ಬೆಂಗಳೂರು, ಆಗಸ್ಟ್ 27: ಹೆಸರು ಕಾಳು ಹಾಗೂ ಸೂರ್ಯಕಾಂತಿಗೆ ಸಂಬಂಧಿಸಿ ಕರ್ನಾಟಕದ ರೈತರಿಗೆ ಗುಡ್ ನ್ಯೂಸ್ ಇದೆ. ಹೆಸರು ಕಾಳು ಹಾಗೂ ಸೂರ್ಯಕಾಂತಿಯನ್ನು ಬೆಂಬಲ ಬೆಲೆಯಲ್ಲಿ ಖರೀದಿಗೆ ಕೇಂದ್ರ ಸರ್ಕಾರ ಒಪ್ಪಿಗೆ ನೀಡಿದೆ. 2024-25ನೇ ಸಾಲಿನ ಖಾರಿಫ್ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ ನೀಡಿ ಕರ್ನಾಟಕ ಖರೀದಿ ಮಾಡಬಹುದಾಗಿದೆ.
ಕೃಷಿ ಸಚಿವಾಲಯವು ಕರ್ನಾಟಕ ಸರ್ಕಾರಕ್ಕೆ ಒಟ್ಟು 22,215 ಟನ್ ಹೆಸರು ಕಾಳನ್ನು ಕ್ವಿಂಟಾಲ್ಗೆ ಕನಿಷ್ಠ 8,682 ರೂ ಬೆಂಬಲ ಬೆಲೆ ಆಧಾರದಲ್ಲಿ ಖರೀದಿಸಬಹುದು ಎಂದು ತಿಳಿಸಿದೆ. ಕೇಂದ್ರ ಸಚಿವರು ಈ ಮಾಹಿತಿಯನ್ನು ತಮ್ಮ ಸೊಶೀಯಲ್ ಮೀಡಿಯಾ ಖಾತೆಯಲ್ಲಿಯೂ ಹಂಚಿಕೊಂಡಿದ್ದಾರೆ.

ಇದಕ್ಕೂ ಮೊದಲು ಜೋಶಿ ಅವರು ಕೃಷಿ ಉತ್ಪನ್ನ ಬೆಳೆದ ರೈತರಿಗೆ ನೆರವಾಗಲು ಕನಿಷ್ಠ ಬೆಂಬಲ ಬೆಲೆ ನಿಗದಿಪಡಿಸುವ ಮೂಲಕ ಕರ್ನಾಟಕಕ್ಕೆ ಹಸಿರು ಬೇಳೆ ಮತ್ತು ಸೂರ್ಯಕಾಂತಿ ಖರೀದಿಸಲು ಅನುಮತಿ ನೀಡುವಂತೆ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಬಳಿ ಕೋರಿದ್ದರು. ರಾಜ್ಯ ಸರ್ಕಾರವು ತಕ್ಷಣವೇ ರಾಜ್ಯದ್ಯಂತ ಖರೀದಿ ಕೇಂದ್ರಗಳನ್ನು ಪ್ರಾರಂಭಿಸಿ ಖರೀದಿ ಪ್ರಕ್ರಿಯೆಗೆ ಚಾಲನೆ ನೀಡಬೇಕೆಂದು ಜೋಶಿ ಕೇಳಿಕೊಂಡಿದ್ದರು.
ರಾಜ್ಯ ಸರ್ಕಾರ ಮನವಿ ಮಾಡಿಕೊಂಡಿತ್ತು!
