For Quick Alerts
ALLOW NOTIFICATIONS  
For Daily Alerts

ಕೇಂದ್ರ ಬಜೆಟ್ 2022: ಕ್ರಿಪ್ಟೋ ಮಾರುಕಟ್ಟೆಯ ಮೇಲೆ ಪರಿಣಾಮ ಬೀರಿದೆಯಾ?

|

ನವದೆಹಲಿ, ಫೆಬ್ರವರಿ 1: ಭಾರತದಲ್ಲಿ ಕ್ರಿಪ್ಟೋಕರೆನ್ಸಿ (ಡಿಜಿಟಲ್ ಕರೆನ್ಸಿ) ರದ್ದು ಮಾಡಲಾಗುತ್ತದೆ ಎಂಬ ವರದಿಗಳ ನಡುವೆ ಕ್ರಿಪ್ಟೋಕರೆನ್ಸಿ ವಹಿವಾಟು ನಡೆಸುವುದಕ್ಕೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೊಸ ತೆರಿಗೆ ಚೌಕಟ್ಟನ್ನು ಜಾರಿಗೊಳಿಸುವುದಾಗಿ ಹೇಳಿದ್ದಾರೆ.

 

ದೇಶದಲ್ಲಿ ಕ್ರಿಪ್ಟೋಕರೆನ್ಸಿ ಮೇಲೆ 10 ಕೋಟಿಗೂ ಅಧಿಕ ಜನರು ಹೂಡಿಕೆ ಮಾಡುತ್ತಿದ್ದು, ಅತಿದೊಡ್ಡ ಮಾರುಕಟ್ಟೆ ಎನಿಸಿಕೊಳ್ಳುತ್ತಿದೆ. ಈ ಹಿನ್ನೆಲೆ ಡಿಜಿಟಲ್ ಕರೆನ್ಸಿಗೆ ಅನುಮತಿ ನೀಡಿರುವ ಕೇಂದ್ರ ಸರ್ಕಾರವು ಡಿಜಿಟಲ್ ಕರೆನ್ಸಿ ವರ್ಗಾವಣೆ ಮೇಲೆ ತೆರಿಗೆ ವಿಧಿಸುವುದಕ್ಕೆ ನಿರ್ಧರಿಸಿದೆ.

ಬಜೆಟ್ 2021: MSME ವಲಯಕ್ಕೆ ಏನು ಸಿಗಬಹುದು?ಬಜೆಟ್ 2021: MSME ವಲಯಕ್ಕೆ ಏನು ಸಿಗಬಹುದು?

ಸಂಸತ್ತಿನಲ್ಲಿ ತಮ್ಮ ಬಜೆಟ್ 2022 ಭಾಷಣದಲ್ಲಿ ಮಾತನಾಡಿದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಯಾವುದೇ ವರ್ಚುವಲ್ ಅಥವಾ ಕ್ರಿಪ್ಟೋಕರೆನ್ಸಿಗಳ ವರ್ಗಾವಣೆ ಮೇಲೆ ಶೇ.30ರಷ್ಟು ತೆರಿಗೆ ವಿಧಿಸಲಾಗುತ್ತದೆ. ಕೇಂದ್ರ ಬಜೆಟ್ ಮಂಡನೆಯ ನಂತರದಲ್ಲಿ ಕ್ರಿಪ್ಟೋಕರೆನ್ಸಿಗಳ ಮೇಲೆ ಯಾವ ರೀತಿ ಪರಿಣಾಮ ಬೀರಿದೆ. ಜಗತ್ತಿನ ಬಹುತೇಕ ರಾಷ್ಟ್ರಗಳು ನಿಯಂತ್ರಣ ಹೇರ ಲ್ಪಟ್ಟಿರುವ ಪ್ರಮುಖ ಕ್ರಿಪ್ಟೋಕರೆನ್ಸಿಗಳ ಬೆಲೆಯಲ್ಲಿ ಏರಿಳಿತ ಹೇಗಿದೆ. ಬಿಟ್‌ಕಾಯಿನ್ ಕ್ರಿಪ್ಟೋ ಕರೆನ್ಸಿ, ಡೋಜ್‌ಕಾಯಿನ್ ಕ್ರಿಪ್ಟೋ ಕರೆನ್ಸಿ, ಎಕ್ಸ್‌ಆರ್‌ಪಿ ಕ್ರಿಪ್ಟೋ ಕರೆನ್ಸಿ ಮತ್ತು ಎಥೆರಿಯಮ್ ಕ್ರಿಪ್ಟೋ ಕರೆನ್ಸಿಯ ಇತ್ತೀಚಿನ ದರ ಎಷ್ಟಿದೆ ಎಂಬುದರ ಕುರಿತು ಒಂದು ವಿಶೇಷ ವರದಿ ಇಲ್ಲಿದೆ ಓದಿ.

