ಈ ಬಾರಿಯ ಬಜೆಟ್ ಬಗ್ಗೆ ಎಲ್ಲಾ ವಲಯದಲ್ಲೂ ನಿರೀಕ್ಷೆಗಳು ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇವೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಬಜೆಟ್ ಮಂಡಿಸಲು ದಿನಗಣನೆ ಆರಂಭವಾಗಿದೆ. ಅದರಲ್ಲೂ ರೈತರಿಗೆ ಸಂಬಂಧಿಸಿದ ಪ್ರಮುಖ ನಿರೀಕ್ಷೆಗಳು ತುಸು ಹೆಚ್ಚಿವೆ. ರೈತಾಪಿ ವರ್ಗ ಬಹುದೊಡ್ಡ ನಿರೀಕ್ಷೆಯನ್ನು ಇಟ್ಟುಕೊಂಡಿದ್ದಾರೆ. ಮೋದಿ ಸರ್ಕಾರ ಇವರ ಬೇಡಿಕೆ ಈಡೇರಿಸುತ್ತಾ? ಈ ಬಾರಿಯ ಬಜೆಟ್‌ನಲ್ಲಿ ಕೃಷಿಕರಿಗೆ ಸಿಹಿಸುದ್ದಿ ನೀಡುವ ನಿರೀಕ್ಷೆಗಳಿವೆ ಅವುಗಳು ಯಾವುವು ಎಂಬ ಹೆಚ್ಚಿನ ಮಾಹಿತಿಯನ್ನು ಈ ಲೇಖನದಲ್ಲಿ ತಿಳಿಯೋಣ ಬನ್ನಿ
ಹೌದು ಈ ಬಾರಿಯ ಬಜೆಟ್‌ನಲ್ಲಿ ಕೃಷಿಗೆ ಉತ್ತೇಜನ ನೀಡಲು ಕೇಂದ್ರ ಸರ್ಕಾರ ಹೆಚ್ಚಿನ ಕ್ರಮಗಳನ್ನು ಕೈಗೊಳ್ಳುತ್ತಿದೆ ಎಂ ಮಾಹಿತಿ ತಿಳಿದು ಬಂದಿದೆ. ರೈತರಿಗೆ ನೆರವಾಗುವ ಕಿಸಾನ್ ಕ್ರೆಡಿಟ್ ಕಾರ್ಡ್ ಸಾಲದ ಮಿತಿಯನ್ನು 5 ಲಕ್ಷಕ್ಕೆ ಹೆಚ್ಚಿಸಲು ಮೋದಿ ಸರ್ಕಾರ ಚಿಂತನೆಯನ್ನು ಮಾಡುತ್ತಿದೆ.

