For Quick Alerts
ALLOW NOTIFICATIONS  
For Daily Alerts

ಹೊಸ ಕಾರುಗಳ ಮುಂಭಾಗದ ಸೀಟುಗಳಿಗೆ ಏರ್‌ಬ್ಯಾಗ್‌ ಕಡ್ಡಾಯಗೊಳಿಸದ ಕೇಂದ್ರ ಸರ್ಕಾರ

|

ರಸ್ತೆ ಸುರಕ್ಷತಾ ನಿಯಮದಡಿಯಲ್ಲಿ ಪ್ರಯಾಣಿಕರ ಸುರಕ್ಷತೆಯ ದೃಷ್ಟಿಯಿಂದ ಹೊಸ ಕಾರುಗಳಲ್ಲಿ ಮುಂಭಾಗದ ಸೀಟುಗಳಿಗೆ ಡ್ಯುಯಲ್ ಏರ್‌ಬ್ಯಾಗ್‌ ಕಡ್ಡಾಯಗೊಳಿಸುವ ನಿರ್ಧಾರವನ್ನು ಕೇಂದ್ರ ಸರ್ಕಾರ ಪ್ರಕಟಿಸಿದೆ.

 

ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯವು ಈ ಹೊಸ ನಿಯಮಗಳನ್ನು ಘೋಷಿಸಿದ್ದು, ಏಪ್ರಿಲ್‌ 1ರಿಂದ ಎಲ್ಲಾ ಹೊಸ ಕಾರುಗಳಲ್ಲಿ ಡ್ಯುಯಲ್ ಏರ್‌ಬ್ಯಾಗ್‌ ಕಡ್ಡಾಯಗೊಳಿಸಬೇಕು ಎಂದು ಹೇಳಿದೆ.

 
ಹೊಸ ಕಾರುಗಳ ಮುಂಭಾಗದ ಸೀಟುಗಳಿಗೆ ಏರ್‌ಬ್ಯಾಗ್‌ ಕಡ್ಡಾಯ

ಇದರಿಂದಾಗಿ ಡ್ಯುಯಲ್ ಏರ್‌ಬ್ಯಾಗ್ ಕಡ್ಡಾಯದ ಜೊತೆಗೆ ಈಗಾಗಲೇ ಅಸ್ತಿತ್ವದಲ್ಲಿರುವ ಕಾರುಗಳನ್ನು 2021ರ ಆಗಸ್ಟ್ 31 ರಿಂದ ಡ್ಯುಯಲ್ ಏರ್‌ಬ್ಯಾಗ್‌ಗಳೊಂದಿಗೆ ಮಾರಾಟ ಮಾಡಬೇಕಾಗುತ್ತದೆ. ಅಂದರೆ ಪ್ರಸ್ತುತ ಈಗಾಗಲೇ ನಿರ್ಮಾಣ ಮಾಡಿರುವ ಕಾರುಗಳಿಗೂ ಆಗಸ್ಟ್ ನಿಂದ ಡ್ಯುಯಲ್ ಏರ್ ಬ್ಯಾಗ್ ಗಳನ್ನು ಅಳವಡಿಸಿ ಮಾರಾಟ ಮಾಡುವಂತೆ ಸೂಚನೆ ನೀಡಿದೆ.

ಸುಪ್ರೀಂಕೋರ್ಟ್ ನ ಸಮಿತಿಯ ಸಲಹೆಗಳನ್ನು ಆಧರಿಸಿ ಈ ಹೊಸ ನಿರ್ಧಾರವನ್ನು ಪ್ರಕಟಿಸಲಾಗಿದೆ ಎಂದು ಸಚಿವಾಲಯದ ಗೆಜೆಟ್ ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಬ್ಯೂರೋ ಆಫ್ ಇಂಡಿಯನ್ ಸ್ಟ್ಯಾಂಡರ್ಡ್ಸ್ (ಬಿಐಎಸ್) ಮಾರ್ಕ್ ಅಡಿಯಲ್ಲಿ ಏರ್‌ಬ್ಯಾಗ್‌ ಎಐಎಸ್ 145 ಗುಣಮಟ್ಟದ ಸಾಧನಗಳನ್ನು ಅಳವಡಿಸಿಕೊಳ್ಳಬೇಕು ಎಂದು ಹೇಳಲಾಗಿದೆ.

English summary

Central Govt Makes Dual Airbags Mandatory for All Passenger Cars in India

The Ministry of Road Transport and Highways has issued a notification mandatory the passenger side airbag in vehicles and will be applicable for new cars from April 1, and existing cars from August 31, 2021.
Company Search
COVID-19
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X