ರಾಜ್ಯ ಸರ್ಕಾರ, ಕೇಂದ್ರಕ್ಕೆ ಆಗಸ್ಟ್ 21ರಂದು ಪತ್ರ ಬರೆದು ವಿನಂತಿಸಿತ್ತು. ಈ ಹಿನ್ನೆಲೆಯಲ್ಲಿ ಕೇಂದ್ರ ಕೃಷಿ ಸಚಿವ ಶಿವರಾಜಸಿಂಗ್ ಚವ್ಹಾಣವರನ್ನು ಭೇಟಿ ಮಾಡಿ ಚರ್ಚಿಸಿ, ರಾಜ್ಯದ ಹೆಸರಕಾಳು ಮತ್ತು ಸೂರ್ಯಕಾಂತಿ ಬೆಳೆಗಾರರ ಬೆಂಬಲಕ್ಕೆ ನಿಲ್ಲುವಂತೆ ಮನವಿ ಮಾಡಿದ್ದೆ. ಇದಕ್ಕೆ ತಕ್ಷಣವೇ ಸ್ಪಂದಿಸಿದ ಸಚಿವರು ಅಧಿಕಾರಿಗಳೊಂದಿಗೆ ಚರ್ಚಿಸಿ ತಕ್ಷಣವೇ ಬೆಂಬಲ ಬೆಲೆಯಲ್ಲಿ ಹೆಸರು ಮತ್ತು ಸೂರ್ಯಕಾಂತಿ ಖರೀದಿಗೆ ಅನುಮತಿ ನೀಡುವಂತೆ ಸೂಚಿಸಿದರು. ಕೇಂದ್ರ ಸರ್ಕಾರ ಆಗಸ್ಟ್ 22ರಂದೇ ರಾಜ್ಯ ಸರ್ಕಾರಕ್ಕೆ ಅನುಮತಿ ನೀಡಿದೆ ಎಂದು ಕರ್ನಾಟಕ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ್ ತಿಳಿಸಿದ್ದಾರೆ.
14 ಬೆಳಗಳ ಬೆಂಬಲ ಬೆಲೆ ಹೆಚ್ಚಿಸಿದ್ದ ಕೇಂದ್ರ ಸರ್ಕಾರ
ಕನಿಷ್ಠ ಬೆಂಬಲ ಬೆಲೆಗೆ (ಎಂಎಸ್‌ಪಿ) ಕಾನೂನು ಖಾತರಿ ನೀಡಬೇಕೆಂದು ಒತ್ತಾಯಿಸಿ ಈ ಹಿಂದೆ ರೈತರು ಭಾರೀ ಪ್ರತಿಭಟನೆ ನಡೆಸಿದ್ದರು. ಈ ವರ್ಷದ ಆರಂಭದಲ್ಲಿಯೂ ಪ್ರತಿಭಟನೆಗಳು ನಡೆದಿತ್ತು. ಇದೆಲ್ಲ ಕಾರಣದಿಂದ ಕಳೆದ ಜೂನ್ ನಲ್ಲಿ ಕೇಂ
2018ರ ಕೇಂದ್ರ ಬಜೆಟ್‌ನಲ್ಲಿ ಭಾರತ ಸರ್ಕಾರವು ಉತ್ಪಾದನಾ ವೆಚ್ಚಕ್ಕಿಂತ ಕನಿಷ್ಠ 1.5 ಪಟ್ಟು ಎಂಎಸ್‌ಪಿ ಇರಬೇಕು ಎಂಬ ಸ್ಪಷ್ಟ ನೀತಿ ನಿರ್ಧಾರವನ್ನು ತೆಗೆದುಕೊಂಡಿತ್ತು. ವೆಚ್ಚವನ್ನು ವೈಜ್ಞಾನಿಕ ರೀತಿಯಲ್ಲಿ ಲೆಕ್ಕ ಹಾಕಲಾಗಿದೆ. ದೇಶದಾದ್ಯಂತ ವಿವಿಧ ಜಿಲ್ಲೆಗಳು ಮತ್ತು ತಾಲೂಕುಗಳಲ್ಲಿ ಕೃಷಿ ವೆಚ್ಚಗಳು ಮತ್ತು ಬೆಲೆಗಳ ಆಯೋಗ ನಡೆಸಿದ ಅಧ್ಯಯನವನ್ನು ಆಧರಿಸಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಕೇಂದ್ರ ಸರ್ಕಾರ ಹೇಳಿಕೊಂಡು ಬಂದಿತ್ತು.


Click it and Unblock the Notifications