ಬೆಂಗಳೂರು, ಸೆಪ್ಟೆಂಬರ್ 12: ಬೆಂಗಳೂರಿನಲ್ಲಿ ಸಾರ್ವಜನಿಕ ಸಾರಿಗೆ ಬಲಗೊಳಿಸುವ ಸಲುವಾಗಿ ಬಿಎಂಟಿಸಿ ಬಳಗಕ್ಕೆ 100 ಹೊಸ ಬಸ್‌ಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಲೋಕಾರ್ಪಣೆಗೊಳಿಸಿದರು.
ವಿಧಾನಸೌಧ ಆವರಣದಲ್ಲಿ ಸಾರಿಗೆ ಇಲಾಖೆ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತನಾಡಿ, ಇಂದು ಬೆಂಗಳೂರು ನಗರದ ಜನತೆಯ ಅನುಕೂಲಕ್ಕಾಗಿ ಮೊದಲ ಹಂತದಲ್ಲಿ 100 ನೂತನ ಬಿಎಂಟಿಸಿ ಬಸ್ ಗಳನ್ನು ಲೋಕಾರ್ಪಣೆ ಮಾಡಿದ್ದೇವೆ. ಒಟ್ಟು 840 ನೂತನ ಬಸ್‌ಗಳು ಬಿಎಂಟಿಸಿಗೆ ಸೇರಲಿವೆ.