ಕ್ರಿಪ್ಟೋ ಮಾರುಕಟ್ಟೆ ಮತ್ತು ಬಿಟ್‌ಕಾಯಿನ್ ಕರೆನ್ಸಿ

ಕ್ರಿಪ್ಟೋ ಮಾರುಕಟ್ಟೆ ಮತ್ತು ಬಿಟ್‌ಕಾಯಿನ್ ಕರೆನ್ಸಿ

ಬಿಟ್‌ಕಾಯಿನ್ ಕ್ರಿಪ್ಟೋಕರೆನ್ಸಿಯಾಗಿದ್ದು, ಇದು ಆಧುನಿಕ ಡಿಜಿಟಲ್ ಯುಗದ ಡಿಜಿಟಲ್ ಕರೆನ್ಸಿ ಆಗಿದೆ. ಈ ಕ್ರಿಪ್ಟೋ ಕರೆನ್ಸಿಗೆ ಯಾವುದೇ ರೀತಿಯ ಮುದ್ರಣ ರೂಪ ಇರುವುದಿಲ್ಲ. ಬಿಟ್ ಕಾಯಿನ್ ಎಂಬ ಕರೆನ್ಸಿಯು ಕೇವಲ ಎಲೆಕ್ಟ್ರಾನಿಕ್ ರೂಪದಲ್ಲಿರುತ್ತದೆ. ರೂಪಾಯಿ, ಡಾಲರ್, ಯುರೋಗಳಂತೆ ಭೌತಿಕ ರೂಪದಲ್ಲಿ ಇರುವುದಿಲ್ಲ. ಅಲ್ಲದೇ ಇದಕ್ಕೆ ಯಾವುದೇ ದೇಶ, ಭಾಷೆ, ಬ್ಯಾಂಕ್ ಇದ್ಯಾವುದು ಇರುವುದಿಲ್ಲ. ಭಾರತದಲ್ಲಿ ಆರ್‌ಬಿಐ ನಿರ್ದೇಶನವಿದ್ದರೂ ಕ್ರಿಪ್ಟೋಕರೆನ್ಸಿಗಳ ಮೇಲೆ ಭಾರತೀಯರ ಹೂಡಿಕೆ ಪ್ರಮಾಣ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಬಿಲಿಯನ್ ಡಾಲರ್‌ಗಳಷ್ಟು ಹಣವನ್ನು ಭಾರತೀಯರೇ ಹೂಡಿಕೆ ಮಾಡುತ್ತಿದ್ದಾರೆ. ಹೀಗಾಗಿ ಅನೇಕ ಕ್ರಿಪ್ಟೋಕರೆನ್ಸಿಗಳ ದರಗಳು ಇಳಿಕೆಯಾಗಿದ್ದರೂ ಹಣದ ಹೂಡಿಕೆ ಪ್ರಮಾಣ ಮೊದಲಿಗಿಂತ ಏರಿಕೆಯಾಗಿದೆ.

ಮಂಗಳವಾರ (ಫೆಬ್ರವರಿ 1)ರಂದು ಬಿಟ್‌ಕಾಯಿನ್ ಮತ್ತು ಎಥೆರಿಯಮ್ ಸೇರಿದಂತೆ ಬಹುತೇಕ ಕ್ರಿಪ್ಟೋಕರೆನ್ಸಿ ಮೌಲ್ಯದಲ್ಲಿ ಏರಿಕೆ ಕಂಡು ಬಂದಿದೆ. ಒಟ್ಟಾರೆ, ಎಲ್ಲಾ ಕ್ರಿಪ್ಟೋಕರೆನ್ಸಿಗಳ ಮಾರುಕಟ್ಟೆ ಮೌಲ್ಯ 1,773,692,298,163 ಯುಎಸ್ ಡಾಲರ್ ಗೇರಿದೆ.