2025-26ನೇ ಸಾಲಿನ ಕೇಂದ್ರ ಬಜೆಟ್ ಅನ್ನು ಫೆಬ್ರವರಿ 1 ರಂದು ಬೆಳಿಗ್ಗೆ 11 ಗಂಟೆಗೆ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸಂಸತ್ತಿನಲ್ಲಿ ಮಂಡಿಸಲಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಮೂರನೇ ಬಾರಿಗೆ ಅಧಿಕಾರಕ್ಕೆ ಬಂದ ನಂತರ ಇದು ಎರಡನೇ ಕೇಂದ್ರ ಬಜೆಟ್ ಆಗಿದೆ. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಲಿರುವ ಎಂಟನೇ ಕೇಂದ್ರ ಬಜೆಟ್ ಇದಾಗಿದ್ದು ಭಾರೀ ನಿರೀಕ್ಷೆಗಳು ಇವೆ.
ಹಿಂದಿನ ಬಜೆಟ್‌ಗಳಂತೆ ಈ ಬಜೆಟ್‌ನಲ್ಲೂ ಕೃಷಿ ಕ್ಷೇತ್ರಕ್ಕೆ ಅನುಕೂಲವಾಗುವಂತಹ ಹಲವು ಮಹತ್ವದ ಘೋಷಣೆಗಳಿರುತ್ತವೆ ಎಂದು ನಿರೀಕ್ಷಿಸಲಾಗಿದೆ. ಅಂದರೆ, ಕಿಸಾನ್ ಕ್ರೆಡಿಟ್ ಕಾರ್ಡ್ ಮಿತಿ ಹೆಚ್ಚಳ, ಕೃಷಿ ಉತ್ಪನ್ನಗಳ ಮೇಲಿನ ಜಿಎಸ್‌ಟಿ ಕಡಿತ, ಕೃಷಿಗೆ ಅನುದಾನ ಹೆಚ್ಚಳ ಮುಂತಾದ ಘೋಷಣೆಗಳು ಬಜೆಟ್‌ನಲ್ಲಿರುತ್ತವೆ. ರೈತರ ಆದಾಯ ಹೆಚ್ಚಿಸಲು ಕೇಂದ್ರ ಸರ್ಕಾರ ನಿರಂತರವಾಗಿ ಆದ್ಯತೆಯನ್ನು ನೀಡುತ್ತಲೇ ಇದೆ.
ಕಿಸಾನ್ ಕ್ರೆಡಿಟ್ ಕಾರ್ಡ್‌ಗಳ ಮಿತಿ ಹೆಚ್ಚಳ
ಕಿಸಾನ್ ಕ್ರೆಡಿಟ್ ಕಾರ್ಡ್‌ಗಳ ಮಿತಿಯನ್ನು ಕೇಂದ್ರ ಸರ್ಕಾರ 3 ಲಕ್ಷದಿಂದ 5 ಲಕ್ಷಕ್ಕೆ ಹೆಚ್ಚಿಸುವ ಸಾಧ್ಯತೆಗಳಿವೆ. ಈ ಕ್ರಮವು ರೈತರ ಆದಾಯ ಸಾಮರ್ಥ್ಯವನ್ನು ಹೆಚ್ಚಿಸುತ್ತದೆ. ಇದರಿಂದ ಅವರು ತಮ್ಮ ಕೃಷಿ ಚಟುವಟಿಕೆಗಳಲ್ಲಿ ಹೆಚ್ಚಿನ ಹೂಡಿಕೆ ಮಾಡಲು ಸಹಾಯಕವಾಗುತ್ತದೆ. ರೈತರು, ಪಶುಪಾಲಕರು ಮತ್ತು ಮೀನುಗಾರರು ಕಿಸಾನ್ ಕ್ರೆಡಿಟ್ ಕಾರ್ಡ್ ಮೂಲಕ ಬ್ಯಾಂಕ್‌ಗಳಲ್ಲಿ ಕಡಿಮೆ ಬಡ್ಡಿಗೆ ಸುಲಭವಾಗಿ ಸಾಲವನ್ನು ಈ ಮುಖಾಂತರವಾಗಿ ಪಡೆಯಬಹುದು.
ಈಗ ಕಿಸಾನ್ ಕ್ರೆಡಿಟ್ ಕಾರ್ಡ್‌ಗಳ ಸಾಲದ ಮಿತಿ 3 ಲಕ್ಷ ಇದೆ, ಇದನ್ನು 5 ಲಕ್ಷಕ್ಕೆ ಹೆಚ್ಚಿಸುವುದಾಗಿ ಬಜೆಟ್ ಸಮಯದಲ್ಲಿ ಘೋಷಣೆ ಹೊರಬೀಳಲಿದೆ ಎನ್ನಲಾಗಿದೆ.
ಕೃಷಿ ಉತ್ಪನ್ನಗಳ ಮೇಲಿನ ಜಿಎಸ್‌ಟಿ ಕಡಿತ
ಕೃಷಿಗೆ ಸಂಬಂಧಿಸಿದಂತೆ ಪರಿಕರಗಳ ಮೇಲಿನ ಜಿಎಸ್‌ಟಿ ತೆರಿಕೆಯನ್ನು ಕಡಿಮೆ ಮಾಡಲು ಕೇಂದ್ರ ಸರ್ಕಾರ ನಿರ್ಧಾರ ಮಾಡಿದೆ. ಈಗ ಮಾರುಕಟ್ಟೆಯಲ್ಲಿ ಬೀಜಗಳು ಮತ್ತು ಗೊಬ್ಬರಗಳ ಮೇಲೆ ಪ್ರತ್ಯೇಕವಾಗಿ ಹೆಚ್ಚಿನ ಜಿಎಸ್‌ಟಿ ಇರುವುದರಿಂದ ರೈತರಿಗೆ ಸಮಸ್ಯೆಯಾಗುತ್ತಿದೆ. ಇವುಗಳನ್ನು ಕಡಿಮೆ ಮಾಡುವ ಮೂಲಕ ರೈತರ ಲಾಭವನ್ನು ಹೆಚ್ಚಿಸಬಹುದು. ಈ ಬಗ್ಗೆ ಬಜೆಟ್‌ನಲ್ಲಿ ಘೋಷಣೆಯಾಗುವ ಸಾದ್ಯತೆ ಇದೆ.
ಕೃಷಿ ಯೋಜನೆಗಳಿಗೆ ಅನುದಾನ ಹೆಚ್ಚಳ
ಕಳೆದ ಬಜೆಟ್‌ನಲ್ಲಿ ಕೃಷಿ ಸಂಬಂಧಿತ ಯೋಜನೆಗಳಿಗೆ 65,529 ಕೋಟಿಗಳನ್ನು ಕೃಷಿ ವಲಯಕ್ಕೆ ಮೀಸಲಿಡಲಾಗಿತ್ತು. ಕೃಷಿ ಕ್ಷೇತ್ರವನ್ನು ಅಭಿವೃದ್ಧಿಪಡಿಸುವಲ್ಲಿ ಮತ್ತು ರೈತರಿಗೆ ಬೆಂಬಲ ನೀಡುವಲ್ಲಿ ತನ್ನ ನಿರಂತರ ಪ್ರತ್ಸಾಹವನ್ನು ನೀಡುತ್ತಿದೆ. ಮುಂಬರುವ ಕೇಂದ್ರ ಬಜೆಟ್‌ನಲ್ಲಿ ಕೃಷಿ ಸಂಬಂಧಿತ ಯೋಜನೆಗಳಿಗೆ ಅನುದಾನವನ್ನು ಶೇ.5 ರಿಂದ ಶೇ.7 ರಷ್ಟು ಹೆಚ್ಚಿಸಲಾಗುವುದು ಎಂಬ ಬೇಡಿಕೆ ಇದೆ.
ಕೇಂದ್ರ ಬಜೆಟ್ ಅನ್ನು ನಿರ್ಮಲಾ ಸೀತಾರಾಮನ್ ಯಾವಾಗ ಮಂಡಿಸುತ್ತಾರೆ? ನಿರ್ಮಲಾ ಸೀತಾರಾಮನ್ ದಶಕದ ಹಿಂದಿನ ಸಂಪ್ರದಾಯವನ್ನು ಮುಂದುವರೆಸುತ್ತ ಬಂದಿದ್ದಾರೆ.ಈ ಬಾರಿ ಕೂಡ ಫೆಬ್ರವರಿ 1, 2025 ರಂದು ಸಂಸತ್ತಿನಲ್ಲಿ ಕೇಂದ್ರ ಬಜೆಟ್ 2025 ಅನ್ನು ಮಂಡಿಸಲಿದ್ದಾರೆ. ಕೇಂದ್ರ ಬಜೆಟ್ ಸಮಯಲ್ಲಿ ಶುರುವಾಗುತ್ತೆ? ಸೀತಾರಾಮನ್ ಅವರು ಫೆಬ್ರವರಿ 1, 2025 ರಂದು ಬೆಳಿಗ್ಗೆ 11:00 ಗಂಟೆಗೆ ಕೇಂದ್ರ ಬಜೆಟ್ ಅನ್ನು ಮಂಡಿಸುವ ಸಾಧ್ಯತೆಯಿದೆ. ಅವರು ಈಗಲೇ ಆರು ಪೂರ್ಣ ಬಜೆಟ್‌ಗಳನ್ನು ಮತ್ತು ಎರಡು ಮಧ್ಯಂತರ ಬಜೆಟ್‌ಗಳು ಸೇರಿದಂತೆ ಇದು ಅವರ ಎಂಟನೇ ಕೇಂದ್ರ ಬಜೆಟ್ ಮಂಡನೆ ಮಾಡಲಿದ್ದಾರೆ.
More From GoodReturns