ಬೆಂಗಳೂರು ನಗರದಲ್ಲಿ ಜನಸಂಖ್ಯೆ ಹೆಚ್ಚುತ್ತಿದೆ. ಇಲ್ಲಿನ ಹೆಚ್ಚುತ್ತಿರುವ ಶ್ರಮಿಕ ವರ್ಗಗಳಿಗೆ ಅನುಕೂಲ ಮಾಡುವ ಉದ್ದೇಶದಿಂದ ನೂತನ ಬಸ್ ಗಳನ್ನು ಬಿಎಂಟಿಸಿಗೆ ಸೇರ್ಪಡೆಗೊಳಿಸುವ ಜೊತೆಗೆ ಹಿಂದಿನ ಸರ್ಕಾರ ಸ್ಥಗಿತಗೊಳಿಸಿದ್ದ ಇಂದಿರಾ ಕ್ಯಾಂಟೀನ್ ಗಳನ್ನು ಆರಂಭಿಸಿದ್ದಲ್ಲದೆ, ನೂತನವಾಗಿ ಇನ್ನಷ್ಟು ಕ್ಯಾಂಟೀನ್ ಗಳನ್ನು ಆರಂಭಿಸುತ್ತಿದ್ದೇವೆ.
ಇದೇ ಶ್ರಮಿಕ ವರ್ಗದ ಅನುಕೂಲಕ್ಕಾಗಿ ಶಕ್ತಿ ಯೋಜನೆ ಸೇರಿದಂತೆ ಐದೂ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿ ಯಶಸ್ವಿಯಾಗಿ ಮುಂದುವರೆಸುತ್ತಿದ್ದೇವೆ. ನಮ್ಮ ಸರ್ಕಾರ ಇರುವವರೆಗೂ ಗ್ಯಾರಂಟಿ ಯೋಜನೆಗಳು ಮುಂದುವರೆಯಲಿವೆ.
ಬಡವರ ಮತ್ತು ಮಧ್ಯಮ ವರ್ಗದ ವಿರೋಧಿಯಾಗಿರುವ ಬಿಜೆಪಿ ಈ ಗ್ಯಾರಂಟಿ ಯೋಜನೆಗಳ ವಿರುದ್ಧ ಅಪಪ್ರಚಾರ ಮಾಡುತ್ತಿದೆ. ಈ ಅಪಪ್ರಚಾರಕ್ಕೆ ಕಿವಿಗೊಡಬೇಡಿ. ಈ ಗ್ಯಾರಂಟಿಗಳು ಇನ್ನಷ್ಟು ಪರಿಣಾಮಕಾರಿಯಾಗಿ ಜಾರಿ ಆಗಲಿವೆ. ಗೃಹಲಕ್ಷ್ಮಿ ಹಣದಿಂದ ಸಾವಿರಾರು ಕುಟುಂಬಗಳು ನಾನಾ ರೀತಿಯ ಅನುಕೂಲಗಳನ್ನು ಒದಗಿಸಿಕೊಳ್ಳುತ್ತಿರುವ ಬಗ್ಗೆ ಪ್ರತಿದಿನ ಮಾಧ್ಯಮಗಳು ತೋರಿಸುತ್ತಿವೆ.
ನಾವು ಬಡವರಿಗೆ ಅಕ್ಕಿ ಕೊಡುವ ಯೋಜನೆಗೆ ಮುಂದಾದರೆ ಕೇಂದ್ರ ಸರ್ಕಾರ ನಮಗೆ ಅಕ್ಕಿ ಕೊಡದೆ ತೊಂದರೆ ನೀಡಿತು. ಆದರೆ ನಾವು ಅಕ್ಕಿಯ ಬದಲಿಗೆ, ಅಕ್ಕಿಯ ಹಣವನ್ನು ಜನರಿಗೆ ನೀಡಿ ನುಡಿದಂತೆ ನಡೆದಿದ್ದೇವೆ. ರಾಜ್ಯದ ಪ್ರತೀ ಕುಟುಂಬಗಳಿಗೆ ಪ್ರತೀ ತಿಂಗಳಿಗೆ 4-5 ಸಾವಿರ ರೂಪಾಯಿ ಅನುಕೂಲ ಆಗುತ್ತಿದೆ. ಇದರಿಂದ ಲಕ್ಷಾಂತರ ಕುಟುಂಬಗಳಿಗೆ ಆರ್ಥಿಕ ಶಕ್ತಿ ನೀಡಿದ್ದೇವೆ. ನಮ್ಮ ಸರ್ಕಾರ ಬಂದ ಮೇಲೆ ನಾಲ್ಕು ಬಾರಿ ಹೊಸ ಬಸ್ ಗಳನ್ನು ಖರೀದಿಸಿ ಸವಲತ್ತು ಒದಗಿಸಿದ್ದೇವೆ.
ಈ ವೇಳೆ ಸಾರಿಗೆ ಸಚಿವರಾದ ರಾಮಲಿಂಗಾರೆಡ್ಡಿ, ವಸತಿ ಸಚಿವರಾದ ಜಮೀರ್ ಅಹಮದ್ ಖಾನ್, ಇಂಧನ ಸಚಿವರಾದ ಕೆಜೆ ಜಾರ್ಜ್, ಕೆ.ಕೆ.ಆರ್.ಡಿ.ಬಿ ಅಧ್ಯಕ್ಷರಾದ ಅಜಯ್ ಸಿಂಗ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ನಸೀರ್ ಅಹಮದ್ ಅವರು ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.
ಬಿಎಂಟಿಸಿ ಈಗಾಗಲೇ ಅಶೋಕ್ ಲೇಲ್ಯಾಂಡ್‌ನಿಂದ ಮೂಲ ಮಾದರಿಯ ಡೀಸೆಲ್ ಬಸ್ ಅನ್ನು ಪಡೆದುಕೊಂಡಿದೆ. ಇದು ಭಾರತ್ ಸ್ಟೇಜ್ 6 ಎಮಿಷನ್ ಮಾನದಂಡಗಳನ್ನು ಅನುಸರಿಸುವ 821 ಬಸ್‌ಗಳನ್ನು ಪೂರೈಸುವ ಗುತ್ತಿಗೆಯನ್ನು ಪಡೆದುಕೊಂಡಿದೆ. ಮೂಲಮಾದರಿಯ ಬಸ್ ಒಂದು ತಿಂಗಳ ಅವಧಿಯ ಪ್ರಾಯೋಗಿಕ ಚಾಲನೆ ನಡೆದಿದೆ. ಅದು ಅಗತ್ಯವಾದ ತಾಂತ್ರಿಕ ಪರೀಕ್ಷೆಗಳಲ್ಲಿ ಉತ್ತೀರ್ಣವಾಯಿತು. ಸೆಪ್ಟೆಂಬರ್ ಅಂತ್ಯದೊಳಗೆ ಐವತ್ತು ಬಸ್‌ಗಳನ್ನು ಪರಿಚಯಿಸಲಾಗುವುದು ಮತ್ತು ನಗರದಾದ್ಯಂತ ನಿಯೋಜಿಸಲಾಗುವುದು ಎಂದು ಬಿಎಂಟಿಸಿ ವ್ಯವಸ್ಥಾಪಕ ನಿರ್ದೇಶಕ ರಾಮಚಂದ್ರನ್ ಆರ್. ಹಿಂದೆ ಹೇಳಿಕೆ ನೀಡಿದ್ದರು.
ಎಲ್ಲಾ 820 ಬಸ್‌ಗಳನ್ನು ಮುಂದಿನ ವರ್ಷ ವಿತರಿಸುವ ನಿರೀಕ್ಷೆಯಿದೆ. ಕರ್ನಾಟಕದಲ್ಲಿ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣವನ್ನು ಒದಗಿಸುವ ಶಕ್ತಿ ಯೋಜನೆಯಿಂದಾಗಿ ಬಿಎಂಟಿಸಿ ತನ್ನ ಬಳಗವನ್ನು ವಿಸ್ತರಿಸುವ ಒತ್ತಡದಲ್ಲಿದೆ. ಯೋಜನೆಯ ಪರಿಚಯದ ನಂತರ ದೈನಂದಿನ ಪ್ರಯಾಣಿಕರ ಸಂಖ್ಯೆ 27.4 ಲಕ್ಷದಿಂದ 40 ಲಕ್ಷಕ್ಕೆ ಏರಿದೆ. ಫ್ಲೀಟ್ 6,888 ರಿಂದ 6,200 ಕ್ಕೆ ಇಳಿದಿದೆ ಎಂದು ತಿಳಿಸಲಾಗಿತ್ತು.
More From GoodReturns