ಬಿಟ್‌ಕಾಯಿನ್ ಬೆಲೆಯಲ್ಲಿ ಇಳಿಕೆ
 

ಬಿಟ್‌ಕಾಯಿನ್ ಬೆಲೆಯಲ್ಲಿ ಇಳಿಕೆ

ಬಿಟ್‌ಕಾಯಿನ್ ಕ್ರಿಪ್ಟೋಕರೆನ್ಸಿ ಪ್ರಸ್ತುತ 38,649.76 ಯುಎಸ್ ಡಾಲರ್‌ಗೆ ಬೆಲೆಯಲ್ಲಿ ವಹಿವಾಟು ನಡೆಸುತ್ತಿದ್ದು, ಶೇ 4.32ರಷ್ಟು ಏರಿಕೆಯಾಗಿದೆ. ಈ ಮೂಲಕ ಬಿಟ್‌ಕಾಯಿನ್ ಕ್ರಿಪ್ಟೋಕರೆನ್ಸಿಯ ಮಾರುಕಟ್ಟೆ ಕ್ಯಾಪ್ 732,852,493,651 ಯುಎಸ್ ಡಾಲರ್‌ನಷ್ಟಿದೆ. ಕಳೆದ 24 ಗಂಟೆಗಳಲ್ಲಿ, ಬಿಟ್‌ಕಾಯಿನ್ ಕ್ರಿಪ್ಟೋಕರೆನ್ಸಿಯ ಗರಿಷ್ಠ ಬೆಲೆ 39,026.79 ಡಾಲರ್ ಮತ್ತು ಕಡಿಮೆ ಬೆಲೆ 36,947.98 ಡಾಲರ್ ಆಗಿತ್ತು. ಕಳೆದ ವಾರದಲ್ಲಿ ಶೇ. 5.67ರಷ್ಟು ಏರಿಕೆಯಾಗಿದೆ. ಆದಾಯಕ್ಕೆ ಸಂಬಂಧಿಸಿದಂತೆ, ಬಿಟ್‌ಕಾಯಿನ್ ಕ್ರಿಪ್ಟೋಕರೆನ್ಸಿ ಕಳೆದ ಒಂದು ವರ್ಷದಲ್ಲಿ 16.64 ಪ್ರತಿಶತದಷ್ಟು ನಷ್ಟ ಅನುಭವಿಸಬೇಕಾಗಿದೆ. ಬಿಟ್‌ಕಾಯಿನ್ ಕ್ರಿಪ್ಟೋಕರೆನ್ಸಿಯ ಸಾರ್ವಕಾಲಿಕ ಹೆಚ್ಚಿನ ಬೆಲೆ 68,990.90 ಡಾಲರ್ ಆಗಿದೆ.

ಎಥೆರಿಯಮ್

ಎಥೆರಿಯಮ್

ಎಥೆರಿಯಮ್ ಕ್ರಿಪ್ಟೋ ಕರೆನ್ಸಿ ಪ್ರಸ್ತುತ 2,774.65 ಡಾಲರ್‌ನಷ್ಟು ವಹಿವಾಟು ನಡೆಸುತ್ತಿದೆ. ಇದು ಪ್ರಸ್ತುತ ಶೇಕಡಾ 9.41ರಷ್ಟು ಏರಿಕೆಯಾಗಿದ್ದು, ಈ ಮೂಲಕ ಎಥೆರಿಯಮ್ ಕ್ರಿಪ್ಟೋಕರೆನ್ಸಿಯ ಮಾರುಕಟ್ಟೆ ಕ್ಯಾಪ್ 331,696,708,408 ಯುಎಸ್ ಡಾಲರ್ ಆಗಿದೆ. ಕಳೆದ 24 ಗಂಟೆಗಳಲ್ಲಿ, ಎಥೆರಿಯಮ್ ಕ್ರಿಪ್ಟೋ ಕರೆನ್ಸಿಯ ಗರಿಷ್ಠ ಬೆಲೆ 2,788.90 ಡಾಲರ್ ಮತ್ತು ಕಡಿಮೆ ಬೆಲೆ 2,528.86 ಡಾಲರ್ ಆಗಿತ್ತು. ಕಳೆದ ವಾರ ಶೇ.13.58ರಷ್ಟು ಏರಿಕೆ ಕಂಡಿದೆ. ಆದಾಯಕ್ಕೆ ಸಂಬಂಧಿಸಿದಂತೆ, ಎಥೆರಿಯಮ್ ಕ್ರಿಪ್ಟೋಕರೆನ್ಸಿ ಕಳೆದ ಒಂದು ವರ್ಷದಲ್ಲಿ ಶೇ.24.59 ಪ್ರತಿಶತದಷ್ಟು ನಷ್ಟ ಅನುಭವಿಸಬೇಕಾಗಿದೆ. ಎಥೆರಿಯಮ್ ಕ್ರಿಪ್ಟೋಕರೆನ್ಸಿಯ ಸಾರ್ವಕಾಲಿಕ ಹೆಚ್ಚಿನ ಬೆಲೆ 4,865.57 ಡಾಲರ್‌ನಷ್ಟಿದೆ.

