ಕೋವಿಡ್ ಲಾಕ್‌ಡೌನ್ ಕಾರಣದಿಂದಾಗಿ ಮನೆಯಿಂದಲೇ ಕೆಲಸ (Work From Home) ಮಾಡುತ್ತಿರುವ ಐಟಿ ಕಂಪನಿಗಳ ಉದ್ಯೋಗಿಗಳಿಗೆ ಕೇಂದ್ರ ಸರ್ಕಾರ ಸಿಹಿ ಸುದ್ದಿ ನೀಡಿದೆ.
ಹೌದು, ಐಟಿ ಮತ್ತು ಬಿಪಿಓ ಕಂಪನಿಗಳಿಗೆ ಮನೆಯಿಂದ ಕೆಲಸ ಮಾಡಲು ಸಂಪರ್ಕ ಮಾನದಂಡಗಳನ್ನು ಸರ್ಕಾರ ಮಂಗಳವಾರ ಡಿಸೆಂಬರ್ 31 ರವರೆಗೆ ವಿಸ್ತರಿಸಿದೆ. ಮನೆಯಿಂದ ಕೆಲಸದ ಸಮಯ ಜುಲೈ 31 ರಂದು ಮುಕ್ತಾಯಗೊಳ್ಳುತ್ತಿತ್ತು. ದೂರಸಂಪರ್ಕ ಇಲಾಖೆಯ (ಡಿಒಟಿ) ಅಧಿಕೃತ ಟ್ವೀಟ್ ಪೇಜ್ ಮೂಲಕ ಈ ಘೋಷಣೆ ಮಾಡಲಾಗಿದೆ.
ಕೋವಿಡ್ ಕಾರಣದಿಂದಾಗಿ ನಡೆಯುತ್ತಿರುವ ಕಾಳಜಿಯನ್ನು ಗಮನದಲ್ಲಿಟ್ಟುಕೊಂಡು ಮನೆಯಿಂದ ಕೆಲಸ ಮಾಡಲು ಅನುಕೂಲವಾಗುವಂತೆ 2020 ರ ಡಿಸೆಂಬರ್ 31 ರವರೆಗೆ ಇತರ ಸರ್ವಿಸ್ ಸೆಕ್ಟರ್‌ನವರಿಗೆ ನಿಯಮಗಳು ಮತ್ತು ಷರತ್ತುಗಳಲ್ಲಿನ ಸಡಿಲಿಕೆಗಳನ್ನು ಡಿಒಟಿ ವಿಸ್ತರಿಸಿದೆ ಎಂದು ಟ್ವೀಟ್ ತಿಳಿಸಿದೆ.

ಕೋವಿಡ್ ಸಾಂಕ್ರಾಮಿಕ ರೋಗವನ್ನು ಹರಡುವುದನ್ನು ತಡೆಯಲು ಕಟ್ಟುನಿಟ್ಟಾದ ಲಾಕ್‌ಡೌನ್‌ನಲ್ಲಿದ್ದಾಗ, ಏಪ್ರಿಲ್‌ನಲ್ಲಿ Work From Home ಪಡೆಯುವುದನ್ನು ಡಿಒಟಿ ಮೊದಲು ಘೋಷಿಸಿತು ಮತ್ತು ನಂತರ ದಿನಾಂಕವನ್ನು ಜುಲೈ 31 ರವರೆಗೆ ವಿಸ್ತರಿಸಿತು.
More From GoodReturns

ಎಮಿಯಾಕ್ ಟೆಕ್ನಾಲಜೀಸ್ ಐಪಿಒ: ಹೂಡಿಕೆದಾರರ ಮುಗಿಬಿದ್ದ ಭರ್ಜರಿ ಬೇಡಿಕೆ!

ಆರ್ಬಿಐ ಪಾಲಿಸಿಗೂ ಮುನ್ನ ನಿಮ್ಮ ಬಂಡವಾಳಕ್ಕೆ ಈ ರಕ್ಷಣೆ ಬೇಕೇ?

ಆರ್ಬಿಐ ಪಾಲಿಸಿ ಅಬ್ಬರ: ನಿಮ್ಮ ಹಣ ಉಳಿಸಲು ಈ ತಂತ್ರ ಬಳಸಿ

ಆರ್ಬಿಐ ಬಡ್ಡಿ ದರ: ನಿಮ್ಮ ಇಎಂಐ ಹೊರೆ ಕಡಿಮೆಯಾಗುತ್ತಾ?

ಗೃಹ ಸಾಲದ ಇಎಂಐ ಇಳಿಕೆ: ಆರ್ಬಿಐ ನಿರ್ಧಾರದ ಅಸಲಿ ಸತ್ಯ

ಆರ್ಬಿಐ ರೆಪೋ ದರ ಸ್ಥಿರ: ನಿಮ್ಮ ಇಎಂಐ ಹೊರೆ ಇಳಿಯುತ್ತಾ?

ಆರ್ಬಿಐ ರೆಪೋ ದರ: ನಿಮ್ಮ ಇಎಂಐ ಹೊರೆ ಹೆಚ್ಚಾಗುತ್ತಾ?

ಚಿನ್ನದ ಬೆಲೆ ಏರಿಕೆ: ಹೂಡಿಕೆದಾರರೇ ಎಚ್ಚರ, ಈ ತಪ್ಪು ಮಾಡಬೇಡಿ!



Click it and Unblock the Notifications