ಚಿನ್ನದ ಬೆಲೆ ಸ್ಥಿರ: ಆರ್ಬಿಐ ನಿರ್ಧಾರದಿಂದ ದರ ಇಳಿಕೆಯಾಗುತ್ತಾ?

ಎಮಿಯಾಕ್ ಟೆಕ್ನಾಲಜೀಸ್ ಐಪಿಒ: ಹೂಡಿಕೆದಾರರ ಮುಗಿಬಿದ್ದ ಭರ್ಜರಿ ಬೇಡಿಕೆ!

ಆರ್ಬಿಐ ನಿರ್ಧಾರದಿಂದ ನಿಮ್ಮ ಇಎಂಐ ಹೊರೆ ಹೆಚ್ಚಾಗಲಿದೆಯೇ? ಎಚ್ಚರ!

ಆರ್ಬಿಐ ರೆಪೋ ದರ ಸ್ಥಿರತೆ: ನಿಮ್ಮ ಇಎಂಐ ಹೊರೆ ಇಳಿಯುತ್ತಾ?

ಆರ್ಬಿಐ ಪಾಲಿಸಿಗೂ ಮುನ್ನ ನಿಮ್ಮ ಬಂಡವಾಳಕ್ಕೆ ಈ ರಕ್ಷಣೆ ಬೇಕೇ?

ಆರ್ಬಿಐ ನಿರ್ಧಾರದ ನಂತರ ನಿಮ್ಮ ಹಣಕ್ಕೆ ಯಾವುದು ಬೆಸ್ಟ್?

ಆರ್ಬಿಐ ಪಾಲಿಸಿ ಅಬ್ಬರ: ನಿಮ್ಮ ಹಣ ಉಳಿಸಲು ಈ ತಂತ್ರ ಬಳಸಿ

ಆರ್ಬಿಐ ಬಡ್ಡಿ ದರ: ನಿಮ್ಮ ಇಎಂಐ ಹೊರೆ ಕಡಿಮೆಯಾಗುತ್ತಾ?

ಆರ್ಬಿಐ ನಿರ್ಧಾರ: ನಿಮ್ಮ ಎಸ್ಐಪಿ ಮತ್ತು ಇಎಂಐ ಬದಲಾಯಿಸಬೇಕೇ?

ಸೇಫ್ಟಿ ಕಂಟ್ರೋಲ್ಸ್ ಐಪಿಒ: ಹೂಡಿಕೆದಾರರೇ ಇಂದೇ ಕೊನೆಯ ಅವಕಾಶ!

ಗೃಹ ಸಾಲದ ಇಎಂಐ ಇಳಿಕೆ: ಆರ್ಬಿಐ ನಿರ್ಧಾರದ ಅಸಲಿ ಸತ್ಯ



Click it and Unblock the Notifications