ಚಿನ್ನದ ಬೆಲೆ ಸ್ಥಿರ: ಆರ್ಬಿಐ ನಿರ್ಧಾರದಿಂದ ದರ ಇಳಿಕೆಯಾಗುತ್ತಾ?

ಎಮಿಯಾಕ್ ಟೆಕ್ನಾಲಜೀಸ್ ಐಪಿಒ: ಹೂಡಿಕೆದಾರರ ಮುಗಿಬಿದ್ದ ಭರ್ಜರಿ ಬೇಡಿಕೆ!

ಆರ್ಬಿಐ ನಿರ್ಧಾರದಿಂದ ನಿಮ್ಮ ಇಎಂಐ ಹೊರೆ ಹೆಚ್ಚಾಗಲಿದೆಯೇ? ಎಚ್ಚರ!

ಆರ್ಬಿಐ ರೆಪೋ ದರ ಸ್ಥಿರತೆ: ನಿಮ್ಮ ಇಎಂಐ ಹೊರೆ ಇಳಿಯುತ್ತಾ?

ಆರ್ಬಿಐ ಪಾಲಿಸಿಗೂ ಮುನ್ನ ನಿಮ್ಮ ಬಂಡವಾಳಕ್ಕೆ ಈ ರಕ್ಷಣೆ ಬೇಕೇ?

ಆರ್ಬಿಐ ನಿರ್ಧಾರದ ನಂತರ ನಿಮ್ಮ ಹಣಕ್ಕೆ ಯಾವುದು ಬೆಸ್ಟ್?

ಆರ್ಬಿಐ ಪಾಲಿಸಿ ಅಬ್ಬರ: ನಿಮ್ಮ ಹಣ ಉಳಿಸಲು ಈ ತಂತ್ರ ಬಳಸಿ

ಆರ್ಬಿಐ ಬಡ್ಡಿ ದರ: ನಿಮ್ಮ ಇಎಂಐ ಹೊರೆ ಕಡಿಮೆಯಾಗುತ್ತಾ?

ಆರ್ಬಿಐ ನಿರ್ಧಾರ: ನಿಮ್ಮ ಎಸ್ಐಪಿ ಮತ್ತು ಇಎಂಐ ಬದಲಾಯಿಸಬೇಕೇ?

ಸೇಫ್ಟಿ ಕಂಟ್ರೋಲ್ಸ್ ಐಪಿಒ: ಹೂಡಿಕೆದಾರರೇ ಇಂದೇ ಕೊನೆಯ ಅವಕಾಶ!

ಗೃಹ ಸಾಲದ ಇಎಂಐ ಇಳಿಕೆ: ಆರ್ಬಿಐ ನಿರ್ಧಾರದ ಅಸಲಿ ಸತ್ಯ



Click it and Unblock the Notifications