಕುಮಾರ್ ಅವರ ಮಗಳು, ಇಪ್ಪತ್ತೆರಡು ವರ್ಷದ ಐಶ್ವರ್ಯಾ ಸದ್ಯಕ್ಕೆ ಬೆಂಗಳೂರಿನಲ್ಲಿ ಇರುವ ಗ್ಲೋಬಲ್ ಅಕಾಡೆಮಿ ಆಫ್ ಟೆಕ್ನಾಲಜಿಯಲ್ಲಿ ಟ್ರಸ್ಟಿ ಆಗಿದ್ದಾರೆ. ಕಳೆದ ವರ್ಷ ಸೆಪ್ಟೆಂಬರ್ ನಲ್ಲಿ ಶಿವಕುಮಾರ್ ಮನಿ ಲಾಂಡ್ರಿಂಗ್ ಪ್ರಕರಣದಲ್ಲಿ ತಿಹಾರ್ ಜೈಲಿನಲ್ಲಿ ಇರುವ ವೇಳೆಯಲ್ಲೇ ಐಶ್ವರ್ಯಾಗೆ ಇ.ಡಿ. ಸಮನ್ಸ್ ನೀಡಿತ್ತು.

ಆದರೆ, ಈ ಮದುವೆ ವಿಚಾರಕ್ಕೆ ಸಂಬಂಧಿಸಿದಂತೆ ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ. ಇದು ವೈಯಕ್ತಿಕ ವಿಚಾರ ಎಂದು ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಇನ್ನು ವಿ.ಜಿ. ಸಿದ್ಧಾರ್ಥ ಮಗ ಅಮರ್ತ್ಯ ತಾಯಿಯೊಂದಿಗೆ ಸೇರಿ ಉದ್ಯಮದ ಜವಾಬ್ದಾರಿ ನೋಡಿಕೊಳ್ಳುತ್ತಿದ್ದಾರೆ.
More From GoodReturns

Mandya ARAI Centre: ಮಂಡ್ಯಕ್ಕೆ ಮತ್ತೊಂದು ಮೆಗಾ ಗಿಫ್ಟ್…500 ಕೋಟಿ ಹೂಡಿಕೆಯಲ್ಲಿ ARAIನ ಸುಧಾರಿತ ಕೇಂದ್ರ ಸ್ಥಾಪನೆ!

Karnataka Budget 2026: 4.49 ಲಕ್ಷ ಕೋಟಿಯ ದಾಖಲೆ ಬಜೆಟ್…ಈ ಬಜೆಟ್ನಲ್ಲಿ ಜನಸಾಮಾನ್ಯರಿಗೆ ಸಿಕ್ಕ ಕೊಡುಗೆ ಏನು?

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

North Karnataka: ಕೈಗಾರಿಕೆ, ಕೃಷಿ, ಶಿಕ್ಷಣ..ಉತ್ತರ ಕರ್ನಾಟಕಕ್ಕೆ ಸರ್ಕಾರದಿಂದ ಸಿಕ್ಕ ಹೊಸ ಯೋಜನೆಗಳು ಏನು?

Karnataka Budget 2026 Live Updates: ಕರ್ನಾಟಕ ಬಜೆಟ್ನ ಪ್ರಮುಖ ಘೋಷಣೆಗಳೇನು? ಇಲ್ಲಿದೆ ಸಂಪೂರ್ಣ ಮಾಹಿತಿ

Egg Price Down: ಬೆಂಗಳೂರು ಮೊಟ್ಟೆ ಪ್ರಿಯರಿಗೆ ಗುಡ್ ನ್ಯೂಸ್; ಬೆಲೆ ಭಾರೀ ಇಳಿಕೆ

Karnataka Highway: ರಾಜ್ಯದ ಈ ಭಾಗಕ್ಕೆ ಹೈವೇ ಡಿಮ್ಯಾಂಡ್…ಕೇಂದ್ರಕ್ಕೆ ಮನವಿ ಮಾಡಿದ ಸಂಸದೆ ಪ್ರಭಾ ಮಲ್ಲಿಕಾರ್ಜುನ್!

ಕರ್ನಾಟಕ ಬಜೆಟ್ 2026: ಕೃಷಿ, ಶಿಕ್ಷಣ, ಸಾರಿಗೆ, ವೈದ್ಯಕೀಯ ಕ್ಷೇತ್ರಗಳ ನಿರೀಕ್ಷೆ ಏನು? ಬಜೆಟ್ ಮೇಲೆ ಭಾರಿ ಬೇಡಿಕೆ

Karnataka Budget 2026–27: ಬೆಂಗಳೂರು ಮೂಲಸೌಕರ್ಯ ಮತ್ತು ಕಲ್ಯಾಣ ಯೋಜನೆಗಳಿಗೆ ಒತ್ತು ಸಾಧ್ಯತೆ!

Karnataka Budget: ಏರಿಕೆಯಾಗುತ್ತಿರುವ ಸಾಲ, ಹೆಚ್ಚುತ್ತಿರುವ ವೆಚ್ಚ...ಬಜೆಟ್ನಲ್ಲಿ ಸಮತೋಲನ ಸಾಧಿಸುವುದು ಸಾಧ್ಯವೇ?

Karnataka Weather: ರಾಜ್ಯದ ಜನರಿಗೆ ಬಿಸಿಲಿನ ಕಂಟಕ! ಹವಾಮಾನ ಇಲಾಖೆಯಿಂದ ಎಚ್ಚರಿಕೆ



Click it and Unblock the Notifications