ಎಕ್ಸ್‌ಆರ್‌ಪಿ

ಎಕ್ಸ್‌ಆರ್‌ಪಿ

ಎಕ್ಸ್‌ಆರ್‌ಪಿ ಕ್ರಿಪ್ಟೋ ಕರೆನ್ಸಿ ಪ್ರಸ್ತುತ 0.6215 ಡಾಲರ್‌ನಷ್ಟು ವಹಿವಾಟು ನಡೆಸುತ್ತಿದೆ. ಇದು ಪ್ರಸ್ತುತ ಶೇಕಡಾ 5.79ರಷ್ಟು ಇಳಿಕೆಯಾಗಿದ್ದು, ಈ ಮೂಲಕ ಎಕ್ಸ್‌ಆರ್‌ಪಿ ಕ್ರಿಪ್ಟೋಕರೆನ್ಸಿಯ ಮಾರುಕಟ್ಟೆ ಕ್ಯಾಪ್ 29,745,695,671 ಡಾಲರ್‌ ಆಗಿದೆ. ಕಳೆದ 24 ಗಂಟೆಗಳಲ್ಲಿ, ಎಕ್ಸ್‌ಆರ್‌ಪಿ ಕ್ರಿಪ್ಟೋ ಕರೆನ್ಸಿಯ ಗರಿಷ್ಠ ಬೆಲೆ 0.6284 ಡಾಲರ್ ಮತ್ತು ಕನಿಷ್ಠ ಬೆಲೆ 0.5859 ಡಾಲರ್ ಆಗಿತ್ತು. ಕಳೆದ ವಾರ ಶೇ 2.56ರಷ್ಟು ಏರಿಕೆಯಾಗಿದೆ. ಆದಾಯಕ್ಕೆ ಸಂಬಂಧಿಸಿದಂತೆ, XRP ಕ್ರಿಪ್ಟೋಕರೆನ್ಸಿ ಕಳೆದ ಒಂದು ವರ್ಷದಲ್ಲಿ 24.69 ಪ್ರತಿಶತದಷ್ಟು ನಷ್ಟ ಅನುಭವಿಸಬೇಕಾಗಿದೆ. ಎಕ್ಸ್‌ಆರ್‌ಪಿ ಕ್ರಿಪ್ಟೋ ಕರೆನ್ಸಿಯ ಸಾರ್ವಕಾಲಿಕ ಹೆಚ್ಚಿನ ಬೆಲೆ 3.40 ಡಾಲರ್‌ನಷ್ಟಿದೆ.

