For Quick Alerts
ALLOW NOTIFICATIONS  
For Daily Alerts

ಪ್ರತಿತಿಂಗಳು 1.10 ಲಕ್ಷ ಕೋಟಿ ಜಿಎಸ್‌ಟಿ ಸಂಗ್ರಹಿಸಲು ಟಾರ್ಗೆಟ್

|

2019-20ರ ಹಣಕಾಸು ವರ್ಷದಲ್ಲಿ ಕೊನೆಯ ನಾಲ್ಕು ತಿಂಗಳ ಅವಧಿಯಲ್ಲಿ ಪ್ರತಿ ತಿಂಗಳು 1.10 ಲಕ್ಷ ಕೋಟಿ ರುಪಾಯಿ ಜಿಎಸ್‌ಟಿ ಸಂಗ್ರಹಿಸಬೇಕು ಎಂದು ಕೇಂದ್ರ ಸರ್ಕಾರ ಗುರಿ ನಿಗದಿಪಡಿಸಿದೆ.

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ನೇತೃತ್ವದಲ್ಲಿ ಬುಧವಾರ (ಡಿಸೆಂಬರ್ 18) ಹೊಸದಿಲ್ಲಿಯಲ್ಲಿ ಜಿಎಸ್‌ಟಿ ಮಂಡಳಿ ಸಭೆ ನಡೆಯಲಿದೆ. ಇದಕ್ಕೆ ಪೂರಕವಾಗಿ ಡಿಸೆಂಬರ್‌ನಿಂದ ಮುಂದಿನ ವರ್ಷ ಮಾರ್ಚ್‌ವರೆಗೆ ಪ್ರತಿ ತಿಂಗಳು 1.10 ಲಕ್ಷ ಕೋಟಿ ರುಪಾಯಿ ಜಿಎಸ್‌ಟಿ ಸಂಗ್ರಹಿಸಬೇಕು. ಈ ನಿಟ್ಟಿನಲ್ಲಿ ಪ್ರಯತ್ನ ಮಾಡಬೇಕು ಎಂದು ಕೇಂದ್ರ ಕಂದಾಯ ಕಾರ್ಯದರ್ಶಿ ಅಜಯ್ ಭೂಷಣ್ ಪಾಂಡೆ ಸೂಚನೆ ನೀಡಿದ್ದಾರೆ.

ಪ್ರತಿತಿಂಗಳು 1.10 ಲಕ್ಷ ಕೋಟಿ ಜಿಎಸ್‌ಟಿ ಸಂಗ್ರಹಿಸಲು ಟಾರ್ಗೆಟ್

ಪ್ರತಿ ತಿಂಗಳು 1.10 ಲಕ್ಷ ಕೋಟಿ ರುಪಾಯಿ ಸಂಗ್ರಹಿಸುವ ಗುರಿಯನ್ನು ತಲುಪಲು ತೆರಿಗೆ ಅಧಿಕಾರಿಗಳು ತಮ್ಮ ಪ್ರಯತ್ನ ತೀವ್ರಗೊಳಿಸಬೇಕು ಎಂದು ಸೂಚನೆ ಕೊಡಲಾಗಿದೆ. ದೇಶದಲ್ಲಿನ ಮಂದಗತಿಯ ಆರ್ಥಿಕತೆಯಿಂದಾಗಿ ನಿಗದಿಪಡಿಸಲಾಗಿದ್ದ ತೆರಿಗೆ ಸಂಗ್ರಹ ಪ್ರಮಾಣವು ಕಡಿಮೆಯಾಗಿದ್ದು, ಇದರ ಬೆನ್ನಲ್ಲೇ ಈ ಕ್ರಮ ಕೈಗೊಳ್ಳಲಾಗಿದೆ.

1 ಲಕ್ಷ ಕೋಟಿ ದಾಟಿದ ನವೆಂಬರ್ ತಿಂಗಳ GST ಸಂಗ್ರಹ1 ಲಕ್ಷ ಕೋಟಿ ದಾಟಿದ ನವೆಂಬರ್ ತಿಂಗಳ GST ಸಂಗ್ರಹ

ಡಿಸೆಂಬರ್‌ನಿಂದ ಮಾರ್ಚ್‌ ತಿಂಗಳಿನ ವರೆಗೆ ಸುಮಾರು 1.10 ಲಕ್ಷ ಕೋಟಿ ರುಪಾಯಿ ಹಾಗೂ ಕನಿಷ್ಠ ಒಂದು ತಿಂಗಳಲ್ಲಿ 1.25 ಲಕ್ಷ ಕೋಟಿ ರುಪಾಯಿ ತೆರಿಗೆ ಸಂಗ್ರಹಿಸಬೇಕು ಎಂದು ಹಣಕಾಸು ಸಚಿವಾಲಯದ ಮೂಲಗಳು ತಿಳಿಸಿವೆ.

ತೆರಿಗೆ ಸಂಗ್ರಹಿಸುವ ಅಧಿಕಾರಿಗಳು ಪ್ರಾಮಾಣಿಕ ತೆರಿಗೆದಾರರಿಗೆ ಕಿರುಕುಳ ನೀಡಬಾರದು. ತೆರಿಗೆ ತಪ್ಪಿಸುವ ಪ್ರವೃತ್ತಿಗೆ ಕಡಿವಾಣ ಹಾಕಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.

English summary

Central Govt Sets 1.10 lakh Crore Monthly GST Target

Central government has set an ambitous Rs 1.10 lakh crore GST target for the remaining four months of the current financial year
Story first published: Wednesday, December 18, 2019, 9:56 [IST]
Company Search
COVID-19
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X