ಕಾರ್ಡಾನೊ

ಕಾರ್ಡಾನೊ

ಕಾರ್ಡಾನೊ ಕ್ರಿಪ್ಟೋ ಕರೆನ್ಸಿ ಪ್ರಸ್ತುತ 1.06 ಡಾಲರ್‌ನಷ್ಟು ವಹಿವಾಟು ನಡೆಸುತ್ತಿದೆ. ಇದು ಪ್ರಸ್ತುತ ಶೇಕಡಾ 3.98ರಷ್ಟು ಏರಿಕೆಯಾಗಿದ್ದು, ಈ ಮೂಲಕ ಕಾರ್ಡಾನೊ ಕ್ರಿಪ್ಟೋಕರೆನ್ಸಿಯ ಮಾರುಕಟ್ಟೆ ಕ್ಯಾಪ್ 35,608,966,208 ಯುಎಸ್ ಡಾಲರ್ ಆಗಿದೆ. ಕಳೆದ 24 ಗಂಟೆಗಳಲ್ಲಿ, ಕಾರ್ಡಾನೊ ಕ್ರಿಪ್ಟೋಕರೆನ್ಸಿಯ ಗರಿಷ್ಠ ಬೆಲೆ 1.07 ಡಾಲರ್ ಮತ್ತು ಕಡಿಮೆ ಬೆಲೆ 1.02 ಡಾಲರ್ ಆಗಿತ್ತು. ಕಳೆದ ವಾರ ಶೇ.2.52ರಷ್ಟು ಇಳಿಕೆ ಕಂಡಿದೆ. ಆದಾಯಕ್ಕೆ ಸಂಬಂಧಿಸಿದಂತೆ, ಕಾರ್ಡಾನೊ ಕ್ರಿಪ್ಟೋಕರೆನ್ಸಿ ಕಳೆದ ಒಂದು ವರ್ಷದಲ್ಲಿ 19.09 ಪ್ರತಿಶತದಷ್ಟು ನಷ್ಟ ಅನುಭವಿಸಬೇಕಾಗಿದೆ. ಕಾರ್ಡಾನೊ ಕ್ರಿಪ್ಟೋಕರೆನ್ಸಿಯ ಸಾರ್ವಕಾಲಿಕ ಹೆಚ್ಚಿನ ಬೆಲೆ 3.10 ಡಾಲರ್ ಆಗಿದೆ.

ಬಿಟ್ ಕಾಯಿನ್ ಕ್ಯಾಶ್

ಬಿಟ್ ಕಾಯಿನ್ ಕ್ಯಾಶ್

ಬಿಟ್ ಕಾಯಿನ್ ಕ್ಯಾಶ್ ಕ್ರಿಪ್ಟೋಕರೆನ್ಸಿ ಪ್ರಸ್ತುತ 287.94 ಡಾಲರ್‌ನಷ್ಟು ವಹಿವಾಟು ನಡೆಸುತ್ತಿದೆ. ಇದು ಪ್ರಸ್ತುತ ಶೇಕಡಾ 2.77ರಷ್ಟು ಏರಿಕೆಯಾಗಿದ್ದು, ಈ ಮೂಲಕ ಬಿಟ್ ಕಾಯಿನ್ ಕ್ಯಾಶ್ ಮಾರುಕಟ್ಟೆ ಕ್ಯಾಪ್ 5,462,583,594 ಯುಎಸ್ ಡಾಲರ್ ಆಗಿದೆ. ಕಳೆದ 24 ಗಂಟೆಗಳಲ್ಲಿ, ಬಿಟ್ ಕಾಯಿನ್ ಕ್ಯಾಶ್ ಗರಿಷ್ಠ ಬೆಲೆ 290.81 ಡಾಲರ್ ಮತ್ತು ಕಡಿಮೆ ಬೆಲೆ 279.32 ಡಾಲರ್ ಆಗಿತ್ತು. ಕಳೆದ ಒಂದು ವಾರದಲ್ಲಿ ಬಿಟ್ ಕಾಯಿನ್ ಕ್ಯಾಶ್ ಶೇ.1.06ರಷ್ಟು ಏರಿಕೆ ಕಂಡಿದೆ. ಆದಾಯಕ್ಕೆ ಸಂಬಂಧಿಸಿದಂತೆ, ಬಿಟ್ ಕಾಯಿನ್ ಕ್ಯಾಶ್ ಕಳೆದ ಒಂದು ವರ್ಷದಲ್ಲಿ 33.41 ಪ್ರತಿಶತದಷ್ಟು ನಷ್ಟ ಅನುಭವಿಸಬೇಕಾಗಿದೆ. ಬಿಟ್ ಕಾಯಿನ್ ಕ್ಯಾಶ್ ಕ್ರಿಪ್ಟೋಕರೆನ್ಸಿಯ ಸಾರ್ವಕಾಲಿಕ ಹೆಚ್ಚಿನ ಬೆಲೆ 1,836.63 ಡಾಲರ್ ಆಗಿದೆ.

English summary

Central Budget Impact on Crypto Currency Market; Know Today's Rates

Central Govt Budget 2022-23 Impact on Crypto Currency Market; Know Today's Rates.
Story first published: Tuesday, February 1, 2022, 19:15 [IST]
Company Search
COVID-19
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X